Friday, April 12, 2024

ಸಶಕ್ತ ರಾಷ್ಟ್ರ ನಿರ್ಮಾಣಕ್ಕಾಗಿ ಮತ ಚಲಾಯಿಸಿ : ಜಿಲ್ಲಾಧಿಕಾರಿ ಟಿ.ಭೂಬಾಲನ್

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಸಧೃಡ  ರಾಷ್ಟ್ರ ನಿರ್ಮಾಣಕ್ಕಾಗಿ,  ಭಾರತವನ್ನು ಮುನ್ನೆಡಸಲು ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಲು ಮತದಾನ ಅತ್ಯಗತ್ಯವಾಗಿದೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲೋಕಸಭೆ ಚುನಾವಣೆ-2024ರ ನಿಮಿತ್ತ ಮತದಾನ ಜಾಗೃತಿ ಮೂಡಿಸುವ ಸ್ಥಬ್ಧಚಿತ್ರ ವಾಹನಕ್ಕೆ ಶುಕ್ರವಾರ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಮತ ಚಲಾಯಿಸುವುದರ ಮೂಲಕ ದೇಶದ ಸಮಗ್ರತೆ ಹಾಗೂ ಪ್ರಗತಿಗೆ ಮುನ್ನುಡಿ ಬರೆಯಬೇಕು. ನಾವು ಹಾಕುವ ಮತ ಕೇವಲ ಒಬ್ಬ ವ್ಯಕ್ತಿಗೆ ಸೀಮಿತವಾಗಿರುವುದಿಲ್ಲ ಅದು ದೇಶದ ಭವಿಶ್ಯವನ್ನು ನಿರ್ಮಾಣ ಮಾಡುವ, ಅಭಿವೃದ್ಧಿಗೆ ಪೂರಕವಾಗಿರುವ ಮೆಟ್ಟಿಲು ಆಗಿರುತ್ತದೆ ಎಂದು ಹೇಳಿದರು.



ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಮಾತನಾಡಿ, ಮತದಾನದಿಂದ ದೇಶದ ಆಭಿವೃದ್ಧಿ ಸಾಧ್ಯ. ನನ್ನ ಒಂದು ಒಂದು ಮತವೂ ದೇಶದ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂಬುದನ್ನು ಅರಿತುಕೊಂಡು ಮತ ಚಲಾಯಿಸಬೇಕು. ಬಹುದೊಡ್ಡ ಪ್ರಜಾಪ್ರಭುತ್ವದ ಭಾರತಕ್ಕೆ ಮತದಾನ ಎಂಬುದು ಅತ್ಯಂತ ಪ್ರಾಮುಖ್ಯತೆ ಹೊದಿಂರುವ ಕರ್ತವ್ಯವಾಗಿದೆ ಎಂದರು.

ಈಗಾಗಲೇ ಸ್ವೀಪ್ ವತಿಯಿಂದ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರೂ ತಪ್ಪದೆ ಮತ ಚಲಾಯಿಸಿ ಸುಭದ್ರ ದೇಶ ನಿರ್ಮಾಣ ಮಾಡಲು ಸಹಕರಿಸಬೇಕು ಎಂದರು.

ಈ ವೇಳೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಅರ್ಷದ,  ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ,   ಸೇರಿದಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment