Monday, August 5, 2024

ವಿಜಯಪುರ-ತಾಲೂಕಾ ಶಿಕ್ಷಕರ ಸಂಘದ ತಾಲೂಕಾ ಘಟಕದಿಂದ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ


ವಿಜಯಪುರ : ಶಿಕ್ಷಕರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಗ್ರಾಮೀಣ ಹಾಗೂ ತಿಕೋಟಾ ತಾಲೂಕಾ ಘಟಕದಿಂದ ಇಂದು ವಿಜಯಪುರ ಹಾಗೂ ತಿಕೋಟಾ ತಹಶೀಲ್ದಾರ ಅವರಿಗೆ ಸಲ್ಲಿಸಲಾಯಿತು. 

ಶಿಕ್ಷಕರ ಬಹುದಿನಗಳ ಬೇಡಿಕೆ ಈಡೇರಿಸುವ ಮೂಲಕ ಅನ್ಯಾಯ ಸರಿಪಡಿಸುವ ಕುರಿತಂತೆ ರಾಜ್ಯ ಮಟ್ಟದ ಹೋರಾಟದ ರೂಪರೇಷೆಗಳ ತಹಶೀಲ್ದಾರಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು, ಮನವಿಯಲ್ಲಿ 2017ರವರೆಗೆ ನೇಮಕವಾದ ಶಿಕ್ಷಕರನ್ನು 1ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಬೆಕು. ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು. ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕವಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದವೀಧರ ಶಿಕ್ಷಕರೆಂದು ಪದನಾಮಿಕರಿಸಬೇಕು. 2017ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ ಮೂಲತ: 1-7/8ಕ್ಕೆ ನೇಮಕ ಹೊಂದಿದವರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1-5ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯುವAತೆ ಒತ್ತಾಯಿಸಲಾಗಿದೆ. 

 ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ 1 ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಅರ್ಹ ವಿದ್ಯಾರ್ಹತೆ (ಪದವಿ+ಶಿಕ್ಷಣ ತರಬೇತಿ) ಹೊಂದಿದ 2016ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆಯೊಂದಿಗೆ ಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಶೀಲ್ದಾರ ಅವರ ಮೂಲ ಸರ್ಕಾರಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಲಾಗಿದೆ. 

ಅರ್ಜುನ ಲಮಾಣಿ, ಹಣಮಂತ ಕೊಣದಿ, ಸಿ.ಟಿ.ಜತ್ತಿ, ಅಶೋಕ ಚನ್ನಬಸಪ್ಪಗೋಳ, ಎಂ.ಎಸ್.ಟಕ್ಕಳಕಿ, ಅಶೋಕ ಬೂದಿಹಾಳ, ಡಿ.ಎಸ್.ಮಠ, ಅಶೋಕ ಧಡಕೆ, ಝಡ್.ಆಯ್.ಇಂಡಿಕರ, ಅಶೋಕ ಭಜಂತ್ರಿ ಸಾಬು ಗಗನಮಲಿ, ವೀರಭದ್ರಪ್ಪ ಬಸು ಬೇನೂರ, ವಿಜಯಕುಮಾರ ದೇಸಾಯಿ, ಪ್ರವೀಣ ಪತ್ತಾರ, ಪ್ರಕಾಶ ಕೂಲಂಗಿ, ಕೊರಬು, ರಾಜು ಉಮರಾಣಿ, ಎಂ.ಎನ್.ನಾಯ್ಕ, ಆರ್.ಎಸ್.ಮಸಳಿ, ಸೋಮನಾಥ ಬಾಗಲಕೋಟ, ಪಪ್ಪು ಗಚ್ಚಿನಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment