Monday, May 27, 2024

28-05-2024 EE DIVASA KANNADA DAILY NEWS PAPER

ಐವರು ಅಧಿಕಾರಿಗಳ ಅಮಾನತು : ಖಡಕ್ ಜಿಲ್ಲಾಧಿಕಾರಿ ಜಾನಕಿ ಆದೇಶ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಜಮಖಂಡಿ: ನಗರದ ಸರಕಾರಿ ರಮಾ ನಿವಾಸ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಪಂಚಾಯತ ಅಧಿಕಾರಿ, ಇಂಜಿಯರಗಳು ಮತ್ತು ಲೋಕೋಪಯೋಗಿ ಇಲಾಖೆಯ ಇಂಜಿನಿಯರ ಸೇರಿದಂತೆ ಐದು ಜನ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆಂದು ಬಾಗಲಕೋಟ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅವರು ಆದೇಶ ಹೊರಡಿಸಿದ್ದಾರೆ. ನೀತಿ ಸಂಹಿತೆ ಮಧ್ಯೆ ಕಚೇರಿ ಕೆಲಸಕ್ಕೆ ಚಕ್ಕರ ಹೊಡೆದು ಎಣ್ಣೆ ಪಾರ್ಟಿಯಲ್ಲಿ ಭಾಗಿಯಾಗಿದ್ದ ಜಿಲ್ಲಾ ಪಂಚಾಯತ ಎಇಇ ಎಸ್.ಎಂ. ನಾಯಕ, ಇಂಜಿನಿಯರ್‌ಗಳಾದ ರಾಮಪ್ಪ ರಾಠೋಡ, ಜಗದೀಶ ನಾಡಗೌಡ, ಗಜಾನನ ಪಾಟೀಲ ಅವರು ಸೇರಿಕೊಂಡು ಗುತ್ತಿಗೆದಾರೊಂದಿಗೆ ಮಧ್ಯೆ ಸೇವನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾಧ್ಯಮಗಳಲ್ಲಿ ವರದಿಯ ಮೇಲೆ ನೋಟಿಸ್ ನೀಡಲಾಗಿದ್ದು, ತಹಶೀಲ್ದಾರ ಸದಾಶಿವ ಮಕ್ಕೋಜಿ ಅವರು ಐವರು ಸರಕಾರಿ ಪ್ರವಾಸಿ ಮಂದಿರ ಪಡೆದುಕೊಂಡಿದಾರೆಂದು ಸಲ್ಲಿಸಿದ ವರದಿ ಆಧರಿಸಿ ಹಾಗೂ ಲೋಕೊಪಯೋಗಿ ಇಲಾಖೆ ಇಂಜಿನಿಯರ ಎಸ್.ಆರ್. ಜಂಬಗಿ ಕೊಠಡಿಯನ್ನು ನೀಡಿದ್ದಾರೆಂದು ಆಧರಿಸಿ ಒಟ್ಟು ಐದು ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿ ವ್ಯವಸ್ಥಿತ ಮತ ಎಣಿಕೆಗೆ ಜಿಲ್ಲಾಧಿಕಾರಿ ಸೂಚನೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ :  ಮತ ಎಣಿಕೆಗೆ ನಿಗಧಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ನಿಯಮಗಳನ್ನು ಪರಿಪಾಲಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.

 ಸೋಮವಾರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ  ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ – 2024ರ ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮತ ಎಣಿಕೆಗೆ ನಿಯೋಜನೆಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗೆ ಸಲಹೆ ಸೂಚನೆಗಳನ್ನು ನೀಡಿದರು. 

 ಮತ ಎಣಿಕೆ ಪ್ರಕ್ರೀಯೆ ಜೂನ್ 4ರಂದು ವಿಜಯಪುರ ಸೈನಿಕ ಶಾಲೆಯಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ  ಪ್ರಾರಂಭವಾಗಲಿದ್ದು, ಮತ ಎಣಿಕೆಗೆ ನಿಯೋಜನೆಗೊಂದಿರುವ ಅಧಿಕಾರಿ ಮತ್ತು ಸಿಬ್ಬಂದಿ  ಉತ್ತಮ ರೀತಿಯಲ್ಲಿ ತರಬೇತಿಯನ್ನು ಪಡೆದುಕೊಂಡು ಮತ ಎಣಿಕೆ ಕಾರ್ಯದಲ್ಲಿ ಲೋಪದೋಷಗಳು ಆಗದಂತೆ ನೋಡಿಕೊಳ್ಳಿ ಎಂದರು.

 ಅಂದು ಬೆಳಗ್ಗೆ 7 ಗಂಟೆಯ ಒಳಗೆ ತಮಗೆ ನಿಗದಿ ಪಡಿಸಿದ ಮತ ಎಣಿಕೆ ಹಾಲ್‌ನಲ್ಲಿ ಹಾಜರಿರಬೇಕು. ಮತ ಎಣಿಕೆ ಹಾಲ್ ಒಳಗಡೆ ಮೊಬೈಲ್ ನ್ನು ನಿಷೇಧಿಸಲಾಗಿದೆ. ಮತ ಎಣಿಕೆ ಹಾಲ್ ಒಳಗಡೆ ಪೊಲೀಸ್, ಸೆಕ್ಯುರಿಟಿ ಸಿಬ್ಬಂದಿಗಳಿಗೆ ಅನಾವಶ್ಯಕವಾದ ಪ್ರವೇಶವಿರುವುದಿಲ್ಲ.  ಅಭ್ಯರ್ಥಿಗಳಲ್ಲದ ಸಚಿವರು, ರಾಜ್ಯ ಸಚಿವರು, ಕೇಂದ್ರ ಸಚಿವರಿಗೆ ಮತ ಎಣಿಕೆ ಹಾಲ್ ಒಳಗಡೆ ಪ್ರವೇಶ ಇರುವುದಿಲ್ಲ ಈ ಕುರಿತು ಮಾಹಿತಿ ತಿಳಿದಿರಲಿ ಎಂದು ಹೇಳಿದರು. 

 ಮತ ಎಣಿಕೆ ಪ್ರಾರಂಬವಾಗುವ ಮೊದಲು ವಿವಿಪ್ಯಾಟ್ ಆನ್ ಮಾಡುವುದು, ರಿಸಲ್ಟ್ ಬಟನ್ ಪ್ರೆಸ್ ಮಾಡುವುದು ಹಾಗೂ ಅದನ್ನು ಕ್ಲೋಸ್ ಮಾಡುವಾಗ ಬಹು ಎಚ್ಚರಿಕೆಯಿಂದ ತಮಗೆ ವಹಿಸಿದ ಮಾರ್ಗಸೂಚಿಗಳಂತೆ ಕಾರ್ಯನಿರ್ವಹಿಸಬೇಕು. ಮತ ಎಣಿಕೆಗೆ  ನಿಯೋಜನೆಗೊಂಡ ಏಜೆಂಟ್‌ರ ಬಳಿ ಶಾಂತವಾಗಿ ವರ್ತಿಸಿ, ಅವರಿಗೆ ಏನಾದರೂ ಸಂಶಯಗಳಿದ್ದರೆ ಅವುಗಳನ್ನು ಪರಿಹರಿಸಿರಿ. ಪ್ರತಿ ಇವಿಎಂ ಗಳಲ್ಲಿ ಎಣಿಕೆಯಾದ ತಕ್ಷಣ ನಿಖರವಾಗಿ ಅಂಕಿ ಅಂಶಗಳನ್ನು ಬರೆದುಕೊಳ್ಳಬೇಕು. ಇಂದಿನ ತರಬೇತಿ ಅವಧಿಯಲ್ಲಿ ಸ್ಪಷ್ಟವಾದ ಮಾಹಿತಿ ಹಾಗೂ ಮಾರ್ಗದರ್ಶನವನ್ನು ಪಡೆದುಕೊಳ್ಳಿ, ಏಕೆಂದರೆ ಮತ ಎಣಿಕೆ ಮೇಲ್ವೀಚಾರಕರ ಜವಾಬ್ದಾರಿ ಬಹು ಮುಖ್ಯವಾಗಿದೆ ಎಂದು ಹೇಳಿದರು.

 ಮಾಸ್ಟರ್ ಟ್ರೇನರ್ ಅಶೋಕ ಲಿಮ್ಕಾರ ಅವರು ತರಬೇತಿಗೆ ಆಗಮಿಸಿದ ಸಿಬ್ಬಂದಿಗಳಿಗೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅನುಸರಿಸಬಹುದಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರ.

 ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಅವರು ತರಬೇತಿಗೆ ಆಗಮಿಸಿದ ಸಿಬ್ಬಂದಿಗೆ ಮತ ಎಣಿಕೆಯ ಪ್ರಕ್ರಿಯೆಗಳ ಬಗ್ಗೆ ಇವಿಎಂ ಮಶೀನ್ ಹಾಗೂ ವಿವಿಪ್ಯಾಟ್ ಗಳ ಕಾರ್ಯ ವೈಖರಿ, ಅದನ್ನು ಬಳಸುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

 ಸ್ವತಃ ವಿವಿಪ್ಯಾಟ್‌ನ ಮಾದರಿ ಮತ ಎಣಿಕೆ ಪ್ರಾತ್ಯಕ್ಷಿಕೆ ಪರೀಕ್ಷೆ ಮಾಡಿದ ಜಿಲ್ಲಾಧಿಕಾರಿ :

ಲೋಕಸಭಾ ಚುನಾವಣೆ – 2024ರ ಮತಎಣಿಕೆ ಪೂರ್ವಸಿದ್ಧತೆ ತರಬೇತಿಯಲ್ಲಿ ಸ್ವತಃ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾದರಿ ವಿವಿಪ್ಯಾಟ್ ನ್ನು ವಿಕ್ಷೀಸಿ ಮತ ಎಣಿಕೆಯ ವಿಧಾನ ಹಾಗೂ ಹಂತಗಳನ್ನು ಪರಿಶೀಲನೆ ಮಾಡಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, May 18, 2024

ನಾವು ಮಾಡುವ ಕೆಲಸ ಸಮಾಜಕ್ಕೆ ದಾರಿ ದೀಪವಾಗಬೇಕು: ನ್ಯಾ. ಸಂತೋಷ ಕುಂದರ್

ವಿಜಯಪುರದಲ್ಲಿ ನ್ಯಾಯಾಧೀಶ ಸಂತೋಷ ಕುಂದರ್ ಅವರನ್ನು ಸನ್ಮಾನಿಸಲಾಯಿತು.

ವಿಜಯಪುರ : ಸೊನ್ನೆಯಿಂದಲೇ ಪರಿಶ್ರಮಿಸಿ ಆರಂಭಿಸಿದ ಕಾರ್ಯ ನೂರಕ್ಕೆ ನೂರು ಯಶಸ್ವಿ ಆಗಲು ಸಾಧ್ಯವಾಗುತ್ತದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನುನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಸಂತೋಷ  ಕುಂದರ್ ಹೇಳಿದರು.

ವಿಜಯಪುರದಿಂದ ವರ್ಗಾವಣೆಯಾಗಿರುವ ನಿಮಿತ್ತ ವಿಜಯಪುರದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ವಿವಿಧ ಕಾಯಕ ನಿರತರು ತಮ್ಮ ಕಾರ್ಯವನ್ನು ಪ್ರಮಾಣಿಕವಾಗಿ ನೂರಕ್ಕೆ ನೂರರಷ್ಟು ಅದರಲ್ಲೇ ತಲ್ಲೀನರಾಗಿ ಶ್ರಮಿಸಿದರೆ ಯಶಸ್ಸು ಹುಡುಕಿಕೊಂಡು ಬರುತ್ತದೆ, ನಾವು ಮಾಡುವ ಕೆಲಸ ಸಮಾಜಕ್ಕೆ ದಾರಿ ದೀಪವಾಗಬೇಕು ಎಂದ ಅವರು ವಿಜಯಪುರದ ಜನರ ಹೃದಯ ವಿಶಾಲತೆ ಮೆಚ್ಚುವಂತಹದ್ದು, ಇಲ್ಲಿಯ ಉತ್ತಮ ಸಂಸ್ಕಾರ ಶ್ಲಾಘನಿಯ ಎಂದರು. ವಿಜಯಪುರ ಜಿಲ್ಲಾ ಕಾನೂನು ಸೇವ ಪ್ರಾಧಿüಕಾರಕ್ಕೆ ಗೌರವ ಧನವಿಲ್ಲದೇ ಉಚಿತವಾಗಿ ಕಾನೂನು ಸೇವೆ ಮಾಡುವ ಜನಸ್ನೇಹಿ ವಕೀಲರನ್ನು ನನ್ನ ಕಾರ್ಯಾವಧಿಯಲ್ಲಿ ನೇಮಿಸಿದ್ದು ಮೊದಲಾದ ಕಾರ್ಯ ಕೈಗೊಂಡಿದ್ದು ಸಂತೋಷ ತಂದಿದೆ, ಜಿಲ್ಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರ ಜನಸ್ನೇಹಿ ಆಗಿ ಕಾರ್ಯ ನಿರ್ವಹಿಸಿದ್ದು ಜನರು ಸಹ ಉತ್ತಮ ಸಹಕಾರ ನೀಡಿದ್ದಾರೆ ಎಂದ ಅವರು ವಿಜಯಪುರ ಜಿಲ್ಲೆಯ ವಕೀಲರ ವಾದ ಮಂಡನೆ ಪ್ರಕರಣ ನಡೆಸುವ ಕಾರ್ಯ ವೈಖರಿ ಸಹ ಉತ್ತಮವಾಗಿತ್ತು ಎಂದರು.

ಹಿರಿಯ ಶ್ರೇಣಿ ನ್ಯಾಯಾಧೀಶೆ ಕೆ.ಉಮಾ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ವಿಜಯಪುರಕ್ಕೆ ಬರುವಾಗ ಇಲ್ಲಿನ ಭಾಷೆ ಮತ್ತು ಜನರ ಕುರಿತು ಸ್ವಲ್ಪ ಆತಂಕ ಮನದಲ್ಲಿತ್ತು ಆದರೆ ಇಲ್ಲಿ ಬಂದು ಮೂರು ವರ್ಷ ಸೇವೆ ಸಲ್ಲಿಸಿದ ನಂತರ ಇಲ್ಲಿನ ಜನರಲ್ಲಿ ನ್ಯಾಯದ ಬಗ್ಗೆ ನ್ಯಾಯಾಲಯದ ಬಗ್ಗೆ ಇರುವ ಗೌರವ ಹೆಮ್ಮೆ ಕಂಡು ನಮಗೆ ಇನ್ನು ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಯಿತು, ವಿಜಯಪುರದಲ್ಲಿ ಕ್ರಿಯಾಶೀಲ ಮತ್ತು ಪರಿಶ್ರಮ ಮಾಡುವ ವಕೀಲರಿದ್ದು, ಅವರ ಸೇವೆ ಜನರು ಪಡೆದುಕೊಂಡು ಶೀಘ್ರ ನ್ಯಾಯ ಪಡೆದುಕೊಳ್ಳುತ್ತಿರುವುದು ಸಂತೋಷಕರ ಸಂಗತಿ ಎಂದರು. ಕಾನೂನಿಗೆ ಯಾರು ಗೌರವಿಸುತ್ತಾರೋ ಅವರಿಗೆ ಕಾನೂನು ಗೌರವಿಸುತ್ತದೆ ಎಂದರು.

ಹಿರಿಯ ನ್ಯಾಂiÀiವಾದಿ ಮಲ್ಲಿಕಾರ್ಜುನಭೃಂಗಿಮಠ ಅವರು ಕಾವ್ಯಭಾಷೆಯಲ್ಲೇ ಮಾತನಾಡಿದರು. ಹಿರಿಯ ನ್ಯಾಯವಾದಿ ಆರ್.ಎಸ್. ನಂದಿ, ನ್ಯಾಯವಾದಿ ಲಾಹೋರಿ, ಬಸವರಾಜ ಮಠ, ಮಸೂತಿ, ಶ್ರೀ ಸಿದ್ದೇಶ್ವರ ಕಾನೂನು ಮಹಾವಿದ್ಯಾಯದ ಪ್ರಾಚಾರ್ಯರಾದ ಸುಷ್ಮಾ ದೇಸಾಯಿ, ಅಶೋಕ ಜೈನಾಪೂರ, ಕೆ.ಎಫ್. ಅಂಕಲಗಿ, ರಾಜು ಬಿದರಿ ಉಪಸ್ಥಿತರಿದ್ದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಹೊಸ ಹೊಸ ಕೌಶಲ್ಯ ಅಭಿವೃದ್ಧಿಗಳ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಸಲಹೆ ಮಾರ್ಗದರ್ಶನ ನೀಡಬೇಕು : ಪೆÇ್ರ. ಸಿ. ಎಂ. ತ್ಯಾಗರಾಜ

ವಿಜಯಪುರದಲ್ಲಿ ಏರ್ಪಡಿಸಲಾಗಿದ್ದ ಕೌಶಲ್ಯಗಳ ಕುರಿತಾದ ಕಾರ್ಯಾಗಾರ ಜರುಗಿತು.

ವಿಜಯಪುರ : ಮಹಾವಿದ್ಯಾಲಯದ ಪ್ರಾಂಶುಪಾಲರುಗಳು ಕಲಿಕೆಯಲ್ಲಿ ತಮ್ಮ ಮಹಾವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉಪಯುಕ್ತವಾಗುವಂತಹ, ಹೊಸ ಹೊಸ ಕೌಶಲ್ಯ ಅಭಿವೃದ್ಧಿಗಳ ಕಾರ್ಯಕ್ರಮಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಸಲಹೆ ಮಾರ್ಗದರ್ಶನ ನೀಡಬೇಕು ಎಂದು ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯ ಕುಲಪತಿ ಪೆÇ್ರ. ಸಿ. ಎಂ. ತ್ಯಾಗರಾಜ ಹೇಳಿದರು.

ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಆವರಣದಲ್ಲಿರುವ ಡಾ.ಫ.ಗು. ಹಳಕಟ್ಟಿ ಇಂಜನೀಯರಿಂಗ್ ಮಹಾವಿದ್ಯಾಲಯದ ಸಭಾಂಗಣದಲ್ಲಿ `ನ್ಯಾವಿಗೇಟಿಂಗ್ ಯೂಥ್ ಟೂವಡ್ರ್ಸ್ ಅಮೃತಕಾಲ : ನಾಲೇಜ್ ಟ್ರಾನ್ಸಫರ್ ಥ್ರೂ ಟೆಕ್ನಾಲಜಿ, ಸ್ಕಿಲ್ ಡೆವಲಪಮೆಂಟ್' ಎಂಬ ವಿಷಯಾಧಾರಿತ ತಾಂತ್ರಿಕ ವಿಚಾರಗೋಷ್ಠಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕಲಿಕೆ ನಿರಂತರವಾದ ಪ್ರಕ್ರಿಯೆ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಸಹ ಅಗತ್ಯವಾಗಿದೆ, ಹೀಗಾಗಿ ಶೈಕ್ಷಣಿಕ ವಲಯದಲ್ಲಿ ನಿತ್ಯ ನೂತನ ಸಂಶೋಧನೆಗಳನ್ನು, ಹೊಸ ಪ್ರಯೋಗಗಳನ್ನು ಪ್ರಾಚಾರ್ಯರು, ಶಿಕ್ಷಕರು ಅಧ್ಯಯಿಸಬೇಕು ಎಂದು ಕರೆ ನೀಡಿದರು.

ವಿಶ್ವವಿದ್ಯಾಲಯದ ಕುಲಸಚಿವೆ ರಾಜಶ್ರೀ ಜೈನಾಪೂರ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಹೆಚ್ಚನ ಅಂಕ ಗಳಿಸುವದಕ್ಕಿಂತಲೂ ತಮ್ಮ ಜೀವನಕ್ಕೆ ಉಪಯುಕ್ತವಾಗುವ ಕೌಶಲಗಳನ್ನು ಕಲಿಯಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

ಮೊದಲನೇ ಗೋಷ್ಠಿಯನ್ನು ಶ್ರೀನಿವಾಸ ಪಿ, ಅವರು ಜ್ಞಾನ ಪ್ರಸಾರದಲ್ಲಿ ಎ.ಐ. ತಂತ್ರಜ್ಞಾನದ ಪಾತ್ರ ಕುರಿತಾಗಿ, ಎರಡನೇಯ ಗೋಷ್ಠಿಯಲ್ಲಿ ನವದೆಹಲಿಯ ಐಐಟಿಯ ಡಿ.ಎಸ್. ಮಂಜುನಾಥ `ಕೈಗಾರಿಕಾ ವಲಯದ ಆವಿಷ್ಕಾರಗಳ ಕುರಿತಾಗಿ ಹಾಗೂ ಉದ್ಯಮಿ ಸೂರಜ ನಾಡಿಗ ಅವರು ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಬಗೆ ಕುರಿತಾಗಿ ಉಪನ್ಯಾಸ ಮಂಡಿಸಿದರು.

ಉಪ ಕುಲಸಚಿವ ಡಾ.ಡಿ.ಕೆ. ಕಾಂಬಳೆ, ಬಿಎಲ್‍ಡಿಇ ಸಂಸ್ಥೆಯ ಪ್ರಾಂಶುಪಾಲ ವಿ. ಜಿ ಸಂಗಮ, ಪೆÇ್ರ.ಎಸ್ ಎಂ. ಗಂಗಾಧರಯ್ಯ, ಡಾ.ದಯಾನಂದ ಸಾಹುಕಾರ, ಡಾ.ಪೂರ್ಣಿಮಾ ದ್ಯಾಮಣ್ಣವರ, ಡಾ.ರೂಪಾ ಇಂಗಳೆ, ಕುಮಾರಿ.ವೈಷÀ್ಣವಿ ನಾಗರಾಳ, ಶ್ರೀರಕ್ಷಾ ಕುಲಕರ್ಣಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, May 17, 2024

18-05-2024 EE DIVASA KANNADA DAILY NEWS PAPER

ಆಹಾರದ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ: ಪ್ರೊ. ಮೇಟಿ

ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ಅಧ್ಯಯನ ವಿಭಾಗದಲ್ಲಿ ಶುಕ್ರವಾರ ಆಹಾರ ಮತ್ತು ಪೌಷ್ಟಿಕತೆ ಕುರಿತು ಉಪನ್ಯಾಸ ಹಮ್ಮಿಕೊಳ್ಳಲಾಯಿತು.

ವಿಜಯಪುರ: ಆಹಾರ ಮತ್ತು ಪೌಷ್ಟಿಕತೆಯ ಕುರಿತು ಸಮುದಾಯದ ಜನರಲ್ಲಿ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಅತಿ ಮಹತ್ವದ್ದು ಎಂದು ಮಹಿಳಾ ವಿವಿಯ ಆಹಾರ ಮತ್ತು ಪೌಷ್ಟಿಕತೆ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ರೇಣುಕಾ ಮೇಟಿ ಹೇಳಿದರು.

ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ಅಧ್ಯಯನ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡ ಆಹಾರ ಮತ್ತು ಪೌಷ್ಟಿಕತೆ ಕುರಿತು ಉಪನ್ಯಾಸದಲ್ಲಿ ಅವರು ಮಾತನಾಡಿದರು.

ಶಿಕ್ಷಕರು ಕೇವಲ ಬೋಧನೆಗೆ ಮಾತ್ರ ಸೀಮಿತರಾಗಿಲ್ಲ ಅವರು ತಮ್ಮ ವೃತ್ತಿಯ ಜೊತೆಗೆ ಸಮುದಾಯಕ್ಕೆ ಆರೋಗ್ಯ, ಆಹಾರ ಹಾಗೂ ಸ್ವಾಸ್ಥ್ಯದ ಕುರಿತು ಅರಿವು ಮೂಡಿಸಬೇಕು ಎಂದರು. 

ಗ್ರಾಮೀಣ ಜನರಲ್ಲಿ ಆಹಾರ ಮತ್ತು ಪೌಷ್ಟಿಕತೆಯ ಅರಿವಿನ ಕೊರತೆಯಿದೆ ಅದನ್ನು ಸರಿ ಪಡಿಸುವವರೆಗೂ ಸಮುದಾಯದ ಸುಸ್ಥಿರ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಶಾಲಾ ಮಟ್ಟದ ಶಿಕ್ಷಣದಿಂದಲೇ ಇದರ ಕುರಿತು ಚಟುವಟಿಕೆಗಳನ್ನು ರೂಪಿಸಬೇಕಾಗಿದೆ. ಇದರಿಂದ ಉತ್ತಮ ಆರೋಗ್ಯ ಹೊಂದುವ ಮೂಲಕ ಮಕ್ಕಳ ಸಮಾಜಕ್ಕೆ ಉಪಯೋಗಿಯಾಗಬಲ್ಲರು ಎಂದರು.

ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ವಿಷ್ಣು ಶಿಂದೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತೀಯರಲ್ಲಿ ಆರೋಗ್ಯದ ಅರಿವಿನ ಕೊರತೆಯಿಂದ ಗ್ರಾಮೀಣ ವಲಯದಲ್ಲಿ ಸಮಸ್ಯೆಗಳು ಹೆಚ್ಚಾಗಿವೆ. ಮನೆ ಮನೆಗೆ ತೆರಳಿ ಸಮತೋಲನ ಆಹಾರದ ಮಾಹಿತಿ ನೀಡುವಲ್ಲಿ ಪ್ರತಿಯೊಬ್ಬರು ಸಹಭಾಗಿಯಾಗಬೇಕು ಅಂದಾಗ ಮಾಥ್ರ ಆರೋಗ್ಯಯುತ ಸಮುದಾಯ ಕಟ್ಟಲು ಸಾಧ್ಯ ಎಂದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಲಾಯಿತು. ವಿದ್ಯಾರ್ಥಿನಿಯರಾದ ವೀಣಾ ಮುಧೋಳ ನಿರೂಪಿಸಿದರು. ದುಂಡವ್ವ ಪರಿಚಯಿಸಿದರು, ಲಕ್ಷ್ಮೀ ವಂದಿಸಿದರು.

ವಿವಿಧ ವಿಭಾಗಗಳ ಪ್ರಾಧ್ಯಾಪಕ ಪ್ರೊ. ಯು.ಕೆ.ಕುಲಕರ್ಣಿ, ಪ್ರೊ.ಅಶೋಕ ಕುಮಾರ ಸುರಪುರ, ಡಾ. ಪ್ರಕಾಶ ಸಣ್ಣಕ್ಕನವರ, ಡಾ. ಭಾರತಿ ಗಾಣಿಗೇರ, ಡಾ. ರೂಪಾ ನಾಯ್ಕೋಡಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ವಿದ್ಯಾರ್ಥಿಗಳ ವಿವಿಧ ಸಮಸ್ಯೆ ನಿವಾರಿಸುವಂತೆ ಮನವಿ

ವಿಜಯಪುರದಲ್ಲಿ ಕರವೇ (ಸ್ವಾಭಿಮಾನ ಬಣ) ವತಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ವಿಜಯಪುರ: ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪದವಿ ಪ್ರವೇಶಾತಿ ಸಂದರ್ಭದಲ್ಲಿ ಪ್ರೀಶಿಫ್ ಕಾರ್ಡ್ ಅನ್ವಯ ಪ್ರವೇಶ ನೀಡುವುದು ಸೇರಿದಂತೆ ವಿವಿಧ ವಿದ್ಯಾರ್ಥಿಗಳ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಕರವೇ (ಸ್ವಾಭಿಮಾನ ಬಣ) ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಜಗದೇವ ಸೂರ್ಯವಂಶಿ ಮಾತನಾಡಿ, ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಪ್ರವೇಶ ಪಡೆದ ನಂತರ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡುತ್ತದೆ. ಈ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಆರ್ಥಿಕವಾಗಿ ದುರ್ಬಲವಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ, ಭರಿಸಲು ಆಗದಿರುವ ಕಾರಣ ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರವೇಶ ನಡೆಯುವ ಸಂದರ್ಭದಲ್ಲಿ ಪ್ರವೇಶ ಶುಲ್ಕ ಪಡೆಯದೆ ಫ್ರೀಶಿಫ್ ಕಾರ್ಡ್ ಮೂಲಕ ಪ್ರವೇಶ ಪಡೆಯುವ ಸೌಲಭ್ಯವನ್ನೂ ಉಲ್ಲೇಖಿತ ಸರ್ಕಾರಿ ಆದೇಶದಲ್ಲಿ ತಿಳಿಸಿರುತ್ತದೆ. ಆದರೆ ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಉಲ್ಲೇಖಿತ ಸರ್ಕಾರಿ ಆದೇಶವನ್ನು ಪಾಲಿಸುತ್ತಿಲ್ಲ ಎಂದು ದೂರಿದರು.

ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಈ ಆದೇಶವನ್ನು ಕಾರ್ಯಗತಗೊಳಿಸಲು ವಿಫಲವಾಗಿರುತ್ತವೆ. ಈಗಾಗಲೇ ವಿದ್ಯಾರ್ಥಿಗಳು ಈ ಯೋಜನೆಯಡಿಯಲ್ಲಿ ಪ್ರವೇಶ ಪಡೆಯಲು ಅರ್ಜಿಯನ್ನು ಸಲ್ಲಿಸಿದಲ್ಲಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿಯನ್ನೂ ಕೊಟ್ಟು ಅವರಿಂದ ಪ್ರವೇಶ ಶುಲ್ಕ, ಮತ್ತು ಪರೀಕ್ಷಾ ಶುಲ್ಕವನ್ನೂ ಪಡೆಯುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮತ್ತು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂಬ ಗಂಭೀರವಾದ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಮುಂದಿರಿಸಿದರು, ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರ ಮತ್ತು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪದವಿ ಪೂರ್ವ ಇಲಾಖೆ, ವಿಜಯಪುರ ಇವರ ಸಮ್ಮುಖದಲ್ಲಿ ಸಭೆಯನ್ನು ಕರೆದು ಪೂರ್ಣ ಪ್ರಮಾಣದಲ್ಲಿ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಸೂಚನೆಯನ್ನು ನೀಡಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

ಲಕ್ಷ್ಮಣ ಕಂಬಾಗಿ, ಗಿರೀಶ ಕಲಘಟಗಿ, ಡಾ.ಎಂ.ಆರ್. ಗುರಿಕಾರ, ಲಿಂಗರಾಜ ಬಿದರಕುಂದಿ, ಸಂಕೇತ ಪಟ್ಟಣದ, ತಿಮ್ಮನಗೌಡ ಪಾಟೀಲ, ಪ್ರಭು ಮಂಕಣಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, May 7, 2024

"ನಿವರಗಿಯಲ್ಲಿ ಶಾಂತಿಯುತವಾಗಿ ನಡೆದ ಮತದಾನ"

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಚಡಚಣ: ತಾಲೂಕಿನ ನಿವರಗಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೇ ಲೋಕಸಭೆ ಚುನಾವಣೆ ಮಂಗಳವಾರ ಶಾಂತಿಯುತವಾಗಿ ಮತದಾನ ನಡೆಯಿತು.

ಮಂಗಳವಾರ ಬೆಳಗ್ಗೆ 7ಕ್ಕೆ ಶುರುವಾದ ಮತದಾನ ಆರಂಭದಲ್ಲಿ ಏರಿಕೆ ಕಂಡಿತ್ತು. ಬಳಿಕ ಮಧ್ನಾಹ್ನದ ಹೊತ್ತಿಗೆ   ಮಂದಗತಿಯಲ್ಲಿತ್ತು. ಇನ್ನೂ ಬಹುತೇಕ ಎಲ್ಲ ಮತಗಟ್ಟೆಗಳಲ್ಲೂ ಇದೇ ವಾತಾವರಣ ಇತ್ತು. ಸುಡು ಬಿಸಿಲನ್ನು ಲೆಕ್ಕಿಸದೆ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಸಾಯಂಕಾಲ ಹೊತ್ತಿಗೆ ಮತದಾನ ಏರಿಕೆ ಕಂಡಿತ್ತು.

ಮೊದಲ ಬಾರಿ ಮತ ಚಲಾಯಿಸಲು ಬಂದಿದ್ದ ಯುವ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ತೆರಳಿ ತಮ್ಮ ಮತದಾನದ ಹಕ್ಕನ್ನು  ಚಲಾಯಿಸಿದರು‌. ಸಾಮಾಜಿಕ ಜಾಲತಾಣಗಳಲ್ಲಿ ಗುರುತಿನ ಭಾವಚಿತ್ರದ ಬೆರಳಿನ ಶಾಯಿಯನ್ನು ತೋರಿಸುವ ಸೆಲ್ಫಿ ಚಿತ್ರಗಳನ್ನು ಹಂಚಿಕೊಂಡರು.

ಮತಗಟ್ಟೆಯಲ್ಲಿ ಮತದಾನಕ್ಕಾಗಿ ಬಂದ ಮತದಾರರಿಗೆ, ತಣ್ಣನೆ ಕುಡಿವ ನೀರು, ಶೌಚಾಲಯ, ಆರೋಗ್ಯ ಚಿಕಿತ್ಸೆ ಸೇರಿದಂತೆ ಹಲವು ರೀತಿಯ ವ್ಯವಸ್ಥೆಗಳು ಉಚಿತವಾಗಿ ಕಲ್ಪಿಸಿದ್ದು ಮತದಾರರನ್ನು ಆಕರ್ಷಿಸಿದವು.

ಮತಗಟ್ಟೆಯಲ್ಲಿದ್ದ ಸಿಬ್ಬಂದಿಗೆ ನೀರು, ಊಟ, ಶೌಚಾಲಯ, ಪೊಲೀಸ್‌ ಭದ್ರತೆ, ವಿದ್ಯುತ್‌ ಸೇರಿದಂತೆ ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Sunday, May 5, 2024

ಮುಕ್ತ - ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ : ಮೇ. 7 ರಂದು ಮತದಾನ* , 19,46,090 ಮತದಾರರು - 2086 ಮತಗಟ್ಟೆಗಳ ಸ್ಥಾಪನೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

 ವಿಜಯಪುರ : ಮುಕ್ತ ನ್ಯಾಯಸಮ್ಮತ ಹಾಗೂ ಸುಗಮ ಚುನಾವಣೆಗೆ ಜಿಲ್ಲಾಡಳಿತದಿಂದ,  ಮೇ.07ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ನಡೆಯಲಿರುವ ಮತದಾನಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19,46,090 ಮತದಾರರಿದ್ದು, ಜಿಲ್ಲೆಯಾದ್ಯಂತ ಒಟ್ಟು 2086 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಇದೇ ಮೇ.7 ರಂದು ನಡೆಯುವ ಮತದಾನ ಹಾಗೂ ಜೂನ್. 4 ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತದಾರರ ವಿವರ : ಜಿಲ್ಲೆಯಲ್ಲಿ 9,87,974 ಗಂಡು, 9,57,906 ಹೆಣ್ಣು ಹಾಗೂ 210 ಇತರೆ ಮತದಾರರು ಸೇರಿದಂತೆ ಒಟ್ಟು 19,46,090 ಮತದಾರರಿದ್ದಾರೆ. 85 ವರ್ಷಕ್ಕಿಂತ ಮೇಲ್ಪಟ್ಟು ಒಟ್ಟು 2357 ಮತದಾರರ ಪೈಕಿ 2170 ಮತದಾರರು ತಮ್ಮ ಮನೆಯಿಂದ ಮತ ಚಲಾಯಿಸಿದ್ದು, ಶೇ.92.06 ರಷ್ಟು ಮತದಾನವಾಗಿದೆ. ಅದರಂತೆ ಶೇ.40ಕ್ಕಿಂತ ಹೆಚ್ಚಿನ ದಿವ್ಯಾಂಗವಿರುವ (ಪಿಡಬ್ಲೂಡಿ) ಒಟ್ಟು 886 ಮತದಾರರ ಪೈಕಿ 854 ಮತದಾರರು ಮತ ಚಲಾಯಿಸುವ ಮೂಲಕ ಶೇ.96.38 ರಷ್ಟು ಮತದಾನವಾಗಿದೆ. 

ಮತಗಟ್ಟೆಗಳ ವಿವರ : ವಿಜಯಪುರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಒಟ್ಟು 2086 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ ಪ್ರತಿ ವಿಧಾನಸಭಾವಾರು 05 ಸಖಿ ಮತಗಟ್ಟೆ, 08 ದಿವ್ಯಾಂಗ ಮತಗಟ್ಟೆ, 08 ಯುವ ಮತಗಟ್ಟೆ, 08 ಧ್ಯೇಯ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಾದ್ಯಂತ 171 ಸೂಕ್ಷ್ಮ ಹಾಗೂ 41 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.  ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಮೈಕ್ರೋ ಆಬ್ಜರ್ವರ್ ನೇಮಿಸಿದ್ದು, ವೆಬ್‍ಕಾಸ್ಟಿಂಗ್ ಮೂಲಕ ನಿಗಾ ಇಡಲಾಗುತ್ತಿದೆ. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳಾದ ರ್ಯಾಂಪ್ ವ್ಯವಸ್ಥೆ, ಕುಡಿಯುವ ನೀರಿನ, , ವಿದ್ಯುತ್ ವ್ಯವಸ್ಥೆ, ಪೀಠೋಪಕರಣ, ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ, ವಿಶ್ರಾಂತಿ ಕೊಠಡಿ, ಆಸನ ವ್ಯವಸ್ಥೆ, ತುರ್ತು ಸಂದರ್ಭದಲ್ಲಿ ಅಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. 

ವಿದ್ಯುನ್ಮಾನ ಮತಯಂತ್ರಗಳ ವಿವರ : ಚುನಾವಣೆಗಾಗಿ 2617 ಬಿ.ಯು, 2616 ಸಿ.ಯು, 2773 ವಿವಿಪ್ಯಾಟ್‍ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಚುನಾವಣೆ ನಂತರ ಮತ ಯಂತ್ರಗಳನ್ನು ಭದ್ರತೆಯಲ್ಲಿ ಇರಿಸಲು  ವಿಧಾನಸಭಾವಾರು ಮತ್ರಯಂತ್ರಗಳನ್ನು ಇರಿಸಲು ಸೈನಿಕಶಾಲೆಯಲ್ಲಿ ಭದ್ರತಾ ಕೊಠಡಿಗಳನ್ನು ಸ್ಥಾಪಿಸಲಾಗಿದ್ದು,  ವಿಧಾನಸಭಾವಾರು ವಿವರದಂತೆ ಮುದ್ದೇಬಿಹಾಳ ಹಾಗೂ ದೇವರಹಿಪ್ಪರಗಿ ವಿಧಾನಸಭಾ ಮತಕ್ಷೇತ್ರದ ಮತಯಂತ್ರಗಳನ್ನು ಸೈನಿಕ ಶಾಲೆಯ ಒಡೆಯರ ಸದನದಲ್ಲಿ, ಬಸವನಬಾಗೇವಾಡಿ ಹಾಗೂ ಬಬಲೇಶ್ವರ ಮತಕ್ಷೇತ್ರದ ಮತಯಂತ್ರಗಳನ್ನು ಆದಿಲ್‍ಶಾಹಿ ಸದನದಲ್ಲಿ, ವಿಜಯಪುರ ನಗರ ಹಾಗೂ ನಾಗಠಾಣ ಮತಕ್ಷೇತ್ರದ ಮತಯಂತ್ರಗಳನ್ನು ಹೊಯ್ಸಳ ಸದನದಲ್ಲಿ, ಇಂಡಿ ಹಾಗೂ ಸಿಂದಗಿ ಮತಕ್ಷೇತ್ರದ ಮತಯಂತ್ರಗಳನ್ನು ವಿಜಯಪುರ ನಗರ ಸದನದಲ್ಲಿ ವ್ಯವಸ್ಥೆ ಮಾಡಲಾಗಿದೆ. 

ಚುನಾವಣಾ ಸಿಬ್ಬಂದಿಗಳ ವಿವರ :  ಚುನಾವಣಾ ಕರ್ತವ್ಯಕ್ಕೆ 2527 ಪಿಆರ್‍ಓ, 2527 ಎಪಿಆರ್‍ಓ, 5054 ಪಿಓ, 184 ಮೈಕ್ರೋ ಆಬ್ಜರ್ವರ್‍ಗಳನ್ನು ನಿಯೋಜಿಸಲಾಗಿದೆ. ನಿಯೋಜಿತ ಸಿಬ್ಬಂದಿಗಳಿಗೆ ಪ್ರತಿ ಮತಗಟ್ಟೆಗಳಿಗೆ  ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರನ್ನು ಅವಶ್ಯಕ ಔಷಧೋಪಚಾರದೊಂದಿಗೆ  ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

 ಚುನಾವಣೆಗೆ ನಿಯೋಜಿಸಿರುವ ಸಿಬ್ಬಂದಿಗಳಿಗೆ ಆಯಾ ಮತಗಟ್ಟೆಗಳಲ್ಲಿ ಹಾಗೂ ಆಯಾ ಮಸ್ಟರಿಂಗ್ ಡಿ ಮಸ್ಟರಿಂಗ್ ಕೇಂದ್ರಗಳಲ್ಲಿ ಉಟೋಪಚಾರ ವ್ಯವಸ್ಥೆ ಮಾಡಲಾಗಿದೆ. ನಿಯೋಜಿತ ಸಿಬ್ಬಂದಿಗಳಿಗೆ 241 ಬಸ್ಸು, 124 ಕ್ರೂಸರ್ ಸೇರಿದಂತೆ ಒಟ್ಟು 365 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ನಿಯೋಜಿತ  ಮತಗಟ್ಟೆ ಸಿಬ್ಬಂದಿಗಳ ಮಕ್ಕಳ ಪಾಲನೆ-ಪೋಷಣೆಗಾಗಿ ದಿನಾಂಕ : 06-05-2024 ಮತ್ತು 07-05-2024 ರಂದು ಮಕ್ಕಳನ್ನು ನೋಡಿಕೊಳ್ಳಲು ಮಸ್ಟರಿಂಗ್ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೇಲ್ವಿಚಾರಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.  

ಮತದಾರ ಸೌಲಭ್ಯ ಕೇಂದ್ರ- ಅಂಚೆ ಮತದಾನ ವಿವರ : 

ಜಿಲ್ಲೆಯಲ್ಲಿ ಅಗತ್ಯ ಸೇವೆಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದ ಮತದಾರರಿರುವ ಬೇರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ  ಅಧಿಕಾರಿ-ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಸ್ಥಾಪಿಸಲಾದ ಮತದಾರರ ಸೌಲಭ್ಯ ಕೇಂದ್ರಗಳಲ್ಲಿ ಹಾಗೂ ಅಂಚೆ ಮತದಾನ ಕೇಂದ್ರಗಳ (ಎಫ್‍ಸಿ &ಪಿವಿಸಿ) ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು,  ಸದರಿ ಸೌಲಭ್ಯ ಕೇಂದ್ರಗಳಲ್ಲಿ ಅಗತ್ಯ ಸೇವೆಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 1969 ಮತದಾರರ ಪೈಕಿ 654 ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿ ಈ ಜಿಲ್ಲೆಯ ಮತದಾರರು ಹಾಗೂ ಈ ಜಿಲ್ಲೆಯ ಮತದಾರರು ಬೇರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರ ಮತದಾರರು ಒಟ್ಟು 1382ರ ಪೈಕಿ 743 ಮತದಾರರು ಮತ ಚಲಾಯಿಸಿದ್ದಾರೆ. 

ಮಾದರಿ ನೀತಿ ಸಂಹಿತೆ :  ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಣೆ ಪ್ರಕರಣಗಳ ಮೇಲೆ  ನಿಗಾ ಇಡಲು ರಚಿಸಲಾದ ಪೊಲೀಸ್-ಕ್ಷೀಪ್ರ ಪಡೆಗಳು (ಎಫ್‍ಎಸ್‍ಟಿ) ಸ್ಥಿರ ಕಣ್ಗಾವಲು ತಂಡಗಳು (ಎಸ್‍ಎಸ್‍ಟಿ), ಆದಾಯ ತೆರಿಗೆ ಸೇರಿದಂತೆ ಒಟ್ಟು 378.51 ಲಕ್ಷ ರೂ. ನಗದು, 21.10ಲಕ್ಷ ರೂ.ಮೌಲ್ಯದ 5210.798 ಲೀ.  ಮದ್ಯ, 4.05 ಲಕ್ಷ ರೂ. ಮೌಲ್ಯದ 44.832 ಕಿ.ಗ್ರಾಂ. ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಕುಂದು ಕೊರತೆ ಪರಿಹಾರ :  ಮತದಾರರ ಸಹಾಯವಾಣಿಯಿಂದ ಸ್ವೀಕೃತವಾದ ಒಟ್ಟು 290 ಕರೆಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ ಎನ್.ಜಿ.ಆರ್.ಎಸ್. ಪೋರ್ಟಲ್‍ನಲ್ಲಿ 281 ದೂರುಗಳನ್ನು ದಾಖಲಿಸಲಾಗಿದ್ದು, ಎಲ್ಲ 281 ದೂರುಗಳನ್ನು ವಿಲೇವಾರಿ ಮಾಡಲಾಗಿದೆ.  ನೀತಿ ಸಂಹಿತೆ ಉಲ್ಲಂಘನೆಯ 8 ದೂರುಗಳಿಗೆ ಸಂಬಂಧಿಸಿದಂತೆ 3 ದೂರುಗಳು ವಿಚಾರಣಾ ಹಂತದಲ್ಲಿದ್ದು, ಅಧಿಕಾರಿ-ನೌಕರರ ವಿರುದ್ದ ಸ್ವೀಕೃತವಾದ 38 ದೂರುಗಳ ಪೈಕಿ 36 ದೂರುಗಳನ್ನು ನಿಖಾಲಿ ಮಾಡಲಾಗಿದೆ. ಬಾಕಿ 2 ದೂರುಗಳು ವಿಚಾರಣೆಯಲ್ಲಿವೆ. ಇತರೆ ಚುನಾವಣೆಗೆ ಸಂಬಂಧಿಸಿದ 7 ದೂರುಗಳ ಪೈಕಿ 4 ದೂರುಗಳು ನಿಖಾಲಿಯಾಗಿದ್ದು, 3 ದೂರುಗಳು ವಿಚಾರಣೆ ಹಂತದಲ್ಲಿವೆ. ಸುವಿಧಾ ಅಡಿಯಲ್ಲಿ 250 ಅರ್ಜಿಗಳ ಪೈಕಿ 215 ಅರ್ಜಿ ಅಂಗೀಕರಿಸಲಾಗಿದೆ. 19 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 3 ಅರ್ಜಿಗಳು ಬಾಕಿ ಇವೆ, 13 ಅರ್ಜಿಗಳನ್ನು ರದ್ದುಗೊಳಿಸಲಾಗಿದೆ. 

ಕಾನೂನು ಸುವ್ಯವಸ್ಥೆ : ಜಿಲ್ಲೆಯಲ್ಲಿ ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಎಲ್ಲ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು 02 ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, 8 ಡಿಎಸ್‍ಪಿ, 26 ಸಿಪಿಐ, 95 ಪಿಎಸ್‍ಐ, 121 ಎಎಸ್‍ಐ, 704 ಹೆಚ್.ಸಿ., 1187 ಪಿಸಿ, 945 ಎಚ್‍ಜಿ, 11 ಎಫ್‍ಜಿ ಸೇರಿದಂತೆ 3099 ಜನರು ಸೇರಿದಂತೆ 55 ಸಿಎಪಿಎಫ್ ಹಾಗೂ 5 ಐಆರ್‍ಬಿ-ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಲೈಸನ್ಸ್ ಹೊಂದಿರುವ ಒಟ್ಟು 2363 ಆಯುಧಗಳ ಪೈಕಿ 2274 ಜಮಾ ಮಾಡಲಾಗಿದ್ದು, 54 ಆಯುಧಗಳನ್ನು ವಿನಾಯಿತಿ ನೀಡಲಾಗಿದೆ. 

ನಿಷೇಧಾಜ್ಞೆ : ಶೂನ್ಯ ಅವಧಿ (ಕೊನೆಯ 48 ಗಂಟೆಗಳು)ಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದು ನಿಷೇಧಿಸಲಾಗಿದೆ. 5ಕ್ಕಂತ ಹೆಚ್ಚಿನ ಜನರು ತಿರುಗಾಡುವುದನ್ನು ನಿಷೇಧಿಸಿದೆ. ಮದ್ಯಪಾನ ಮಾರಾಟ ನಿಷೇಧಿಸಿದೆ. ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಕ್ಷೇತ್ರದ ಮತದಾರರಲ್ಲದ ರಾಜಕೀಯ ವ್ಯಕ್ತಿಗಳು ಕ್ಷೇತ್ರವನ್ನು ತೊರೆಯುವಂತೆ ತಿಳಿಸಿದೆ. 

ಪ್ರಜಾಸತ್ತಾತ್ಮಕ ವಿಧಾನದ ಮೂಲಕ ಸುಭದ್ರವಾದ ಸರ್ಕಾರವನ್ನು ರಚಿಸುವ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಮತವು ಅಮೂಲ್ಯವಾಗಿರುವುದರಿಂದ  ಜಿಲ್ಲೆಯ ಅರ್ಹ ಎಲ್ಲ ಮತದಾರರು ಮತದಾನದ ಹಬ್ಬದಲ್ಲಿ ಭಾಗವಹಿಸಿ ತಪ್ಪದೇ ಮತ ಚಲಾಯಿಸುಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, May 3, 2024

04-05-2024 EE DIVASA KANNADA DAILY NEWS PAPER

03-05-2024 EE DIVASA KANNADA DAILY NEWS PAPER

ಮೇ 4 ರಂದು ಟಾಂಗಾ ಜಾಥಾ ಅಭಿಯಾನ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ರ ಮತದಾನ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮೇ 4 ರಂದು ಟಾಂಗಾ ಜಾಥಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. 

ನಗರದ ಸೆಟ್ ಲೈಟ್ ಬಸ್ ನಿಲ್ಲಾಣದಲ್ಲಿ ( ಹೊಸ ಬಸ್ ನಿಲ್ದಾಣ) ಸಂಜೆ 4 ಗಂಟೆಗೆ ಚಾಲನೆಗೊಳ್ಳುವ ಜಾಥಾ ಅಭಿಯಾನವು ಗ್ಯಾಂಗ್ ಬಾವಡಿ, ಮಹಾತ್ಮಾ ಗಾಂಧಿ ಶಾಲೆ, ಮಾನಸ ರೆಸಿಡೆನ್ಸಿ, ದರ್ಗಾ ಕ್ರಾಸ್, ಚಾಲುಕ್ಯ ನಗರ, ಉಮದಿ ಸೂಪರ್ ಬಜಾರ್ ಎದುರಿನ ರಸ್ತೆ, ಮಹೇಶ್ವರಿ ಭವನ ರಸ್ತೆ, ರೀಲೈನ್ಸ್ ಮಾಲ್ ರಸ್ತೆ, ಮಾರವಾಡಿ ಕಾಲೋನಿ, ಸಿದ್ದೇಶ್ವರ ದೇವಸ್ಥಾನ, ಗಾಂಧಿ ವೃತ್ತ ಮಾರ್ಗವಾಗಿ  ಸಂಚರಿಸಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತವನ್ನು ತಲುಪಲಿದೆ.

 ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಜ್ಞಾವಿಧಿ ಭೋಧಿಸುವುದರೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, May 2, 2024

ಆಕಾಶವಾಣಿ ಸುದ್ದಿ ಸೇವೆಗಳ ವಿಭಾಗದ ನೂತನ ಮಹಾನಿರ್ದೇಶಕರಾಗಿ ಭಾರತೀಯ ಸುದ್ದಿ ಸೇವೆಯ ಹಿರಿಯ ಅಧಿಕಾರಿ ಮೌಶೂಮಿ ಚಕ್ರವರ್ತಿ ಸ್ವೀಕಾರ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಭಾರತೀಯ ಸುದ್ದಿ ಸೇವೆಯ ಹಿರಿಯ ಅಧಿಕಾರಿ ಮೌಶೂಮಿ ಚಕ್ರವರ್ತಿ ಆಕಾಶವಾಣಿ ಸುದ್ದಿ ಸೇವೆಗಳ ವಿಭಾಗದ ನೂತನ ಮಹಾನಿರ್ದೇಶಕರಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

1991ರ ಐಐಎಸ್ ತಂಡದ ಅಧಿಕಾರಿಯಾಗಿರುವ ಅವರು ಮಾಧ್ಯಮ ಹಾಗೂ ಪ್ರಸಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದು, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಪಿಐಬಿ ಮತ್ತು ಕೇಂದ್ರೀಯ ಸಂವಹನ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ತಮ್ಮ 3 ದಶಕಗಳ ಸೇವಾನುಭವದಲ್ಲಿ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲೂ ಸಾಂದರ್ಭಿಕವಾಗಿ ಸೇವೆ ಸಲ್ಲಿಸಿದ್ದರು. ಆಕಾಶವಾಣಿ ಮಹಾ ನಿರ್ದೇಶಕರಾಗಿದ್ದ ವಸುಧಾ ಗುಪ್ತಾ ಅವರ ನಿವೃತ್ತಿ ಬಳಿಕ ಆ ಸ್ಥಾನಕ್ಕೆ ಮೌಶೂಮಿ ಚಕ್ರವರ್ತಿ ನೇಮಕಗೊಂಡಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, May 1, 2024

02-05-2024 EE DIVASA KANNADA DAILY NEWS PAPER

ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚನೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು. 

ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚುನಾವಣಾ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಈಗಾಗಲೇ ಜಿಲ್ಲೆಯಾದ್ಯಂತ ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇನ್ನಷ್ಟು ಪರಿಣಾಮಕಾರಿಯಾಗಿ ವಿಭಿನ್ನವಾಗಿ ಹಾಗೂ ವಿಶಿಷ್ಟವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಜಾಗೃತಿ ಕಾರ್ಯವನ್ನು ಗಂಭೀರವಾಗಿ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದರು.

ಮತದಾರ ಜಾಗೃತಿ ಕಾರ್ಯವನ್ನು ಚಾಲೇಂಜ್ ಆಗಿ ಸ್ವೀಕರಿಸಿ, ಮತ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಂಡಿರುವ ಕಾರ್ಯಗಳ ಫಲಿತಾಂಶ ಮತದಾನ ದಿನದಂದು ತಿಳಿಯಲಿದೆ. ನೀವು ಮಾಡಿದ ಪ್ರಯತ್ನಕ್ಕೆ ಮತದಾನ ದಿನದಂದು ಫಲ ಸಿಗಲಿದೆ. ಚುನಾವಣಾ ಆಯೋಗದಿಂದ ಮುದ್ರಿಸಲಾದ ವೋಟರ್ ಗೈಡ್‍ನಲ್ಲಿ ಸಂಪೂರ್ಣವಾದ ಮಾಹಿತಿ ನೀಡಲಾಗಿದೆ. ಈ ಮಾಹಿತಿಯನ್ನು ಬಿಎಲ್‍ಓಗಳು, ಸೂಪರ್‍ವೈಸರ್‍ಗಳು ಸೇರಿದಂತೆ ನಿಯೋಜಿತ ಎಲ್ಲ ಅಧಿಕಾರಿಗಳು ತಿಳಿದುಕೊಂಡು ಪ್ರತಿ ಮನೆ-ಮನೆಗೆ ಭೇಟಿ ಮತದಾರರಲ್ಲಿ ತಿಳುವಳಿಕೆ ಮೂಡಿಸಬೇಕು. ಮತಗಟ್ಟೆಗಳಲ್ಲಿ ಮತದಾರರರಿಗೆ ಕಲ್ಪಿಸಲಾಗಿರುವ ವ್ಯವಸ್ಥೆಗಳ ಕುರಿತು ಮನವರಿಕೆ ಮಾಡಬೇಕು. ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ತಂಪು ಕುಡಿಯುವ ನೀರಿನ ವ್ಯವಸ್ಥೆ, ರ್ಯಾಂಪ್ ವ್ಯವಸ್ಥೆ, ನಿರೀಕ್ಷಣಾ ಕೊಠಡಿ ವ್ಯವಸ್ಥೆ, ನೆರಳು ವ್ಯವಸ್ಥೆ, ತುರ್ತು ಸಂದರ್ಭಕ್ಕೆ ಅಂಬ್ಯೂಲೆನ್ಸ್ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ, ಓ.ಆರ್.ಎಸ್. ಪೊಟ್ಟಣಗಳು, ಶೌಚಾಲಯ ಸೇರಿದಂತೆ ಮತಗಟ್ಟೆಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಪ್ರತಿ ಮತದಾರರಿಗೆ ಮಾಹಿತಿ ಒದಗಿಸುವ ಮೂಲಕ ಅವರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಪ್ರೇರೆಪಿಸಬೇಕು. ಬಿಎಲ್‍ಓ, ಸೂಪರ್‍ವೈಸರ್, ಆಶಾ ಕಾರ್ಯಕರ್ತೆರು ಮನೆಗಳಿಗೆ ಭೇಟಿ ನೀಡಿ ಪ್ರತಿ ಮನೆಯಲ್ಲಿ  ಕನಿಷ್ಠ 5 ನಿಮಿಷ ತಿಳಿ ಹೇಳುವ ಮೂಲಕ ಜಾಗೃತಿ ಮೂಡಿಸಬೇಕು  ಎಂದು ಅವರು ಹೇಳಿದರು. 

ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸಹ ವಿವಿಧ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು. ಇದರಿಂದ ಬಿಎಲ್‍ಗಳಿಗೆ ಪ್ರೊತ್ಸಾಹ ದೊರೆಯಲಿದೆ. ಯುವ ಜನಾಂಗ, ಅಂಗವಿಕಲ ಮತದಾರ, ಹಿರಿಯ ನಾಗರೀಕ ಮತದಾರರಲ್ಲಿ ಹೆಚ್ಚಾಗಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯತಿಯ ಎ.ಬಿ.ಅಲ್ಲಾಪುರ ಅವರು ಮಾಹಿತಿ ನೀಡಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧೆಡೆ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಂಡು  ಜಾಗೃತಿ ಮೂಡಿಸಲಾಗಿದೆ. ಮಾನವ ಸರಪಳಿ, ಕ್ಯಾಂಡಲ್ ಮಾರ್ಚ್, ಪ್ರಯಾಣಿಕರ ಜಾಗೃತಿಗಾಗಿ ವಿವಿಧ ಬಸ್ ನಿಲ್ದಾಣಗಳಲ್ಲಿ ಅನೌನ್ಸ್ಮೆಂಟ್ ಮೂಲಕ ಜಾಗೃತಿ, ವಿವಿಧ ನಿಲ್ದಾಣಗಳಲ್ಲಿ ಸೆಲ್ಫಿ ಸ್ಟ್ಯಾಂಡ್ ಅಳವಡಿಕೆ, ಬಸ್‍ಗಳಿಗೆ ಪೋಸ್ಟರ್ ಅಂಟಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ವಸತಿ ನಿಲಯದ ವಿದ್ಯಾರ್ಥಿಗಳಿಂದ ಪಾಲಕರಿಗೆ ಪತ್ರ ಅಭಿಯಾನ ಹಮ್ಮಿಕೊಂಡ ಜಾಗೃತಿ ಮೂಡಿಸುವುದು, ಜಿಲ್ಲೆಯ ಕಾರ್ಮಿಕರಿರುವ ಸ್ಥಳಗಳಿಗೆ ಭೇಟಿ ನೀಡಿ ಕಾರ್ಮಿಕರಲ್ಲಿ ಜಾಗೃತಿ, ವಿವಿಧ ಮಾಲ್, ಶೋರೂಂಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯ 1528 ಸ್ಥಳಗಳಲ್ಲಿ ಚುನಾವಣಾ ಧ್ವಜಾರೋಹಣ, ಮಹಾನಗರ ಪಾಲಿಕೆ ವತಿಯಿಂದ 10 ಅಡಿ ಬಲೂನ್ ಅಳವಡಿಸಿ ಮತದಾನ ಜಾಗೃತಿ, ಸೇರಿದಂತೆ ಹತ್ತು ಹಲವಾರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಯ ಟಿ-ಶರ್ಟ್ ಹಾಗೂ ಕ್ಯಾಪ್‍ಗಳನ್ನು ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರು ಬಿಡುಗಡೆಗೊಳಿಸಿದರು. 

ಸಭೆಯಲ್ಲಿ    ಜಿಲ್ಲಾ ಸ್ವೀಪ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ,  ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ, ಮಹಾನಗರ ಪಾಲಿಕೆ ಆಯುಕ್ತ ಆರ್ಶದ ರೆಹಮಾನ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.