Wednesday, August 7, 2024

ರಾಜ್ಯದಾದ್ಯಂತ ಅನಿರ್ದಿಷ್ಟ ಕಾಲಾವಧಿಗೆ ಮುಷ್ಕರಕ್ಕೆ ನಿರ್ಧಾರ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ಶಿಕ್ಷಕರ ಸಂಘದಿ0ದ ಮನವಿ

ವಿಜಯಪುರ : ಶಿಕ್ಷಕರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲಾ ಘಟಕದಿಂದ ಇಂದು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಶಿಕ್ಷಕರ ವಿವಿಧ ಬೇಡಿಕೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸಂಘದ ಜಿಲ್ಲಾಧ್ಯಕ್ಷರಾದ ಜಿ.ಎಸ್. ಬೆವನೂರ ಇವರ ನೇತೃತ್ವದಲ್ಲಿ ಮನವಿ ಸಲ್ಲಿಸಿ, ದಿನಾಂಕ : 12-08-2024 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ರಾಜ್ಯದ ಸಮಸ್ತ ಶಿಕ್ಷಕರು ಕೈಗೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದಕ್ಕೆ ಸರಕಾರ ಸಕರಾತ್ಮಕವಾಗಿ ಸ್ಪಂಧಿಸದಿದ್ದಲ್ಲಿ ರಾಜ್ಯಾದ್ಯಂತ PSಖಿ ಶಿಕ್ಷಕರು ಶಾಲಾ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟ ಮುಷ್ಕರ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

2017 ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಉಲ್ಲೇಖ (1)ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ “ಪದವೀಧರ ಶಿಕ್ಷಕರೆಂದು” ಪದನಾಮೀಕರಿಸುವುದು. ವೃಂದ ಮತ್ತು ನೇಮಕಾತಿ ನಿಯಮಗಳು 2016 ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತ: 1-7/8 ಕ್ಕೆ ನೇಮಕ ಹೊಂದಿದವರನ್ನು PSಖಿ ಎಂದು ಪದನಾಮ ಮಾಡಿ 1-5 ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. 

ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ 1 ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಅರ್ಹ ವಿದ್ಯಾರ್ಹತೆ (ಪದವಿ+ಶಿಕ್ಷಣ ತರಬೇತಿ) ಹೊಂದಿದ 2016ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆ (ಅಚಿಡಿಡಿಥಿ ಈoಡಿತಿಚಿಡಿಜiಟಿg Seಟಿioಡಿiಣಥಿ) ಯೊಂದಿಗೆ ಬಡ್ತಿ ನೀಡುವುದ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ. 

ಈ ಸಂದರ್ಭದಲ್ಲಿ ರಾಜ್ಯ ಕೋಶಾಧ್ಯಕ್ಷರಾದ ಸುರೇಶ ಶೇಡಶ್ಯಾಳ ಅರ್ಜುನ.ಜಿ. ಲಮಾಣಿ, ಜುಬೇರ ಕೆರೂರ, ಬಿ.ಟಿ. ಗೌಡರ, ರವೀಂದ್ರ ಉಗಾರ, ನಿಜು ಎಂ. ಮೇಲಿನಕೇರಿ, ಎಮ್.ಎಮ್. ವಾಲಿಕಾರ, ಶ್ರೀಮತಿ ಪುಷ್ಪಾ ಗಚ್ಚಿನಮಠ, ಶ್ರೀಮತಿ ರೇಣುಕಾ ಆಳೂರ, ಶ್ರೀಮತಿ ಎಸ್.ಎಸ್. ಕುಲಕರ್ಣಿ, ಗಿರಿಶ ಗತಾಟೆ, ಟಿ.ಕೆ. ಜಂಬಗಿ, ಆರ್.ಆರ್. ಹುಣಶಿಗಿಡದ, ಎಸ್.ಎನ್. ಪಡಶೆಟ್ಟಿ, ಸಾಹೇಬಲಾಲ ದಳವಾಯಿ, ಎಚ್. ಎಮ್. ಚಿತ್ತರಕಿ, ವಾಯ್. ಟಿ. ಪಾಟೀಲ, ಆನಂದ ಭೂಸನೂರ, ಎ.ಬಿ. ಧಡಕೆ, ಎಸ್.ಎಸ್. ಸೊನ್ನಗಿ, ಎ.ಎಚ್. ವಾಲಿಕಾರ, ಶ್ರೀ ಬಿ.ಎಸ್. ಮಠ, ಎಮ್.ಎಸ್. ಮುಕಾರ್ತಿಹಾಳ, ಬಿ.ಟಿ. ವಜ್ಜಲ, ಬಿ.ಎಸ್. ಮಜ್ಜಗಿ, ಹಾಗೂ ಎಸ್.ಡಿ. ಪಾಟೀಲ, ಶ್ರೀವಾನಂದ ಮಂಗಾನವರ, ಎಸ್.ಆರ್. ಪಾಟೀಲ ಮತ್ತು ಎಲ್ಲ ತಾಲೂಕುಗಳ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಪ್ರತಿನಿಧಿಗಳು, ಶಿಕ್ಷಕರು ಭಾಗವಹಿಸಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment