Wednesday, July 10, 2024

ರಾಜ್ಯಾದ್ಯಂತ ಜುಲೈ 15. 2024 ರಿಂದ ಬಿಸಿಯೂಟ ಬಂದ್ ಅನಿರ್ದಿಷ್ಟಾವಧಿ ಹೋರಾಟ


ವಿಜಯಪುರ : ವಿಜಯಪುರ ನಗರದ ಬಾರಾ ಕಮಾನಿನಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ವಿಜಯಪುರ ಜಿಲ್ಲಾ ಸಮಿತಿ ಪದಾಧಿಕಾರಿಗಳ ಪೂರ್ವಭಾವಿ ಸಭೆ ಜರುಗಿತು.

ಈ ಸಂದರ್ಭದಲ್ಲಿ ಅಕ್ಷರದಾಸೋಹ ನೌಕರರ ಸಂಘದ ಅಧ್ಯಕ್ಷರಾದ ಕಾಳಮ್ಮ ಬಡಿಗೇರ ಮಾತನಾಡಿ, ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘಟನೆ (ಸಿಐಟಿಯು) ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ 2023 ಅಕ್ಟೋಬರ್ 30 ರಿಂದ ನವೆಂಬರ್ 10 ರವರೆಗೆ ಅನಿರ್ದಿಷ್ಟಾವಧಿ ಹೋರಾಟ ನಡೆದಿದೆ. ಈ ಹೋರಾಟದ ಸಂದರ್ಭದಲ್ಲಿ ನಮ್ಮ ಬೇಡಿಕೆಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು. ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿರ್ದೆಶಕರು ಮತ್ತು ಸಂಘಟನೆ ಮುಖಂಡರೊAದಿಗೆ 04-11-2023 ರಂದು ಆಯುಕ್ತರ ಕಛೇರಿಯಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. 10-11- 2023 ರಂದು ಮಾನ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸಂಘಟನೆಯ ಪದಾಧಿಕಾರಿಗಳ ಜೊತೆ ಸಭೆ ನಡೆದಿದೆ. 15-11-2023 ರಂದು ಮಾನ್ಯ ಶಿಕ್ಷಣ ಸಚಿವರು ನಮ್ಮ ಬೇಡಿಕೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳುವ ಕುರಿತು ಲಿಖಿತವಾಗಿ ಪತ್ರ ಕಳುಹಿಸಿದ್ದರು. ಮತ್ತು ಹೋರಾಟವನ್ನು ವಾಪಸ್ಸು ಪಡೆಯಲು ಕೋರಿದ್ದರಿಂದ ಇಲಾಖೆಯ ಮಾತಿಗೆ ಗೌರವಿಸಿ ಹೋರಾಟವನ್ನು ವಾಪಸ್ಸು ಪಡೆಯಲಾಗಿತ್ತು.

ಅಕ್ಷರದಾಸೋಹ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಸುಮಂಗಲಾ ಆನಂದಶೆಟ್ಟಿ ಮಾತನಾಡಿ, 2022 ರಿಂದ 2024 ರವರೆಗೆ 10,500 ಕ್ಕೂ ಹೆಚ್ಚಿನ ನೌಕರರನ್ನು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ 3-4 ಹಂತದ ಹೋರಾಟಗಳು ನಡೆದಿವೆ. ಹೋರಾಟದ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಚಿವರು ಜಂಟಿ ಸಭೆಗಳನ್ನು ನಡೆಸಲಾಗಿದೆ. ಹೋರಾಟದ ಸಂದರ್ಭದಲ್ಲಿ ಮಾತುಕತೆ ನಡೆಸಿದಂತೆ ನಿವೃತ್ತಿ ಹೊಂದಿದ ಮತ್ತು ಹೊಂದುತ್ತಿರುವ ಅಡುಗೆ ನೌಕರರಿಗೆ ಇಡಿಗಂಟು ಜಾರಿ ಮಾಡಬೇಕು. ಚುನಾವಣಾ ಸಂದರ್ಭದಲ್ಲಿ ವೇತನ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೂ ಜಾರಿ ಆಗಿರುವುದಿಲ್ಲ. ಜಾರಿ ಆಗುವವರೆಗೆ ಯಾವುದೇ ನೌಕರರನ್ನು ಕೆಲಸದಿಂದ ಕೈ ಬಿಡಬಾರದು. ದಯಾಳುಗಳಾದ ತಾವು ಈ ಸಮಸ್ಯೆಯನ್ನು ಬಗೆಹರಿಸಿ ನ್ಯಾಯ ಒದಗಿಸಬೇಕೆಂದು ಹೇಳಿದರು.

ಅಕ್ಷರದಾಸೋಹ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಸುರೇಖಾ ವಾಗ್ಮೊಡೆ ಮಾತನಾಡಿ, ಇದುವರೆಗೂ ಯಾವುದೇ ಸಮಸ್ಯೆಗೆ ಪರಿಹಾರ ಸಿಗದೆ ಇರುವ ಕಾರಣಕ್ಕೆ ಆನಿವಾರ್ಯವಾಗಿ ಜುಲೈ 15. 2024 ರಿಂದ ಬಿಸಿಯೂಟ ನೌಕರರು ತಮ್ಮ ಕೆಲಸಸ್ಥಗಿತ ಗೊಳಿಸಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರು ವಿಜಯಪುರ ಜಿಲ್ಲೆಯಿಂದ ಪಾಲ್ಗೊಳ್ಳುತ್ತಿದ್ದಾರೆ.

ಈ ಸಂದರ್ಭದಲ್ಲಿ ಸುವರ್ಣ ರಾಠೋಡ, ಬಿಸ್ಮಿಲ್ಲಾ ಇನಾಂದಾರ, ಸೈನಾಜ ಮುಲ್ಲಾ, ಭಾರತಿ ಮಠಪತಿ, ರಾಜಶ್ರೀ ಬಗಲಿ, ದಾನಮ್ಮ ರೇಣುಕಾ, ಸುಮಂಗಲಾ ಹಿರೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment