Monday, August 19, 2024

ಆ.21 ರಂದು ಮುಖ್ಯಮಂತ್ರಿಗಳಿAದ ಕೃಷ್ಣೆಗೆ ಬಾಗಿನ ಅರ್ಪಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಆ.21 ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅಂದು ಬೆಳಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿ, 10.50 ಕ್ಕೆ ಗಿಣಿಗೆರಾ ಏರಸ್ಟಿçಪ್ ಕೊಪ್ಪಳ ಜಿಲ್ಲೆಗೆ ಆಗಮಿಸಿ, ಬೆಳಗ್ಗೆ 11 ಗಂಟೆಗೆ ಕೊಪ್ಪಳದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12.30ಕ್ಕೆ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಿ,  ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಆಶ್ರಯದಲ್ಲಿ ಆ.21 ರಂದು ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತಿç ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ನಾಡಿನ ಪ್ರತಿಷ್ಠಿತ ಆಲಮಟ್ಟಿ ಅಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ನಿಮಿತ್ತ ಅಂದು ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ ಉಪಸ್ಥಿತಿ ವಹಿಸಲಿದ್ದು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆದ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪೂರ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



No comments:

Post a Comment