ವಿಜಯಪುರ : ವಿಜಯಪುರ ನಗರದ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಸೋಮವಾರ ಲೋಕೋಪಯೋಗಿ ಖಾತೆ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಟರ್ಮಿನಲ್ ಕಟ್ಟಡ, ನಿಲ್ದಾಣದ ರನವೇ, ಟ್ಯಾಕ್ಸಿ ವೇ, ಬ್ಯಾಗೇಜ್ ಹ್ಯಾಂಡಲಿAಗ್ ವ್ಯವಸ್ಥೆ, ಸೆಕ್ಯುರಿಟಿ ಸ್ಕಾö್ಯನರ್ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಭದ್ರತಾ ಉಪಕರಣಳು ಸೇರಿದಂತೆ ಬಾಕಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸುವುದನ್ನು ಒಳಗೊಂಡAತೆ ಎಲ್ಲ ಭೌತಿಕ ಕಾಮಗಾರಿಗಳು ಶೇ.90ರಷ್ಟು ಪೂರ್ಣಗೊಂಡಿದ್ದು, ಶೀಘ್ರವೇ ಎಲ್ಲ ಕಾಮಗಾರಿಗಳು ಪೂರ್ಣಗೊಂಡು ವಿಮಾನಗಳ ಹಾರಾಟ ನಡೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಜನವರಿಯಲ್ಲಿ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ (ಡಿಜಿಸಿಎ) ಪರಿವೀಕ್ಷಣೆಗೆ ಆಗಮಿಸಿ ಪರಿವೀಕ್ಷಣೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.
ನೈಟ್ ಲ್ಯಾಂಡಿAಗ್ ವ್ಯವಸ್ಥೆ ಸೇರಿದಂತೆ ಬಾಕಿ ಇರುವ ಎಲ್ಲ ಲೋಕೋಪಯೋಗಿ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕೈಗೊಂಡು ಪೂರ್ಣಗೊಳಿಸಲು ಸೂಚಿಸಲಾಗಿದೆ. ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದ ನಂತರ ಈ ಭಾಗದ ಸರ್ವಾಂಗೀಣ ಬೆಳವಣಿಗೆಗೆ ಅನುಕೂಲವಾಗಲಿದ್ದು, ವಿಮಾನಗಳ ಹಾರಾಟದಿಂದ ಸಮಯದ ಉಳಿತಾಯದೊಂದಿಗೆÀ ಪ್ರಮುಖ ವಾಣಿಜ್ಯ ಬೆಳೆಯಾದ ದ್ರಾಕ್ಷಿ ಸೇರಿದಂತೆ ಇತರ ಕೃಷಿ ಉತ್ಪನ್ನಗಳ ರಫ್ತಿಗೂ ಅನುಕೂಲವಾಗಲಿದೆ. ವ್ಯಾಪಾರ ವಹಿವಾಟಕ್ಕೂ ಉತ್ತೇಜನ ದೊರೆಯಲಿದ್ದು, ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಎರಡನೇ ಹಂತದ 125.00 ಕೋಟಿ ರೂ.ಗಳಲ್ಲಿ ಪುನ: ಎರಡು ಉಪ ಕಾಮಗಾರಿಗಳಾಗಿ ವಿಂಗಡಿಸಲಾಗಿದೆ. ಸಿವಿಲ್ ಕಾಮಗಾರಿಗಾಗಿ 105.60 ಕೋಟಿ ರೂ.ಗಳು ಹಾಗೂ ಏವಿಯೋನಿಕ್ಸ/ಸೆಕ್ಯೂರಿಟಿ ಉಪಕರಣಳ ಕಾಮಗಾರಿಗಾಗಿ 19.40 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಈ ಸಿವಿಲ್ ಕಾಮಗಾರಿಯು 105.60. ಕೋಟಿಗಳಲ್ಲಿ 86.20 ಕೋಟಿಗಳ ಮೊತ್ತದಲ್ಲಿ ಟರ್ಮಿನಲ್ ಕಟ್ಟಡ, ಎಟಿಸಿ ಟಾವರ್, ಸಿ.ಎಪ್.ಆರ್. ಕಟ್ಟಡ, ಕಂಪೌAಡ್ ಗೋಡೆ ಹಾಗೂ ಇತರೆ ಕಾಮಗಾರಿಗಳನ್ನು ಅಭಿವೃದ್ದಿಪಡಿಸಲಾಗುತ್ತಿದ್ದು, ಕಾಮಗಾರಿ ಮುಕ್ತಾಯ ಹಂತದಲ್ಲಿದೆ ಎಂದು ಅವರು ಹೇಳಿದರು.
ಸಿವಿಲ್ ಉಪಕಾಮಗಾರಿಗಳಲ್ಲಿ ಉಳಿದ ಮೊತ್ತ 19.40 ಕೋಟಿಗಳಲ್ಲಿ ವಿವಿಧ ಉಪಕಾಮಗಾರಿಗಳಿದ್ದು, ಮೊದಲನೇಯದಾಗಿ ರೂ.1.39 ಕೋಟಿ ಮೊತ್ತದಲ್ಲಿ ವಿಮಾನ ನಿಲ್ದಾಣ ಆವರಣದಲ್ಲಿರುವ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವುದನ್ನು ಪರಿಗಣಿಸಲಾಗಿದ್ದು ಕಾಮಗಾರಿ ಪೂರ್ಣಗೊಂಡಿದೆ. 5.94 ಕೋಟಿ ರೂ. ಮೊತ್ತದಲ್ಲಿ ವಿಮಾನ ನಿಲ್ದಾಣಕ್ಕೆ 24/7 ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದೆ. 3.65 ಕೋಟಿ ರೂ. ಮೊತ್ತದ ವಿಮಾನ ನಿಲ್ದಾಣಕ್ಕೆ 2000 ಕಿ.ಲೋ.ವ್ಯಾಟ್ ನಿರಂತರ ವಿದ್ಯುತ್ ಸರಬರಾಜು ಕಾಮಗಾರಿ ಪ್ರಗತಿಯಲ್ಲಿದ್ದು, ಉಳಿದ ಮೊತ್ತದ ಕಾಮಗಾರಿಯ ಮೇಲ್ವಿಚಾರಣೆ ಮಾಡುವ ತಾಂತ್ರಿಕ ಸಂಸ್ಥೆಗೆ ಶುಲ್ಕ ಪಾವತಿ ಮಾಡುವುದು ಹಾಗೂ ಇತರೆ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಯಶವಂತರಾಯಗೌಡ ಪಾಟೀಲ, ಸಿ.ಎಸ್.ನಾಡಗೌಡ, ಅಶೋಕ ಮನಗೂಳಿ, ಮಾಜಿ ಶಾಸಕ ರಾಜು ಆಲಗೂರ, ಲೋಕೋಪಯೋಗಿ ಇಲಾಖೆಯ ಧಾರವಾಡ ಉತ್ತರ ವಲಯದ ಮುಖ್ಯ ಅಭಿಯಂತರ ಎಚ್.ಸುರೇಶ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಕಾರ್ಯನಿರ್ವಾಹಕ ಅಭಿಯಂತರ ರಾಜುಕೃಷ್ಣ ಮುಜುಮದಾರ, ಗುತ್ತಿಗೆದಾರ ಎಸ್.ಎಸ್.ಆಲೂರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಎA.ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.