Monday, August 19, 2024

'ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ'' ತುಮಕೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಪ್ರಥಮ ರ‍್ಯಾಂಕ್ | ರಾಜ್ಯಪಾಲರಿಂದ ಗೋಲ್ಡ್ ಮೆಡಲ್ ಪ್ರದಾನ

ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ.

      ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ ಪಟ್ಟಣದ ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಬಗಲಿಯವರ ತೃತೀಯ ಪುತ್ರನಾದ ಸಂತೋಷ ಬಗಲಿ 'ಚಿನ್ನದ ಪದಕ'ವನ್ನು ರಾಜ್ಯಪಾಲರಾದ ಡಾ. ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಇಮ್ಮಡಿಗೊಳಿಸಿದ್ದಾನೆ.

        ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ವಿಭಾಗದ ವಿದ್ಯಾರ್ಥಿ ಸಂತೋಷ. ಚಿಕ್ಕಂದಿನಿಂದ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದು ಚಡಚಣ ಪಟ್ಟಣದಲ್ಲೆ ಬಿ.ಎಸ್.ಡಬ್ಲ್ಯೂ ಪದವಿ ವರೆಗೂ ವ್ಯಾಸಂಗ ಮುಗಿಸಿ, ಸದ್ಯ ಸ್ನಾತಕೋತ್ತರ ಪದವಿ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕುಟುಂಬಕ್ಕೆ ಮೊದಲ 'ಗೋಲ್ಡ್ ಮೆಡಲ್' ನ ಸಾಧನೆ ತಂದಿದ್ದಾರೆ.

         ಅಂದು ಊರಲ್ಲಿ ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಿಸುತ್ತಿದ್ದ ಯುವಕ ಸಂತೋಷ. ಪತ್ರಿಕೋದ್ಯಮ ಪದವಿ ಕಲಿಯಬೇಕೆಂದು ನಿರಂತರ ಅಧ್ಯಯನ ಮಾಡಿ, ಇಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್  ಪಡೆದುಕೊಂಡು ಚಿನ್ನದ ಬೇಟೆಯಾಡಿದ್ದಾನೆ.

       ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆಯುತ್ತಿರುವ ಸಂತೋಷ, ಮುಂದಿನ ದಿನಗಳಲ್ಲಿ ರಾಜ್ಯಪಾಲರಿಂದ ಪಿ.ಎಚ್.ಡಿ ಪದವಿ ಕೂಡಾ ಪಡೆದುಕೊಳ್ಳಬೇಕು ಎನ್ನುವ ಬಹುದೊಡ್ಡ ಕನಸು ಹೊತ್ತಿದ್ದಾನೆ. 


  ''ತಾಳ್ಮೆ, ನಿರಂತರ ಓದು ಹಾಗೂ ಶಿಕ್ಷಕರ ಮಾರ್ಗದರ್ಶನದ ಜತೆಗೆ ಕುಟುಂಬ, ಸ್ನೇಹಿತರ ಸಹಕಾರದಿಂದ ಈ ಗೋಲ್ಡ್ ಮೆಡಲ್ ನ ಕನಸು ಸಾಕಾರವಾಯಿತು. ಈ 'ಚಿನ್ನದ ಪದಕ' ಇನ್ನಷ್ಟು ಓದುವ ಹವ್ಯಾಸವನ್ನು ನನ್ನಲ್ಲಿ ಪ್ರೇರಣೆ ತುಂಬಿದೆ.

-ಸಂತೋಷ ಬಗಲಿ(ಗೋಲ್ಡ್ ಮೆಡಲಿಸ್ಟ್, ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)


"ಸ್ಪಷ್ಟ ಮತ್ತು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಂತೋಷ ಅಧ್ಯಯನ ಮಾಡಿದ್ದನು. ಹಾಗಾಗಿ ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ಜೊತೆಗೆ ಉದ್ಯೋಗ ಕೂಡ ಸಿಕ್ಕಿದೆ. ಇದು ಅವರ ನಿರಂತರ ಪರಿಶ್ರಮದ ಫಲ. ರಾತ್ರಿ 9 ರ ತನಕ  ನಮ್ಮಲ್ಲಿರುವ ರೇಡಿಯೋ & ಟಿವಿ ಸ್ಟುಡಿಯೋಗಳಲ್ಲಿ ಕೆಲಸ ಮಾಡಿದ್ದಾನೆ. ಇದು ಅವನ ಕಾರ್ಯತತ್ಪರತೆಯನ್ನು ಮತ್ತು ಬದ್ದತೆಯನ್ನು ತೋರಿಸುತ್ತದೆ. 

 - ಡಾ. ಬಿ.ಟಿ ಮುದ್ದೇಶ (ನಿದೇರ್ಶಕರು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment