Tuesday, August 13, 2024

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಬಳಸಿ ಸರ್ವಾಂಗೀಣ ಅಭಿವೃದ್ದಿಗೆ ಕ್ರಮ - ಶ್ರೀಮತಿ ಸುಧಾಮೂರ್ತಿ


 ವಿಜಯಪುರ  : ಜಿಲ್ಲೆಯ ಗೋಲಗುಂಬಜ್ , ಬಾರಾ ಕಮಾನ್, ಗಗನ ಮಹಲ, ಇಬ್ರಾಹಿಮ್ ರೋಜಾ, ಬಸವನ ಬಾಗೇವಾಡಿ ಹಾಗೂ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳನ್ನು ಸ್ವಚ್ಚತೆಯನ್ನು ಕಲ್ಪಿಸಿ ಪ್ರವಾಸಿಗರಿಗೆ ಕುಡಿಯುವ ನೀರು, ಶೌಚಾಲಯ, ಮಾಹಿತಿ ಕೇಂದ್ರ, ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಕ್ಕಾಗಿ ಸಂಸದರ ಪ್ರದೇಶಾಭಿವೃದ್ಧಿ ಯೋಜನೆ ಬಳಸಲಾಗುವುದು ಎಂದು ರಾಜ್ಯಸಭೆ ಸಂಸದರಾದ ಶ್ರೀಮತಿ ಸುಧಾಮೂರ್ತಿ ಹೇಳಿದರು. 

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ವಿಜಯಪುರ ನಗರ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಸ್ಮಾರಕಗಳಿಗೆ ಹೆಸರುವಾಸಿಯಾಗಿದೆ. ವಿಜಯಪುರ ಜಿಲ್ಲೆಯ ಜೊತೆ ನನಗೆ ಭಾವನಾತ್ಮಕ ಸಂಬAಧ ಇರುವುದಂದ ನೋಡಲ್ ಜಿಲ್ಲೆಯನ್ನಾಗಿ ವಿಜಯಪುರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಬಳಸಿಕೊಂಡು ಸಮಗ್ರ ಅಭಿವೃದ್ದಿಗೆ ಕ್ರಮ ವಹಿಸಲು ಜಿಲ್ಲೆಯ ಎಲ್ಲ ಅಧಿಕಾರಿಗಳು ಸಮನ್ವಯತೆ ಸಾಧಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ ಜನರ ಜೀವನ ಮಟ್ಟ ಸುಧಾರಣೆಗೆ ಶ್ರಮಿಸಬೇಕು ಎಂದು ಹೇಳಿದರು.

ಜಿಲ್ಲಾಸ್ಪತ್ರೆ ಆವರಣದಲ್ಲಿ ಧರ್ಮಶಾಲೆಯನ್ನು ತೆರೆದು ಸಾರ್ವಜನಿಕರಿಗೆ ಅನೂಕೂಲ ಕಲ್ಪಿಸುವುದು ಹಾಗೂ ತಾಳಿಕೊಟೆ, ಬಸವನ ಬಾಗೇವಾಡಿ, ಸಿಂದಗಿಯಲ್ಲಿ ಸುಸಜ್ಜಿತವಾದ ಗ್ರಂಥಾಲಯ ನಿರ್ಮಾಣ, ಸರಕಾರಿ ಜಾಗದಲ್ಲಿ ಸುಸಜ್ಜಿತವಾದ ಜಿಮ್ ನಿರ್ಮಾಣ ಮಾಡಲು ಸಿದ್ಧತೆ ನಡೆಸಲಾಗಿದೆ. ಕುಮಟಗಿಯಲ್ಲಿರುವ ವಾಟರ್‌ಪೆವಿಲಿಯನ್‌ನ್ನು ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿ ಅಲ್ಲಿನ ಕೆರೆಯ ಸಂರಕ್ಷಣೆ ಹಾಗೂ ಅರಮನೆ, ಕೊಟೆಯನ್ನು ಪ್ರೇಕ್ಷಣಿಯ ಸ್ಥಳವಾಗಿ ಅಭಿವೃದ್ಧಿ ಪಡಿಸಲು ಯೋಜನೆ ಹಮ್ಮಿಕೊಳ್ಳಲಾಗಿದ್ದು, ಅಧಿಕಾರಿಗಳು ಅಗತ್ಯ ಸಹಕಾರ ಒದಗಿಸಬೇಕು ಎಂದು ಹೇಳಿದರು. 

ಶಾಲೆ, ಅಂಗನವಾಡಿ, ಹಾಸ್ಟೇಲ್‌ಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಿ ಸಮಪರ್ಕವಾಗಿ ನಿರ್ವಹಣೆ ಮಾಡಬೇಕು. ಆರೋಗ್ಯ ಹಾಗೂ ವ್ಯಯಕ್ತಿಕ ಸ್ಚಚ್ಚತೆಯ ಬಗ್ಗೆ ತಿಳುವಳಿಕೆ ಮೂಡಿಸಿ ಶೌಚಾಲಯಗಳ ಬಳಕೆ ಮಾಡುವಂತೆ ಜಾಗೃತಿ ಮೂಡಿಸುವುದು ಅತಿ ಅವಶ್ಯಕವಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿನಿಲಯಗಳಲ್ಲಿ ಓದುತ್ತಿರುವ ಹೆಣ್ಣು ಮಕ್ಕಳ ಸಮಗ್ರ ವ್ಯಕ್ತಿತ್ವದ ಬೆಳವಣಿಗೆಗ ಪೂರಕವಾಗುವಂತೆ, ಗ್ರಂಥಾಲಯದ ಅನುಕೂಲ, ವ್ಯಕ್ತಿತ್ವ ವಿಕಸನ, ಈಜು, ಕ್ರೀಡೆಯಂತಹ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಸಂಸದರ ಪ್ರದೇಶಾಭಿವೃದ್ಧಿ ಯೋಜನೆಗೆ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರ ನೀಡುವುದಾಗಿಯೂ, ಜಿಲ್ಲಾ ವ್ಯಾಪ್ತಿಯಲ್ಲಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆಯ ಡಾ. ಬಸವರಾಜ ಹುಬ್ಬಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಕೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಹಿಂದುಳಿದ ಕಲ್ಯಾಣ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಆಶಾಪೂರ, ಪ್ರಮಾಸೋಧ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ವಾಣ, ಮಹಾನಗರಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣನವರ ಸೇರಿದಮತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment