Friday, June 21, 2024

10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಧೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಿ -ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ : ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ನಗರ ಶಾಸPರಾದÀ ಬಸನಗೌಡ ಪಾಟೀಲ ಯತ್ನಾಳ ಅವರು ಕರೆ ನೀಡಿದರು.ಅವರು ಆಯುಷ್ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜೂನ್ 21ರಂದು ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ದೈಹಿಕ, ಮಾನಸಿಕ ಸದೃಢÀತೆಗೆ ಯೋಗ ಸಹಕಾರಿ. ಜೀವನದಲ್ಲಿ ಪ್ರತಿನಿತ್ಯ ಯೋಗ ರೂಡಿಸಿಕೊಳ್ಳಬೇಕು. ನಿಯಮಿತ ಯೋಗ ಮಾಡುವುದರ ಮೂಲಕ ಆರೋಗ್ಯ ದೃಢತೆ ಹಾಗೂ ಚೈತನ್ಯಯುಕ್ತ ಬದುಕು ನಡೆಸಬಹುದಾಗಿದೆ. ಯೋU ರೂಢಿಸಿಕೊಳ್ಳುವ ಮೂಲಕ ಆರೋಗ್ಯಯುತ ಜೀವನ ನಡೆಸಬಹುದು. 

ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ. ಜೂನ್21 ರಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ದೇಶಗಳು ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಸಾಮೂಹಿಕ ಯೋಗಾಭ್ಯಾಸ: ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯೋಗಾಸಕ್ತರಿಗೆ 45 ನಿಮಿಷಗ¼ ಕಾಲ ಯೋಗಾಭ್ಯಾಸ ಮಾಡಿಸಲಾಯಿತು. ಶ್ರೀಮತಿ ಸುನೀತಾ ಬಿರಾದಾರ ಅವರು ಯೋಗಾಸನÀ ಹಾಗೂ ಚಂದ್ರಶೇಖರ ಮತ್ತು ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕಿ ಗೀತಾಂಜಲಿ ದಾಸರ್ ಅವರು ಪ್ರಾಣಾಯಾಮದ ಅಭ್ಯಾಸ ಮಾಡಿಸಿದರು. 

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗಳಾದ ಡಾ. ರಾಮನಗೌಡ ಎಸ್. ಪಾಟೀಲ್,ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ್ ಮಾನವರ ಸೇರಿದಂತೆ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ, ಕರ್ನಾಟಕ ರಿಸರ್ವ ಬಟಾಲಿಯನ್, ಸ್ಕೌಟ್ಸ್ ಹಾಗೂ ಗೈಡ್ಸ್, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾರತಿ ಕುಂದನಗಾರ ತಂಡದಿAದ ನಾಡಗೀತೆ ಪ್ರಸ್ತುತಪಡಿಸಲಾಯಿತು. ವೈದ್ಯಾಧಿಕಾರಿ ಡಾ. ವಿದ್ಯಾವತಿ. ಎಂ. ಅಥಣಿ ಪ್ರಾರ್ಥನೆ ಗೀತೆ ಹಾಡಿದರು. ಡಾ. ಬಿ.ಎನ್. ವಗದರ್ಣಿ ಸ್ವಾಗತಿಸಿದರು. ಡಾ. ವಿಜಯ ಮಹಾಂತೇಶ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment