Wednesday, July 10, 2024

ಜಮೀನು ದಾರಿ ಸಮಸ್ಯೆ ಇಥ್ಯರ್ತಕ್ಕಾಗಿ ಕಾನೂನು ತಿದ್ದುಪಡಿ ಮಾಡಿ ಜಮೀನು ದಾರಿ ಸಮಸ್ಯೆ ಬಗೆಹರಿಸಲು ತಹಶೀಲ್ದಾರುಗಳಿಗೆ ಸಂಪೂರ್ಣ ಅಧಿಕಾರವನ್ನು ವಹಿಸಿಕೊಡಲು ಆಗ್ರಹ


ವಿಜಯಪುರ: ಜಮೀನು ದಾರಿ ಸಮಸ್ಯೆ ಇಥ್ಯರ್ತಕ್ಕಾಗಿ ಕಾನೂನು ತಿದ್ದುಪಡಿ ಮಾಡಲು ಈ ಗಂಭೀರ ಸಮಸ್ಯೆಯನ್ನು ಅಧಿವೇಶನದಲ್ಲಿ ಚರ್ಚಿಸಿ ಕ್ರಮ ವಹಿಸುವಂತೆ ಒತ್ತಾಯಿಸಿ ಕಂದಾಯ ಇಲಾಖೆ ಆಯುಕ್ತರಾದ ಪಿ. ಸುನೀಲ ಕುಮಾರ ಅವರನ್ನು ಬೆಂಗಳೂರಿನ ಬಹುಮಹಡಿ ಕಟ್ಟದ ಆಯುಕ್ತಾಲದಯಲ್ಲಿ ಭೇಟಿ ನೀಡಿ ಆಯುಕ್ತರೊಂದಿಗೆ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಬುಧವಾರ ದಿನಾಂಕ: 10-07-2024 ರಂದು ಚರ್ಚಿಸಿದರು.

ಈ ಸಂದರ್ಭದಲ್ಲಿ ಅರವಿಂದ ಕುಲಕರ್ಣಿ ಮಾತನಾಡಿ, ರಾಜ್ಯದ ರೈತರು ತಮ್ಮ ತಮ್ಮ ಜಮೀನುಗಳಿಗೆ ಹೋಗಲು ಮುಂದಿನ ರೈತರು ದಾರಿ ಕೊಡದ ಕಾರಣ ಜಮೀನು ಭಿತ್ತನೆ ಮಾಡದೆ ಜಮೀನು ಬೀಳು ಬಿದ್ದು ರೈತ ಕುಟುಂಬಗಳು ಉಪವಾಸ ಬೀಳುವ ಪರಸ್ಥಿತಿ ನಿರ್ಮಾಣವಾಗಿದೆ ಈ ವಿಷಯವಾಗಿ ಕಳೆದ 10 ವರ್ಷಗಳಿಂದ ಹೋರಾಟ ಮಾಡಿ ಸರಕಾರ ಗಮನ ಸೆಳೆಯಲಾಗಿತ್ತು ನಂತರ ಸರಕಾರ ಕಾಟಾಚಾರಕ್ಕೆ ಎಂಬAತೆ ಸುತ್ತೋಲೆ ಹೊರಡಿಸಿದೆ. ಆದರೆ ರಾಜ್ಯದ ಯಾವೊಬ್ಬ ತಹಶೀಲ್ದಾರಗಳು ದಾರಿ ಮಾಡಿಕೊಟ್ಟ ಉದಾಹರಣೆ ಇಲ್ಲ ತಹಶೀಲ್ದಾರಗಳನ್ನು ಕೇಳಿದರೆ ಸರಕಾರದ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ದಾರಿ ಮಾಡಿಕೊಡಲು ಆದೇಶ ವಿಲ್ಲ ಆದ್ದರಿಂದ ಮಾಡಿಕೊಡಲು ಸಾದ್ಯವಿಲ್ಲವೆಂದು ರೈತರಿಗೆ ಹೇಳುತಿದ್ದಾರೆ. ಇದರಿಂದ ಸರಕಾರದ ಸುತ್ತೋಲೆಗೆ ಬೆಲೆ ಇಲ್ಲದಂತಾಗಿದೆ ಆದ್ದರಿಂದ ಜುಲೈ 15 ರಂದು ಪ್ರಾರಂಭವಾಗಲಿರುವ ವಿಧಾನ ಸಭಾ ಅಧಿವೇಶನದಲ್ಲಿ ಜಮೀನು ದಾರಿ ವಿಷಯವನ್ನು ಚರ್ಚಿಸಿ ಸೂಕ್ತ ಕಾನೂನು ತಿದ್ದುಪಡಿ ಮಾಡಿ ತಹಶೀಲ್ದಾರುಗಳಿಗೆ ದಾರಿ ಮಾಡಿಕೊಡುವ ಅಧಿಕಾರವನ್ನು ವಹಿಸಿಕೊಡಬೇಕು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರದಂತೆ ಕಾನೂನು ತಿದ್ದುಪಡಿ ಮಾಡಬೇಕೆಂದು ಮತ್ತು ಕರ್ನಾಟಕ ವಿಧಾನಸಭೆ ಈ ಗಂಭೀರ ಸಮಸ್ಯೆಯನ್ನು ಅಧಿವೇಶನದಲ್ಲಿ ಚರ್ಚಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪಾಂಡು ಹ್ಯಾಟಿ, ವಿಠ್ಠಲ ಬಿರಾದಾರ, ಹೊನಕೇರೆಪ್ಪ ತೆಲಗಿ, ಮಲಗೆಪ್ಪಾ ಸಾಸನೂರ, ಲಾಲಸಾಬ ಹಳ್ಳೂರ, ಬಸಪ್ಪ ತೋಟದ, ಮುದನೂರ ಬಿ. ಗ್ರಾಮದ ಜಯಕರ್ನಾಟಕ ಸಂಘಟನೆ ಹುಣಸಗಿ ತಾಲೂಕಾಧ್ಯಕ್ಷ ಪ್ರಭುಗೌಡ ಪೋತರಡ್ಡಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment