Wednesday, June 12, 2024

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಬಾಲಕಾರ್ಮಿಕ ನಿರ್ಮೂಲನೆಗೆ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ : ಬಾಲಕಾರ್ಮಿಕತೆ ಅನಿಷ್ಠ ಪದ್ದತಿಯಾಗಿದ್ದು, ಇದರ ನಿರ್ಮೂಲನೆಗೆ ಪರಿಣಾಮಕಾರಿ ಜಾಗೃತಿ ಅಗತ್ಯವಾಗಿದ್ದು, ಎಲ್ಲಾ ಅಧಿಕಾರಿಗಳು, ಸಂಘ- ಸಂಸ್ಥೆಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಕರೆ ನೀಡಿದರು.

ಬುಧವಾರ ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೆÇಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿ ನಿμÉೀಧಿಸಲಾಗಿದೆ. ಇದೊಂದು ಅಪರಾಧವಾಗಿದೆ ಎಂಬುದರ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಿ, ಸಂಪೂರ್ಣ ನಿರ್ಮೂಲನೆಗೆ ಕೈಜೋಡಿಸಬೇಕು. ಬಾಲಕಾರ್ಮಿಕ ಪ್ರಕರಣಗಳು ಕಂಡುಬಂದ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ – 1098ಕ್ಕೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಕಾರ್ಮಿಕ ಇಲಾಖೆಯು ಸೇರಿದಂತೆ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ರಕ್ಷಿಸಿದ ಮಕ್ಕಳನ್ನು ಬಾಲಮಂದಿರಕ್ಕೆ ದಾಖಲಿಸಿ ಅವರ ಪುನರ್ವಸತಿ ಕಲ್ಪಿಸಿ ಅವರಿಗೆ ಪೂರಕವಾದ ಶಿಕ್ಷಣ, ಕೌಶಲಗಳ ತರಬೇತಿ ಒದಗಿಸಲಾಗುತ್ತಿದೆ ಎಂದು ಹೇಳಿದರು.

ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಕ್ರೋಢೀಕರಿಸಿಕೊಂಡು ಆ ಬಗ್ಗೆ   ಸಂಬಂಧಿಸಿದವರಿಗೆ ಮಾಹಿತಿ ನೀಡಬೇಕು. ಬಾಲಕಾರ್ಮಿಕ ಕಾರ್ಮಿಕ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಶಾಲಾ ಮುಖ್ಯಸ್ಥರೊಂದಿಗೆ ಸಮನ್ವಯ ಸಾಧಿಸಬೇಕು. ವಲಸೆ ಕಾರ್ಮಿಕ ಕುಟುಂಬಗಳ ಬಗ್ಗೆ ಮಾಹಿತಿ ಪಡೆÉದುಕೊಂಡು ಅವರ ಮಕ್ಕಳ ಶಿಕ್ಷಣ, ಮೂಲಭೂತ ಹಕ್ಕುಗಳ ಸಂರಕ್ಷಣೆ ಮಾಡಬೇಕು. ಮಕ್ಕಳ ಭವಿಷ್ಯ ಸುಂದರವಾಗಿಸಲು ಬಾಲಕಾರ್ಮಿಕತೆ ಪಿಡುಗನ್ನು ತೊಲಗಿಸಬೇಕು.  

 ಕಾರ್ಮಿಕ ನಿರೀಕ್ಷಕರಾದ ಜಗದೇವಿ ಸಜ್ಜನ ಬಾಲಕಾರ್ಮಿಕ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ ಹೆಚ್ಚುವರಿ  ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಯಾದ ರಾಮನಗೌಡ ಹಟ್ಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕರಾದ ನೀಲಮ್ಮಾ ಖೇಡಗಿ, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಎಸ್.ಜಿ. ಕೈನೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಚಾದೋ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಸ್.ಜಿ. ಕುಲಕರ್ಣಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment