Tuesday, December 31, 2024
Sunday, December 29, 2024
Friday, December 27, 2024
ಅಂಗನವಾಡಿ ಕಾರ್ಯಕರ್ತೆ ಹುದ್ದೆ: ಅಪೂರ್ಣ ಅರ್ಜಿ ಸಲ್ಲಿಸಿದವರಿಗೆ ಜ. 5 ವರೆಗೆ ಕಾಲಾವಕಾಶ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ: ನಗರ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ 394 ಅಂಗನವಾಡಿ ಸಹಾಯಕಿಯ ಹುದ್ದೆಗೆ 672 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 09/11/2024 ರವರೆಗೆ ಕಾಲಾವಕಾಶ ನೀಡಲಾಗಿತ್ತು ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದೆ ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ 26/12/2024 ರಿಂದ 05/01/2025ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್ಸೇಟ್ನಲ್ಲಿ ಇಲಾಖೆ ವತಿಯಿಂದ ಅವಕಾಶ ನೀಡಿ ಆದೇಶಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ವಿಜಯಪುರ (ನಗರ) ಜಿಲ್ಲಾ ಪಂಚಾಯತ್ ಆವರಣ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Thursday, December 26, 2024
ಜಗತ್ತಿನಾದ್ಯಂತ ಭಕ್ತ ಸಮೂಹ ಹೊಂದಿದ ಅತ್ಯಂತ ಸರಳ ಮತ್ತು ಶ್ರೇಷ್ಠ ಸಂತ : ಮಹೇಶ ಮಾಶಾಳ
ವಿಜಯಪುರ : ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜಗತ್ತನ್ನೇ ಗೆದ್ದಂತವರು. ಜಗತ್ತಿನಾದ್ಯಂತ ಭಕ್ತ ಸಮೂಹ ಹೊಂದಿದ ಅತ್ಯಂತ ಸರಳ ಮತ್ತು ಶ್ರೇಷ್ಠ ಸಂತ ಎಂದು ಖ್ಯಾತ ಭಾಷಣಕಾರ ಮಹೇಶ ಮಾಶಾಳ ಹೇಳಿದರು.
ನಗರದ ಜ್ಞಾನಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಯವರ ಗುರುನಮನ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ "ಜ್ಞಾನಾರಾಧನೆ" ಗೋಷ್ಠಿಯಲ್ಲಿ ಅವರು ಮಾತನಾಡಿದರು.
ನಾನು ಮೊದಲು ಶ್ರೀ ಸಿದ್ದೇಶ್ವರ ಅಪ್ಪಾಜಿಯವರನ್ನು ಭೇಟಿ ಮಾಡಿದ್ದು ಸಿಂದಗಿಯ ಒಂದು ಕಾಲೇಜಿನಲ್ಲಿ. ಅವರನ್ನು ಭೇಟಿಯಾಗುವುದಕ್ಕೂ ಮುನ್ನ ನಾನು ಅಹಂಕಾರದಿAದ ಭಾಷಣ ಮಾಡುತ್ತಿದ್ದೆ. ಆದರೆ ಅವರನ್ನು ನೋಡಿದ ಮೇಲಿನಿಂದ ನಾನು ಪ್ರಜ್ಞಾವಂತಿಕೆಯಿAದ ಭಾಷಣ ಮಾಡುವುದನ್ನು ಕಲಿತುಕೊಂಡೆ. ನನ್ನ ಇಡೀ ಜೀವನದಲ್ಲಿಯೇ ನಾನು ಈ ಮಟ್ಟಿಗೆ ಏನಾದರೂ ಬೆಳೆದಿದ್ದೇನೆ ಎಂದರೆ ಅದಕ್ಕೆ ಅಪ್ಪಾಜಿಯವರೇ ಕಾರಣ. ನನಗೆ ಒಂದು ಮಾತು ಹೇಳಿದ್ದರು ನೀನು ಎಷ್ಟು ಕಲಸ್ತಿಯಾ ಅಷ್ಟು ಕಲಿತಿಯಾ ಹೀಗಾಗಿ ನೀನು ನಿನ್ನ ಭಾಷಣದ ಮೂಲಕ ಜನರಿಗೆ ಕಲಿಸ್ತಾ ಹೋಗು ಇನ್ನು ಹೆಚ್ಚಿಗೆ ಅವರಿಂದ ಕಲಿತಿಯಾ ಎಂದು ಹೇಳಿದ್ದರು ಅವರ ಈ ಮಾತು ನಾನು ಎಲ್ಲವನ್ನು ಕಲಿತು ಮುಗಿಸಿದ್ದೇನೆ ಎನ್ನುವ ಅಹಂಕಾರವನ್ನು ಮುರಿತು ಜೀವನ ಪೂರ್ತಿ ನಾನು ಕಲಿಯುವುದು ಬಾಖಿ ಇದೆ ಎಂದು ತೋರಿಸಿ ಕೊಟ್ಟರು. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ನಮ್ಮೆಲ್ಲರನ್ನು ಸತ್ಯದ ದಾರಿಯಲ್ಲಿ ನಡೆಯಿರಿ ಎಂದು ತೋರಿಸಿಕೊಟ್ಟವರು. ನಮ್ಮಲ್ಲಿರುವ ಎಲ್ಲ ಹೊಲಸನ್ನು ಹೊರಗೆ ಹಾಕಿ ನಮ್ಮನ್ನ ಮತ್ತು ನಮ್ಮ ಬದುಕನ್ನು ಶುಚಿಗೊಳಿಸಿದ ಮಹಾತ್ಮರು. ನಮ್ಮೆಲ್ಲರ ಮನಸ್ಸೊಳಗೆ ಅರಿವಿನ ದೀಪ ಹಚ್ಚಿದ ಅಪ್ಪನವರು ನಮ್ಮ ಮನಸ್ಸಲ್ಲಿ ಎಂದೆAದಿಗೂ ಇರುತ್ತಾರೆ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಬದುಕಿದ ಜೀವನ ಶೈಲಿ ಇಡೀ ಜಗತ್ತಿನ ಸಂತ ಸಮೂಹಕ್ಕೆ ಹಾಗೂ ಅವರ ಸರಳತೆ ನಮ್ಮೆಲ್ಲರ ಬದುಕಿಗೆ ಮಾದರಿ ಎಂದರು. ನಮಗೆ ಯಾವಾಗಲೂ ಉತ್ತಮ ಸಲಹೆಗಳನ್ನು ನೀಡುವ ಮೂಲಕ ನಮ್ಮನ್ನು ತಿದ್ದುತ್ತಿದ್ದರು. ನಮಗೆ ಎಂದಿಗೂ ಪ್ರಚಾರಕ್ಕಾಗಿ ಹೋರಾಟ, ಕೆಲಸಗಳನ್ನು ಮಾಡಬೇಡಿ ನಿಮ್ಮ ಹೋರಾಟ ಯಶಸ್ವಿಯಾಗಿ ನಿಮ್ಮ ಕೆಲಸಗಳು ಸಾರ್ಥಕತೆ ತರಬೇಕು ಆ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಸಲಹೆಗಳನ್ನು ನೀಡುವ ಮೂಲಕ ನಮ್ಮ ಬದುಕಿಗೆ ಪ್ರೇರಣೆಯಾಗಿದ್ದಾರೆ ಎಂದರು.
ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ್ದ ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕದೋಂಡ ಮಾತನಾಡಿ, ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಹುಟ್ಟಿದ ಭೂಮಿಯಲ್ಲಿ ಹುಟ್ಟಿದ ನಾವೇ ಪುಣಿತರು. ಶ್ರೀ ಅಪ್ಪಾಜಿಯವರ ಮಾತುಗಳಲ್ಲಿ ಬರೀ ನಾಲ್ಕಾನೆ ಭಾಗ ನಮ್ಮಲ್ಲಿ ಅಳವಡಿಸಿಕೊಂಡರೆ ನಮ್ಮ ಬದುಕು ಪಾವನವಾಗುತ್ತದೆ. ನುಡಿದಂತೆ ನಡೆದ ಆತ್ಯಂತ ಸರಳ ಮತ್ತು ಜಗತ್ತಿನ ಶ್ರೇಷ್ಠ ಸಂತ ಅದು ಶ್ರೀ ಸ್ವಾಮೀಜಿಯವರು. ಅವರ ಜೀವನದುದ್ದಕ್ಕೂ ನಮಗೆ ಜ್ಞಾನಾರಾಧನೆ ಮಾಡಿದಂತವರು ಅಂತಹವರ ನೆರಳಲ್ಲಿ ನಾವು ನಿವೆಲ್ಲರೂ ಬೆಳೆದಿದ್ದೇವೆ ಎಂದರೆ ಅದು ನಮ್ಮ ಪುಣ್ಯ. ಹೀಗಾಗಿ ಅವರು ಹಾಕಿ ಕೊಟ್ಟ ದಾರಿಯಲ್ಲಿ ಅವರು ಕಲಿಸಿದ ಸತ್ಯದ ದಾರಿಯಲ್ಲಿ ನಡೆಯುವ ಮೂಲಕ ನಾವು ಅವರಿಗೆ ನಿಜವಾದ ಗುರುನಮನ ಸಲ್ಲಿಸೋಣ ಎಂದರು.
ಸಿದ್ದಣ್ಣ ಲಂಗೂಟಿ ಮಾತನಾಡಿ, ಸಿದ್ದೇಶ್ವರ ಅಪ್ಪಗಳು ವಿಶ್ವಜ್ಞಾನಿಗಳು, ಅವರು ಆಧ್ಯಾತ್ಮ ಲೋಕದಲ್ಲಿ ದೊಡ್ಡ ಕ್ರಾಂತಿ ಮಾಡಿದ್ದಾರೆ. ಆಶ್ರಮದಲ್ಲಿದ್ದ ಎಲ್ಲ ಗುರುಗಳು ವಿದ್ಯಾರ್ಥಿಗಳಲ್ಲಿ ವಿಶ್ವ ತತ್ವಜ್ಞಾನದ ಚಿಂತನೆಗೆ ಕರೆದುಕೊಂಡು ಹೋದವರು ಪೂಜ್ಯ ಸಿದ್ದೇಶ್ವರ ಅಪ್ಪಗೋಳು ಎಂದು ಹೇಳಲು ಹರ್ಷವಾಗುತ್ತದೆ ಎಂದರು.
ಭಾರತದ ೩೦ ಭಾಷೆಗಳಿಗೆ ನಮ್ಮ ಶರಣರ ವಚನಗಳು ಅನುವಾದಗೊಂಡಿವೆ. ೨೩ ಸಂಪುಟಗಳನ್ನು ಪ್ರಧಾನ ಮಥ್ರಿ ನರೆಂದ್ರ ಮೋದಿ ಅವರು ಅನಾವರಣಗೊಳಿಸಿದ್ದಾರೆ. ೧೪ ವಿದೇಶಿ ಭಾಷೆಗಳಲ್ಲೂ ಅನುವಾದಗೋಳ್ಳುತ್ತಿದ್ದು ಶೀಗ್ರದಲ್ಲಿಯೇ ರಾಷ್ಟçಪತಿ ಮುರ್ಮುಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಒಟ್ಟು ೫೦ ವಿದೇಶಿ ಭಾಷೆಗಳಲ್ಲಿ ವಚನಗಳು ಅನುವಾದಗೊಳುತ್ತವೆ. ಇಷ್ಟು ಕೆಲಸ ಮಾಡಲು ನನಗೆ ಪ್ರೇರಣೆ ನೀಡಿದವರು ಶ್ರೀ ಸಿದ್ದೇಶ್ವರ ಅಪ್ಪಾಜಿಯವರು ಎಂದು ಹೇಳಲು ಸಂತೋಷವೆನಸುತ್ತದೆ ಎಂದು ಹೇಳಿದರು.
ಇಸ್ಲಾಂ ವಿದ್ವಾಂಸರು ಕಾಶ್ಮೀರದಲ್ಲಿ ವಚನ ಅನುವಾದದ ಬಗ್ಗೆ ಕೇಳಿದಾಗ ಅದರಲ್ಲಿ ಮಾನವೀಯತೆಯ ಗುಣಗಳಿವೆ ಹಾಗಾಗಿ ನಾವು ಅದನ್ನು ಅನುವಾದ ಮಾಡುತ್ತಿದ್ದೇವೆ ಎಂದು ಉತ್ತರ ನೀಡಿದರು. ಅಂತಹ ದಿವ್ಯ ಶಕ್ತಿ ನಮ್ಮ ವಚನಗಲ್ಲಿ ಇವೆ. ನಾವು ಅವುಗಳಲ್ಲಿನ ಜ್ಞಾನವನ್ನು ಅಳವಡಿಸಿಕೊಂಡು ಬದುಕು ಸಾಗಿಸಬೇಕು. ಅವುಗಳು ನಮ್ಮ ಸಂಪತ್ತು ಎಂದು ಅವುಗಳನ್ನು ರಕ್ಷಣೆ ಮಾಡಿ ಬದುಕಬೇಕು. ಜಗತ್ತಿನಲ್ಲಿ ವಿಜ್ಞಾನ ಇದೆ, ಸುಜ್ಞಾನ ಇದೆ, ಆದರೆ ಇಂದು ವಿಜ್ಞಾನದಿಂದ ಜಗತ್ತು ನಾಶದ ಕಡೆಗೆ ಹೊರಟಿದೆ ಆದರೆ ಸುಜ್ಞಾನದಿಂದ ಜಗತ್ತು ಬೇಳಗಲಿದೆ ಎಂದರು
ಇದೇ ಸಂದರ್ಭದಲ್ಲಿ ಮುಚಳಂಬಾ ನಾಗಭೂಷಣ ಶಿವಯೋಗಿಗಳ ಸಂಸ್ಥಾನ ಮಠದ ಪರಮ ಪೂಜ್ಯ ಶ್ರೀ ಪ್ರಣವಾನಂದ ಮಹಸ್ವಾಮಿಗಳು ಆಶೀರ್ವಚನ ನೀಡಿ, ಹೇಳುವುದು ಸರಳ ಮಾಡುವುದು ಬಹಳ ಕಷ್ಟ ಆದರೆ ಹೇಳಿದಂತೆ ಬದುಕಿ ಇಡೀ ಜಗತ್ತಿಗೆ ಪ್ರೇರಣೆಯಾದಂತವರು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು. ಅವರು ಬದುಕಿದ ದಿನಗಳಲ್ಲಿ ನಾವು ಕೂಡ ಬದುಕಿದ್ದೇವು ಎನ್ನುವುದು ನಮಗೆ ಹೆಮ್ಮೆ. ಸಿದ್ದೇಶ್ವರ ಅಪ್ಪಾಜಿಯವರು ಜ್ಞಾನೋಪಾಸಕರು. ಅವರು ಜ್ಞಾನದ ಮೂಲಕ ನಮಗೆ ಅಮೃತವನ್ನು ನೀಡಿದ್ದಾರೆ ಎಂದರು. ಬದುಕಿನಲ್ಲಿ ಆಧ್ಯಾತ್ಮದ ಕೀಲಿ ಮರೆತರೆ ನಿಮ್ಮ ಬದುಕು ನಿರರ್ಥಕವಾಗುತ್ತದೆ ಎಂದು ಸಿದ್ದೇಶ್ವರ ಅಪ್ಪಾಜಿಯವರು ನಮಗೆ ಹೇಳಿ ಹೋಗಿದ್ದಾರೆ. ಅವರು ಹೇಳಿದ ಮಾತನ್ನು ಪಾಲನೆ ಮಾಡಬೇಕು ಎಂದು ಹೇಳಿದರು.
ಜ್ಞಾನಯೋಗಾಶ್ರಮ ಅಧ್ಯಕ್ಷ ಗುರುಗಳಾದ ಪೂಜ್ಯ ಶ್ರೀ ಬಸವಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ತಮ್ಮ ಜೀವನದೂದ್ದಕ್ಕೂ ಇಡೀ ಜಗತ್ತಿಗೆ ಜ್ಞಾನದಾಸೋಹ ಬಡಿಸಿದಂತವರು. ಅವರು ಬಿತ್ತಿದ ಜ್ಞಾನದ ಬೀಜ ನಮ್ಮಲ್ಲಿ ಮೊಳಕೆಯೊಡೆದು ಹೆಮ್ಮರವಾಗಿ ಬೆಳೆಯಬೇಕಿದೆ. ಅವರು ನೀರೆರೆದ ಜ್ಞಾನದಲ್ಲಿ ಸ್ವಲ್ಪವಾದರೂ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಗಿದ್ದೇ ಆದಲ್ಲಿ ಅವರ ಆಶಯ ಸಾರ್ಥಕವಾಗುತ್ತದೆ ಎಂದರು.
ಈ ಸಮಯದಲ್ಲಿ ವಿವಿಧ ಮಠಾಧೀಶರು, ಸ್ವಾಮೀಜಿಯವರು, ರೈತ ಮುಖಂಡರು, ನಾಯಕರು, ಸಾವಿರಾರು ಭಕ್ತಾಧಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಮರೆಯಲಾಗದ ಮಾಣಿಕ್ಯ. ಅವರು ಪ್ರತಿ ಕ್ಷಣವೂ ನಮ್ಮ ನೆನೆಪಿನಲ್ಲಿಯೇ ಇರುತ್ತಾರೆ:ಕೃಷಿ ನಿಯೋಗದ ಅಧ್ಯಕ್ಷ ಎ.ಎಸ್.ಆನಂದ
ವಿಜಯಪುರ: ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಮರೆಯಲಾಗದ ಮಾಣಿಕ್ಯ. ಅವರು ಪ್ರತಿ ಕ್ಷಣವೂ ನಮ್ಮ ನೆನೆಪಿನಲ್ಲಿಯೇ ಇರುತ್ತಾರೆ ಅವರು ತೋರಿಸಿದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಸಾರ್ಥಕದ ಜೀವನ ನಡೆಸಬೇಕು ಎಂದು ಸಾವಯವ ಕೃಷಿ ನಿಯೋಗದ ಅಧ್ಯಕ್ಷ ಎ.ಎಸ್.ಆನಂದ ಹೇಳಿದರು.
ನಗರದ ಶ್ರೀ ಜ್ಞಾನಯೋಗಾಶ್ರಮದಲ್ಲಿ ಶ್ರೀ ಸಿದ್ದೇಶ್ವರ ಅಪ್ಪಾಜಿಯವರ ೨ನೇ ವರ್ಷದ ಗುರು ನಮನ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ "ಸುಧಾರಿತ ಕೃಷಿ ಪದ್ಧತಿ" ಎಂಬ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಶ್ರೀ ಸಿದ್ದೇಶ್ವರ ಅಪ್ಪಾಜಿಯವರು ಇದ್ದಾಗ ಅವರನ್ನು ಭೇಟಿ ಮಾಡಲು ಅವರ ಮಾತುಗಳನ್ನು ಕೇಳಲು ಮನಸ್ಸು ಮೌನವಾಗುತ್ತಿತ್ತು. ಆದರೆ ಇಂದು ಅವರು ಇಲ್ಲದಾಗ ಅದೇ ಮೌನವನ್ನು ಮುರೆದು ಅವರ ಬಗ್ಗೆಯೇ ಮಾತನಾಡಬೇಕಾದ ಅನಿವಾರ್ಯತೆ ಬಂದಿದೆ. ಅವರು ಇಲ್ಲ ಎಂಬ ಮಾತು ನಂಬಲಸಾಧ್ಯ ಅವರು ನಮ್ಮ ಸುತ್ತು-ಮುತ್ತಲಯಲ್ಲಿಯೇ ಇದ್ದಾರೆ ನಮ್ಮ ಮಾತುಗಳನ್ನು ಕೇಲಿಸಿಕೊಳ್ಳುತ್ತಿದ್ದಾರೆ ಎಂಬ ಭಾವನೆ ಮೂಡುತ್ತದೆ ಎಂದರು.
ಇನ್ನು ಕೃಷಿಯ ಬಗ್ಗೆ ಅಪಾರ ಕಾಳಜಿ ಹೊಂದಿAತವರು ಅಪ್ಪಾಜೀಯವರು. ಸಾವಯವ ಕೃಷಿಯ ಬಗ್ಗೆ ಸಾಕಷ್ಟು ಅರಿವನ್ನು ರೈತರಿಗೆ ಮೂಡಿಸಿದಂತವರು. ಅವರ ಮಾತಿನಂತೆ ನಾವೆಲ್ಲರೂ ಸಾವಯವ ಕೃಷಿಯ ಮಹತ್ವದ ಬಗ್ಗೆ ಅರಿಯಬೇಕಾಗಿದೆ. ರೈತರು ರಾಸಾಯನಿಕ ಗೊಬ್ಬರವನ್ನು ನಮ್ಮ ಭೂಮಿಗೆ ಹಾಕುವುದರಿಂದ ಅದರಿಂದ ಆಗುವ ನಷ್ಟದ ಬಗ್ಗೆ ಅರಿಯಬೇಕಾಗಿದೆ. ಕೃಷಿ ಬರೀ ಲಾಭದಾಯಕ ಉದ್ಯೋಗವಾದ ಪರಿಣಾಮ ಇಂದಿನ ದಿನ ನಮಗೆ ಅನ್ನ ನೀಡುವ ಭೂಮಿಗೆ, ಹಾಲು ಕೊಡುವ ಗೋವಿಗೆ, ನಮ್ಮ ಮಕ್ಕಳಿಗೂ, ನಮ್ಮ ಕುಟುಂಬಗಳಿಗೂ ವಿಷಪೂರಿತ ಆಹಾರವನ್ನು ನೀಡುತ್ತಿರುವುದು ದುರಂತದ ವಿಷಯ ಎಂದರು.
ಪತ್ರಿಕೆಗಳಲ್ಲಿ ಯಾರದ್ದೋ ಕೊಲೆ ವಿಷಯವನ್ನು ಓದಿ ಮರುಗುವ ನಾವು ಪ್ರತಿದಿನ ವಿಷಪೂರಿತ ಗೊಬ್ಬರ ಬಳಸಿ ಇಷ್ಟೊಂದು ಜೀವಿಗಳ ಜೀವನವನ್ನು ನಾವು ನಾಶ ಮಾಡುತ್ತಿದ್ದೇವೆ ಅದರ ಬಗ್ಗೆ ಏಕೆ ನಮಗೆ ಅರಿವಾಗುತ್ತಿಲ್ಲ.
ಬಯಲಲ್ಲಿ ಬಯಲಾಗಿ ಹೋಗುವುದೇ ಜೀವನ ಎಂದು ಹೇಳಿದ ಸಿದ್ದೇಶ್ವರ ಸ್ವಾಮೀಜಿಯವರ ಮಾತುಗಳು ನಮ್ಮ ಜೀವನಕ್ಕೆ ಪ್ರೇರಣೆಯಾಗಬೇಕು. ನಾವು ಎಷ್ಟೇ ಗಳಿಸಿದರು, ಕೋಟಿ, ಕೋಟಿ ಕೂಡಿಟ್ಟರು ಎಲ್ಲವನ್ನು ಇಲ್ಲೆ ಬಿಟ್ಟು ಅಪ್ಪಾಜಿಯವರ ಮಾತಿನಂತೆ ಬಯಲಲ್ಲಿ ಬಯಲಾಗಿಯೇ ಹೋಗುವುದು ಶತಸಿದ್ಧ ಹೀಗಿರುವಾಗ ಕೃಷಿಯಲ್ಲಿ ಲಾಭದಾಯಕದ ಆಸೆಗಾಗಿ ಎಲ್ಲ ಬೆಳೆಗಳಿಗು ವಿಷ ಸಿಂಪಡಿಸಿ ಎಲ್ಲರ ಜೀವಕ್ಕೂ ಕುತ್ತು ತರುವ ಪದ್ಧತಿ ನಿಲ್ಲಬೇಕು. ನಮ್ಮ ಸ್ವಾರ್ಥಕ್ಕಾಗಿ ಭೂಮಿಗೆ ವಿಷ ಉಣಿಸುತ್ತಿದ್ದೇವೆ. ನಿಸರ್ಗ ಜೀವಿಗಳಿಗೆ ವಿಷ ಹಾಕಿ ಪಾಪಿಗಳಾಗುತ್ತಿದ್ದೇವೆ. ಕೃಷಿ ಸಾತ್ವಿಕವಾಗಬೇಕು ಅಂದಾಗ ಮಾತ್ರ ಈ ಭೂಮಿ ಮೇಲೆ ಒಳ್ಳೆಯದಾಗಲೂ ಸಾಧ್ಯ. ನಾವೆಲ್ಲರೂ ಯಾವ ರೈತ ತನ್ನ ಬೆಳೆಗಳಿಗೆ ವಿಷ ಸಿಂಪಡಿಸದೆ ಸಾವಯವ ಪದ್ಧತಿಯಲ್ಲಿ ಕೃಷಿ ಮಾಡುತ್ತಾನೊ ಅಂತಹವನನ್ನು ಕೈ ಮುಗಿದು ಗೌರವಿಸೋಣ. ಅಂತಹ ರೈತರನ್ನ ನೋಡಿ ಹೆಮ್ಮೆ ಪಡುವ ಮೂಲಕ ಅವರನ್ನು ಪ್ರೋತ್ಸಾಹಿಸೋಣ ಸಾವಯವ ಕೃಷಿ ಪದ್ಧತಿಗೆ ಬೆಂಬಲ ಸೂಚಿಸೋಣ ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೀಜ ಮತ್ತು ಸಾವಯವ ಪ್ರಮಾಣ ನಿಗಮದ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ ಮಾತನಾಡಿ, ನಮ್ಮ ಇಡೀ ಮನೆತನವೇ ಆಶ್ರಮದ ಭಕ್ತರು. ನನ್ನ ಅಜ್ಜಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಗುರುಗಳಾದ ಮಲ್ಲಿಕಾರ್ಜುನ ಸ್ವಾಮೀಜಿಯವರ ಪರಮ ಭಕ್ತರಾಗಿದ್ದರು ಆ ಕಾಲದಿಂದಲೂ ಆಶ್ರಮದ ಜೊತೆ ನಮ್ಮ ಒಡನಾಟ ಮರೆಯಲಾಗದು. ಒಬ್ಬ ಗುರುವಾಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಆಶೀರ್ವಾದ ನಮ್ಮ ಮನೆಯ ಮೇಲೆ ಸದಾ ಇದೆ ಅವರ ಆಶೀರ್ವಾದದ ಕಾರಣವೇ ಇಂದು ನಾವು ಇಷ್ಟರ ಮಟ್ಟಿಗೆ ಬೆಳೆಯಲು ಸಾಧ್ಯ ಎಂದರು. ಶ್ರೀ ಸಿದ್ದೇಶ್ವರ ಅಪ್ಪಾಜಿಯವರಿಗೆ ಲಕ್ಷಾಂತರು ಭಕ್ತರು ಜತತ್ತಿನಾದ್ಯಂತ ಅವರನ್ನು ಪೂಜಿಸುತ್ತಾರೆ. ಅವರು ನಡೆದಾಡಿದ ಭೂಮಿಯಲ್ಲಿ ನಾವೆಲ್ಲರೂ ಜನಿಸಿದ್ದೇ ನಮ್ಮ ಪುಣ್ಯ. ಅವರ ಹಾಕಿ ಕೊಟ್ಟ ದಾರಿಯಲ್ಲಿ ನಾವೆಲ್ಲರೂ ಸಾಗಬೇಕಿದೆ. ಕೃಷಿ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅಪ್ಪಾಜಿಯವರು ಯಾರಾದರೂ ರೈತರು ತಮ್ಮ ತೋಟಕ್ಕೆ ಕರೆದರೆ ಅತ್ಯಂತ ಖುಷಿಯಿಂದ ಹೋಗಿ ಅವರ ಬೆಳೆ ಪದ್ಧತಿಗೆಳಿಗೆ ಹಲವಾರು ಸಲಹೆ ಸೂಚನೆಗಳನ್ನು ನೀಡುತ್ತಿದ್ದರು, ಸಾವಯವ ಕೃಷಿಗೆ ಒತ್ತು ಕೊಡುವಂತೆ ಪ್ರೇರೆಪಿಸುತ್ತಿದ್ದರು ಅವರ ಸಲಹೆಯಂತೆ ನಾವೆಲ್ಲರೂ ಸಾವಯವ ಕೃಷಿ ಪದ್ಧತಿಗೆ ಬೆಂಬಲ ಸೂಚಿಸಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಬಬಲೇಶ್ವರದ ಪಂಚಮಸಾಲಿ ಪೀಠದ ಜಗದ್ಗುರು ಪೂಜ್ಯ ಶ್ರೀ ಮಹಾದೇವ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಶ್ರೀ ಮಲ್ಲಿಕಾರ್ಜುನ ಅಪ್ಪಾಜೀಯವರು ವೇದಾಂತ ಕೇಸರಿ ಎಂಬ ಬಿರುದನ್ನು ಸುಮ್ಮನೆ ಪಡೆದಿಲ್ಲ. ಪ್ರತಿ ದಿನವೂ ಸತತ ಮೂರು ಹೊತ್ತುಗಳ ಕಾಲ ಇಡೀ ಭಕ್ತಕೂಲಕ್ಕೆ ಪ್ರವಚನ ನೀಡಿದಂತವರು ಸ್ವಾಮೀಜಿಯವರು. ಅವರ ಶಿಷ್ಯರಾಗಿ ಇಡೀ ಪ್ರಪಂಚದಾದ್ಯAತ ಇಂಗ್ಲೀಷ್ ಸೇರಿದಂತೆ ಹಲವಾರು ಭಾಷೆಗಳಲ್ಲಿ ಜ್ಞಾನದಾಸೋಹ ಮಾಡಿದಂತವರು ಶ್ರೀ ಸಿದ್ದೇಶ್ವರ ಅಪ್ಪಾಜಿಯವರು. ಪ್ರತಿ ಹಳ್ಳಿ-ಹಳ್ಳಿಗೂ, ದೇಶ-ವಿದೇಶಕ್ಕೂ ತಮ್ಮ ಜ್ಞಾನ ಭಂಡಾರವನ್ನು ಹಂಚಿದAತವರು. ಬದುಕು ಹೇಗಿರಬೇಕು, ಜೀವನ ಎಂದರೆ ಏನು, ಎಷ್ಟು ಸರಳವಾಗಿ ನಾವು ಬದುಕಬೇಕು, ಇದರ ಜೊತೆಗೆ ರೈತರ ಜವಾಬ್ದಾರಿ ಮತ್ತು ಕೃಷಿಯ ಮಹತ್ವದ ಬಗ್ಗೆ ನಡೆದಾಡಿಕೊಂಡೆ ಇಡೀ ಮನುಕೂಲಕ್ಕೆ ತಿಳಿಸಿದ ಮಹಾತ್ಮ ಶ್ರೀ ಸಿದ್ದೇಶ್ವರ ಅಪ್ಪಾಜಿಯವರು. ಅವರ ಬಗ್ಗೆ ಮಾತನಾಡುವುದೇ ನಮ್ಮ ಪುಣ್ಯ ನಮ್ಮ ಜೀವನ ಪಾವಣವಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಜ್ಞಾನಯೋಗಾಶ್ರಮದ ಅಧ್ಯಕ್ಷ ಗುರು ಶ್ರೀ ಬಸವಲಿಂಗ ಸ್ವಾಮೀಜಿಯವರು ಆಶೀರ್ವಚನ ನೀಡಿ, ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ನಮ್ಮ ಜೀವನಕ್ಕೆ ದಾರಿದೀಪ. ಜಗತ್ತಿಗೆ ನಿರಂತರ ಅನ್ನ ಕೊಡುವವನು ರೈತ ನಮ್ಮ ಜೀವನಕ್ಕೆ ರೈತರ ಕೊಡುಗೆ ಅಪಾರ. ಅಂತಹ ರೈತರ ಪ್ರಾಮುಖ್ಯತೆ ಬಗ್ಗೆ ಪೂಜ್ಯ ಶ್ರೀ ಸಿದ್ದೇಶ್ವರ ಅಪ್ಪಾಜಿಯವರು ನಮಗೆ ಸದಾಕಾಲ ತಿಳಿಸಿಕೊಟ್ಟಿದ್ದಾರೆ. ರೈತರೆಂದರೆ ಅವರಿಗೆ ಅಪಾರ ಪ್ರೀತಿ, ಗೌರವ ಎಲ್ಲಿಯಾದರೂ ಹೋಗುವಾಗ ಹೊಲದಲ್ಲಿ ರೈತರು ಕಂಡರೆ ಅಲ್ಲಿ ನಿಂತು ಅವರನ್ನು ಮಾತನಾಡಿಸಿ ಅವರೊಂದಿಗೆ ಕೆಲ ಕಾಲ ಚರ್ಚಿಸಿ ನಂತರ ಮತ್ತೆ ವಾಪಾಸಾಗುತ್ತಿದ್ದರು ಅಷ್ಟು ಪ್ರೀತಿಯನ್ನು ರೈತರಿಗೆ ಅಪ್ಪಾಜಿಯವರು ತೋರಿಸುತ್ತಿದ್ದರು ಎಂದರು.
ಇದೇ ಸಂದರ್ಭದಲ್ಲಿ ಪ್ರಗತಿಪರ ಸಾವಯವ ಕೃಷಿಕರ ಧರೆಪ್ಪ ಕಿತ್ತೂರ ಮಾತನಾಡಿ, ನಮ್ಮ ಜೀವನದಲ್ಲಿ ಕೃಷಿ, ಪರಿಸರ, ಆರೊಗ್ಯದ ಬಗ್ಗೆ ಅರಿವನ್ನು ಮೂಡಿಸಿದವರು ಶ್ರೀ ಸಿದ್ದೇಶ್ವರ ಅಪ್ಪಾಜಿಯವರು. ನಾನು ರೈತನಾಗಿ ಇಷ್ಟು ಸಾಧನೆ ಮಾಡಬೇಕೆಂದರೆ ಅವರೆ ಕಾರಣ. ಸಾವಯವ ಕೃಷಿಯ ಮಹತ್ವದ ಬಗ್ಗೆ ತಿಳಿಸಿ ಅದನ್ನು ನನ್ನ ತೋಟದಲ್ಲಿ ಪ್ರಯೋಗಿಸಲು ಕಾರಣ ಅಪ್ಪಾಜಿಯವರು. ನನ್ನ ಕೃಷಿ ತೋಟಕ್ಕೆ ಭೇಟಿ ನೀಡಿ ನನಗೆ ಸಾಕಷ್ಟು ಸಲಹೆ ನೀಡಿ ನನಗೆ ಆಶೀರ್ವಾದ ಮಾಡಿದ್ದರು ಅವರು ನಮ್ಮ ಮನದಲ್ಲಿ ಎಂದೆAದಿಗೂ ಅಮರರು ಎಂದು ಹೇಳಿದರು.
ಇನ್ನೋರ್ವ ರೈತ ರಾಜಶೇಖರ ನಿಂಬರಗಿ ಮಾತನಾಡಿ, ಅಪ್ಪಾಜೀಯವರು ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದAತವರು. ಕೃಷಿಯ ಮಹತ್ವದ ಬಗ್ಗೆ ಇಡೀ ಮನುಕೂಲಕ್ಕೆ ತಲುಪಿಸಿದಂತವರು. ಅವರ ಸಲಹೆ ಸೂಚನೆಗಳು ಕೃಷಿಕರಿಗೆ ಸಾಕಷ್ಟು ಸಹಕಾರಿಯಾಗಿವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮಕ್ಕೂ ಮುನ್ನ ಹಂತಿಪದಗಳನ್ನು ಹಾಡಿ ಜಾನಪದ ಕಲೆಯನ್ನು ಮರುಕಳಿಸಿದ ರೈತರನ್ನು ಆಶ್ರಮದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಮಯದಲ್ಲಿ ವಿವಿಧ ಮಠಾಧೀಶರು, ಪೂಜ್ಯರು, ರೈತ ಮುಖಂಡರು, ನಾಯಕರು, ಸಾವಿರಾರು ಭಕ್ತಾಧಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ಸುಭಾಷ್ ಕನ್ನೂರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಸಾಹಿತಿ ಜಂಬುನಾಥ ಕಂಚ್ಯಾಣಿ ಸ್ವಾಗತಿಸಿದರು, ಶಿಕ್ಷಕ ಅಶೋಕ ಹಂಚಲಿ ನಿರೂಪಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Wednesday, December 25, 2024
Tuesday, December 24, 2024
Sunday, December 22, 2024
Saturday, December 21, 2024
Friday, December 20, 2024
ಅಪರಾಧಗಳ ತಡೆಗೆ ಸಾರ್ವಜನಿಕರ ಸಹಕಾರ ಮುಖ್ಯ : ಪಿಎಸ್ಐ ಆರೀಫ ಮುಷಾಪುರಿ
ಸಿಂದಗಿ: ಕೇವಲ ಪೊಲೀಸರಿಂದ ಅಪರಾಧಗಳ ತಡೆ ಸಾಧ್ಯವಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯ ಎಂದು ಪಿಎಸ್ಐ ಆರೀಫ ಮುಷಾಪುರಿ ಹೇಳಿದರು.
ಪುಟ್ಟಣದ ಆರ್.ಡಿ. ಪಾಟೀಲ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪಪೂರ ಮಹಾವಿದ್ಯಾಲಯ ಹಾಗೂ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ಅಡಿಯಲ್ಲಿ ಸಿಂದಗಿ ಪೊಲೀಸ್ ಠಾಣೆಯ ಸಹಯೋಗದಲ್ಲಿ ಹಮ್ಮಿಕೊಂಡ 2024ರ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ದಿನನಿತ್ಯದ ಬದುಕಿನಲ್ಲಿ ಕಾನೂನು ನಿಯಮಗಳನ್ನು ಅಳವಡಿಸಿಕೊಂಡು ಸಾಗಬೇಕಾದ ಅನಿವಾರ್ಯತೆ ಇದೆ. ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವಂತಹ ಅಪರಾಧಗಳು ಕಣ್ಣಿಗೆ ಬಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಾಗಿರುವುದು ನಾಗರಿಕರ ಕರ್ತವ್ಯ. ಅಪರಾಧಗಳಾಗದಂತೆ ವಹಿಸಬಹುದಾದ ಮುನ್ನೆಚ್ಚರಿಕೆ ಕ್ರಮಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ವೇಳೆ ಪಿ.ವಿ.ಮಹಲಿನಮಠ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಘಟಕದ ಸಂಯೋಜಕ ಬಸವರಾಜ ಮಹಾಜನಶೆಟ್ಟಿ, ಉಪನ್ಯಾಸಕ ಡಾ.ಶರಣಬಸವ ಜೋಗುರ ಸೇರಿದಂತೆ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ದೇವು.ಕೆ ಅಂಬಿಗ ನಿರ್ದೇಶನದ “ಸೈಕಲ್ ಸವಾರಿ” ಚಲನಚಿತ್ರದ ಹಾಡಿಗೆ “ದ ಬೆಸ್ಟ ಅವಾರ್ಡ” ಪ್ರಶಸ್ತಿ
ವಿಜಯಪುರ : ಇತ್ತೀಚ್ಚಗಷ್ಟೆ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ಎನ್ಸಾಟೋ ರಿ ಕ್ರಿಯೇಷನ್ ಹಬ್ನಲ್ಲಿ ನಡೆದಿರುವ ನವ ಕರ್ನಾಟಕ ಚಲನಚಿತ್ರೋತ್ಸವ ಅಕಾಡೆಮಿ ಹಾಗೂ ಯೂನಿವರ್ಸಲ್ ಫೀಲ್ಮ್ ಕೌನ್ಸಿಲ್ ವತಿಯಿಂದ ಹಮ್ಮಿಕೊಂಡ ಕರ್ನಾಟಕ ಅಂತರಾಷ್ಟಿçÃಯ ಚಲನಚಿತ್ರೋತ್ಸವದಲ್ಲಿ ವಿಜಯಪುರ ಜಿಲ್ಲೆಯ ಯುವ ನಿರ್ದೇಶಕರಾದ ದೇವು.ಕೆ ಅಂಬಿಗ ನಿರ್ದೇಶನದ “ಸೈಕಲ್ ಸವಾರಿ” ಚಲನಚಿತ್ರದ "ಮರೆತು ಹೋಗಲು ಹೇಳು ಕಾರಣ" ಎನ್ನುವ ಗೀತೆಗೆ “ದಿ ಬೆಸ್ಟ್ ಸಾಂಗ್” ಅವಾರ್ಡ ದೊರಕಿದೆ, ರಾಷ್ಟç ಹಾಗೂ ಅಂತರಾಷ್ಟçದಿAದ ಕನ್ನಡ ಭಾಷೆ ಸೇರಿದಂತೆ ಹಲಾವರು ಭಾಷೆಗಳ ಚಲನಚಿತ್ರಗಳು, ಗೀತೆಗಳು, ಕಿರುಚಿತ್ರಗಳು, ಸಾಕ್ಷö್ಯಚಿತ್ರಗಳ ಸ್ಪರ್ದೆಯಲ್ಲಿ, ಸುಮಾರು 150ಕ್ಕೂ ಹೆಚ್ಚು ಚಿತ್ರಗಳು ಕರ್ನಾಟಕ ಅಂತರಾಷ್ಟಿçÃಯ ಚಲನಚಿತ್ರೋತ್ಸವದಲ್ಲಿ ಪೈಪೋಟಿಯಾಗಿದ್ದವು. ನಿದೇಶಕ ಎಂ.ಎ ಮುಮ್ಮಿಗಟ್ಟಿ, ಕನ್ನಡ ಚಲನಚಿತ್ರರಂಗದ ಹಿರಿಯ ಕಲಾವಿದ ಸುಂದರಜ್, ಆಂದ್ರಪ್ರದೇಶ ಫಿಲ್ಮ್ ಚೆಂಬರ್ ಅಧ್ಯಕ್ಷ ಅಂಬಾಟಿ ಮಧು, ಮೋಹನ ಕೃಷ್ಣ, ನಿರ್ಮಾಪಕ ಕಲ್ಮೇಶ ಹಾವೇರಿಪೇಟರವರು "ಸೈಕಲ್ ಸವಾರಿ" ಚಲನಚಿತ್ರದ ನಿರ್ದೇಶಕ ದೇವು.ಕೆ ಅಂಬಿಗ ಹಾಗೂ ತಂಡದಲ್ಲಿದ್ದ ಚಲನಚಿತ್ರ ನಾಯಕಿ ನಟಿ ದೀಕ್ಷಾ ಭೀಸೆ, ವಿನೋದ ರಾಠೋಡ, ಸಚೀನ್ ಹಿಟ್ನಳ್ಳಿ, ರಾಮಚಂದ್ರ ಕಾಂಬಳೆ, ವೆಂಕಟೇಶರವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರರಂಗದ ಹಲವಾರು ಹಿರಿಯ ಹಾಗೂ ಕಿರಿಯ ಕಲಾವಿದರು, ನಿರ್ದೇಶಕರು, ನಿರ್ಮಾಪಕರು, ಗೀತ ರಚನೆಕಾರರು, ಉದ್ದಿಮೆದಾರು ಪಾಲ್ಗೂಂಡಿದ್ದರು. ನಿರ್ದೇಶಕ ದೇವು.ಕೆ ಅಂಬಿಗರವರು ಬರುವ 2025 ಮಾರ್ಚ ತಿಂಗಳಲ್ಲಿ "ರಾಜರಾಧೆ" ಹಾಗೂ "ದ ಡೆಡ್ಲಿö ಕ್ಯಾನಿಬಲ್ಸ್ " ಎನ್ನುವ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಲಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು- ಗೊ.ರು.ಚನ್ನಬಸಪ್ಪ.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಭಾಷಣ ಮಾಡಿದ ಸಮ್ಮೇಳನಾಧ್ಯಕ್ಷರಾದ ಡಾ.ಗೊ.ರು.ಚನ್ನಬಸಪ್ಪ ಅವರು, ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನಾಗಲೀ ಕೂಡಲೇ ನಿಲ್ಲಿಸಬೇಕು. ತಂತ್ರಜ್ಞಾನದ ನೆರವು ಪಡೆದು ಕನ್ನಡವನ್ನು ಕಿರಿಯ ಪೀಳಿಗೆಯ ಎದೆಗೆ ಬೀಳುವ ಅಕ್ಷರವಾಗಿಸಬೇಕು ಎಂದು ಕರೆ ನೀಡಿದರು.
ಅಗತ್ಯವೆನಿಸಿರುವ ಇಂಗ್ಲೀಷ್ ಕಲಿಕೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿ, ಬೋಧನೆಗೆ ತರಬೇತಿ ಪಡೆದ ಶಿಕ್ಷಕರನ್ನು ನೇಮಿಸಬೇಕು ಮತ್ತು ಗ್ರಾಮೀಣ ಭಾಗದ ಕನ್ನಡ ಶಾಲೆಗಳನ್ನು, ಎಲ್ಲ ಸೌಲಭ್ಯಗಳಿಂದ ಪೂರ್ಣವಾಗಿ ಸಜ್ಜುಗೊಳಿಸಬೇಕು. ರಾಜ್ಯದ ಆಯವಯ್ಯದಲ್ಲಿ ಕನಿಷ್ಟ ಶೇ.15 ರಷ್ಟು ಅನುದಾನವನ್ನು ಶಿಕ್ಷಣಕ್ಕೆ ಮೀಸಲಿಡಬೇಕು ಎಂದು ಹೇಳಿದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರ ಭಾಷಣದ 21 ಪ್ರಮುಖ ಅಂಶಗಳು :
ಕನ್ನಡವು ಕಾವ್ಯ, ಕವನ, ನಾಟಕ, ಕಾದಂಬರಿ, ವ್ಯಾಕರಣ ಮುಂತಾದ ಪರಂಪರೆಯ ಸಾಹಿತ್ಯಕ್ಕೆ ಸೀಮಿತವಾಗಿ ಉಳಿದಿಲ್ಲ.
ವಿಜ್ಞಾನ, ತಂತ್ರಜ್ಞಾನ, ಕಾನೂನು, ವೈದ್ಯಕೀಯ ಮುಂತಾದ ಕ್ಷೇತ್ರದಲ್ಲಿ ಕನ್ನಡ ಬೆಳೆಯುತ್ತಿದೆ
ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೈಂಕರ್ಯದಲ್ಲಿ ಉದ್ಯಮಿಗಳು, ಸ್ವಯಂ ಸೇವಾ ಸಂಸ್ಥೆಗಳು, ವಿದೇಶಿ ಕನ್ನಡಿಗರು ಕೈಜೋಡಿಸಬೇಕು.
ಕನ್ನಡ ಭಾಷೆಯ ಬೆಳವಣಿಗೆಗೆ ತಂತ್ರಜ್ಞಾನದ ಪೋಷಣೆ ಅತ್ಯಗತ್ಯ. ಗೂಗಲ್, ಯಾಂತ್ರಿಕ ಬುದ್ಧಿಮತ್ತೆಗೂ ಬರಲಿ ಶುದ್ಧ ಕನ್ನಡ ಪ್ರೇಮ.
ಜ್ಞಾನ ಪಡೆಯುವ ತಂತ್ರಜ್ಞಾನಕ್ಕೆ ಕನ್ನಡವನ್ನು ಹೊಂದಿಸಿದರೆ ಕನ್ನಡ ಜ್ಞಾನದ ಭಾಷೆ ಆಗುತ್ತದೆ.
ಜನಪ್ರಧಿನಿಧಿಗಳಲ್ಲಿ, ಉನ್ನತ ಅಧಿಕಾರಿಗಳಲ್ಲಿ ಕನ್ನಡ ಭಾಷಾ ಪ್ರೇಮದ ಕೊರತೆ ಇರುವಂತೆ ಕಾಣುತ್ತದೆ.
ಕನ್ನಡ ಸಾಹಿತ್ಯ ಪರಿಷತ್ತು ಬೇರೆ ಬೇರೆ ಭಾಷೆಗಳ ಜೊತೆಯಲ್ಲಿ ವಿನಿಮಯ ಕಾರ್ಯಕ್ರಮಗಳನ್ನು ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳಬೇಕು.
ಕಲೆ, ನಾಟಕ, ಸಂಗೀತ, ಬಯಲಾಟ ಮುಂತಾದವುಗಳನ್ನು ಉತ್ತರ ಭಾರತದ ರಾಜ್ಯಗಳಿಗೆ ಪರಿಚಯಿಸಿಕೊಡುವ ಕೆಲಸ ಆದ್ಯತೆಯ ಮೇಲೆ ಮಾಡಬೇಕು
ಹಿಂದಿ ಭಾಷೆಯನ್ನು ರಾಷ್ಟ್ರ ಭಾಷೆ ಎಂಬುದನ್ನು ಪ್ರತ್ಯಕ್ಷ, ಪರೋಕ್ಷವಾಗಿ ಹೇರುವ ಹುನ್ನಾರವನ್ನು ಕೇಂದ್ರ ಸರ್ಕಾರಗಳು ಮಾಡುತ್ತಲೇ ಬಂದಿವೆ
ಕನ್ನಡ ವಿಶ್ವವಿದ್ಯಾನಿಲಯಕ್ಕೆ ವಿಶೇಷ ಗಮನ ಹರಿಸಬೇಕು
ಕೇಂದ್ರ ರಾಜ್ಯಗಳ ಹಣಕಾಸು ಸಂಬಂಧದ ಕುರಿತು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಬೇಕು. ಕೇಂದ್ರ ಸರ್ಕಾರ ಸಂವಿಧಾನ ಮತ್ತು ಹಣಕಾಸು ತಜ್ಞರ ಒಂದು ವಿಶೇಷ ಆಯೋಗ ರಚಿಸಬೇಕು.
ಹಬ್ಬ, ಹರಿದಿನಗಳು, ಉತ್ಸವ ಆರಾಧನೆಗಳು, ಧಾರ್ಮಿಕ ಮುಖಂಡರ ಜಯಂತಿಗಳು ಜನರನ್ನು ಒಟ್ಟಿಗೆ ತರುವ ಕೆಲಸಕ್ಕೆ ಬದಲಾಗಿ ಸಮಾಜವನ್ನು ಒಡೆಯುವ ಆಯುಧಗಳಾಗುತ್ತಿವೆ.
ಪರಿಸರ ಉಳಿದರೆ ಮಾನವ ಉಳಿಯುವುದು. ಭಾರತದ ಜೀವಜಲವಾಗಿರುವ ಪಶ್ಚಿಮ ಘಟ್ಟವು ಇಂದು ಅಪಾಯವನ್ನು ಎದುರಿಸುತ್ತಿದೆ. ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಯಬಾರದು. ಪಶ್ಚಿಮಘಟ್ಟ ಪ್ರದೇಶ ಅನೇಕ ಮುಖ್ಯ ನದಿಗಳ ಮೂಲವಾಗಿದ್ದು ಅದರ ರಕ್ಷಣೆಗೆ ಆದ್ಯತೆ ನೀಡಬೇಕು.
ಲಿಂಗ ಸಮಾನತೆಯ ಮೌಲ್ಯವನ್ನು ಇಂದಿನ ಜೀವನದಲ್ಲಿ ಅಳವಡಿಸಿಕೊಳಗಳುವ ಅಗತ್ಯವನ್ನು ನಾವು ಮನಗಾಣಬೇಕು.
ಕನ್ನಡಿಗರಿಗೆ ಉದ್ಯೋಗದ ಅವಕಾಶಗಳು ಹೆಚ್ಚು ದೊರೆಯುತ್ತಿಲ್ಲ. ನಿರುದ್ಯೋಗ ಯುವಜನತರಯ ಬದುಕನ್ನು ದುರ್ಭರಗೊಳಿಸುತ್ತಿದೆ.
ಸರೋಜಿನಿ ಮಹಿಷಿ ಸಮಿತಿ ವರದಿ ಇನ್ನೂ ಅನುಷ್ಠಾನಗೊಂಡಿಲ್ಲ. ಕೂಡಲೇ ಅನುಷ್ಠಾನಗೊಳಿಸಬೇಕು.
ಬ್ಯಾಂಕ್, ಅಂಚೆ ಕಚೇರಿಗಳಲ್ಲಿ ಹಿಂದಿ ಭಾಷಿಕರು ತುಂಬಿ ಹೋಗಿದ್ದಾರೆ. ಕೇಂದ್ರ ಸರ್ಕಾರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿಂದಿಗೆ ಪ್ರಾಶಸ್ತ್ಯ ನೀಡುತ್ತಾ ಕನ್ನಡವನ್ನು ನಿರ್ಲಕ್ಷ್ಯ ಮಾಡುತ್ತಿದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಿಡುವುದು ಸಂವಿಧಾನ ಅಥವಾ ಒಕ್ಕೂಟ ತತ್ವಕ್ಕೆ ವಿರೋಧಿ ಕ್ರಮವೇನಲ್ಲ.
ಗಡಿನಾಡು ಪ್ರದೇಶಗಳಲ್ಲಿರುವ ಕನ್ನಡಿಗರಲ್ಲಿ ಕನ್ನಡತನ, ಕನ್ನಡ ಪ್ರಜ್ಞೆಗಳನ್ನು ಮೂಡಿಸುವ ಬಗ್ಗೆ ತಾತ್ವಿಕ ನಿರ್ಧಾರ ಕೈಗೊಳ್ಳಬೇಕು.
ಗ್ರಾಮೀಣ ಪ್ರದೇಶದ ಗ್ರಂಥಾಲಯಗಳು ಕಟ್ಟಡದ ಕೊರತೆ, ವಾರ್ತಾ ಪತ್ರಿಕೆಗಳ ಮತ್ತು ವಾರ್ಷಿಕವಾಗಿ ಪುಸ್ತಕಗಳ ಸಂಗ್ರಹ ಸೇರಿದಂತೆ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದೆ. ಇದರ ಬಗ್ಗೆ ಸರ್ಕಾರ ಸೂಕ್ತ ಗಮನ ನೀಡಬೇಕು.
ಶಾಲಾ ಕಾಲೇಜು ಮಕ್ಕಳಿಗೆ ನಮ್ಮ ಇತಿಹಾಸ, ಪ್ರಕೃತಿ, ವನ್ಯಜೀವಿಧಾಮ ಮುಂತಾದವುಗಳ ಪರಿಚಯವಾಗುವಂತೆ ನಿಯತಕಾಲಿಕವಾಗಿ ಪ್ರವಾಸಗಳನ್ನು ಏರ್ಪಡಿಸುವಂತೆ ಒಂದು ಕ್ರಮಬದ್ಧ ಯೋಜನೆಯನ್ನು ರೂಪಿಸಬೇಕು.
ಕನ್ನಡ ಶಾಸ್ತ್ರೀಯ ಭಾಷಾ ಉನ್ನತ ಅಧ್ಯಯನ ಕೇಂದ್ರವನ್ನು ಬೆಳೆಸುವಲ್ಲಿ ಸರ್ಕಾರ ಮತ್ತು ಕನ್ನಡ ವಿದ್ವಾಂಸರು ಗಮನ ಕೊಡಬೇಕು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ನೋಡುಗರ ಕಣ್ಮನ ಸೆಳೆದ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ಮಂಡ್ಯ. ಡಿ : 20 ಮಂಡ್ಯದಲ್ಲಿ ಮೂರು ದಶಕಗಳ ನಂತರ ಸಕ್ಕರೆ ನಗರಿ ಮಂಡ್ಯದಲ್ಲಿ ಸಾಹಿತ್ಯ ಸಂಭ್ರಮ ಮನೆ ಮಾಡಿದ್ದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.
ಅಲಂಕೃತ ಕನ್ನಡ ರಥದಲ್ಲಿ ವಿರಾಜಮಾನರಾಗಿ ಆಸೀನರಾಗಿದ್ದ ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು ಚನ್ನಬಸಪ್ಪ ನುಡಿ ಜಾತ್ರೆಯ ಹಬ್ಬದಲ್ಲಿ ಭಾಗವಹಿಸಿ ಕನ್ನಡಿಗರ ಉತ್ಸಾಹದ ಮೆರುಗು ಕಣ್ತುಂಬಿ ಕೊಂಡರು.
ಸಾಹಿತ್ಯದ ಸೊಗಡು, ಕನ್ನಡದ ವೈಭವ, ಜಾನಪದ ಕಲಾತಂಡಗಳ ಮೆರಗು, ಕವಿ ಸಾಹಿತಿಗಳ ಅಲಂಕೃತ ಭಾವಚಿತ್ರ,ಕನ್ನಡ ಕಲರವ, ವಿದ್ಯಾರ್ಥಿಗಳ ಕನ್ನಡ ಪ್ರೇಮ, ಪೊಲೀಸ್ ಬ್ಯಾಂಡ್, ಅಲಂಕೃತ ಎತ್ತಿನಗಾಡಿಗಳ ಸೊಗಸು, ಅಧಿಕಾರಿಗಳ ಮಂದಹಾಸ, ಕನ್ನಡಪರ ಸಂಘಟನೆ ಮತ್ತು ಸಾಹಿತ್ಯಾಸಕ್ತರ ಸಂಭ್ರಮ ಮೆರವಣಿಗೆಗೆ ವಿಶೇಷ ಮೆರಗು ನೀಡಿತು.
ನಗರದ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿ ಸಮ್ಮೇಳನ ಅಧ್ಯಕ್ಷರ ಜೊತೆ ನಗಾರಿ ಬಾರಿಸಿ ಹಲ್ಮಿಡಿ ಶಾಸನಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಗೆ ಚಾಲನೆ ದೊರೆಯಿತು.ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ,ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ, ಜಿಲ್ಲೆಯ ಶಾಸಕರು ಹಾಜರಿದ್ದು ಶುಭ ಹಾರೈಸಿದರು.
ಸಮ್ಮೇಳನಾಧ್ಯಕ್ಷ ಗೊ ರು ಚನ್ನಬಸಪ್ಪರನ್ನು ಅಲಂಕೃತ ಕನ್ನಡ ರಥದಲ್ಲಿ ಕೂರಿಸಿ ಮೈಸೂರು ಪೇಟ ತೊಡಿಸಿ ಶಾಲು ಓದಿಸಿ, ಮಾಲಾರ್ಪಣೆ ಮಾಡುವ ಮೂಲಕ ಗೌರವಿಸಿದರು, ಸಾಹಿತ್ಯದ ತೇರಿನಲ್ಲಿ ಸಮ್ಮೇಳನಾಧ್ಯಕ್ಷರು ವಿರಾಜಮಾನರಾಜ ರಾಗುತ್ತಿದ್ದಂತೆ ಪೊಲೀಸ್ ಬ್ಯಾಂಡ್ ನುಡಿಸಲಾಯಿತು, ಕನ್ನಡಾಂಬೆ, ಜೈ ಭುವನೇಶ್ವರಿ ಮಾತೆಗೆ ಜಯ ಘೋಷ ಮೊಳಗಿಸಿ ಜಾನಪದ ಕಲಾ ತಂಡಗಳ ಸದ್ದಿನೊಂದಿಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಆಕರ್ಷಕ ಮೆರವಣಿಗೆ ಸಾಗಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಕವಿ ಮತ್ತು ಸಾಹಿತಿಗಳ ಅಲಂಕೃತ ಭಾವಚಿತ್ರ ಹೊತ್ತ ಆಟೋಗಳು ಮಹನೀಯರ ವೇಷದಾರಿಗಳು ಸಾಹಿತ್ಯ ಪ್ರೇಮಕ್ಕೆ ಸಾಕ್ಷಿಯಾದವು, ವಿದ್ಯಾರ್ಥಿಗಳು ಸಮ್ಮೇಳನಾಧ್ಯಕ್ಷರಿಗೆ ಪುಷ್ಪಾರ್ಚನೆ ಮಾಡಿ ವಂದಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಕನ್ನಡ ಪ್ರೇಮ ಮೆರೆದರೆ ಜಾನಪದ ತಂಡಗಳು ಕಲೆ ಪ್ರದರ್ಶಿಸಿ ಮೆರಗು ನೀಡಿದವು.
ಸಾಹಿತ್ಯಾಸಕ್ತರು, ಕನ್ನಡ ಪ್ರೇಮಿಗಳು, ಕನ್ನಡದ ಕಟ್ಟಾಳುಗಳು ಕನ್ನಡ ಬಾವುಟ ಹಿಡಿದು ಹಾಗೂ ಶಾಲು ಹೊದ್ದು ಭಾಷಾ ಪ್ರೇಮ ಬಿಂಬಿಸಿದರೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಕನ್ನಡದ ಕಲರವ ಅನಾವರಣಗೊಂಡಿತು.
ಮೂರು ತಾಸು ಸುಮಾರು ಐದು ಕಿಲೋಮೀಟರ್ ಸಾಗಿದ ಮೆರವಣಿಗೆ ವರ್ಣಮಯವಾಗಿತ್ತು,
ಮೆರವಣಿಗೆಯಲ್ಲಿ ಜಾನಪದ ತಂಡಗಳಾದ ನಂದಿಧ್ವಜ, ಚಕ್ಕಡಿಗಾಡಿ, ಕೊಂಬುಕಹಳೆ, ನಾದಸ್ವರ, ಸ್ತಬ್ಧಚಿತ್ರ, ವೀರಗಾಸೆ, ತಮಟೆ, ಕಂಸಾಳೆ, ಮಹಿಳಾ ವೀರಗಾಸೆ, ಕೀಲುಕುದುರೆ, ಜಗ್ಗಲಿಗೆ ಮೇಳ, ಪೂರ್ಣಕುಂಭ, ನಗಾರಿ, ಛತ್ರಿಚಾಮರ, ಲಿಡಕರ್ ಸ್ತಬ್ಧಚಿತ್ರ, ಖಾಸಬೇಡರಪಡೆ, ಭಾಗವಂತಿಕೆ, ಹಗಲು ವೇಷ, ಅರೆವಾದ್ಯ, ಪೆಟ್ಟಿಗೆ ಮಾರಮ್ಮ, ಕೋಲಾಟ, ಗಾರುಡಿಗೊಂಬೆ, ಕರಗ, ಚಿಲಿಪಿಲಿ ಗೊಂಬೆ, ದಾಸಪ್ಪ ಜೋಗಪ್ಪ, ಬೆಂಕಿಭರಾಟೆ, ದೊಣ್ಣೆ ವರಸೆ, ಚಿಟ್ಟಲಗಿ ಮೇಳ, ಷಹನಾಯವಾದನ, ಗಾರುಡಿ ಗೊಂಬೆ, ಯಕ್ಷಗಾನ ಗೊಂಬೆ, ವಾನರಸೇನೆ, ಕರಡಿ ಮಜಲು, ದೇವಿ ವೇಷಧಾರಿ, ಕೀಲು ಕುದುರೆ, ನೃತ್ಯ, ಮರಗಾಲು, ಮುಳ್ಳು ಕುಣಿತ, ಡೊಳ್ಳು ಕುಣಿತ, ಪೂಜಾಕುಣಿತ, ಡೊಳ್ಳು ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಪಟಕುಣಿತ, ರಂಗದಕುಣಿತ, ಮಹಿಳಾ ಡೊಳ್ಳು ಕುಣಿತ, ಸೋಮನ ಕುಣಿತ, ಗೊರವರ ಕುಣಿತ, ಲಂಬಾಣಿ ನೃತ್ಯ, ಕೋಳಿ ನೃತ್ಯ, ಕೊಡವ ನೃತ್ಯ, ಜೋಗತಿ ನೃತ್ಯ, ವೀರಮಕ್ಕಳ ಕುಣಿತ, ಸತ್ತಿಗೆ ಕುಣಿತ, ದಟ್ಟಿ ಕುಣಿತ, ಹಲಗು ಕುಣಿತ, ಪಟಕುಣಿತ ಮೂಲಕನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ, ವಿಶ್ವೇಶ್ವರಯ್ಯ ವೇಷಧಾರಿ, ಅಶ್ವಾರೋಹಿ ದಳ, ಟಾಂಗಾ ಗಾಡಿ, ಎತ್ತಿನ ಗಾಡಿ, ಸಮ್ಮೇಳನಾಧ್ಯಕ್ಷರ ಭಾವಚಿತ್ರ ಒಳಗೊಂಡ 87 ಆಟೋ ರಿಕ್ಷಾಗಳು, ಸ್ಕೌಟ್ಸ್ ಮತ್ತು ಗೈಟ್ಸ್, ಎನ್ ಸಿಸಿ, ಭಾರತ್ ಸೇವಾದಳ ಸಾಗುವ ಮೂಲಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಗೆ ವಿಶೇಷ ಆಕರ್ಷಣೆ ನೀಡಿದವು.
ತಮಿಳುನಾಡಿನ ಕರಗಂ, ಒಡಿಶಾದ ಸಂಬಲ್ಪುರಿ ಮತ್ತು ಧಾಪ್ ಬುಡಕಟ್ಟು ನೃತ್ಯ, ಮಧ್ಯಪ್ರದೇಶದ ಬಧಾಯಿ ಮತ್ತು ನೋರಾ ಕಲಾತಂಡಗಳು ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಜನಾಕರ್ಷಿಸಿದವು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ಮಂಡ್ಯ ಡಿ.20 (ಕರ್ನಾಟಕ ವಾರ್ತೆ) 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ
ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು.
ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.
ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು.
*ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ*
ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.
ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದರು.
ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.
ಮೆರವಣಿಗೆಯಲ್ಲಿ ಹಾಗೂ ಮುಖ್ಯವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ.
ಮಂಡ್ಯ ನಗರದಲ್ಲಿ ನಗರ ಸಾರಿಗೆ ಬಸ್ ಉಚಿತವಾಗಿ ಬಿಟ್ಟಿರುವುದರಿಂದ ನಗರದ ಜನತೆಯೂ ಸಹಸ್ರಾರು ಸಂಖ್ಯೆಯಲ್ಲಿ ಭಾಗವ ಹಿಸಿದರು.
ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರು ವೇದಿಕೆಗೆ ಆಗಮಿಸುತ್ತಿದ್ದಂತೆ ಅಭೂತಪೂರ್ವ ಸ್ವಾಗತ ಕೋರಲಾಯಿತು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Thursday, December 19, 2024
ಮಂಡ್ಯದಲ್ಲಿ 87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಚಟುವಟಿಕೆಗಳಿಗೆ ಅಧಿಕೃತ ಚಾಲನೆ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ಸಮ್ಮೇಳನದ ವೇದಿಕೆ ಆವರಣದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್ ಚಲುವರಾಯಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರೆ,
ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಡಾ ಮಹೇಶ್ ಜೋಶಿ ಪರಿಷತ್ತಿನ ಧ್ವಜ ಹಾಗೂ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾದ ಮೀರಾ ಶಿವಲಿಂಗಯ್ಯನಾಡ ಧ್ವಜಾರೋಹಣ ಮಾಡಿದರು.
ಸಮ್ಮೇಳನದ ಸೃವಾಧ್ಯಕ್ಷರಾದ ಗೊ.ರು. ಚನ್ನಬಸಪ್ಪ ,ಚೆಸ್ಕಾಂ ಅಧ್ಯಕ್ಷರಾದ ರಮೇಶ್ ಬಂಡಿ ಸಿದ್ದೇಗೌಡ , ಶಾಕರಾದ ದಿನೇಶ್ ಗೂಳಿಗೌಡ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
ಈ ದಿವಸ ಕನ್ನಡ ದಿನ ಪತ್ರಿಕ ವಾರ್ತೆ
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ನಗರದ ಸಂಜಯ ವೃತ್ತದಲ್ಲಿ ಚಾಲನೆ ನೀಡಿದರು.
ಶಾಸಕರುಗಳಾದ ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಮೂಢಾ ಅಧ್ಯಕ್ಷ ನಹೀಮ್, ಜಿಲ್ಲಾಧ್ಯಕ್ಷ ಚಿದಂಬರಂ, ಮೈಶುಗರ್ ಕಂಪನಿ ಅಧ್ಯಕ್ಷ ಸಿ.ಡಿ.ಗಂಗಾಧರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ದಸರಾದ ವಿಶೇಷ ದೀಪಾಲಂಕಾರದ ಮಾದರಿಯಲ್ಲಿ ಚೆಸ್ಕಾಂ ವತಿಯಿಂದ ನಗರದ ರಸ್ತೆಗಳಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು ಸಮ್ಮೇಳನ ನಡೆಯುವ ಮೂರು ದಿನವೂ ದೀಪಾಲಂಕಾರ ಇರಲಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಕಲಾಕೃತಿ, ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳು ದೀಪಾಲಂಕಾರದ ಪ್ರಮುಖ ಆಕರ್ಷಣೆಯಾಗಿವೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಡಿಸಿಗೆ ಮನವಿ
ವಿಜಯಪುರ : ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವಿಜಯಪುರ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾಧ್ಯಕ್ಷರಾದ ಕಾಳಮ್ಮ ಬಡಿಗೇರ ಮಾತನಾಡಿ, ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ. ಕೈತೋಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆAದು ನೇಮಿಸಿ ನೇಮಕಾತಿ ಆದೇಶ ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು. ಶಾಲಾ ಅವಧಿಯ ನಂತರ ನರೆಗಾ ಯೋಜನೆ ಅಡಿ ಶಾಲಾ ಕೈತೊಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಎರಡು ಜನ ಆಡುಗೆಯವರು ಇರಲೇಬೇಕು. ಬಿಸಿಯೂಟ ಯೋಜನೆಯನ್ನು ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು.
2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ 6000 ರೂ ಗಳ ಗೌರವಧನ ಹೆಚ್ಚಿಸಬೇಕು. ಈಗಾಗಲೇ ಹಣಕಾಸು ಇಲಾಖೆ ಒಪ್ಪಿಕೊಂಡಿರುವ ನಿವೃತ್ತಿಯಾದವರಿಗೆ ಇಡಿಗಂಟು ಕೂಡಲೇ ಜಾರಿ ಆಗಬೇಕು. ಸಾದಿಲ್ವಾರು ಜಂಟಿಖಾತೆ ಜವಾಬ್ದಾರಿಯನ್ನು ಮುಖ್ಯ ಅಡುಗೆ ನೌಕರರಿಂದ Sಆಒಅ ಗೆ ವರ್ಗಾವಣೆ ಮಾಡಿರುವ ಕ್ರಮ ವಾಪಾಸ್ಸಾಗಬೇಕು ಸಾದಿಲ್ವಾರು ಖಾತೆ ಮೊದಲಿನಂತೆಯೇ ಬದಲಾಯಿಸಬೇಕು. ಆಡುಗೆ ಕೇಂದ್ರಗಳು ಸುಸಜ್ಜಿತವಾಗಿ ಇಲ್ಲದ ಕಡೆ ಉತ್ತಮ ಅಡುಗೆ ಕೇಂದ್ರಗಳನ್ನು ನಿರ್ಮಿಸಬೇಕು. ಹಾಗೂ ಕ್ರಿಮಿ ಕೀಟಗಳು ಬರದ ರೀತಿಯಲ್ಲಿ ಅಡುಗೆ ಕೇಂದ್ರಗಳ ಸುತ್ತ ಮುತ್ತ ಸೂಕ್ತ ವಾತಾವರಣ ಸೃಷ್ಟಿಸಬೇಕು. ಉತ್ತರಪ್ರದೇಶ ಮತ್ತು ಪಂಜಾಬ ರಾಜ್ಯದ ಮಾನ್ಯ ಹೈಕೊರ್ಟ ತೀರ್ಮಾನಿಸಿದಂತೆ ವರ್ಷದ 12 ತಿಂಗಳು ಕೆಲಸ ಮತ್ತು ಕನಿಷ್ಠ ಕೂಲಿ ಜಾರಿ ಆಗಬೇಕು ಎಂದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷರಾದ ಅಣ್ಣಾರಾಯ ಈಳಗೇರ ಮಾತನಾಡಿ, 2014 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರಸರ್ಕಾರವು 26,000 ರೂ ಗಳಿಗೆ ಗೌರವಧನ ಹೆಚ್ಚಿಸಬೇಕು. ಒಆಒ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು. ಕ್ಲಸ್ಟರ್ ಸಭೆಗಳನ್ನು ಕಡ್ಡಾಯವಾಗಿ ಪ್ರತಿ ಜಿಲ್ಲೆಯಲ್ಲಿ ಮಾಡಬೇಕು. ಕೆಲಸದ ಅವಧಿಯನ್ನು 4 ಗಂಟೆಯಿAದ 6 ಗಂಟೆಗೆ ಅಕ್ಷರ ದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು. ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ನಡೆಯಬೇಕು. ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ 25 ಲಕ್ಷ ರೂಗಳ ಪರಿಹಾರ ಕೊಡಬೇಕು. ಮಾರ್ಚ್ 31. 2024 ಕೈ ಬಿಸಿಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆಯನ್ನು ಬದಲಾಯಿಸಿ ಎಪ್ರೀಲ್ 10, 2024ಕ್ಕೆ ಮರು ಆದೇಶ ನೀಡಬೇಕು. ಬಜೆಟ್ ನಲ್ಲಿ ಈ ನೌಕರರಿಗೆ ಹೆಚ್ಚಳ ಮಾಡಿದ ರೂ 1000/- ವೇತನವನ್ನು ಜನವರಿ 2023 ರಿಂದ ಅನ್ವಯಿಸಿ ಜಾರಿಮಾಡಬೇಕು. ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವ ಕ್ರಮ ನಿಲ್ಲಬೇಕು. ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು ಖಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು. ಎಂದರು.
ಜನಪರವಾಗಿ ಈ ರಾಜ್ಯದ ಅಭಿವೃದ್ದಿಗಾಗಿ ಎಲ್ಲಾ ವರ್ಗದ ಜನರಿಗೆ ನ್ಯಾಯ ನೀಡುವ ಹೊಸ ಭರವಸೆ ನೀಡಲು ಬಂದಿರುವ ಮಾನ್ಯ ಸಿದ್ದರಾಮಯ್ಯನವರ ಸರ್ಕಾರವು ರಾಜ್ಯದಲ್ಲಿ ಈ ಯೋಜನೆಯ ಅಭಿವೃದ್ಧಿಗೆ ದುಡಿಯುತ್ತಿರುವ 1 ಲಕ್ಷ 18 ಸಾವಿರ ಬಡಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಕೂಡಲೇ ವೇತನ ಹೆಚ್ಚಳ ಮಾಡಲು ಮುಂದಾಗಬೇಕೆAದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಆನಂದಶೆಟ್ಟಿ, ಖಜಾಚಿ ಸುವರ್ಣಾ ರಾಠೋಡ, ಉಪಾಧ್ಯಕ್ಷರಾದ ಬಿಸ್ಮಿಲ್ಲಾ ಇನಾಮದಾರ, ಉಪಾಧ್ಯಕ್ಷರಾದ ಸುರೇಖಾ ವಾಘಮೋಡೆ, ಜಯಶ್ರೀ ಪಾರ್ಥಗೋಳ, ಸುಜಾತಾ ಚಿಂಚೋಳಿ, ಶೈಲಾ ಮಾಳಗೆ, ಸುಮಿತ್ರಾ, ರಾಜಶ್ರೀ ಹತ್ತಿ, ಭಾರತಿ ಮಧಭಾವಿ, ಸುಭದ್ರಾ ತಿಳಗೂಳ, ರೇಣುಕಾ ಸುಣಗಾರ, ಮೀನಾಕ್ಷಿ ಶಿಂಧೆ, ರೇಣುಕಾ ಮುತ್ತಗಿ, ವಿಜಯಾ ಬಾಬರ, ದೇವುಬಾಯಿ ನಾಯಕ, ಅನ್ನಪೂರ್ಣಾ ಲೋಗಾಂವಿ, ಶಾಂತಾ ಹಿರೇಮಠ,ಸೈನಾಜ ಸೌಧಾಗರ, ದಾನಮ್ಮ ಹೊನ್ನುಟಗಿ, ನೂರಜಾನ ಕೆಂಭಾವಿ, ಅಂಬಕ್ಕ ಜಾಧವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Wednesday, December 18, 2024
Tuesday, December 17, 2024
ವಿಜಯಪುರ RED ಅಲರ್ಟ್
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ 8.5 ಡಿಗ್ರಿ ಸೆಲ್ಸಿಯಸ್ ಇದ್ದ ಉಷ್ಣಾಂಶ, ಮಂಗಳವಾರ 8 ಡಿಗ್ರಿಗೆ ಕುಸಿಯುವ ಮೂಲಕ, ಜಿಲ್ಲೆಯನ್ನು ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಧ್ರುವದಿಂದ ಶೀತ ಗಾಳಿ ಬೀಸುತ್ತಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಚಳಿ ಹೆಚ್ಚಾಗುತ್ತಿದ್ದು, ಕಳೆದ ಎರಡು ದಿನದಿಂದ ಉಷ್ಣಾಂಶದಲ್ಲಿ ಭಾರಿ ಇಳಿತ ಕಂಡಿದೆ.
ಮೈಕೊರೆಯುವ ಚಳಿಗೆ ಜಿಲ್ಲೆಯ ಜನರು ನಲಗುವಂತಾಗಿದೆ.
ಅಲ್ಲದೆ ಡಿ. 18 ರಂದು ಕನಿಷ್ಠ ತಾಪಮಾನ 6 ರಿಂದ 7 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಹವಾಮಾನ ವಿಜ್ಞಾನಿ ತಿಳಿಸಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳ ಆಗ್ರಹಿಸಿ ಅಹೋರಾತ್ರಿ ಧರಣಿ ಮುಷ್ಕರ
ವಿಜಯಪುರ : ಕರ್ನಾಟಕ ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಸಂಯೋಜಿತ ಜಿಲ್ಲಾ ಸಮಿತಿ ವಿಜಯಪುರ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಮುಂಭಾಗ ಮಂಗಳವಾರ ಅಹೋರಾತ್ರಿ ಧರಣಿ ಮುಷ್ಕರ ಹಮ್ಮಿಕೊಂಡಿದ್ದರು.
ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಬರೆದ ಪತ್ರವನ್ನು ಮುಷ್ಕರ ನಿರತ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಆಗಮಿಸಿ ಮನವಿ ಪತ್ರ ಸ್ವೀಕರಿಸಿದರು.
ಮುಷ್ಕರ ಬೆಂಬಲಿಸಿ ಸಿಐಟಿಯು ಅಧ್ಯಕ್ಷ ಅಣ್ಣಾರಾಯ ಈಳಗೇರ ಮಾತನಾಡಿ, ಈ ಸಂದರ್ಭದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತಿದೆ. ಪಾಲನೆ, ಪೋಷಣೆ, ಶಿಕ್ಷಣ ಸಂವಿಧಾನ ಬದ್ಧ ಕರ್ತವ್ಯಗಳಿವೆ. ಮತ್ತು 2013ರ ಆಹಾರ ಭದ್ರತಾ ಕಾಯ್ದೆ, 2009ರ ಕಡ್ಡಾಯ ಶಿಕ್ಷಣ ಕಾಯ್ದೆಯ ಕರ್ತವ್ಯಗಳನ್ನು ಶಾಸನಬದ್ಧವಾಗಿ ಸ್ಥಾಪಿಸಲ್ಪಟ್ಟ ಅಂಗನವಾಡಿ ಕೇಂದ್ರಗಳ ಮುಖಾಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜಾರಿ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಮತ್ತು ಗುಜರಾತ್ ಹೈಕೋರ್ಟ್ಗಳು ಇವರನ್ನು 3 ಮತ್ತು 4 ಗ್ರೇಡ್ನ ನೌಕರರನ್ನಾಗಿ ಪರಿಗಣಿಸಲು ಜಂಟೀ ನಿಯಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಬೇಕೆಂದೂ ತೀರ್ಪು ನೀಡಿದೆ ಮತ್ತು ಸುಪ್ರೀಂ ಕೋರ್ಟ್ 1972 ಗ್ರಾಜ್ಯುಟಿ ಪಾವತಿ ಕಾಯ್ದೆಯಡಿ ಅರ್ಹರೆಂದೂ ತೀರ್ಪು ನೀಡಿದೆ. ದೇಶದ ಅಭಿವೃದ್ಧಿಗೆ ಪೂರಕವಾದ ಮಾನವ ಸಂಪನ್ಮೂಲಗಳನ್ನು ಅಪೌಷ್ಠಿಕತೆ, ಅಂಗವೈಕಲ್ಯತೆಗಳಿAದ ಕಾಪಾಡಿ ಮಾನಸಿಕ ಮತ್ತು ದೈಹಿಕವಾಗಿ ಬೆಳಿಸಿ ಮಾನವ ಸಮಾಜದ ಪುನರುತ್ಪಾದನೆಗೆ ಕೊಡುಗೆ ಕೊಡುತ್ತಿರುವ IಅಆSನ್ನು ಯೋಜನೆಯನ್ನಾಗಿಯೇ 49 ವರ್ಷಗಳ ನಂತರವೂ ಉಳಿಸಿಕೊಳ್ಳಲಾಗಿದೆ. ಮಾತ್ರವಲ್ಲದೇ 2014ರ ನಂತರ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಪರಿಕಲ್ಪನೆ ಬದಲಾಗಿ ನೀತಿ ಆಯೋಗದ ಶಿಫಾರಸ್ಸುಗಳಂತೆ 60:40ರ ಅನುಪಾತದ ಆಧಾರದಲ್ಲಿ ಕೇಂದ್ರ ಸರ್ಕಾರ ತನ್ನ ಮೂಲ ಜವಾಬ್ದಾರಿಯಿಂದ ನುಣಿಚಿಕೊಂಡು ಬಜೆಟ್ ಅನುದಾನಗಳನ್ನು ನಿರಂತರವಾಗಿ ಕಡಿಮೆ ಮಾಡುತ್ತಿದೆ. ಅಂಗನವಾಡಿ ಮಕ್ಕಳಿಗೆ ಕೊಡುವ ಪೌಷ್ಠಿಕ ಆಹಾರದ ಘಟಕವೆಚ್ಚ 2018ರಿಂದ ಹೆಚ್ಚಳ ಮಾಡದೇ ಉSಖಿಯನ್ನು ಹಾಕಿದ್ದರಿಂದ ಗುಣಮಟ್ಟದ ಆಹಾರ ಪದಾರ್ಥಗಳನ್ನು ಕೊಡುವುದರಲ್ಲಿ ವೈಫಲ್ಯತೆ ಎದ್ದು ಕಾಣುತ್ತಿದೆ. ಮತ್ತು ಅಂಗನವಾಡಿ ನೌಕರರ ವೇತನವನ್ನು ಕೂಡಾ ಹೆಚ್ಚಳ ಮಾಡದೇ ಹೊಸ ಆಕರ್ಷಕ ಘೋಷಣೆಗಳಿಗೆ ಮಾತ್ರವೇ ಸೀಮಿತವಾಗುತ್ತಿದೆ ಎಂದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷö್ಮಣ ಹಂದ್ರಾಳ, ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಬಲಹೀನಗೊಳಿಸಲು ಶಿಕ್ಷಣ ಇಲಾಖೆ 4 ವರ್ಷದ ಮೇಲ್ಪಟ್ಟ ಮಕ್ಕಳನ್ನು ಸ್ಥಳಾಂತರಿಸಲು ಬೇರೆ ಬೇರೆ ಸ್ವರೂಪಗಳಲ್ಲಿ ಪ್ರಯತ್ನಿಸುತ್ತಿದೆ. ಇದಕ್ಕೆ ಮ.ಮ.ಅ. ಇಲಾಖೆ ತಡೆಹಾಕಿ ಅಂಗನವಾಡಿ ಕೇಂದ್ರಗಳನ್ನು ಪೂರ್ವಪ್ರಾರ್ಥಮಿಕ ಶಿಕ್ಷಣ ಕೇಂದ್ರಗಳಾಗಿ ಪರಿವರ್ತಿಸಲು ತೀರ್ಮಾನಿಸಿದೆ. ಇದೊಂದು ಐತಿಹಾಸಿಕ ತೀರ್ಮಾನವಾಗಿದೆ. ಆದರೆ ಇದಕ್ಕೆ ಬೇಕಾದಂತಹ ಹಣಕಾಸನ್ನು ಬಿಡುಗಡೆಗೊಳಿಸಿ, ಇದರ ಮೇಲ್ವಿಚಾರಣೆಗೆ IಅಆS ಪ್ರತ್ಯೇಕ ನಿರ್ದೆಶನಾಲಯ ಮಾಡಿದರೆ ಮಾತ್ರವೇ ಈ ತೀರ್ಮಾನಗಳನ್ನು ಪುಷ್ಟೀಕರಿಸಿದಂತಾಗುತ್ತದೆ ಎಂದರು.
ಅAಗನವಾಡಿ ನೌಕರರೆ ಸಂಘದ ಜಿಲ್ಲಾ ಅಧ್ಯಕ್ಷರಾದ ಸುನಂದಾ ನಾಯಕ, 1948 ರ ಕನಿಷ್ಟ ವೇತನ ಕಾಯ್ದೆಯಡಿಯಲ್ಲಿ ತಿಳಿಸಿದಂತೆ 4 ಗಂಟೆಗಿAತ ಹೆಚ್ಚು ಕೆಲಸ ಮಾಡುವವರಿಗೆ ಕನಿಷ್ಠ ವೇತನ ನೀಡಬೇಕು ಎಂದೂ ತಿಳಿಸಿದೆ. ಆದರೆ ಯಾವುದೇ ಸರ್ಕಾರಗಳು ಇದನ್ನು ಜಾರಿ ಮಾಡಲು ಮುಂದಾಗಲಿಲ್ಲ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಾಗ ತನ್ನ ಪ್ರಚಾರದಲ್ಲಿ ಹೇಳಿದಂತೆ 3500 ರೂ ಮತ್ತು 1750 ರೂ. ವೇತನ ಹೆಚ್ಚಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದರು.
ಜಿಲ್ಲಾ ಗೌರವಾಧ್ಯಕ್ಷರು ಭಾರತಿ ವಾಲಿ ಮಾತನಾಡಿ, ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಕೇಂದ್ರಗಳ ಬಾಡಿಗೆ ಹಣ ಪ್ರತಿ ತಿಂಗಳ ತೆಗೆಯಬೇಕು. ಗ್ಯಾಸ್ ಸಿಲಿಂಡರ್ ಹಣ ಖಾತೆಗೆ ಹಾಕುವ ಬದಲು ನೇರವಾಗಿ ಸಿಲಿಂಡರ್ ಗಳು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಬೇಕು. ಮೊಟ್ಟೆ ಹಣ ಬೆಲೆ ಏರಿಕೆ ಅನುಸಾರವಾಗಿ ಬಿಲ್ ಜಮಾ ಮಾಡಬೇಕು. ಅಂಗನವಾಡಿ ಕೇಂದ್ರಗಳಿಗೆ ಪ್ರತಿ ತಿಂಗಳ ಸರಿಯಾಗಿ ಹಾಲಿನ ಪೌಡರ್ ಬರುವಂತೆ ಮಾಡಬೇಕು. ಅಂಗನವಾಡಿ ಕಾರ್ಯಕರ್ತರಿಗೆ ಬಿ ಎಲ್ ಓ ಕೆಲಸದಿಂದ ಕೈಬಿಡಬೇಕು ಶಾಲಾ ಪೂರ್ವ ಶಿಕ್ಷಣ ನೆಡೆಸಲು ತೊಂದರೆ ಆಗುತ್ತದೆ. ಮಿನಿ ಅಂಗನವಾಡಿ ಕಾರ್ಯಕರ್ತರಿಗೆ ಅಪ್ಗ್ರೇಡೆಶನ್ ಆದೇಶ ಕೊಡಬೇಕು. ಅಂಗನವಾಡಿ ನೌಕರ ಗೌರವಧನ ಪ್ರತಿ ತಿಂಗಳಾಗಬೇಕು ಹಾಗೂ ಗೌರವಧನ ಪಡೆಯುವ ಬ್ಯಾಂಕುಗಳಲ್ಲಿ ಸಾಲ ಪಡೆಯುವ ಅನುವು ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರ ಟಿಎ ಮತ್ತು ಡಿಎ ಬೆಲೆ ಏರಿಕೆ ಅನುಸಾರವಾಗಿ ಹೆಚ್ಚಳ ಮಾಡಬೇಕು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ವಿನಿ ತಳವಾರ ಮಾತನಾಡಿದರು. ಈ ಸಂದರ್ಭದಲ್ಲಿ ಸುರೇಶ ಜೀಬಿ, ರೈತ ಮುಖಂಡರಾದ ಭೀಮರಾಯ ಪೂಜಾರಿ, ಜಿಲ್ಲಾ ಖಜಾಂಚಿ ಪ್ರತಿಭಾ ಕುರಡೆ, ಸಿಂದಗಿ ತಾಲೂಕಾಧ್ಯಕ್ಷರಾದ ಸರಸ್ವತಿ ಮಠ, ವಿಜಯಪು ತಾಲೂಕಾ ಕಾರ್ಯದರ್ಶಿ ಸುವರ್ಣಾ ಹಲಗಲಿ, ಇಂಡಿ ತಾಲೂಕಾ ಕಾರ್ಯದರ್ಶಿ ಗಿರೀಜಾ ಸಕ್ರಿ, ಚಡಚಣ ತಾಲೂಕಾ ಕಾರ್ಯದರ್ಶಿ ಶೋಭಾ ಕಬಾಡೆ, ಬ.ಬಾಗೇವಾಡಿ ತಾಲೂಕಾ ಅಧ್ಯಕ್ಷರಾದ ವಿಜಯಲಕ್ಷಿö್ಮÃ ಹಿಪ್ಪರಗಿ, ಬ.ಬಾಗೇವಾಡಿ ಕಾರ್ಯದರ್ಶಿ ಚೌಡಮ್ಮ ಕಡಕೋಳಕರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Monday, December 16, 2024
Sunday, December 15, 2024
ಜಿಲ್ಲಾಧ್ಯಕ್ಷರಾಗಿ ಡಾ.ಎಂ. ಡಿ. ಮೇತ್ರಿ ನೇಮಕ
ವಿಜಯಪುರ : ಡಾ.ಎಂ.ಡಿ.ಮೇತ್ರಿ ಅವರನ್ನು ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆಯ ವಿಜಯಪುರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ಡಾ. ರಾಘವೇಂದ್ರ ಎಸ್.ಆರ್ ಅವರು ಆದೇಶ ಹೊರಡಿಸಿದ್ದಾರೆ.
ಡಾ.ಎಂ.ಡಿ.ಮೇತ್ರಿ ಅವರು ಕೂಡ ಈ ಜವಾಬ್ದಾರಿಯನ್ನು ನಿರ್ವಹಿಸುತ್ತಾ ರಾಜ್ಯ ಮತ್ತು ಎಲ್ಲಾ ಜಿಲ್ಲಾ ಸಮಿತಿಯ ಮಾರ್ಗದರ್ಶನದ ಜೊತೆಗೆ, ಸಹಕಾರದೊಂದಿಗೆ ತಮಗೆ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ಕಾನೂನಿನ ಚೌಕಟ್ಟಿನಲ್ಲಿ ನೊಂದವರ ಧ್ವನಿಯಾಗುವಂತೆ ತಿಳಿಸುತ್ತಾ ಭ್ರಷ್ಟಾಚಾರ ನಿರ್ಮೂಲನೆಯತ್ತ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಗೌರವಾಧ್ಯಕ್ಷರಾಗಿ ರಾಜೇಂದ್ರ ಪಾಟೀಲ ನೇಮಕ
ವಿಜಯಪುರ : ರಾಜೇಂದ್ರ ರಾಮಲಿಂಗಪ್ಪಗೌಡ ಪಾಟೀಲ ಅವರನ್ನು ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆಯ ವಿಜಯಪುರ ಗೌರವಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ಡಾ. ರಾಘವೇಂದ್ರ ಎಸ್.ಆರ್ ಅವರು ಆದೇಶ ಹೊರಡಿಸಿದ್ದಾರೆ.
ರಾಜೇಂದ್ರ ರಾಮಲಿಂಗಪ್ಪಗೌಡ ಪಾಟೀಲ ಅವರು ಕೂಡ ಈ ಜವಾಬ್ದಾರಿಯನ್ನು ನಿರ್ವಹಿಸುತ್ತಾ ರಾಜ್ಯ ಮತ್ತು ಎಲ್ಲಾ ಜಿಲ್ಲಾ ಸಮಿತಿಯ ಮಾರ್ಗದರ್ಶನದ ಜೊತೆಗೆ, ಸಹಕಾರದೊಂದಿಗೆ ತಮಗೆ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ಕಾನೂನಿನ ಚೌಕಟ್ಟಿನಲ್ಲಿ ನೊಂದವರ ಧ್ವನಿಯಾಗುವಂತೆ ತಿಳಿಸುತ್ತಾ ಭ್ರಷ್ಟಾಚಾರ ನಿರ್ಮೂಲನೆಯತ್ತ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಸಿದ್ದೇಶ್ವರ ಸಂಕ್ರಮಣ ಜಾತ್ರೆ ಪೂರ್ವಭಾವಿ ಸಭೆ; ಶಾಸಕ ಯತ್ನಾಳ ಘೋಷಣೆ ಯುಗಾದಿಗೆ ಸಿದ್ದೇಶ್ವರ ಸಂಸ್ಥೆಯಿಂದ ಅನ್ನ ದಾಸೋಹ ಸೇವೆ ಆರಂಭ
ವಿಜಯಪುರ: ಯುಗಾದಿಗೆ ಸಿದ್ದೇಶ್ವರ ಸಂಸ್ಥೆಯಿಂದ ನಿರಂತರ ಅನ್ನ ದಾಸೋಹ ಸೇವೆ ಆರಂಭಿಸಲಾಗುವುದು ಎಂದು ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷರು, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಘೋಷಿಸಿದರು.
ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಸಿದ್ದೇಶ್ವರ ಶಿವಾನುಭವ ಸಮುದಾಯ ಭವನದಲ್ಲಿ ರವಿವಾರ ಶ್ರೀ ಸಿದ್ದೇಶ್ವರ ಸಂಸ್ಥೆ ಸಂಕ್ರಮಣ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಸಿದ್ದೇಶ್ವರ ಶಿವಾನುಭವ ಸಮುದಾಯ ಭವನವನ್ನು ಹಿಂದೂಗಳ ಹೊಸ ವರ್ಷ ಇದೇ ಯುಗಾದಿ ದಿನ ಲೋಕಾರ್ಪಣೆ ಗೊಳಿಸಲಾಗುತ್ತಿದ್ದು, ಅಂದೇ ಅನ್ನ ದಾಸೋಹ ಸೇವೆ ಆರಂಭಿಸಲಾಗುವುದು. ಇದರಿಂದ ಪಾದಯಾತ್ರಿಗಳಿಗೆ, ಶೈಕ್ಷಣಿಕ ಪ್ರವಾಸಕ್ಕೆ ಬರುವ ಮಕ್ಕಳಿಗೆ, ಬೇರೆ ಬೇರೆ ಊರುಗಳಿಂದ ಬರುವ ಜನರಿಗೆ ಅನುಕೂಲವಾಗಲಿದೆ. ಶಿವಾನುಭವ ಸಮುದಾಯ ಭವನದ ಮೇಲೆ ಯಾತ್ರಿ ನಿವಾಸ ಕೂಡ ಆರಂಭಿಸಲಾಗುವುದು ಎಂದು ತಿಳಿಸಿದರು.
ದಾನಿಗಳು ಮತ್ತು ಪ್ರಾಮಾಣಿಕ ಆಡಳಿತ ಮಂಡಳಿಯ ಸಹಕಾರದಿಂದ ವರ್ಷದಿಂದ ವರ್ಷಕ್ಕೆ ಸಂಸ್ಥೆ ಹೆಮ್ಮರವಾಗಿ ಬೆಳೆಯುತ್ತಿದೆ. ನಮ್ಮ ಹಿರಿಯರು ಮಾಡಿದ್ದ ಆಸ್ತಿಯ 10 ರಷ್ಟು ಸಂಸ್ಥೆಯ ಆಸ್ತಿಯನ್ನು ಹೆಚ್ಚಿಸಿರುವ ಹೆಮ್ಮೆ ನನಗಿದೆ. ಕರ್ನಾಟಕದಲ್ಲೇ ಅತ್ಯಂತ ದೊಡ್ಡ ಗೋಶಾಲೆ ಮಾಡಲಾಗಿದೆ. ಗೋ ಸೇವೆ ಜೊತೆಗೆ ಸಂಸ್ಥೆಯಿಂದ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ಆರೋಗ್ಯ ಸೇವೆ ಕಲ್ಪಿಸಲಾಗುತ್ತಿದೆ. ಜೆಎಸ್ಎಸ್ ಆಸ್ಪತ್ರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಆರಂಭಗೊಂಡಿದ್ದು, ಮುಂದಿನ ಎರಡು ವರ್ಷದಲ್ಲಿ ಮೇಡಿಕಲ್ ಕಾಲೇಜು ಸಹ ಆರಂಭಿಸಲಾಗುವುದು ಎಂದರು.
ವಿಜೃಂಭಣೆಯಿಂದ ಜಾತ್ರೆಕೊರೊನಾ ಹಿನ್ನೆಲೆ ಕಳೆದ ಎರಡ್ಮೂರು ಜಾತ್ರೆಗಳನ್ನು ಸರಳವಾಗಿ ಮಾಡಬೇಕಾಯಿತು. ಮೊದಲಿನ ವೈಭವಕ್ಕೆ ಕೊಂಡೊಯ್ಯಲು, 107ನೇ ಸಿದ್ದೇಶ್ವರ ಸಂಕ್ರಮಣ ಜಾತ್ರೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕರ ದೇಣಿಯಿಂದ ಜಾತ್ರೆ ಮಾಡಿದರೆ, ನಿಜವಾಗಿಯೂ ನಮ್ಮೂರ ಜಾತ್ರೆ ಆಗಲಿದೆ. ಜನರ ಸಹಭಾಗಿತ್ವ ಇರಬೇಕು. ಹೀಗಾಗಿ ಎಲ್ಲರೂ ಸೇವೆಯಲ್ಲಿ ತೊಡಗಿಕೊಂಡು, ಪ್ರಾಮಾಣಿಕವಾಗಿ ಶ್ರಮವಹಿಸಿದರೆ ಪುಣ್ಯ ಪ್ರಾಪ್ತಿ ಆಗಲಿದೆ. ಜಾತ್ರೆಗಳಿಂದ ಧಾರ್ಮಿಕ ಕಾರ್ಯದ ಜತೆಗೆ ವ್ಯಾಪಾರ ಹೆಚ್ಚುತ್ತದೆ, ಜನರ ಸಂಪರ್ಕ ವೃದ್ಧಿ ಆಗಲಿದೆ. ಅದಕ್ಕೆ ಹಿರಿಯರು ಜಾತ್ರೆ, ಅಮಾವಾಸ್ಯೆ, ಹುಣ್ಣಿಮೆ, ಸಮಾರಂಭಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.
ನಂದಿಕೋಲಗಳ ಮೇರವಣಿಗೆ ಅತ್ಯಂತ ಶಿಸ್ತಿನಿಂದ ಹಾಗೂ ಜನರು ಮರಳಿ ಮನೆಗೆ ಬೇಗ ತೆರಳಲು ಅನುಕೂಲವಾಗುವಂತೆ ರಾತ್ರಿ 10 ಗಂಟೆ ಒಳಗಾಗಿ ದೇವಸ್ಥಾನಕ್ಕೆ ಬರುವಂತೆ ನೋಡಿಕೊಳ್ಳಬೇಕು. ಆಗ ಮಾತ್ರ ಜನರು ವೀಕ್ಷಿಸಲು ಸಾಧ್ಯವಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದರೆ ಮೆರವಣಿಗೆಗೆ ಮೆರಗು ಬರುತ್ತದೆ ಎಂದು ಹೇಳಿದರು.
ಇದೇ ವೇಳೆ ಜಾತ್ರಾ ಸಮಿತಿಯ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಿದ್ದೇಶ್ವರ ಸಂಸ್ಥೆ ಚೇರಮನ್ ಬಸಯ್ಯ ಹಿರೇಮಠ ಪ್ರಸ್ತಾವಿಕವಾಗಿ ಮಾತನಾಡಿದರು. ಹಿರಿಯರಾದ ಸಿದ್ರಾಮಪ್ಪ ಉಪ್ಪಿನ, ಸಂಸ್ಥೆ ಪದಾಧಿಕಾರಿಗಳಾದ ಸಂಗನಬಸಪ್ಪ ಸಜ್ಜನ, ಸದಾನಂದ ದೇಸಾಯಿ, ಬಸವರಾಜ ಸುಗೂರ, ಮಲ್ಲಿಕಾರ್ಜುನ ಸಜ್ಜನ, ಶಿವಾನಂದ ನೀಲಾ, ನಿಂಗೊಂಡಪ್ಪ ಗೋಲಾಯಿ, ಮಡಿವಾಳಪ್ಪ ಕರಡಿ, ವಿಜಯಕುಮಾರ ಡೋಣಿ, ಸುಧೀರ ಚಿಂಚಲಿ, ಸದಾಶಿವ ಗುಡ್ಡೋಡಗಿ, ಚಂದ್ರಪ್ಪ ಹುಂಡೇಕಾರ, ನಾಗಪ್ಪ ಗುಗ್ಗರಿ, ಸಾಯಿಬಣ್ಣ ಭೋವಿ, ಮಲಕಪ್ಪ ಗಾಣಿಗೇರ, ರಮೇಶ ಹಳ್ಳದ, ರಾಮನಗೌಡ ಪಾಟೀಲ ಯತ್ನಾಳ, ಮಲ್ಲಿಕಾರ್ಜುನ ಹಕ್ಕಾಪಕ್ಕಿ, ಮುಖಂಡರಾದ ಗುರು ಗಚ್ಚಿನಮಠ, ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ಶಿವರುದ್ರ ಬಾಗಲಕೋಟ, ಕಿರಣ ಪಾಟೀಲ, ವಿಠ್ಠಲ ಹೊಸಪೇಟ, ಮಳುಗೌಡ ಪಾಟೀಲ, ಪಾಂಡುಸಾಹುಕಾರ ದೊಡಮನಿ, ವಿಕ್ರಮ ಗಾಯಕವಾಡ, ಬಸವರಾಜ ಬಿರಾದಾರ ಮತ್ತಿತರರು ಇದ್ದರು.ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ರಾಷ್ಟ್ರೀಯ ಜನತಾ ನ್ಯಾಯಾಲಯಕ್ಕೆ ಅಭೂತಪೂರ್ವ ಸ್ಪಂದನೆ ವಿಚ್ಛೇಧನ ಕೋರಿದ ದಂಪತಿಗಳಿಗೆ ಒಂದಾಗಿಸಿದ ಜನತಾ ಅದಾಲತ್
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಜರುಗಿದ ರಾಷ್ಟ್ರೀಯ ಲೋಕ್ ಅದಾಲತ್ಗೆ ಅಭೂತಪೂರ್ವ ಸ್ಪಂಧನೆ ದೊರೆತಿದ್ದು, ಹಲವಾರು ವರ್ಷಗಳಿಂದ ಬಾಕಿ ಇದ್ದ ಪ್ರಕರಣಗಳಿಗೆ ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು.
ಕೌಂಟುAಬಿಕ ನ್ಯಾಯಾಲಯದಲ್ಲಿ ವಿಚ್ಛೇಧನ ಕೋರಿ ಅರ್ಜಿ ಸಲ್ಲಿಸಿದ 3 ಜೋಡಿಗಳನ್ನು ಜನತಾ ಅದಾಲತ್ನಲ್ಲಿ ರಾಜೀ ಸಂಧಾನದ ಮೂಲಕ ಒಂದು ಗೂಡಿಸಿ ಕಳುಹಿಸಲಾಯಿತು. ಅದರಂತೆ ವಿವಿಧ ಪ್ರಕರಣಗಳಿಗೆ ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸುವ ಮೂಲಕ ಯಶಸ್ವಿಯಾಗಿ ಜನತಾ ಅದಾಲತ್ ಜರುಗಿತು.
ಜನತಾ ನ್ಯಾಯಾಲಯದ ಯಶಸ್ವಿಗೆ ಸಹಕರಿಸಿದ ಎಲ್ಲ ವಕೀಲರುಗಳು, ಕಕ್ಷಿದಾರರು, ಪೊಲೀಸ್ ಅಧಿಕಾರಿಗಳು ಜನತಾ ನ್ಯಾಯಾಲಯದಲ್ಲಿ ಭಾಗಿಯಾದ ಕಾನೂನು ಪದವಿ ವಿದ್ಯಾರ್ಥಿಗಳು, ಉಪನ್ಯಾಸಕರು, ಪೆನಲ್ ವಕೀಲರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಾಜಿ ಅನಂತ ನಲವಡೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರುಗಳಾದ ಅರವಿಂದ ಎಸ್.ಹಾಗರಗಿ, ನ್ಯಾಯಾಧೀಶ ಸತೀಶ ಎಲ್.ಪಿ. ಪಾಟೀಲ ಮೋಹನಕುಮಾರ ಭೀಮನಗೌಡ, ಶ್ರೀಮತಿ ಸಿಂಧು ಪೋತದಾರ ಅವರು ಅಭಿಂದನೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗದ ಸದಸ್ಯ ಎಸ್.ಕೆ.ವಂಟಿಗೋಡಿ ಜಿಲ್ಲಾಸ್ಪತ್ರೆಗೆ ಭೇಟಿ- ಪರಿಶೀಲನೆ : ಜಿಲ್ಲಾಸ್ಪತ್ರೆಯ ಕಾರ್ಯನಿರ್ವಹಣೆೆಗೆ ಪ್ರಶಂಸೆ
ವಿಜಯಪುರ: ನ್ಯಾಯಾಂಗ ಸದಸ್ಯರು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಭಾನುವಾರ ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಕೂಲಕುಂಷವಾಗಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಸ್ವಚ್ಚತೆ ಹಾಗೂ ಔಷಧಿಗಳ ಸಂಗ್ರಹಣೆಗೆ ಅವರು ್ಗ ಪ್ರಶಂಸೆ ವ್ಯಕ್ತಪಡಿಸಿದರು.
ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾಗಿ ಔಷಧೋಪಚಾರ ಹಾಗೂ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ಎಮ್.ಆರ್.ಐ. ಸಿ.ಟಿ. ಸ್ಕ್ಯಾನ್ ಸಮರ್ಪಕವಾಗಿ ನಿರ್ವಹಿಸಬೇಕು. ರೋಗಿಗಳಿಗೆ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳಲು ಕೃಷ್ಣಾ ಡೈಗೋಸ್ಟೀಕ್ ಪುಣೆ ಸಂಸ್ಥೆಯ ಆಪರೇಟಿಂಗ್ ಮ್ಯಾನೇಜರ್ ಯೋಗೇಶ ಸರವೋರ್, ಲಿಗಲ್ ಅಡವೈಸರ್ ಹಾಗೂ ಎಚ್.ಆರ್. ಪಿಲಿಪ್ ಸಾಮಂತೆ, ಎಮ್.ಆರ್.ಐ. ಮ್ಯಾನೇಜರ್ ವಿಶಾಲ ಜಂಗಮ ಇವರಿಗೆ ಸೂಚನೆ ನೀಡಿದರು.
ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ,ಶಿವಾನಂದ ಮಾಸ್ತಿಹೊಳಿ ಅವರು ಜಿಲ್ಲಾಸ್ಪತ್ರೆಯ ವಿವಿಧ ವಿಭಾಗದ ಕುರಿತು ಮಾಹಿತಿ ನೀಡಿದರು.
ಈ ಸಂಧರ್ಬದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿಧಿಕಾರಿ ಡಾ. ಸಂಪತ್ ಗುಣಾರಿ ಹಾಗೂ ಆಸ್ಪತ್ರೆಯ ಆರ್.ಎಮ.ಓ. ಡಾ: ಚಂದು ರಾಠೋಡ, ಎಬಿ-ಎಆರ್.ಕೆ. ನೋಡಲ್ ಅಧಿಕಾರಿಗಳಾದ ಡಾ:ಎ.ಜಿ.ಬಿರಾದಾರ, ಡಾ.ಶಶಿಕಲಾ ಹಿರೇಮನಿ, ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನಗೊಂಡ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Saturday, December 14, 2024
ವಿಜಯಪುರ ಜಿಲ್ಲೆಗೆ ನ್ಯಾಯಯುತವಾಗಿ ಸಿಗಬೇಕಾಗಿರುವ 371 ಜೆ ಕಲ್ಯಾಣ ಕರ್ನಾಟಕ ಮೀಸಲಾತಿ ಕುರಿತು ಜನಪ್ರತಿನಿಧಿಗಳು ಅಧಿವೇಶನದಲ್ಲಿ ಧ್ವನಿ ಎತ್ತಲು ಆಗ್ರಹ
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ವಿಜಯಪುರ ಜಿಲ್ಲೆಯು ನಂಜುAಡಪ್ಪ ವರದಿಯ ಪ್ರಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಯಾಗಿದೆ. ಈ ಹಿಂದೆ 1724 ವರೆಗೆ ಅಖಂಡ ವಿಜಯಪುರ ಜಿಲ್ಲೆ ಹೈದ್ರಾಬಾದ ನಿಜಾಮನ ಆಡಳಿತದಲ್ಲಿತ್ತು ಎಂಬುದು ಸರ್ಕಾರದ ಗೆಜಿಟಿಯರ್ನಲ್ಲಿ ದಾಖಲಾಗಿದೆ. ಸ್ವಾತಂತ್ರö್ಯಪೂರ್ವದಲ್ಲಿ ಜಿಲ್ಲೆಯ ಮಗ್ದ ಜನರ ಮೇಲೆ ರಜಾಕರ ಘೋರ ಹಾವಳಿ ನಡೆದಿರುವ ಬಗ್ಗೆ ಐತಿಹಾಸಿಕ ದಾಖಲೆಗಳು ಸಾರಿ ಹೇಳುತ್ತಿವೆ. ಐತಿಹಾಸಿಕವಾಗಿ ವಿಜಯಪುರ ಜಿಲ್ಲೆ ಅನ್ಯಾಯಕ್ಕೊಳಪಟ್ಟಿದೆ. ಮದ್ರಾಸ್ ಪ್ರಾಂತದಲ್ಲಿರುವ ಬಳ್ಳಾರಿ ಜಿಲ್ಲೆಯನ್ನು ಸೇರಿಸಲು ಅಲ್ಲಿನ ಜನಪ್ರತಿನಿಧಿಗಳು ತಮ್ಮ ರಾಜಕೀಯ ಹಿತಾಸಕ್ತಿ ಮರೆತು ಅಂದಿನ ಸರ್ಕಾರದ ಮೇಲೆ ಒತ್ತಡ ತಂದು ಮೀಸಲಾತಿ ಲಾಭವನ್ನು ಅಲ್ಲಿನ ಯುವ ಜನತೆಗೆ ಒದಗಿಸಿ ಯಶಸ್ವಿಯಾದರು.
ನ್ಯಾಯಯುತವಾಗಿ ವಿಜಯಪುರ ಜಿಲ್ಲೆಗೆ ಸಿಗಬೇಕಾಗಿದ್ದ ಮೀಸಲಾತಿಯ ಬಗ್ಗೆ ಕರ್ನಾಟಕ 5ನೇ ವಿಧಾನ ಸಭೆಯ ಮುದ್ದೇಬಿಹಾಳದ ಶಾಸಕರಾಗಿದ್ದ ದಿವಂಗತ ಎಂ.ಎA. ಸಜ್ಜನ ಅವರು ಅಂದಿನ ಕೇಂದ್ರ ಮತ್ತು ರಾಜ್ಯ ಸರ್ಕಾರ ಮತ್ತು ವಿಜಯಪುರ ಮತ್ತು ಬಾಗಲಕೋಟ ಎಲ್ಲ ಜನಪ್ರತಿನಿಧಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರೂ ಕೂಡಾ ಅಂದು ಅಧಿಕಾರದಲ್ಲಿದ್ದ ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಯು ಜಿಲ್ಲೆಗೆ ಸಿಗಬೇಕಾಗಿದ್ದ ವಿಶೇಷ ಸ್ಥಾನ ಮಾನದ ಬಗ್ಗೆ ಮಾತನಾಡದೆ ತಮಗೆ ಅಧಿಕಾರ ನೀಡಿದ ಜನರಿಗೆ, ಮತದಾರರಿಗೆ ಐತಿಹಾಸಿಕ ದ್ರೋಹ ಬಗೆದರು.
ಹಲವು ವರ್ಷಗಳಿಂದ ಕರ್ನಾಟಕ ರಾಜ್ಯ ಪದವೀಧರ ಒಕ್ಕೂಟದಿಂದ ದಾಖಲೆ ಸಮೇತವಾಗಿ ಜನರಿಗೆ ಮನವರಿಕೆ ಮಾಡುವ ಕೆಲಸ ಪ್ರಾರಂಭಿಸಿದ ನಂತರ ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಷ್ಟç ಸಮಿತಿ ಮತ್ತು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಕೆಂಗನಾಳ, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪ್ರೊ. ರಾಜು ಆಲಗೂರ ಅವರು ತಮ್ಮ ಪ್ರಣಾಳಿಕೆಯಲ್ಲಿ ಜಿಲ್ಲೆಗೆ 371 ಜೆ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದರು. ಜೊತೆಗೆ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ವಿಜಯಪುರ ನಗರದ ಶಾಸಕರಾದ ಬಸನಗೌಡ ಆರ್ ಪಾಟೀಲ ಯತ್ನಾಳ ಅವರು ಮಾಧ್ಯಮ ಹೇಳಿಕೆ ನೀಡಿ ಜಿಲ್ಲೆಗೆ ನ್ಯಾಯಯುತಗಿ ಸಿಗಬೇಕಾದ ಮೀಸಲಾತಿ ಬಗ್ಗೆ ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಹೇಳಿದ್ದರು. ಚುನಾವಣೆ ಮುಗಿದ ನಂತರ ಯಾರೊಬ್ಬರು ಕೂಡಾ ಮೀಸಲಾತಿ ಬಗ್ಗೆ ಮಾತನಾಡದೆ ಇರುವುದು ದುರಂತದ ವಿಷಯ. ಕೂಡಲೇ ಲೋಕಸಭೆ ಚುನಾವಣೆಯಲ್ಲಿ ತಾ ಮುಂದು ನಾ ಮುಂದು ಎಂದು ಹೇಳಿಕೆ ನೀಡಿ ಪ್ರತಿಷ್ಠೆ ಮೆರೆದು ಜಿಲ್ಲೆಯ ಜನತೆಗೆ ಭರವಸೆ ನೀಡಿರುವ ಎಲ್ಲ ಪಕ್ಷದ ಮುಖಂಡರು ಚಳಿಗಾಲದ ಅಧಿವೇಶನದಲ್ಲಿ ಪಕ್ಷ ಬೇದ ಮರೆತು ವಿಜಯಪುರ ಬಾಗಲಕೋಟ ಅವಳಿ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರುಗಳು ವಿದ್ಯಾರ್ಥಿಗಳ ಶೈಕ್ಷಣಿಕ, ಔದ್ಯೋಗಿಕ ಹಿತ ದೃಷ್ಟಿಯಿಂದ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ 371 ಜೆ ಮೀಸಲಾತಿ ಕುರಿತು ಧ್ವನಿ ಎತ್ತಬೇಕು. ಜಿಲ್ಲೆಯನ್ನು ಮೀಸಲಾತಿಯಿಂದ ಬಿಟ್ಟು ಹೋದ ಪ್ರದೇಶವೆಂದು ಪರಿಗಣಿಸಿ ಜಿಲ್ಲೆಗೆ ನ್ಯಾಯಯುತವಾಗಿ ಕಲ್ಯಾಣ ಕರ್ನಾಟಕ ಮೀಸಲಾತಿ ಒದಗಿಸಲು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Friday, December 13, 2024
ಬುದ್ದ, ಬಸವಣ್ಣ, ಅಂಬೇಡ್ಕರರ ತತ್ವ ಸಿದ್ಧಾಂತಗಳು ಪ್ರಸ್ತುತ ಅತ್ಯಗತ್ಯ : ಪಾಟೀಲ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ: ಭಗವಾನ ಬುದ್ದ ಬಸವಣ್ಣ ಹಾಗೂ ಅಂಬೇಡ್ಕರರ ತತ್ವ ಸಿದ್ಧಾಂತಗಳು ಪ್ರಸ್ತುತ ಅತ್ಯಗತ್ಯವಾಗಿವೆ ಎಂದು ಡಾ.ಫ.ಗು. ಹಳಕಟ್ಟಿ ತಾಂತ್ರಿಕ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಡಾ.ಜೆ.ಎಸ್. ಪಾಟೀಲ ಹೇಳಿದರು.
ಸಾರಿಪುತ್ರ ಬೋದಿದಮ್ಮ ಬುದ್ದ ವಿಹಾರದಲ್ಲಿ ಜರುಗಿದ ವೈ.ಎಚ್.ಲಂಬು ವಿರಚಿತ “ಬುದ್ದ ದರ್ಶನ” ಕೃತಿ ಲೋಕಾರ್ಪಣೆಗೊಳಿಸಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಸಂವಿಧಾನ ಅಪಾಯದ ಅಂಚಿನಲ್ಲಿದೆ. ಪ್ರಭಲರು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರುದ್ದ ಸಾಗುತ್ತಿದ್ದಾರೆ. ಭಗವಾನ ಬುದ್ದನ ಸಂದೇಶಗಳನ್ನು ಪಠ್ಯಕ್ರಮದಲ್ಲಿ ಅಳವಡಿಸುವ ಅತ್ಯವಶ್ಯಕವಾಗಿದೆ ಎಂದರು.
ಈ ಸಂದರ್ಭ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ಧೇಶಕ ಮಲ್ಲಿಕಾರ್ಜುನ.ಜಿ.ಕೆಳಗಡೆÀ ಮತಾನಾಡಿ, ಬುದ್ದನ ಅಧ್ಯಾತ್ಮಿಕ ಚಿಂತನಗಳ ಕುರಿತು ಗೋಷ್ಠಿಗಳನ್ನು ಏರ್ಪಡಿಸಬೇಕೆಂದರು ಮತ್ತು ದುಖಕ್ಕೆ ಕಾರಣವಾಗುವ ನಾಲ್ಕು ಮಹಾ ಸತ್ಯವ್ನನು ಬೋದಿಸಿದ ಬುದ್ದ ದುಖಃ ನಿರ್ವಾಣೆಗಾಗಿ ಪಂಚಶೀಲ ಗಳನ್ನು ಅಷ್ಠಾಂಗ ಮಾರ್ಗ್ರಗಳನ್ನು ಅನುಸರಿಸಿ ಪ್ರತಿಯೊಬ್ಬರು ಪ್ರಬುದ್ದರಾಗಿ ಸಮಜದಲ್ಲಿ ಬದುಕಬೇಕೆಂದು ಒತ್ತಿ ಹೇಳಿದರು.
ಈ ಸಂದರ್ಭ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಬುದ್ದ ದರ್ಶನ ಗ್ರಂಥ ಸಂಶೋಧನಾತ್ಮಕ ಗ್ರಂಥವಾಗಿದೆೆÉ. ಈ ಗ್ರಂಥ ಐ.ಎ.ಎಸ್. ಹಾಗೂ ಕೆ.ಎ.ಎಸ್. ಪರೀಕ್ಷೆಗಳಿಗೆ ತುಂಬ ಉಪಯುಕ್ತ ವಾಗುತ್ತದೆ. ಭಗವಾನ ಬುದ್ದರ ಜೀವನ ಚರಿತ್ರ ವಿಶ್ವಕ್ಕೆಲ್ಲ ಆದರ್ಶವಾಗಿದ್ದು ಮಾನವೀಯ ಮೌಲ್ಯಗಳ ಆಧಾರಿತ ಸಂಸ್ಕೃತಿಯನ್ನು ನಾವೆಲ್ಲ ಕಾಣಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಚೌಧ್ದ ಧರ್ಮ ಅತ್ಯಂತ ಸರಳ ಹಾಗೂ ಮಾನವೀಯತೆಯ ಪ್ರತೀಕವಾಗಿದೆ. ಮಾನವರನ್ನು ಮಾನವರನ್ನಾಗಿ ಕಾಣುವದೇ ಬೌಧ್ದ ಧಮ. ಇಂದು ಈ ಕ್ಲಿಷ್ಟಕರ ಸಮಾಜಕ್ಕೆ ಬುದ್ದರ ಸಂದೇಶಗಳು ಸರ್ವಕಾಲಿಕ ಎಂದರು.
ಈ ಸಂದರ್ಭ ಸಿಕ್ಯಾಬ್ ಮಹಿಳಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಯು.ಎನ್.ಕುಂಟೋಜಿ ಕೃತಿ ಪರಿಚಯಿಸಿ ಮಾತನಾಡಿ, ಅಶೋಕ ಸಾಮ್ರಾಟ ಕಳಿಂಗಯುದ್ದದಲ್ಲಿ ವಿಜಯ ಪಡೆದರು ಜೀವಹಾನಿಕಂಡು ಬೌಧ್ದ ಧರ್ಮ ಸ್ವೀಕರಿಸಿ ವಿಶ್ವಕ್ಕೆಲ್ಲ ಶಾಂತಿಯ ಸಂದೇಶ ಮೂಲಕ ಬೌಧ್ದ ಧರ್ಮದ ಶ್ರೇಷ್ಠೆತೆಯನ್ನು ಸಾರಿದರು. ಕನ್ನಡ ಸಾರಸ್ವತ ಲೋಕಕ್ಕೆ “ಬುದ್ದದರ್ಶನ” ಕೃತಿ ತುಂಬ ಉಪಯುಕ್ತ ಗ್ರಂಥವಾದೆ ಎಂದರು. ಈ ಸಂದರ್ಭ ಕೃತಿ ಲೇಖಕ ವೈ.ಎಚ್.ಲಂಬು ಮಾತನಾಡಿ ಬುದ್ದ, ಬಸವ, ಮತ್ತು ಅಂಬೇಡ್ಕರರ ವಿಚಾರದಾರೆಗಳು ವಿದ್ಯಾರ್ಥಿ ಜೀವನದಿಂದಲೆ ನನಗೆ ಹಂಬಲವಿದುದ್ದರಿAದ ಕೃತಿ ರಚಿಸಲು ಸಾದ್ಯವಾಯಿತು ಎಂದರು ಮತ್ತು ಕೃತಿ ಹೊರಬರಲು ಕಾರಣರಾದ ಎಲ್ಲರಿಗೂ ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಾಬು ಚಲವಾದಿ. ಬಸವರಾಜ ಚಲವಾದಿ ಮಾತನಾಡಿದರು.
ಸಾನ್ನಿಧ್ಯವಹಿಸಿದ ಸಾರಿಪುತ್ರ ಬುದ್ದ ವಿಹಾರದ ಬೋದಿ ಕೀರ್ತಿ ಭಂತೇಜಿ ಪ್ರಾರ್ಥಿಸಿದರು. ಎಸ್.ಎಲ್. ಇಂಗಳೇಶ್ವರ ಸ್ವಾಗತಿಸಿದರು. ನ್ಯಾಯವಾದಿ ದಾನೇಶ ಅವಟಿ ನಿರೂಪಿಸಿದರು. ಅರವಿಂದ ಲಂಬು ವಂದಿಸಿದರು. ಈ ಸಂದರ್ಭದಲ್ಲಿ ಸುಭಾಷ ಗುಡಿಮನಿ, ಅಡಿವೆಪ್ಪ ಸಾಲಗಲ್ಲ, ಕಲ್ಲಪ್ಪ ತೊರವಿ, ನಾಗರಾಜ ಲಂಬು, ಕೆ.ಎಮ್. ಕೂಡಲಿಗಿ, ಎ.ಡಿ. ಮುಲ್ಲಾ, ಮಹೇಶ ಕ್ಯಾತನ, ಮಲ್ಲಿಕಾರ್ಜುನ ಭೃಂಗಿಮಠ, ಶೇಷರಾವ ಮಾನೆ, ಎಂ.ಎಂ. ಖಾಲಾಸಿ, ಶಶಿಧರ ಲಂಬು, ಪ್ರಭಾಕರ ಬರಡ್ಡಿ, ಸುಕನ್ಯಾ ಲಂಬು, ಸೌಜನ್ಯ ಲಂಬು, ಭಾರತಿ ಹೊಸಮನಿ, ರುಕ್ಮಿಣಿದೇವಿ ಲಂಬು, ಶಾರದಾ ಹೊಸಮನಿ, ಅಶ್ವಿನಿ ಲಂಬು ಮುಂತಾದವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ದೇಸಿ ಸನ್ಮಾನ ಪ್ರಶಸ್ತಿ ಪ್ರದಾನ 15ರಂದು
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ: ಪಟ್ಟಣದ ನೆಲೆ ಪ್ರಕಾಶನ ಸಂಸ್ಥೆಯಡಿ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ 2024ನೇ ಸಾಲಿನ ದೇಸಿ ಸನ್ಮಾನ ಪ್ರಶಸ್ತಿ ಪ್ರದಾನ ಸಮಾರಂಭ ಡಿ.15 ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿಯ ಸಾರಂಗಮಠದ ಆವರಣದ ಸಭಾಭವನದಲ್ಲಿ ನಡೆಯಲಿದೆ.
ಬಾಗಲಕೋಟೆ ಜಿಲ್ಲೆ ಜಮಖಂಡಿಯ ಜಾನಪದ ವಿದ್ವಾಂಸ ಸಂಗಮೇಶ ಬಿರಾದಾರ ಅವರಿಗೆ 'ದೇಸಿ ಸನ್ಮಾನ' ಪ್ರಶಸ್ತಿ ಸಂಗಮೇಶ ಹಾಗೂ ₹11 ಸಾವಿರ ನಗದು, ಪ್ರಶಸ್ತಿ ಪತ್ರ ಮತ್ತು ಪುಸ್ತಕವನ್ನು ಬಿರಾದಾರ ನ್ಯೂಜಿಲೆಂಡ್ನ ಆಕ್ಲಂಡ್ ಬಸವ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗಣ್ಣ ಕಲಬುರ್ಗಿ ಪ್ರಶಸ್ತಿ ಪ್ರದಾನ ಮಾಡುವರು.
ಸಾರಂಗಮಠದ ಪೀಠಾಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಜಯಪುರ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಎಂ.ಎಸ್.ಮದಭಾವಿ ಅಧ್ಯಕ್ಷತೆ ವಹಿಸುವರು.
ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಪುಸ್ತಕ ಬಿಡುಗಡೆ ಮಾಡುವರು. ವಿಜಯಪುರ ಚಾಣಕ್ಯ ಕರಿಯರ್ ಅಕಾಡೆಮಿ ಸಂಸ್ಥಾಪಕ ಎನ್.ಎಂ.ಬಿರಾದಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರತಿಷ್ಠಾನದ ಸಂಚಾಲಕ ಚನ್ನಪ್ಪ ಕಟ್ಟಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Thursday, December 12, 2024
ವಾಲ್ಮೀಕಿ ಜನಾಂಗದವರಿಗೆ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಅಖಿಲ ಭಾರತೀಯ ವಾಲ್ಮಿಕಿ ಸಮಾಜ ಸೇವಾ ಸಂಘ (ರಿ) ವತಿಯಿಂದ ಮನವಿ
ವಿಜಯಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಗೆಜೆಟ್ ಅಧಿಸೂಚನೆಯ ಪ್ರಕಾರ ಕರ್ನಾಟಕ ರಾಜ್ಯ ಪರಿಶಿಷ್ಟ್ಟ ಪಂಗಡಗಳ ಪಟ್ಟಿಯ ಕ್ರಮಸಂಖ್ಯೆ: 38 ರಲ್ಲಿ ಬರುವ ನಾಯಕ, ವಾಲ್ಮೀಕಿ ಜನಾಂಗದ ಪರ್ಯಾಯ ಪದವಾದ ತಳವಾರ ಮತ್ತು ಪರಿವಾರ ಜನಾಂಗದವರಿಗೆ ಮಾತ್ರ ಎಸ್.ಟಿ.ಜಾತಿ ಪ್ರಮಾಣ ಪತ್ರ ನೀಡುವುದನ್ನು ಬಿಟ್ಟು ಪ್ರವರ್ಗ-1 ರ ಹಿಂದುಳಿದ ಜಾತಿಯಲ್ಲಿ ಬರುವ ಅಂಬಿಗ/ಕಬ್ಬಲಿಗ/ಕೋಳಿ/ತಳವಾರ/ಗAಗಾಮತ /ಡೋರ, ಟೋಕರೆಕೋಳಿ/ಗೊಂಡ/ ರಾಜಗೊಂಡ ನಾಯ್ಕಡ್ ಜಾತಿಯವರಿಗೆ ಎಸ್.ಟಿ. ಪ್ರಮಾಣ ಪತ್ರ ನೀಡುತ್ತಿರುವ ತಹಶೀಲ್ದಾರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದು ತಳವಾರ ಜಾತಿ ಗೋಂದಲದ ಬಗ್ಗೆ ಸೂಕ್ತ ನಿರ್ದೇಶನ ನೀಡಿ ವಾಲ್ಮೀಕಿ ಜನಾಂಗದವರಿಗೆ ನ್ಯಾಯ ಒದಗಿಸುವಂತೆ ಅಖಿಲ ಭಾರತೀಯ ವಾಲ್ಮಿಕಿ ಸಮಾಜ ಸೇವಾ ಸಂಘ (ರಿ) ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಪರಿಶಿಷ್ಟ್ಟ ಪಂಗಡದ ಪ್ರಕಾರ ಸಾಮಾಜಿಕವಾಗಿ, ರಾಜಕೀಯವಾಗಿ ಹಾಗೂ ಆರ್ಥಿಕವಾಗಿ, ಶೈಕ್ಷಣಿಕವಾಗಿ ತೀರಾ ಹಿಂದೂಳಿದ ಈ ಜನಾಂಗದವರಿಗೆ ಸಮಾನತೆ ಬರಬೇಕೆಂಬ ದೃಷ್ಟಿಯಿಂದ ಡಾ| ಬಿ.ಆರ್. ಅಂಬೇಡ್ಕರ ರವರು ಮೀಸಲಾತಿಯನ್ನು ನೀಡಿ ನ್ಯಾಯ ಒದಗಿಸಿಕೊಟ್ಟಿದ್ದಾರೆ. ಆದರೆ ದೇಶಕ್ಕೆ ಸ್ವಾತಂತ್ರ ಬಂದು 7 ದಶಕಗಳು ಕಳೆದರು ನಿರಂತರವಾಗಿ ಪರಿಶಿಷ್ಟ ಪಂಗಡದ ಶೋಷಣೆ, ದಬ್ಬಾಳಿಕೆ, ದೌರ್ಜನ್ಯ ಮತ್ತು ಮೀಸಲಾತಿಯಲ್ಲಿ ವಂಚನೆ ಪ್ರಕರಣಗಳು ದಿನನಿತ್ಯ ಹೆಚ್ಚಾಗುತ್ತಿರುವುದು ಖಂಡನೀಯ.
ನಾಯ್ಕಡ ಹೆಸರಿನಲ್ಲಿ ಹಿಂದುಳಿದ ಜಾತಿಯ ತಳವಾರ ಜಾತಿಯವರಿಗೆ ಎಸ್.ಟಿ. ಪ್ರಮಾಣ ಪತ್ರಗಳನ್ನು ನಿಡಿದ ತಹಶೀಲ್ದಾರರನ್ನು ಈ ಕೂಡಲೇ ಅಮಾನತ್ತು ಮಾಡಿ ಕ್ರಿಮಿನಲ್ ಕೇಸು ದಾಖಲಿಸಬೇಕು. ಹಿಂದುಳಿದ ಜಾತಿಗೆ ಸೇರಿರುವ ಅಂಬಿಗ/ಕಬ್ಬಲಿಗ/ಗAಗಾಮತ/ತಳವಾರರಿಗೆ/ಡೋರ, ಟೋಕರೆ ಕೋಳಿ/ಗೊಂಡ /ರಾಜಗೊಂಡ/ನಾಯ್ಕಡ ಜಾತಿಯವರಿಗೆ ಎಸ್.ಟಿ. ಪ್ರಮಾಣ ಪತ್ರಗಳನ್ನು ನೀಡಿರುವುದನ್ನು ಕೂಡಲೇ ರದ್ದು ಪಡಿಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ತೆಗೆದುಕೊಂಡವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು.
ಪ್ರವರ್ಗ-1 ರಲ್ಲಿ ಬರುವ ಅಂಬಿಗ/ತಳವಾರರಿಗೆ ಎಸ್.ಟಿ. ಜಾತಿ ಪ್ರಮಣ ಪತ್ರಗಳು ನೀಡಿರುವ ಬಗ್ಗೆ ನಕಲು ಶಾಲಾ ದಾಖಲತಿಗಳನ್ನು ಸೃಷ್ಟಿಸಿರುವ ಬಗ್ಗೆ ಪರಿಶೀಲನೆಗಾಗಿ ಉನ್ನತ ಮಟ್ಟದ ತನಿಖಾ ತಂಡವನ್ನು ರಾಜ್ಯ ಸರ್ಕಾರದಿಂದ ರಚನೆ ಮಾಡಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆದ 187 ಕೋಟಿ ರೂಪಾಯಿಯನ್ನು ವಾಪಸ್ ವಾಲ್ಮೀಕಿ ನಿಗಮಕ್ಕೆ ನೀಡಬೇಕು. ವಿಜಯಪುರ ಜಿಲ್ಲೆಯ ಎಲ್ಲ ಹಳ್ಳಿಗಳಲ್ಲಿ ಪ್ರತ್ಯೇಕ ವಾಲ್ಮೀಕಿ ಸಮಾಜದವರಿಗೆ ಸ್ಮಶಾನ ಭೂಮಿಯನ್ನು ಮಂಜೂರು ಮಾಡಬೇಕು.
ಎಸ್.ಸಿ. ಎಸ್.ಟಿ. ಜನಾಂಗಕ್ಕೆ ಮೀಸಲಿಟ್ಟ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಬಾರದು. ಮಾನ್ಯ ಸುಪ್ರೀಮ್ ಕೋರ್ಟ ಆದೇಶ ಮಾಡಿದ ಒಳಮೀಸಲಾತಿ ಜಾರಿ ಮಾಡಬೇಕು. 7.5 ಶೆಡುಲ್ 9ಕ್ಕೆ ಸೇರಿಸಬೇಕು. 39 ಅನ್ಯ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಶಿಪಾರಸ್ಸವನ್ನು ತಕ್ಷಣವೇ ವಾಪಸ್ ಪಡೆಯಬೇಕು. ವಿಜಯಪುರ ನಗರದ ಬಂಜಾರ ಕ್ರಾಸ್ ಹತ್ತಿರ ಮಂಜೂರಾದ 4ಕೋಟಿ ಹಣ 2-3 ವರ್ಷ ಆದರೂ ಇನ್ನೂ ಕಟ್ಟಡದ ಅಡಿಗಲ್ ಸಮಾರಂಭ ಆಗಿಲ್ಲ ಅದನ್ನು ವಾಲ್ಮೀ ಜಯಂತಿಯ ಒಳಗಾಗಿ 2 ತಿಂಗಲ್ಲಿ ವಾಲ್ಮೀಕಿ ಸಮುದಾಯ ಭವನ ಅಡಿಗಲ್ಲು ಸಮಾರಂಭ ಮಾಡಬೇಕು. ರಾಜ್ಯದಲ್ಲಿ ಈಗಾಗಲೇ ಲಕ್ಷಾಂತರ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಆಗಿದ್ದನ್ನು ಕೂಡಲೇ ರದ್ದುಪಡಿಸಬೇಕು. ವಿಜಯಪುರ ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರ ಎದುರುಗಡೆ ವಾಲ್ಮೀಕಿ ಸರ್ಕಲ್ ಮತ್ತು ವೃತ್ತ ನಿರ್ಮಾಣ ಆಗಬೇಕು. ವಿಜಯಪುರ ನಗರದ ಯಾವುದಾದರು ಒಂದು ರಸ್ತೆಗೆ ಸ್ವಾತಂತ್ರ ಹೋರಾಟಗಾರ ವೀರ ಸಿಂಧೂರ ಲಕ್ಷ್ಮಣನ ಮಾರ್ಗ ಎಂದು ನಾಮಕರಣ ಮಾಡಬೇಕು.
ವಿಜಯಪುರ ತಾಲೂಕಿನ ಉತ್ನಾಳ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನವನ್ನು ನಿರ್ಮಾಣ ಮಾಡಿದ್ದನ್ನು ವಾಲ್ಮೀಕಿ ಸಮಾಜದವರಿಗೆ ಹಸ್ತಾಂತರ ಮಾಡಬೇಕು. ಎಂ.ಎಚ್.ಎA. ಪ್ರೌಢ ಶಾಲೆ ಆಲಮಟ್ಟಿಯಲ್ಲಿ ಶ್ರೀಮತಿ ಗುರಿಕಾರ ಅವರಿಗೆ ಸಮಾಜ ಕಲ್ಯಾಣ ಇಲಾಖೆಯವರು ಸಿಂಧೂತ್ವ ಪ್ರಮಾಣ ಪತ್ರ ನೀಡಿರುತ್ತಾರೆ ಅದನ್ನು ರದ್ದುಪಡಿಸಬೇಕು. ಶ್ರೀ ಎಸ್.ಕೆ. ಪ್ರೌಢ ಶಾಲೆ ತಾಳಿಕೋಟಿಯಲ್ಲಿ ಶ್ರೀಮತಿ ಮಹಾದೇವಿ ಮಾಡಗಿ ಅವರಿಗೆ ಸಮಾಜ ಕಲ್ಯಾಣ ಇಲಾಖೆಯವರು ಸಿಂಧೂತ್ವ ಪ್ರಮಾಣ ಪತ್ರವನ್ನು ನೀಡಿದನ್ನು ರದ್ದುಪಡಿಸಬೇಕು. ಮಲ್ಲಪ್ಪ ಸಾಬು ಯಾಳವಾರ ಪೋಲಿಸ್ ಇಲಾಖೆ ಸಾ: ಹಿಟ್ನಳ್ಳಿ ತಾ: ಜಿ: ವಿಜಯಪುರ ಇವರು ಅಂಬಿಗ/ತಳವಾರ ಇದ್ದು, ಇವರ ಸಿಂಧೂತ್ವ ಪ್ರಮಾಣ ಪತ್ರವನ್ನು ರದ್ದುಗೊಳಿಸಬೇಕು. ಶಿವಪ್ಪ ಬಸಪ್ಪ ಕೆಂಗಲಗುತ್ತಿ ಪೋಲಿಸ್ ಇಲಾಖೆ ಸಾ: ಬಬಲೇಶ್ವರ ಇವರ ಸಿಂಧೂತ್ವ ಪ್ರಮಾಣ ಪತ್ರವನ್ನು ರದ್ದುಗೊಳಿಸಬೇಕು. ಈರಣ್ಣ ಧರ್ಮಣ್ಣ ವಾಲಿಕಾರ ಪೋಲಿಸ್ ಇಲಾಖೆ ಸಾ: ಚಿಕ್ಕಸಿಂದಗಿ ತಾ: ಸಿಂದಗಿ ಇವರ ಸಿಂಧೂತ್ವ ಪ್ರಮಾಣ ಪತ್ರವನ್ನು ರದ್ದುಗೊಳಿಸಬೇಕು. ವಿಜಯಪುರ ಜಿಲ್ಲಾ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ 50 ಕುಟುಂಬದ ವಾಲ್ಮೀಕಿ ಜನಾಂಗದವರಿಗೆ ನಿವೇಶನ ಇರುವದಿಲ್ಲ. ಅವರಿಗೆ 2ಎಕರೆ ಜಮೀನು ರಿ.ಸ.ನಂ: 1 ರಲ್ಲಿ ಮಂಜುರು ಮಾಡಬೇಕು. ಮತ್ತು ಸ್ಮಶಾನ ಜಾಗ ಇರುವದಿಲ್ಲ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಈರಪ್ಪ ಯಡಳ್ಳಿ, ಅಡಿವೆಪ್ಪ ಕಸ್ತೂರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ
ವಿಜಯಪುರ, ಡಿಸೆಂಬರ್ 13: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.
ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಬಗ್ಗೆ ಮಾತನಾಡಿ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
*ಕಾನೂನಿನ ಮುಂದೆ ಎಲ್ಲರೂ ಸಮಾನರು*
ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ. ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದರು.
*ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇವೆ*
ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು.
*ಪ್ರತಿಭಟನಾಕಾರರು ಕಲ್ಲು ಹೊಡೆದಿರುವ ಫೋಟೋಗಳಿವೆ*
ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸ್ ಕಲ್ಲು ಹೊಡೆದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರು ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಎಂದು ಪ್ರಶ್ನಿಸಿದರು. ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ ಎಂದರು.
*ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು*
ಮೀಸಲಾತಿ ಮುಂದೇನು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು 2ಬಿ ಯಲ್ಲಿರುವ 4% ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಹೇಳಿದ್ದಾರೆ.
*ಹೋರಾಟಕ್ಕೆ ಬಿಜೆಪಿ ಬೆಂಬಲ*
ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ.4 ರ ಮೀಸಲಾತಿಯನ್ನು ರದ್ದುಮಾಡಿ 3ಎ ಒಕ್ಕಲಿಗರಿಗೆ 2% ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ 2% ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದನ್ನು ಸಿಎಂ ಉಲ್ಲೇಖಿಸಿದರು.
*ಸಂಧಾನಕ್ಕೆ ಸಚಿವರನ್ನು ಕಳುಹಿಸಲಾಗಿತ್ತು*
ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ನ್ಯಾಯಾಲಯ ಹೋರಾಟವನ್ನು ಶಾಂತಿಯುತವಾಗಿ , ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಹಾಳಾದ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸಲು ರೈತ ಸಂಘ ಒತ್ತಾಯ
ವಿಜಯಪುರ: ಅಖಂಡ ಕರ್ನಾಟಕ ರೈತ ಸಂಘ (ರಿ) ಜಿಲ್ಲಾ ಘಟಕ ವಿಜಯಪುರ ಪದಾಧಿಕಾರಿಗಳು ಮುಖ್ಯ ಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು ಇದಕ್ಕೆ ಕಾರಣ ಜಿ ಆರ್ ಜಿ 152 ಹಾಗೂ ಜಿ ಆರ್ ಜಿ 811 ತೊಗರಿ ಬೀಜವೇ ಕಾರಣ ಈ ಬೀಜ ಸಂಪೂರ್ಣ ಕಳಪೆ ಮಟ್ಟದ್ದಾಗಿದೆ. ಈ ಕುರಿತು ಹೋರಾಟ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಕೃಷಿ ಇಲಾಖೆ ಹಾಗೂ ಧಾರವಾಡದ ಕೃಷಿ ವಿದ್ಯಾಲಯದ ವಿಜ್ಞಾನಿ ಗಳು ಆಗಮಿಸಿ ತೊಗರಿ ಬೆಳೆ ಪರಿಶೀಲನೆ ಮಾಡಿದ್ದಾರೆ. ಪರಿಶೀಲನೆ ಸಂದರ್ಭದಲ್ಲಿ ರೈತ ಮುಖಂಡರು ಹಾಗೂ ರೈತರೆದುರು ಜಿ ಆರ್ ಜಿ 152 ಹಾಗೂ 811 ಬೀಜ ಕಳಪೆ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಕಳಪೆ ಇದ್ದ ಕಾರಣ ಗಿಡದಲ್ಲಿ ತೊಗರಿ ಕಾಯಿ ಆಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಸರ್ಕಾರಕ್ಕೆ ವರದಿ ಕಳುಹಿಸುವಾಗ ತೊಗರಿ ಬೀಜದ ಯಾವುದೇ ತೊಂದರೆ ಇಲ್ಲ. ಬೀಜ ಉತ್ತಮವಾಗಿದೆ. ಹವಾಮಾನದ ವೈಪರಿತ್ಯ ಕಾರಣ ಎಂದು ಹಾಗೂ ರೈತರು ದಟ್ಟಣೆಯಾಗಿ ಬಿತ್ತನೆ ಮಾಡಿದ್ದಾರೆ ಆದ್ದಿರಿಂ ಕಾಯಿ ಹಿಡಿದಿಲ್ಲ ಎಂದು ತಪ್ಪು ವರದಿ ಸಲ್ಲಿಸಿದ್ದಾರೆ. ಇದರಿಂದ ರೈತರಿಗೆ ಆಘಾತವಾಗಿದೆ. ಆದ್ದರಿಂದ ಬೆಂಗಳೂರಿನಿಂದ ಬೇರೆ ತಂಡ ಕಳುಹಿಸಿ ಮತ್ತೊಮ್ಮೆ ತೊಗರಿ ಬೆಳೆ ಪರಿಶೀಲನೆ ಮಾಡಿ ಸೂಕ್ತ ವರದಿ ಪಡೆದುಕೊಳ್ಳಬೇಕೆಂದು ಮಾನ್ಯ ಮುಖ್ಯಮಂತ್ರಿ ಗಳಿಗೆ ಒತ್ತಾಯಿಸಿದರು.
ಅದೇನೆ ಇದ್ದರೂ ಒಟ್ಟಾರೆ ರೈತರಿಗೆ ಪ್ರತಿ ಎಕರೆಗೆ ಕನಿಷ್ಟ 25000 ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.
ಅದರಂತೆ ವಿಮೆ ಪರಿಹಾರ ತುಂಬದೆ ಇರುವ ರೈತರಿಗೂ ಪರಿಹಾರ ಒದಗಿಸಿ ರೈತರನ್ನು ಬದುಕಿಸಬೇಕೆಂದು ಒತ್ತಾಯಿಸಿದರು.
ದಾರಿ ಸಮಸ್ಯೆಯ ಕುರಿತು ಅಧಿವೇಶನದಲ್ಲಿ ಚರ್ಚಿಸಿ ಕಾನೂನು ತಿದ್ದುಪಡಿ ಮಾಡುವ ಮೂಲಕ ನ್ಯಾಯಾಲಯಕ್ಕೆ ಹೋಗಿ ತಡೆ ಯಾಜ್ಣೆ ತರದಂತೆ ಸುಗ್ರೀವಾಜ್ಣೆ ಹೊರಡಿಸಿ ತಹಶಿಲ್ದಾರರಿಗೆ ಸಂಪೂರ್ಣ ಅಧಿಕಾರ ವಹಿಸಿಕೊಡಬೇಕು. ಈ ಹಿಂದೆ ಹೊರಡಿಸಿದ ಸುತ್ತೋಲೆಯನ್ನು ಮಾರ್ಪಾಡು ಮಾಡಿ ರೈತರಿಗೆ ಅನುಕೂಲವಾಗುವಂತೆ ಸ್ಪಷ್ಟ ಆದೇಶ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಬಸವರಾಜ ಚೌಧರಿ, ಮಹಾಂತೇಶ ಪಡಗಾನೂರು, ಶಿವಾನಂದ ಹಡಪದ, ಸಂತೋಷ ಪಡಗಾನೂರ, ಶಿವಾನಂದ ಪಡಗಾನೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.