ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ರ ಮತದಾನ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮೇ 4 ರಂದು ಟಾಂಗಾ ಜಾಥಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ನಗರದ ಸೆಟ್ ಲೈಟ್ ಬಸ್ ನಿಲ್ಲಾಣದಲ್ಲಿ ( ಹೊಸ ಬಸ್ ನಿಲ್ದಾಣ) ಸಂಜೆ 4 ಗಂಟೆಗೆ ಚಾಲನೆಗೊಳ್ಳುವ ಜಾಥಾ ಅಭಿಯಾನವು ಗ್ಯಾಂಗ್ ಬಾವಡಿ, ಮಹಾತ್ಮಾ ಗಾಂಧಿ ಶಾಲೆ, ಮಾನಸ ರೆಸಿಡೆನ್ಸಿ, ದರ್ಗಾ ಕ್ರಾಸ್, ಚಾಲುಕ್ಯ ನಗರ, ಉಮದಿ ಸೂಪರ್ ಬಜಾರ್ ಎದುರಿನ ರಸ್ತೆ, ಮಹೇಶ್ವರಿ ಭವನ ರಸ್ತೆ, ರೀಲೈನ್ಸ್ ಮಾಲ್ ರಸ್ತೆ, ಮಾರವಾಡಿ ಕಾಲೋನಿ, ಸಿದ್ದೇಶ್ವರ ದೇವಸ್ಥಾನ, ಗಾಂಧಿ ವೃತ್ತ ಮಾರ್ಗವಾಗಿ ಸಂಚರಿಸಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತವನ್ನು ತಲುಪಲಿದೆ.
ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಜ್ಞಾವಿಧಿ ಭೋಧಿಸುವುದರೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment