Tuesday, January 23, 2024

ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಕಟ್ಟುನಿಟ್ಟಿನ ಸೂಚನೆ


ವಿಜಯಪುರ : ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ, ಕಳ್ಳಭಟ್ಟಿ ಸಾರಾಯಿ ಕಡಿವಾಣಕ್ಕೆ ಕಟ್ಟಿನಿಟ್ಟಿನ ಕ್ರಮ ಕೈಗೊಂಡು, ಕಳ್ಳಭಟ್ಟಿ ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಕಳ್ಳಭಟ್ಟಿ ನಿರ್ಮೂಲನೆ ಕುರಿತು ರಚಿಸಲಾದ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಳ್ಳಭಟ್ಟಿ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಕುರಿತು ಗ್ರಾಮ ಸಭೆಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಆರೋಗ್ಯ ಕೇಂದ್ರಗಳ ವೈದ್ಯರು ಹಾಗೂ ಸರ್ಕಾರೇತರ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರನ್ನೊಳಗೊಂಡ ಗ್ರಾಮ ಸಭೆಗಳನ್ನು ಆಯೋಜಿಸಿ ಸೂಕ್ತ ಜಾಗೃತಿ ಮೂಡಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಅವರು ಸೂಚನೆ ನೀಡಿದರು.

ಕಳ್ಳಭಟ್ಟಿ ಮದ್ಯ ತಯಾರಿಕೆ, ಸಾಗಾಟ ಹಾಗೂ ಮಾರಾಟದಂತಹ ಅಕ್ರಮಗಳನ್ನು ಕಂಡುಬAದಲ್ಲಿ ಅಬಕಾರಿ ಇಲಾಖೆ ಗಮನಕ್ಕೆ ತರುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಾಹಿತಿ ನೀಡಿದ ವ್ಯಕ್ತಿಯ ಮಾಹಿತಿಯನ್ನು ಗೌಪ್ಯವಾಗಿರಿಸುವ ಕುರಿತು ಹಾಗೂ ಮಾಹಿತಿ ನೀಡಿದವರಿಗೆ ಸೂಕ್ತ ಪ್ರೊತ್ಸಾಹ ಒದಗಿಸುವ ಕುರಿತು ವ್ಯಾಪಕ ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಬೇಕು. ಅದರಂತೆ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನರು ಭಾಗವಹಿಸಿರುವುದರಿಂದ ಇಂತಹ ಕಾರ್ಯಕ್ರಮಗಳಲ್ಲಿ ಕಳ್ಳಭಟ್ಟಿ ಮದ್ಯ ತಯಾರಿಕೆ, ಮಾರಾಟದಂತಹ ಅಕ್ರಮಗಳ ಕುರಿತು ಅಬಕಾರಿ ಇಲಾಖೆಯಿಂದ ಅರಿವು ಮೂಡಿಸಲು ಕ್ರಮ ವಹಿಸಬೇಕು. ಕಳ್ಳಭಟ್ಟಿ ತಯಾರಿಕೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಮೇಲೆ ಸೂಕ್ತ ನಿಗಾ ಇಟ್ಟು, ಇಂತಹ ವಸ್ತುಗಳ ಸಾಗಾಟ ಕಂಡು ಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು. 

ಅಬಕಾರಿ ಇಲಾಖೆ ಅಧಿಕಾರಿಗಳು, ಕಂದಾಯ, ಪೊಲೀಸ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರ್‌ರಾಜ್, ಮೀನುಗಾರಿಕೆ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಕಳ್ಳಭಟ್ಟಿ ಕೇಂದ್ರಗಳಿಗೆ ದಾಳಿ ನಡೆಸಬೇಕು. ಕಳ್ಳಭಟ್ಟಿ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ನೊಂದಣಿಯಾಗದೇ ಇರುವ ವಾಹನಗಳಿಗೆ ಸಂಬAಧಿಸಿದAತೆ ವಾಹನ ಮಾಲೀಕರು ಪೂರಕ ದಾಖಲೆಗಳನ್ನು ಹಾಜರುಪಡಿಸಿದ್ದಲ್ಲಿ ಬಿಡುಗಡೆಗೆ ಕ್ರಮ ವಹಿಸಬೇಕು. ಬೇನಾಮಿ ದಾಖಲೆಯಿಲ್ಲದೇ ಇಂಜಿನ್ ನಂಬರ್ ಮತ್ತು ಚೆಸ್ಸಿ ನಂಬರ್ ಇರದೇ ಇರುವ ವಾಹನಗಳ ವಾರಸುದಾರರ ಮೇಲೆ ಕಾನೂನಾತ್ಮಕ ಕ್ರಮ ಜರುಗಿಸಬೇಕು. ಕಳ್ಳಭಟ್ಟಿ ಮುಕ್ತ ಜಿಲ್ಲೆಯನ್ನಾಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬAಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು. 

ಸಭೆಯಲ್ಲಿ ಅಬಕಾರಿ ಇಲಾಖೆ ಆಯುಕ್ತ ಸಂಗನಗೌಡ ಪಿ. ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

No comments:

Post a Comment