ವಿಜಯಪುರ : ನಮ್ಮ ಹಿರಿಯರ ಶ್ರಮ ಮತ್ತು ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಸ್ವಾತಂತ್ರ್ಯ ಭಾರತದಲ್ಲಿ ಜನಿಸಿದ ನಾವೆಲ್ಲರೂ ನಿಜಕ್ಕೂ ಹೆಮ್ಮೆ ಪಡಬೇಕು. ಹಿರಿಯರು, ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಬಲಿದಾನಗೈದ ಹೋರಾಟಗಾರರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯೋಣ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತಿಯ ಆವರಣದಲ್ಲಿ ಧ್ವಜಾರೋಹಣ ನೇರೆವೇರಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸೇರಿದಂತೆ ಜಿಲ್ಲಾ ಪಂಚಾಯತಿಯ ಎಲ್ಲ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.