ವಿಜಯಪುರ : ಕನ್ನಡ ನಾಮ ಫಲಕ ಹೋರಾಟದಲ್ಲಿ ಪಾಲ್ಗೊಂಡ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರನ್ನು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಹಾಗೂ ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ವಿಜಯಪುರ ನಗರ ಗಾಂಧಿವೃತ್ತದಲ್ಲಿ ಜಮಾಯಿಸಿದ ಕರವೇ ಪದಾಧಿಕಾರಿಗಳು ನಿನ್ನೆ ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಕನ್ನಡ ನಾಮ ಫಲಕ ಕಡ್ಡಾಯವಾಗಿ ಅಳವಡಿಸುವಂತೆ ಶಾಂತಿಯುತ ಹೋರಾಟ ಕೈಕೊಂಡ ರಾಜ್ಯಾಧ್ಯಕ್ಷರಾದ ಟಿ.,ಎ. ನಾರಾಯಣಗೌಡರನ್ನು ಸೇರಿದಂತೆ ಹಲವು ಕಾರ್ಯಕರ್ತರನ್ನು ಹಾಗೂ ವಿಜಯಪುರ ಜಿಲ್ಲಾಧ್ಯಕ್ಷರಾದ ಎಂ.ಸಿ. ಮುಲ್ಲಾ ಅವರನ್ನು ಬಂಧಿಸಿರುವ ಸರ್ಕಾರದ ಧೋರಣೆಯನ್ನು ನಾವು ಖಂಡಿಸುತ್ತೇವೆ.
ಈ ಪ್ರತಿಭಟನೆಯನ್ನುದ್ದೇಶಿಸಿ ನಗರ ಅಧ್ಯಕ್ಷರಾದ ಫಯಾಜ ಕಲಾದಗಿಯವರು ಮಾತನಾಡಿ, ಸರ್ಕಾರದ ಕನ್ನಡ ವಿರೋಧಿ ನೀತಿ ನಾವು ಸಹಿಸಲು ಸಾಧ್ಯವಿಲ್ಲ ಕನ್ನಡಿಗರನ್ನು ಕೆಣಕಿದ ರಾಜ್ಯ ಸರ್ಕಾರದ ಹುನ್ನಾರದ ಸಲ್ಲದು ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದರು. ಮಾನ್ಯ ಮುಖ್ಯಮಂತ್ರಿಗಳು ಇದನ್ನು ಅರ್ಥೈಸಿಕೊಂಡು ಕೂಡಲೇ ಬಂಧಿತರನ್ನು ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ ಉಗ್ರಹೋರಾಟ ಕೈಗೊಳ್ಳಲಾಗುವುದೆಂದು ಎಂದು ಎಚ್ಚರಿಸಿದರು.
ಜಿಲ್ಲಾ ಪ್ರಧಾನ ಕಾರ್ಯದಾರ್ಶಿ ಸುರೇಶ ಬಿಜಾಪೂರರವರು ಮಾತನಾಡಿ, ಉಗ್ರವಾಗಿ ಖಂಡಿಸಿದರು.
ಕರವೇ ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕರಾದ ದಸ್ತಗೀರ ಸಾಲೋಟಗಿ ಮಾತನಾಡಿ, ಸರ್ಕಾರದ ಕರವೇ ವಿರುದ್ಧ ನಡೆದುಕೊಳ್ಳುತ್ತಿರುವ, ರೀತಿ ನೀತಿ, ಸರಿ ಕಂಡು ಬರುತ್ತಿಲ್ಲ ಕರವೇಯಲ್ಲಿ ಪಕ್ಷಾತೀತ ಎಲ್ಲ ಧರ್ಮಿಯರು ಇರುವುದನ್ನು ಸರ್ಕಾರ ಗಮನಿಸಬೇಕು ಎಂದರು. ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಅಳವಡಿಸಿ ಕನ್ನಡ ಪ್ರೇಮವನ್ನು ಮೆರೆಯಬೇಕು ಎಂದರು.
ಪ್ರತಿಭಟನೆಯಲ್ಲಿ ಅಶೋಕ ನಾವಿ, ಬಸವರಾಜ ಚಪ್ರೆ, ದಯಾನಂದ ಸಾವಳಗಿ, ರವಿ ಮುರಗೋಡ, ಮನೋಹರ ತಾಜವ, ಬಸವರಾಜ ಬಿ.ಕೆ, ರಜಾಕ ಕಾಖಂಡಕಿ, ಆಸೀಫ ಪೀರವಾಲೆ, ತಾಜುದ್ದೀನ ಖಲಿಪಾ, ಸಂತೋಷ ಮುದೋಳ, ಡಿ.ಎಸ್.ಪೀರಜಾಧೆ, ಕೆ.ಕೆ.ಬನಹಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು ಪ್ರತಿಭಟನೆ ಕೈಕೊಂಡು ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.