ವಿಜಯಪುರ : ಹೆಗಡಿಹಾಳ, ಸಾತಿಹಾಳ ಹಾಗೂ ಯಾಳವಾರ ಗ್ರಾಮಗಳಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲೆಯ ಹೆಗಡಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಕುಮನಾಳ ಗ್ರಾಮದಲ್ಲಿ ಈ ಹಿಂದೆ ಪ್ರವಾಹ ಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ಪ್ರವಾಹವು ಸರಾಗವಾಗಿ ಸಾಗುವಂತೆ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು.
ಈ ಬಾರೀ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅತೀವೃಷ್ಟಿಯಿಂದ ಪ್ರವಾಹ ಬರುವ ಸಂಭವವಿದ್ದು, ಪ್ರವಾಹ ನಿಯಂತ್ರಣದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವುದು, ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಾರ್ಯಾತ್ಮಕ ಸ್ಥಿತಿಯಲ್ಲಿಡಬೇಕು ಹಾಗೂ ಗ್ರಾಮದಲ್ಲಿನ ಚರಂಡಿಗಳನ್ನು ಸ್ವಚ್ಚಗೊಳಿಸಬೇಕು. ಸಾರ್ವಜನಿಕರಿಗೆ ಕುಡಿಯಲು ಯೋಗ್ಯವಾದ ನೀರನ್ನು ಕ್ಲೋರೀಕರಣಗೊಳಿಸಿ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಡೋಣಿ ನದಿಯ ಸೇತುವೆ, ಗ್ರಾಮದಲ್ಲಿನ ಚರಂಡಿಗಳು, ನೀರಿನ ಟ್ಯಾಂಕ್, ಗ್ರಾಮದ ರಸ್ತೆಗಳು ಮತ್ತು ಯಾಳವಾರ ಗ್ರಾಮದ ಡೋಣಿ ನದಿ ಸೇತುವೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಯಿಂದಾಗಿ ಡೋಣಿ ನದಿ ತುಂಬಿ ಹರಿಯುತ್ತಿದ್ದು, ನೀರು ಸರಾಗವಾಗಿ ಸಾಗಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಡೋಣಿ ನದಿ ನದಿ ದಂಡೆಯಲ್ಲಿರುವ ಎಲ್ಲ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗೂರ ಸಾರಿ ಪ್ರವಾಹ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. ಗ್ರಾಮ ಪಂಚಾಯತಿ ಮಟ್ಟದ ವಿಪತ್ತು ನಿರ್ವಹಣಾ ಸಭೆಯನ್ನು ಆಧ್ಯತೆ ಮೇರೆಗೆ ಏರ್ಪಡಿಸಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ನಂತರ ದೇವರ ಹಿಪ್ಪರಗಿ ತಾಲೂಕ ಪಂಚಾಯಿತಿಗೆ ಭೇಟಿ ನೀಡಿ, ಹಳೆಯ ಪ್ರವಾಸಿ ಮಂದಿರದಲ್ಲಿ ತಾಲೂಕ ಪಂಚಾಯತ ಕಚೇರಿ ಕಾರ್ಯ ನಿರ್ವಹಿಸುತಿದ್ದು, ಹೊಸ ತಾಲೂಕು ಪಂಚಾಯಿತಿ ಕಚೇರಿ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಿ ಜಿಲ್ಲಾ ಪಂಚಾಯಿತಿಗೆ ವರದಿ ನೀಡುವಂತೆ ತಾಲುಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮು ಅಗ್ನಿ ಅವರಿಗೆ ಸೂಚಿಸಿದರು.
ಪ್ರತಿ ತಿಂಗಳ ಮೊದಲನೇ ಶನಿವಾರವನ್ನು “ಸ್ವಚ್ಛ ಶನಿವಾರ” ಎಂಬ ಪರಿಕಲ್ಪನೆ ಇಟ್ಟುಕೊಂಡು ತಾಲೂಕ ಪಂಚಾಯಿತಿ ಒಳಾಂಗಣ ಹಾಗೂ ಹೊರಾಂಗಣ ಆವರಣಗಳನ್ನು ಸ್ವಚ್ಚಗೊಳಿಸಬೇಕು, ೆÃಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ವಿಜಯಪುರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ಹೊಂಗಯ್ಯ, ದೇವರ ಹಿಪ್ಪರಗಿ ತಾಲೂಕಿನ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮು ಜಿ ಅಗ್ನಿ, ಸಹಾಯಕ ನಿರ್ದೇಶಕರು (ಪಂಚಾಯತ್ ರಾಜ್) ಶಿವಾನಂದ ಮೂಲಿಮನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಸತೀಶ ಪಾಟೀಲ ಮತ್ತು ಸೆಕ್ಷನ್ ಅಧಿಕಾರಿ ಎಚ್. ಎಮ್. ಸಾರವಾಡ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಜಿ. ವಾಯ್. ಮುರಾಳ, ಬಸವನ ಬಾಗೇವಾಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಾಠೋಡ, ಹೆಗಡಿಹಾಳ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ಸರಿತಾ ಟಿ. ನಾಯಕ, ಸಾತಿಹಾಳ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ಎಂ. ಎನ್. ಕತ್ತಿ, ಯಾಳವಾರ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ಮಲ್ಲು ಮಸಳಿ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ತಾಲೂಕ ಪಂಚಾಯತ Iಇಅ ಸಂಯೋಜಕರಾದ ರಾಘವೇಂದ್ರ ಭಜಂತ್ರಿ, ಸಿದ್ದಪ್ಪ ಕಾಂಬಳೆ ಮತ್ತು ಗ್ರಾಮ ಪಂಚಾಯತ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment