ನೇಹಾ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಜಂಗಮ ಸಮಾಜ ಮುಖಂಡರಿAದ ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ: ನೇಹಾ ಹಿರೇಮಠ ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ನೀಡಿ, ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಜಂಗಮ ಸಮಾಜದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಜಂಗಮ ಸಮಾಜ ಮುಖಂಡ ಸಂಜೀವ ಹಿರೇಮಠ ಹಾಗೂ ಪ್ರಧಾನ ಕಾರ್ಯದರ್ಶಿ ಎಸ್.ಕೆ. ಸಾವಳಗಿಮಠ ಮಾತನಾಡಿ, ನೇಹಾ ಹತ್ಯೆ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ದೊಡ್ಡ ಭಯ ಹುಟ್ಟಿಸಿದೆ. ಹಾಡು ಹಗಲೇ ಕಾಲೇಜಿನ ಆವರಣದಲ್ಲಿ 9 ಸಲ ಚಾಕುವಿನಿಂದ ಇರಿದು ಕ್ರೂರವಾಗಿ ಹತ್ಯೆ ಮಾಡಿರುವ ಆರೋಪಿ ಫಯಾಜ್‌ಗೆ ಉಗ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಫಯಾಜ್ ಮಾಡಿರುವ ಹೀನ ಕೃತ್ಯದಲ್ಲಿ ಆತನ ಇನ್ನೂ ನಾಲ್ಕು ಸಹಪಾಠಿಗಳ ಕೈವಾಡವೂ ಇರುವುದು ತಿಳಿದು ಬಂದಿದೆ. ಹಾಗಾಗಿ ಎಲ್ಲರನ್ನೂ ಬಂಧಿಸಿ ಸರಿಯಾಗಿ ವಿಚಾರಣೆ ನಡೆಸಬೇಕು. ಅಲ್ಲದೇ ಆರೋಪಿಗಳಿಗೆ ಜಾಮಿನು ಸಿಗದಂತೆ ಪೊಲೀಸ್ ಅಧಿಕಾರಿಗಳು ಎಚ್ಚರಿಕೆಯಿಂದ ವಿಚಾರಣೆ ನಡೆಸಿ 1 ತಿಂಗಳ ಒಳಗೆ ತನಿಖೆ ಪೂರ್ಣಗೊಳಿಸಿ ಗರಿಷ್ಠ ಮಟ್ಟದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ವಿರಳ ಪ್ರಕರಣಗಳಲ್ಲಿ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸುಗ್ರಿವಾಜ್ಞೆ ಮೂಲಕ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಸಾದ ವಸ್ತçದ, ಹಿಂದೂ ಮಹಾಸಭಾದಿಂದ ಪೂರ್ಣಿಮಾ ಬದ್ನೂರ, ಭುವನೇಶ್ವರಿ ಕೋರವಾರ, ಮಾಯಾ ಚೌಧರಿ ಮಾತನಾಡಿ, ಈ ಕೊಲೆಯಲ್ಲಿ ರಾಜಕಾರಣ ಮಾಡದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ ಅದರಂತೆ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಜಾರಿಗೆ ತರಬೇಕು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಸಯ್ಯ ಚಿನ್ನಕಾಳಿಮಠ, ಡಾ.ಬಸವರಾಜ ನಂದಿಕೋಲಮಠ, ವಿಶ್ವನಾಥ ಹಿರೇಮಠ ಕಾಖಂಡಕಿ, ರಾಚಯ್ಯ ಮಠಪತಿ, ಗುರಸಿದ್ದಯ್ಯ ಹಿರೇಮಠ, ಗುರಯ್ಯ ಯಾದವಾಡಮಠ, ಜೆಡಿಎಸ್ ಮುಖಂಡ ರಾಜು ಹಿಪ್ಪರಗಿ, ವಿಶ್ವನಾಥ ಹಿರೇಮಠ, ಮಲ್ಲಯ್ಯ ಹಿರೇಮಠ, ಪುಷ್ಪಾ ಗಚ್ಚಿನಮಠ, ಸುರೇಖಾ ಹಿರೇಮಠ, ಶೈಲಜಾ ನಂದಿಕೋಲಮಠ, ಸುನೀತಾ ಹಿರೇಮಠ, ವೀಣಾ ಹಿರೇಮಠ, ಚೈತ್ರಾ ಮಹಾಂತಮಠ, ಪೂಜಾ ಹಿರೇಮಠ, ಮೀನಾಕ್ಷಿ ಮಠ ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment