Friday, May 17, 2024

ವಿದ್ಯಾರ್ಥಿಗಳ ವಿವಿಧ ಸಮಸ್ಯೆ ನಿವಾರಿಸುವಂತೆ ಮನವಿ


ವಿಜಯಪುರದಲ್ಲಿ ಕರವೇ (ಸ್ವಾಭಿಮಾನ ಬಣ) ವತಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ವಿಜಯಪುರ: ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪದವಿ ಪ್ರವೇಶಾತಿ ಸಂದರ್ಭದಲ್ಲಿ ಪ್ರೀಶಿಫ್ ಕಾರ್ಡ್ ಅನ್ವಯ ಪ್ರವೇಶ ನೀಡುವುದು ಸೇರಿದಂತೆ ವಿವಿಧ ವಿದ್ಯಾರ್ಥಿಗಳ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಕರವೇ (ಸ್ವಾಭಿಮಾನ ಬಣ) ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಜಗದೇವ ಸೂರ್ಯವಂಶಿ ಮಾತನಾಡಿ, ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಪ್ರವೇಶ ಪಡೆದ ನಂತರ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡುತ್ತದೆ. ಈ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಆರ್ಥಿಕವಾಗಿ ದುರ್ಬಲವಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ, ಭರಿಸಲು ಆಗದಿರುವ ಕಾರಣ ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರವೇಶ ನಡೆಯುವ ಸಂದರ್ಭದಲ್ಲಿ ಪ್ರವೇಶ ಶುಲ್ಕ ಪಡೆಯದೆ ಫ್ರೀಶಿಫ್ ಕಾರ್ಡ್ ಮೂಲಕ ಪ್ರವೇಶ ಪಡೆಯುವ ಸೌಲಭ್ಯವನ್ನೂ ಉಲ್ಲೇಖಿತ ಸರ್ಕಾರಿ ಆದೇಶದಲ್ಲಿ ತಿಳಿಸಿರುತ್ತದೆ. ಆದರೆ ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಉಲ್ಲೇಖಿತ ಸರ್ಕಾರಿ ಆದೇಶವನ್ನು ಪಾಲಿಸುತ್ತಿಲ್ಲ ಎಂದು ದೂರಿದರು.

ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಈ ಆದೇಶವನ್ನು ಕಾರ್ಯಗತಗೊಳಿಸಲು ವಿಫಲವಾಗಿರುತ್ತವೆ. ಈಗಾಗಲೇ ವಿದ್ಯಾರ್ಥಿಗಳು ಈ ಯೋಜನೆಯಡಿಯಲ್ಲಿ ಪ್ರವೇಶ ಪಡೆಯಲು ಅರ್ಜಿಯನ್ನು ಸಲ್ಲಿಸಿದಲ್ಲಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿಯನ್ನೂ ಕೊಟ್ಟು ಅವರಿಂದ ಪ್ರವೇಶ ಶುಲ್ಕ, ಮತ್ತು ಪರೀಕ್ಷಾ ಶುಲ್ಕವನ್ನೂ ಪಡೆಯುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮತ್ತು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂಬ ಗಂಭೀರವಾದ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಮುಂದಿರಿಸಿದರು, ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರ ಮತ್ತು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪದವಿ ಪೂರ್ವ ಇಲಾಖೆ, ವಿಜಯಪುರ ಇವರ ಸಮ್ಮುಖದಲ್ಲಿ ಸಭೆಯನ್ನು ಕರೆದು ಪೂರ್ಣ ಪ್ರಮಾಣದಲ್ಲಿ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಸೂಚನೆಯನ್ನು ನೀಡಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

ಲಕ್ಷ್ಮಣ ಕಂಬಾಗಿ, ಗಿರೀಶ ಕಲಘಟಗಿ, ಡಾ.ಎಂ.ಆರ್. ಗುರಿಕಾರ, ಲಿಂಗರಾಜ ಬಿದರಕುಂದಿ, ಸಂಕೇತ ಪಟ್ಟಣದ, ತಿಮ್ಮನಗೌಡ ಪಾಟೀಲ, ಪ್ರಭು ಮಂಕಣಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment