Thursday, July 4, 2024

ಸ್ವಾಸ್ತö್ಯ ಸಮಾಜ ನಿರ್ಮಿಸಲು ಸೇವಾ ಮನೋಭಾವನೆ ಅಗತ್ಯ : ಟಿ. ಭೂಬಾಲನ್



ವಿಜಯಪುರ : ವೈದ್ಯರ ಕಾರ್ಯ ಒಂದು ಆರೋಗ್ಯ ಪೂರ್ಣ ಸಮಾಜ ಕಟ್ಟುವುದು ಎಲ್ಲರೂ ಸೇವಾ ಮನೋಭಾವನೆಯಿಂದ ಕೆಲಸ ಮಾಡಿ ಆಗ ಸ್ವಾಸ್ತö್ಯ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಐಎಂಎ ಭವನದಲ್ಲಿ ಭಾರತೀಯ ವೈದ್ಯಕೀಯ ಸಂಘ ವಿಜಯಪುರ ಘಟಕದ ವತಿತಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವೈದ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಿಕ್ಕೆ ಖಾಸಗಿ ವೈದ್ಯರು, ಭಾರತೀಯ ವೈದ್ಯಕೀಯ ಸಂಘ ನಿರಂತರ ಸರ್ಕಾರಕ್ಕೆ ಸಹಕಾರ ನೀಡುತ್ತಿದ್ದಾರೆ. ಕೆಪಿಎಂಇ ಹಾಗೂ ಪಿಸಿಪಿಏನ್.ಡಿ.ಟಿ ಕಾಯ್ದೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ಹೆಣ್ಣು ಬ್ರೂಣ ಹತ್ಯೆಯಂತ ಸಮಾಜ ವಿರೋಧಿ ಪಿಡುಗುಗಳನ್ನು ಬೇರು ಸಹಿತ ಕಿತ್ತಿ ಎಸೆಯಬೇಕಾಗಿದೆ. ಕಾನೂನಿನ ಜೊತೆ ಜೊತೆಗೇ ವೈದ್ಯರ ಇಚ್ಚಾಶಕ್ತಿ ಹಾಗೂ ಸಹಕಾರ ಅತೀ ಮುಖ್ಯವಾಗಿದೆ ಎಂದರು.


ಬಿ.ಎಲ್.ಡಿ.ಈ ಡೀಮ್ಡ್ ವಿವಿ ಕುಲಪತಿ ಡಾ.ಆರ್.ಎಸ್.ಮುಧೋಳ್ ಮಾತನಾಡಿ, ವೈದ್ಯರು ನಿರಂತರ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆ, ಇಂತಹ ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಆಗುಹೋಗುಗಳನ್ನು ಪರಸ್ಪರ ಚರ್ಚಿಸಿ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ರವಿಕುಮಾರ ಬಿರಾದಾರ ಮಾತನಾಡಿದರು.

ಈ ಸಂದರ್ಭದಲ್ಲಿ ಹಿರಿಯ ವೈದ್ಯ ಡಾ.ಅರುಣ ಇನಾಮದಾರ, ಡಾ.ತೇಜಶ್ವಿನಿ ವಲ್ಲಭ, ಡಾ.ಅನಿಲ ನಾವದಗಿ, ಡಾ.ಜೈಬನ್ನಿಸಾ ಬೀಳಗಿ, ಡಾ.ವಿಜಯಾ ಬಿರಾದಾರ, ಅಲ್ ಅಮಿನ್ ಮೆಡಿಕಲ್ ಕಾಲೇಜ್‌ನ ಡಾ.ಬಿ.ಎಸ್.ಪಾಟೀಲ, ಜೆ.ಎಸ್.ಎಸ್ ಆಸ್ಪತ್ರೆಯ ನರರೋಗ ತಜ್ಞ ಡಾ.ಮಯೂರ್ ಕಾಕು, ಡಾ.ಆನಂದ ಪಾಟೀಲ, ಡಾ.ದಯಾನಂದ ಬಿರಾದಾರ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment