Monday, September 30, 2024

01-10-2024 EE DIVASA KANNADA DAILY NEWS PAPER

ಅದ್ಧೂರಿಯಿ0ದ ಜರುಗಿದ ಕರ್ನಾಟಕ ಸಂಭ್ರಮ-50 ಆಚರಣೆ ಗಡಿನಾಡ ಚೇತನರಿಗೆ ಪ್ರಶಸ್ತಿ ಪ್ರದಾನ

ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ, ಜತ್ತ ತಾಲ್ಲೂಕಿನ ಗುಡ್ಡಾಪುರ ಶ್ರೀ ದಾನಮ್ಮ ದೇವಿ ಸುಕ್ಷೇತ್ರದಲ್ಲಿ ಸೆಪ್ಟೆಂಬರ್ 30 ರಂದು ಕರ್ನಾಟಕ ಸಂಭ್ರಮ-50'ರ ಆಚರಣೆಯ ಜೊತೆಯಲ್ಲಿ ಶ್ರೀಮತಿ ಡಾ.ಜಯದೇವಿ ತಾಯಿ ಲಿಗಾಡೆ" "ನಾಡೋಜ ಡಾ.ಕಯ್ಯಾರ ಕಿಂಞ್ಞಣ್ಣ ರೈ ಮತ್ತು "ಡಾ. ಚನ್ನಬಸವ ಪಟ್ಟದ್ದೇವರು ಇವರ ಹೆಸರಿನಲ್ಲಿ ಗಡಿ ಪ್ರಾಧಿಕಾರದಿಂದ ನೀಡುತ್ತಿರುವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಹೊರನಾಡ ಗಡಿ ಕನ್ನಡಿಗರ ಸಮಾವೇಶ ನಡೆಯಿತು.

ಬರಗೂರು ರಾಮಚಂದ್ರಪ್ಪ ಅವರ ಸಮಿತಿಯ ಆಯ್ಕೆ ಮಾಡಿರುವ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಮಾಡಲಾಯಿತು.

2023-24ನೇ ಸಾಲಿಗೆ ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರು ಗಡಿನಾಡಿನ ಚೇತನ ಪ್ರಶಸ್ತಿಗೆ ಕಾಸರಗೋಡಿನ ರಾಧಾಕೃಷ್ಣ ಕೆ. ಉಳಿಯತ್ತಡ, ಡಾ. ಜಯದೇವಿ ತಾಯಿ ಲಿಗಾಡೆ ಗಡಿನಾಡ ಚೇತನ ಪ್ರಶಸ್ತಿಗೆ ಬೀದರದ ಪಂಚಾಕ್ಷರಿ ಪುಣ್ಯ ಶೆಟ್ಟಿ, ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ ಪ್ರಶಸ್ತಿಯನ್ನು ಬೆಳಗಾವಿಯ ಬಿ.ಎಸ್. ಗವಿಮಠ ಹಾಗೂ 2024-25ನೇ ಸಾಲಿನ ಡಾ. ಚನ್ನಬಸವ ಪಟ್ಟದ್ದೇವರು ಗಡಿನಾಡ ಚೇತನ ಪ್ರಶಸ್ತಿಯನ್ನು ಗುಜರಾತಿನ ಅಹ್ಮದಾಬಾದ್‌ನ ಕರ್ನಾಟಕ ಸಂಘ, ಜಯದೇವಿ ತಾಯಿ ಲಿಗಾಡೆ ಗಡಿನಾಡಿನ ಚೇತನ ಪ್ರಶಸ್ತಿಯನ್ನು ಮಹಾರಾಷ್ಟ್ರ ರಾಜ್ಯದ ಸಂಖದ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಉಮದಿಯ ಸರ್ವೋದಯ ಶಿಕ್ಷಣ ಸಂಸ್ಥೆಯನ್ನು, ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ ಪ್ರಶಸ್ತಿಯನ್ನಹ ಕೇರಳ ರಾಜ್ಯದ ಕಾಸರಗೋಡಿನ ಪೆರಡಾಲ ನೀರ್ಚಾಲು, ಕುಂಬಳೆ (ದಾರಿ) ಮಹಾಜನ ವಿದ್ಯಾಭಿವರ್ಧಕ ಸಂಘಕ್ಕೆ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಹಲ್ಮಿಡಿ ಶಾಸನದ ಮಾದರಿಯ ಸ್ಮರಣಿಕೆ, ಪ್ರಮಾಣ ಪತ್ರ ಹಾಗೂ ಒಂದು ಲಕ್ಷ ರೂ. ನಗದು ಒಳಗೊಂಡಿದೆ.

ಇದಕ್ಕೂ ಮೊದಲು ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನದಿಂದ ವೇದಿಕೆಯವರೆಗೆ ಡೊಳ್ಳು ಕುಣಿತ,ಕರಡಿ ಮಜಲು,ವೀರಗಾಸೆ,ತಾಸೆ ವಾದನ,ಜಗ್ಗಲಗಿ,ನಂದಿ ಕೋಲು,ಹಾಲಕ್ಕಿ ಸುಗ್ಗಿ ಕುಣಿತ,ಸತ್ತಿಗೆ ಕುಣಿತ,ಗೊಂಬೆ ಕುಣಿತದ ವಿವಿಧ ಜಾನಪದ ಕಲಾ ತಂಡಗಳಿAದ ಮೆರವಣಿಗೆ ನಡೆಯಿತು.

ಮಹಾರಾಷ್ಟ್ರ ರಾಜ್ಯದ ಕನ್ನಡ ಶಾಲೆಗಳಿಗೆ ಕನ್ನಡ ಭಾಷೆಯ 'ನಲಿ-ಕಲಿ' ಕಲಿಕಾ ಸಾಮಗ್ರಿಗಳು ವಿತರಣೆ ಮಾಡಲಾಯಿತು.

 ಸಮಾರಂಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ "ಲಾಂಛನ" ಸಾಕ್ಷ್ಯ ಚಿತ್ರ ಹಾಗೂ ಪ್ರಶಸ್ತಿ ಪುರಸ್ಕೃತರ ಪರಿಚಯಾತ್ಮಕ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗಡಿನಾಡಲ್ಲಿ ಕನ್ನಡ ಡಿಂಡಿಮ

ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡ ಕರ್ನಾಟಕ ಸಂಭ್ರಮ -50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಸಾಂಸ್ಕೃತಿಕ ಕಾರ್ಯಕ್ರಮ, ಗಡಿನಾಡ ಕನ್ನಡಿಗರ ಸಮಾವೇಶ ಹಾಗೂ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವು ಅತ್ಯಂತ ಸಂಭ್ರಮ ಸಡಗರದಿಂದ ನಡೆಯಿತು.

 ಕರ್ನಾಟಕ ಸಂಭ್ರಮ-50ರ ಕಾರ್ಯಕ್ರಮದಲ್ಲಿ ಹಬ್ಬದ ಸಡಗರ ಮನೆ ಮಾಡಿತ್ತು. ಅನೇಕ ಭಕ್ತರ ಆರಾಧ್ಯ ದೈವ ಸುಕ್ಷೇತ್ರ ಶ್ರೀ ದಾನಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಸಂಭ್ರಮದ ಅಂಗವಾಗಿ ನಡೆದ ಕಾರ್ಯಕ್ರಮ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿದ ವಿವಿಧ ಕಲಾಪ್ರಕಾರಗಳು ಇಲ್ಲಿ ಅನಾವರಣಗೊಂಡು ಪ್ರೇಕ್ಷಕರ ಮನಮುಟ್ಟಿದವು.

ಸಮಾವೇಶದಲ್ಲಿ ಹಲವಾರು ಕಲಾ ಪ್ರಕಾರದ ಸಾಂಸ್ಕೃತಿಕ, ಜಾನಪದ ಕಲೆಗಳ ಅನಾವರಣಗೊಂಡವು. ಸಂಪೂರ್ಣ ಕರ್ನಾಟಕದ ಕಲೆ, ಇತಿಹಾಸ, ಸಾಂಸ್ಕೃತಿಕ ಪರಿಚಯ ಮಾಡಿಸಿತು.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದ ಪ್ರೇಕ್ಷಕರ ಮನಗೆದ್ದವು.ವಿವಿಧ ಅಕಾಡೆಮಿಗಳ ಸಹಯೋಗದಲ್ಲಿ ಹೊನ್ನ ಬಿತ್ತೆವು ನೃತ್ಯ ರೂಪಕ, ಕರ್ನಾಟಕ ಲಲಿತ ಕಲಾ ಅಕಾಡೆಮಿ ಹಾಗೂ ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ ವತಿಯಿಂದ ದೃಶ್ಯಯಾನ ರೂಪಕ ಮತ್ತು ಶಿಲ್ಪಕಲಾ ಪ್ರಾತ್ಯಕ್ಷಿಕೆ ಹಾಗೂ ಪ್ರದರ್ಶನ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಕನ್ನಡ ನೃತ್ಯ ರೂಪಕ, ಕಾಸರಗೋಡಿನ ಕೆ.ವಿ. ರಮೇಶ ತಂಡದವರಿAದ ಯಕ್ಷಗಾನ ಗೊಂಬೆಯಾಟ, ಜತ್ತ ಮತ್ತು ಅಕ್ಕಲಕೋಟೆಯ ವಿವಿಧ ಸ್ಥಳೀಯ ಕಲಾವಿದರಿಂದ ಕನ್ನಡ ಗೀತೆ ಹಾಗೂ ಭಾವಗೀತೆಗಳು, ವಿಜಯಪುರದ ರಂಗನಾಥ ಬತಾಸೆ ತಂಡದವರಿAದ ನೃತ್ಯರೂಪಕ, ಶ್ರೀಮತಿ ಸಂಗೀತಾ ಕಟ್ಟಿ ಅವರಿಂದ ಕನ್ನಡ ಗೀತಗಾಯನ, ಪ್ರಕಾಶ ಮಲ್ಲಿಗವಾಡ ಮತ್ತು ಲಲಿತಾ ಚಾಕಲಬ್ಬಿ ತಂಡದವರಿAದ ಜಾನಪದ ನೃತ್ಯಗಳು, ಶ್ರೀಮತಿ ಹೇಮಾ ಪಾಟೀಲ ಅವರಿಂದ ದಾರದಿಂದ ಬರೆಯುವ ಚಿತ್ರ ಪ್ರದರ್ಶನ, ಗಂಗಾವತಿ ಪ್ರಾಣೇಶ್ ಅವರ ತಂಡದಿAದ ಕನ್ನಡ ನಗೆ ಹಬ್ಬ ಸೇರಿದಂತೆ ಅನೇಕ ಕನ್ನಡ ಕಲೆಯ ಅನಾವರಣಗೊಂಡವು. ನಾಡಿನ ವಿವಿಧ ಮೂಲೆ ಮೂಲೆಗಳಿಂದ ಆಗಮಿಸಿದ ಕಲಾವಿದರು ತಮ್ಮ ಕಲೆಯ ಪ್ರದರ್ಶನ ನೀಡಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗಡಿ ಕನ್ನಡಿಗರ ಸಮಸ್ಯೆ ನಮ್ಮ ಸಮಸ್ಯೆ -ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ -ಸಚಿವ ಶಿವರಾಜ ಎಸ್.ತಂಗಡಗಿ ಭರವಸೆ

ವಿಜಯಪುರ : ರಾಜ್ಯದ 742 ಗ್ರಾಮಗಳಲ್ಲಿ ವಾಸಿಸುವ ಕನ್ನಡಿಗರ ಸಮಸ್ಯೆ ನಮ್ಮ ಸಮಸ್ಯೆ, ಗಡಿನಾಡ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಿ, ಕನ್ನಡಿಗರು ವಾಸಿಸುವ ಗ್ರಾಮಗಳಲ್ಲಿ ಅಗತ್ಯವಿರುವ ರಸ್ತೆ, ನೀರು, ಬಸ್ ಸೌಕರ್ಯ, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಅವರು ಭರವಸೆ ನೀಡಿದರು.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ವಿಜಯಪುರ, ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನÀ್ಟ÷ಕರ್ನಾಟಕ ಹಾಗೂ ಮಹಾರಾಷ್ಟç ರಾಜ್ಯದ ಕನ್ನಡ ಸಂಘಟನೆಗಳ ಸಹಯೋಗದಲ್ಲಿ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಸೋಮವಾರ ಹಮ್ಮಿಕೊಂಡ ಕರ್ನಾಟಕ ಸಂಭ್ರಮ-50, ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕರ್ನಾಟಕ ಗಡಿ ಪ್ರಾಧಿಕಾರದ ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು. 

ರಾಜ್ಯದಲ್ಲಿಯೇ ಮೊಟ್ಟಮೊದಲ ಬಾರಿಗೆ ಇಂತಹ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇದಕ್ಕೂ ಮುನ್ನ ಸಾಹಿತಿಗಳು ತಮ್ಮ ವಿಚಾರಗಳನ್ನು ಅಭಿವ್ಯಕ್ತಪಡಿಸಲು ಮುಕ್ತ ಅವಕಾಶವನ್ನು ನೀಡಿ ಮೈಸೂರಿನಲ್ಲಿ ಸಾಹಿತಿಗಳ ಚಿಂತನಾ ಸಮಾವೇಶ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟç ಗಡಿ ಭಾಗದಲ್ಲಿ ಪರಸ್ಪರ ಅನ್ಯೂನ್ಯ, ಪ್ರೀತಿ, ವಿಶ್ವಾಸ ಬೆಳೆಸಿ, ಉಭಯ ರಾಜ್ಯದ ಜನರು ಸಾಮರಸ್ಯದಿಂದ ಬದುಕಲು ಗಡಿಭಾಗದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು. 

ರಾಜ್ಯದ ಗಡಿ ಭಾಗದಲ್ಲಿರುವ ಪ್ರತಿಯೊಬ್ಬ ಕನ್ನಡಿಗರ ಸಮಸ್ಯೆಗಳಿಗೆ ಸರ್ಕಾರ ನಿರಂತರವಾಗಿ ಸ್ಪಂದಿಸುತ್ತಲಿದ್ದು, ಗಡಿಭಾಗದ ಜನರ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಕರ್ನಾಟಕ ಸರ್ಕಾರ ಪ್ರಯತ್ನಿಸಿಲಿದೆ. ನಾನು ಸಹ ಗಡಿ ಭಾಗದ ಜನರ ಸಮಸ್ಯೆಗಳನ್ನು ಪರಿಶೀಲಿಸಿ, ಅವರಿಗೆ ದೊರಕಿಸಬಹುದಾದ ಮೂಲಭೂತ ಸೌಕರ್ಯಗಳಾದ ರಸ್ತೆ, ನೀರು, ಶಿಕ್ಷಣ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯ ದೊರಕಿಸಲು ಈ ಭಾಗದ ಜನರ ಸಮಸ್ಯೆಗಳ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಅವರು ಹೇಳಿದರು. 

ನಾನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವನಾದ ಮೇಲೆ ಗಡಿ ಭಾಗದ ಮಹಾರಾಷ್ಟç ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಇಂತಹ ಅದ್ಭುತ ಸಾಮರಸ್ಯದ ಪ್ರತೀಕವಾದ ಕನ್ನಡ ಸಮಾವೇಶ ಹಮ್ಮಿಕೊಂಡಿರುವುದು ಅತೀವ ಸಂತಸ ತಂದಿದೆ. ಗುಡ್ಡಾಪುರ ದಾನಮ್ಮ ದೇವಸ್ಥಾನಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕ ಜನರು ಬರುವುದರಿಂದ ಈ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅಗತ್ಯ ಅನುದಾನವನ್ನು ನಮ್ಮ ಸರ್ಕಾರದಿಂದ ಒದಗಿಸಲಾಗುವುದು. ಈ ಹಿಂದೆ ಹಲವಾರು ಪ್ರಶಸ್ತಿಗಳನ್ನು ನೀಡಿದ್ದರೂ ಸಹ ಈ ಐತಿಹಾಸಿಕ ಸಮಾವೇಶದಲ್ಲಿ, ಕನ್ನಡ ನಾಡು-ನುಡಿ, ಸಂಸ್ಕೃತಿ, ಸಾಹಿತ್ಯ, ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ, ಕನ್ನಡ ಭಾಷೆ ಅಳಿವು-ಉಳಿವಿಗಾಗಿ ಶ್ರಮಿಸಿದ ಮಹಾನ್ ಗಡಿನಾಡ ಚೇತನರನ್ನು ಗುರುತಿಸಿ ಪ್ರಶಸ್ತಿ ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು. 

ಕರ್ನಾಟಕ-50 ವರ್ಷ ಹಿನ್ನೆಲೆಯಲ್ಲಿ ಬರುವ ನವೆಂಬರ್ 1 ರಂದು 69 ಜನರಿಗೆ ರಾಜ್ಯ ಪ್ರಶಸ್ತಿ ನೀಡಿ, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದರು. 

ಸಮಾವೇಶದಲ್ಲಿ ಮಹಾರಾಷ್ಟç ಕನ್ನಡಿಗರಿಂದ ಬೇಡಿಕೆಗಳನ್ನು ಸಲ್ಲಿಸಿ, ಉದ್ಯೋಗದಲ್ಲಿ ಭದ್ರತೆ, ಅಂಗನವಾಡಿಗಳಲ್ಲಿ ಕನ್ನಡ ಆದ್ಯತೆ, ಸರ್ಕಾರಿ ಪ್ರೌಢಶಾಲೆ ಆರಂಭ, ಗಡಿ ಭಾಗದ-ಮಹಾರಾಷ್ಟçದ ಕನ್ನಡ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ನೇಮಕ, ಕನ್ನಡದಲ್ಲಿ ಟಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡಲು ಮಹಾರಾಷ್ಟç ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು, ಕನ್ನಡ ಶಾಲೆಗಳಿಗೆ ಕನ್ನಡ ಸಾಹಿತ್ಯಿಕ ಪುಸ್ತಕಗಳು, ಪರಿಕರಗಳನ್ನು ಒದಗಿಸುವುದು, ಮಹಾರಾಷ್ಟç ರಾಜ್ಯದ ವಿವಿಧ ನಗರಗಳಲ್ಲಿ ಕನ್ನಡ ಭವನ ನಿರ್ಮಾಣ, ನವೋದಯ, ಮೊರಾರ್ಜಿ ಶಾಲೆಗಳಲ್ಲಿ ಗಡಿ ಕನ್ನಡಿಗರ ಪ್ರವೇಶಕ್ಕೆ ಆದ್ಯತೆ, ಉಚಿತ ಸಾರಿಗೆ ಸೌಕರ್ಯ ಸೇರಿದಂತೆ ಗಡಿನಾಡಿನಲ್ಲಿ ಕನ್ನಡ, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ಸಚಿವರಿಗೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಈ ಎಲ್ಲ ಬೇಡಿಕೆಗಳನ್ನು ಹಂತ-ಹAತವಾಗಿ ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು. 

ಜವಳಿ, ಕಬ್ಬು ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸಾಕ್ಷö್ಯಚಿತ್ರಕ್ಕೆ ಚಾಲನೆ ನೀಡಿ, ಸಮಾವೇಶವನ್ನು ಉದ್ಧೇಶಿಸಿ ಮಾತನಾಡಿದ ಅವರು, ಬಹಳ ದಿನಗಳ ನಂತರ ಗಡಿಭಾಗದಲ್ಲಿ ಇಂತಹ ಸಾಮರಸ್ಯ ಮೂಡಿಸುವ ಐತಿಹಾಸಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಭಾಷೆ ಬೇರೆ-ಬೇರೆಯಾಗಿದ್ದರೂ ಸಹ ಮನಸ್ಸು ಒಂದೇ ಆಗಿದೆ. ಪ್ರತಿಯೊಬ್ಬರು ನಾವು ಭಾರತೀಯರು ಎಂಬ ಸಂದೇಶ ಸಾರಬೇಕು ಎಂದು ಹೇಳಿದರು. 

ಕನ್ನಡಿಗರು ಸೋಲಾಪುರ, ಸಾಂಗ್ಲಿ ಸೇರಿದಂತೆ ದೇಶದ ಯಾವ ಮೂಲೆಯಲ್ಲಾದರೂ ವಾಸಿಸಿದರೂ ಕನ್ನಡಿಗರ ಸಮಸ್ಯೆಗಳಿಗೆ ನಮ್ಮ ಸರ್ಕಾರ ಸದಾ ಸ್ಪಂದಿಸಲಿದೆ. ಕರ್ನಾಟಕ-ಆಂಧ್ರ ಹಾಗೂ ಮಹಾರಾಷ್ಟç ರಾಜ್ಯಗಳು ಒಂದಾಗಿ ಪರಸ್ಪರ ಸಮನ್ವಯತೆಯಿಂದ ನಿರ್ಧಾರ ಕೈಗೊಂಡು ಕೃಷ್ಣಾ ನೀರನ್ನು ಬಳಕೆ ಮಾಡಿಕೊಂಡಲ್ಲಿ ಐತಿಹಾಸಿಕವಾಗಲಿದೆ. ಇಡಿ ದೇಶಕ್ಕೆ ಮಾದರಿಯಾಗಲಿದೆ. ಪ್ರತಿ ವರ್ಷÀ 300 ರಿಂದ 500 ಟಿಎಂಸಿ ಸಮುದ್ರ ಪಾಲಾಗುವ ನೀರು ಬಳಕೆಮಾಡಿಕೊಂಡಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾದಂತಾಗುತ್ತದೆ. ಈ ನಿಟ್ಟಿನಲ್ಲಿ ಮೂರು ಸರ್ಕಾರಗಳು ಚಿಂತನೆ ನಡೆಸುವ ಅವಶ್ಯಕತೆ ಇದೆ ಎಂದು ಅವರು ಹೇಳಿದರು. 

ಸಮಾವೇಶದಲ್ಲಿ ಸಾಂಗ್ಲಿ ಜಿಲ್ಲೆಯ ಜತ್ತ ಶಾಸಕ ವಿಕ್ರಮಸಿಂಹ ಬಾಳಾಸಾಹೇಬ ಸಾವಂತ ಮಾತನಾಡಿದರು. ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕರಾದ ಸೋಮಣ್ಣ ಬೇವಿನಮರದ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾವೇಶದಲ್ಲಿ ಕನ್ನಡ ಶಾಲೆ ವಿದ್ಯಾರ್ಥಿಗಳಿಗೆ ನಲಿ-ಕಲಿ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದಿಂದ ಹೊರ ತಂದಿರುವ ಗಡಿಯಲ್ಲಿ ಭಾಷಾ ಸಾಮರಸ್ಯ ಪುಸ್ತಕ ಬಿಡುಗಡೆ ಮಾಡಲಾಯಿತು. 2023-24ನೇ ಸಾಲಿನ ಹಾಗೂ 2024-25ನೇ ಸಾಲಿನ ಗಡಿ ಪ್ರಾಧಿಕಾರದಿಂದ ನೀಡುವ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಮಾಡಲಾಯಿತು. 

 ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಬಾಲ ವಿಕಾಸ ಅಕಾಡೆಮಿಕ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ದಾನಮ್ಮದೇವಿ ಟ್ರಸ್ಟ್ನ ಅಧ್ಯಕ್ಷ ವಿಜುಗೌಡ ಪಾಟೀಲ,, ಎಂ.ಎಸ್.ಮದಭಾವಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಶಿಂಪೀರ ವಾಲೀಕಾರ, ಸೇರಿದಂತೆ ವಿವಿಧ ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರು, ಇತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ ಸ್ವಾಗತಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Sunday, September 29, 2024

ಅ.6 ರಂದು ಜನಕಲಾ ಸಾಂಸ್ಕೃತಿಕ ಮೇಳ

ಈ ದಿವಸ ವಾರ್ತೆ

ವಿಜಯಪುರ: ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಅ.6, 2024 ರಂದು ಜನಕಲಾ ಸಾಂಸ್ಕೃತಿಕ ಮೇಳ- 2024 ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಲಡಾಯಿ ಪ್ರಕಾಶನದ ಬಸವರಾಜ ಸೂಳಿಬಾವಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವ ಬಂಧುತ್ವ ವೇದಿಕೆ, ದಲಿತ ಸಂಘಟನೆಗಳ ಮಹಾ ಒಕ್ಕೂಟ ಸೇರಿದಂತೆ ಹಲವಾರು ಸಂಘ, ಸಂಸ್ಥೆಗಳ ಆಶ್ರಯದಲ್ಲಿ ಅಂದು ಜನಕಲಾ ಸಾಂಸ್ಕೃತಿಕ ಮೇಳ ಹಮ್ಮಿಕೊಳ್ಳಾಗಿದ್ದು, ಬಸಮ್ಮ ಪೀರಪ್ಪ ನಡುವಿನಮನಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಲಕ್ಷ್ಮೀಪತಿ ಕೋಲಾರ, ಮೈಸೂರಿನ ಜನಾರ್ಧನ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ದಾವಣಗೆರೆಯ ಬಿ. ಶ್ರೀನಿವಾಸ ಆಶಯ ಮಾತುಗಳನ್ನು ಆಡಲಿದ್ದಾರೆ ಎಂದರು.

ವಿವಿಧ ಸಾಂಸ್ಕೃತಿಕ ಮೇಳದಲ್ಲಿ ಹಲವು ತಂಡಗಳು ಭಾಗವಹಿಸಲಿದ್ದು, ಸಂಜೆ ಕಾರ್ಯಕ್ರಮ ಸಮಾರೋಪ ನಡೆಯಲಿದೆ. ದಾವಣಗೆರೆಯ ಎ.ಬಿ. ರಾಮಚಂದ್ರಪ್ಪ, ಧಾರವಾಡದ ಬಸವರಾಜ ಹೂಗಾರ ಪಾಲ್ಗೊಳ್ಳಲ್ಲಿದ್ದಾರೆ. ಬಳಿಕ ಡಾ.ಎಂ.ಎಂ. ಕಲಬುರ್ಗಿ ಜೀವನಾಧಾರಿತ, ಸಮುದಾಯ ರಾಯಚೂರು ಪ್ರಸ್ತುತಪಡಿಸುವ ರಕ್ತ ವಿಲಾಪ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.

ಮುಖಂಡರಾದ ಅನಿಲ ಹೊಸಮನಿ, ಚನ್ನು ಮೂಲಿಮನಿ, ನಾಗರಾಜ ಲಂಬು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

30-09-2024 EE DIVASA KANNADA DAILY NEWS PAPER

ಸೆಪ್ಟೆಂಬರ್ 30ರಂದು ಗುಡ್ಡಾಪುರದಲ್ಲಿ ಕರ್ನಾಟಕ ಸಂಭ್ರಮ-50 ಸಕಲ ಸಿದ್ಧತೆ ಕೈಗೊಳ್ಳಲಾಗಿದೆ

ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ವಿಜಯಪುರ, ದಾನಮ್ಮ ದೇವಿ ಟ್ರಸ್ಟ್ ಹಾಗೂ ಕನ್ನಡಪರ ಸಂಘಟನೆಗಳು ಇವರ ಸಹಯೋಗದಲ್ಲಿ ಗುಡ್ಡಾಪುರದ ಶ್ರೀ ದಾನಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಸೆ.30ರಂದು ನಡೆಯುವ ಕರ್ನಾಟಕ ಸಂಭ್ರಮ -50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಸಾಂಸ್ಕೃತಿಕ ಕಾರ್ಯಕ್ರಮ, ಗಡಿನಾಡ ಕನ್ನಡಿಗರ ಸಮಾವೇಶ ಹಾಗೂ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭsÀವನ್ನು ಅತ್ಯಂತ ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.

ಅವರು ಭಾನುವಾರ ಗುಡ್ಡಾಪುರದಲ್ಲಿ ಕಾರ್ಯಕ್ರಮದ ವೇದಿಕೆ ಸೇರಿದಂತೆ ವಿವಿಧ ಕಾರ್ಯಗಳ ಪೂರ್ವ ಸಿದ್ಧತಾ ಪರಿಶೀಲನೆ ನಡೆಸಿ ಮಾತನಾಡಿ, ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಜಿಲ್ಲಾಡಳಿತದ ಸಹಯೋಗದಲ್ಲಿ ನಿರ್ವಹಿಸಲಾಗಿದೆ. ಹದಿನಾಲ್ಕು ಸಮಿತಿಗಳನ್ನು ರಚಿಸಿ ಕೆಲಸ ಕಾರ್ಯಗಳನ್ನು ಆಯಾ ಸಮಿತಿಗೆ ವಹಿಸಿದ್ದು, ಎಲ್ಲ ಸಮಿತಿಯವರು ವಹಿಸಿದ ಜವಾಬ್ದಾರಿಗಳನ್ನು ಬಹಳಷ್ಟು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಸೆಪ್ಟೆಂಬರ್ 30 ರಂದು ನಡೆಯುವ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಗಮಿಸುತಿದ್ದು, ಗುಡ್ಡಾಪುರದಲ್ಲಿ ಈಗಾಗಲೇ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಅಂದು ಹಲವಾರು ಕಲಾ ಪ್ರಕಾರದ ಸಾಂಸ್ಕೃತಿಕ, ಜಾನಪದ ಕಲೆಗಳ ಅನಾವರಣಗೊಳ್ಳಲಿದೆ. ಸಂಪೂರ್ಣ ಕರ್ನಾಟಕದ ಕಲೆ, ಇತಿಹಾಸ, ಸಾಂಸ್ಕೃತಿಕ ಪರಿಚಯ ಮಾಡಿಸುವ ವೇದಿಕೆ ಇದಾಗಿದ್ದು, ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರೂ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರು ಆಗಮಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿವಿಧ ಅಕಾಡೆಮಿಗಳ ಸಹಯೋಗದಲ್ಲಿ ಹೊನ್ನ ಬಿತ್ತೆವು ನೃತ್ಯ ರೂಪಕ, ಕರ್ನಾಟಕ ಲಲಿತ ಕಲಾ ಅಕಾಡೆಮಿ ಹಾಗೂ ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ ವತಿಯಿಂದ ದೃಶ್ಯಯಾನ ರೂಪಕ ಮತ್ತು ಶಿಲ್ಪಕಲಾ ಪ್ರಾತ್ಯಕ್ಷಿಕೆ ಹಾಗೂ ಪ್ರದರ್ಶನ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಕನ್ನಡ ನೃತ್ಯ ರೂಪಕ, ಕಾಸರಗೋಡಿನ ಕೆ.ವಿ. ರಮೇಶ ತಂಡದವರಿAದ ಯಕ್ಷಗಾನ ಗೊಂಬೆಯಾಟ, ಜತ್ತ ಮತ್ತು ಅಕ್ಕಲಕೋಟೆಯ ವಿವಿಧ ಸ್ಥಳೀಯ ಕಲಾವಿದರಿಂದ ಕನ್ನಡ ಗೀತೆಗಳು ಹಾಗೂ ಭಾವಗೀತೆಗಳು, ವಿಜಯಪುರದ ರಂಗನಾಥ ಬತಾಸೆ ತಂಡದವರಿAದ ನೃತ್ಯರೂಪಕ, ಶ್ರೀಮತಿ ಸಂಗೀತಾ ಕಟ್ಟಿ ಅವರಿಂದ ಕನ್ನಡ ಗೀತಗಾಯನ, ಪ್ರಕಾಶ ಮಲ್ಲಿಗವಾಡ ಮತ್ತು ಲಲಿತಾ ಚಾಕಲಬ್ಬಿ ತಂಡದವರಿAದ ಜಾನಪದ ನೃತ್ಯಗಳು, ಶ್ರೀಮತಿ ಹೇಮಾ ಪಾಟೀಲ ಅವರಿಂದ ದಾರದಿಂದ ಬರೆಯುವ ಚಿತ್ರ ಪ್ರದರ್ಶನ, ಗಂಗಾವತಿ ಪ್ರಾಣೇಶ್ ಅವರ ತಂಡದಿAದ ಕನ್ನಡ ನಗೆ ಹಬ್ಬ ಸೇರಿದಂತೆ ಅನೇಕ ಕನ್ನಡ ಕಲೆಯ ಅನಾವರಣಗೊಳ್ಳಲಿವೆ. ನಾಡಿನ ವಿವಿಧ ಮೂಲೆ ಮೂಲೆಗಳಿಂದ ಆಗಮಿಸಿದ ಕಲಾವಿದರು ತಮ್ಮ ಕಲೆಯ ಪ್ರದರ್ಶನ ನೀಡಲಿದ್ದಾರೆ.

ಈ ಸಂದರ್ಭ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಗಡಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ಗಡಿ ಪ್ರಾಧಿಕಾರದ ಸದಸ್ಯ ಎಂ.ಎಸ್. ಮದಬಾವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಚೆನ್ನೂರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ ಸೌದಾಗರ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಿ.ಬಿ ಚಿಕ್ಕಲಕಿ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು, ಗುಡ್ಡಾಪುರ ದಾನಮ್ಮದೇವಿ ಟ್ರಸ್ಟ್ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, September 21, 2024

22-09-2024 EE DIVASA KANNADA DAILY NEWS PAPER

ಸೆ.22 ರಂದು ಗುಮ್ಮಟ ನಗರದಲ್ಲಿ ಸರಿಗಮಪ ಆಡಿಷನ್

ವಿಜಯಪುರ: ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು ಯುವ ಪ್ರತಿಭೆಗಳನ್ನು ಕರುನಾಡಿಗೆ ಪರಿಚಯಿಸಿರುವ ಕನ್ನಡದ ನಂ. 1 ವಾಹಿನಿ ಜೀ ಕನ್ನಡ, ಈಗ ಮತ್ತೊಮ್ಮೆ ಸರಿಗಮಪ ರಿಯಾಲಿಟಿ ಶೋ ಮೂಲಕ ಕರುನಾಡಿನ ಹಾಡುಗರನ್ನು ಹುಡುಕುವ ಕೆಲಸ ಶುರುಮಾಡಿದ್ದು, ಸೆ.22 ರಂದು ಗುಮ್ಮಟ ನಗರದಲ್ಲಿ ಸರಿಗಮಪ ಆಡಿಷನ್ ಮಾಡಲಿದೆ.

ಅಂದು ಬೆಳಗ್ಗೆ 9 ಗಂಟೆಗೆ, ಬಿಎಲ್‌ಡಿಇ ಸಮನ್ವಯ ಆಂಗ್ಲ ಮಾಧ್ಯಮ ಶಾಲೆ, ಪಾಟೀಲ್ ಹೋಂಡಾ ಶೋರೂಂ ಎದುರು, ವಿ2 ಹಾಗೂ ಎಸ್‌ಎಸ್ ಪಿಯು ಕಾಲೇಜ್ ಹತ್ತಿರ ಬಿಎಲ್‌ಡಿಇ ರೋಡ ವಿಜಯಪುರದಲ್ಲಿ ಆಡಿಷನ್ ಹಮ್ಮಿಕೊಳ್ಳಲಾಗಿದೆ. ಜೀ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಾದ ಡ್ರಾಮಾ ಜೂನಿಯರ್ಸ್, ಕಾಮಿಡಿ ಕಿಲಾಡಿಗಳು, ಡಿಕೆಡಿ ಮತ್ತು ಮಹಾನಟಿ ಮೂಲಕ ಈಗಾಗಲೆ ಸಾಕಷ್ಟು ನಟ- ನಟಿಯರು, ಗಾಯಕ- ಗಾಯಕಿಯರು ಹಾಗೂ ಕೊರಿಯೋಗ್ರಾಫರ್‌ಗಳನ್ನ ಕರುನಾಡಿಗೆ ಕೊಟ್ಟಿರುವ ಜೀ ಕನ್ನಡ ವಾಹಿನಿ ಇದೀಗ ಸರಿಗಮಪ ಶೋ ಮೂಲಕ ನಿಮ್ಮೂರಿನಲ್ಲಿರುವ ಗಾಯಕ- ಗಾಯಕಿಯಾಗುವ ಕನಸು ಹೊತ್ತಿರುವ, ಪ್ರತಿಭೆಗಳಿಗೆ ವೇದಿಕೆಯಾಗಲು ಬಂದಿದೆ. ಕಳೆದ ಬಾರಿ ವಿದೇಶಿ ಕನ್ನಡಿಗ ಪ್ರತಿಭೆಗಳೊಂದಿಗೆ ಕನ್ನಡದ ಕಂಪನ್ನ ಜಗತ್ತಿಗೆ ಬಿತ್ತರಿಸಿ ಸರಿಗಮಪ ಈ ಬಾರಿ 6 ರಿಂದ 60 ವಯಸ್ಸಿನ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಸಜ್ಜಾಗಿದೆ. 

 ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಚಿಸುವವರು 2 ಪಾಸ್ಪೋರ್ಟ್ ಸೈಜ್ ಭಾವಚಿತ್ರ ಜೊತೆ ಅಡ್ರಸ್ ಪ್ರೂಫ್ ಜೆರಾಕ್ಸ್ ತೆಗೆದುಕೊಂಡು ಬಂದು ಭಾಗವಹಿಸಬಹುದಾಗಿದೆ. ಜೀ ಕನ್ನಡ ನಡೆಸುವ ಈ ಆಡಿಷನ್ ಪ್ರಕ್ರಿಯೆಯಲ್ಲಿ ಯಾವುದೇ ಹಣವನ್ನ ಪಡೆಯಲಾಗುವುದಿಲ್ಲವೆಂದು ವಾಹಿನಿ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Sunday, September 15, 2024

16-09-2024 EE DIVASA KANNADA DAILY NEWS PAPER

15ನೇ ದಿನಕ್ಕೆ ಕಾಲಿಟ್ಟ ಟಿಪಿಜೆಪಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ

ವಿಜಯಪುರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬ (ಟಿಪಿಜೆಪಿ) ಪದಾಧಿಕಾರಿಗಳು ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದ ಮುಂದೆ ಹಮ್ಮಿಕೊಂಡ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಭಾನ್ರುವಾರ 15ನೇ ದಿನಕ್ಕೆ ಕಾಲಿಟ್ಟಿದೆ.

ಈ ಸಂದರ್ಭದಲ್ಲಿ ಟಿಪಿಜೆಪಿ ಆಲಮೇಲ ತಾಲೂಕಾ ಉಪಾಧ್ಯಕ್ಷರಾದ ಮಂಜುಕುಮಾರ ಕಾಂಬಳೆ ಮಾತನಾಡಿ, ಇಲ್ಲಿಯವರೆಗೂ 15 ದಿನಗಳ ವರೆಗೆ ನಿರಂತರ ಶಾಂತ ರೀತಿಯಲ್ಲಿ ಹೋರಾಟ ಮಾಡಿಕೊಂಡು ಬಂದಿದ್ದು ಇರುತ್ತದೆ. ಆದರೂ ಸರ್ಕಾರ ಸ್ಪಂದಿಸದೆ ಇರುವುದು ಸರ್ಕಾರದ ನಿಷ್ಕಾಳಜಿತನ ಎತ್ತಿ ತೋರಿಸುತ್ತದೆ. ಕೂಡಲೇ ಶೀಘ್ರವಾಗಿ ನಮ್ಮ ಹಣವನ್ನು ನಮಗೆ ಮರಳಿಸಬೇಕು ಕೂಡಲೇ ನಮ್ಮ ಸಮಸ್ಯೆಗೆ ಸ್ಪಂದಿಸದೆ ಇದ್ದರೆ ಮುಂದಿನ ದಿನಮಾನಗಳಲ್ಲಿ ನಾವು ಉಗ್ರವಾದ ಹೋರಾಟ ಹಮ್ಮಿಕೊಂಡು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬಾಬು ಪಟೇಲ ಬಿರಾದಾರ ಮಾತನಾಡಿ, ಸರ್ಕಾರ ಬಡವರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಬಡವರ ಮೇಲಿನ ಕಾಳಜಿ ವಹಿಸದೆ ನಿರ್ಲಕ್ಷö್ಯ ತೋರಿಸುತ್ತಿರುವುದು ದುರದುಷ್ಟಕರವಾಗಿದೆ. ಆದಷ್ಟು ಬೇಗನೆ ಬಡವರ ಹಣವನ್ನು ಮರಳಿಸಿ ಬಡವರ ಜೀವನವನ್ನು ಉಳಿಸಬೇಕು ಎಂದರು.

ಈ ಸಂದÀರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಎಸ್.ಬಿ. ಸಿನ್ನೂರ, ಕಾರ್ಯದರ್ಶಿ ಆರ್.ಕೆ. ದೊಡಮನಿ, ಮಂಜು ಕಾಂಬಳೆ, ಲಾಲಸಾಬ ವಾಲೀಕಾರ, ಆರ್.ಪಿ. ಮಹೇಂದ್ರಕರ, ಯಶವಂತ ಗಾಯಕವಾಡ, ಬಿ.ಎಂ.ಬಿರಾದಾರ, ಸುರೇಶ ಹಡಪದ, ಸಂಗಣ್ಣ ಪೀರಾಪೂರ, ಮಲ್ಲಮ್ಮ ಕಾಂಬಳೆ, ನೀಲಮ್ಮ ಲೋಣಿ, ಶ್ಯಾಮಲಾಬಾಯಿ ಈರನಕೇರಿ, ನೀಲಮ್ಮ ವಸ್ತçದ, ನಾಗಮ್ಮ ಬಿರಾದಾರ ಸೇರಿದಂತೆ ನೂರಾರು ನೊಂದ ಗ್ರಾಹಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, September 14, 2024

15-09-2024 EE DIVASA KANNADA DAILY NEWS PAPER

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲೆಯ ಪ್ರವಾಸಿ ತಾಣಗಳ ಕಿರುಚಿತ್ರ-ಛಾಯಾಚಿತ್ರ ಸ್ಪರ್ಧೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

 ವಿಜಯಪುರ : ಪ್ರವಾಸೋದ್ಯಮ ಮತ್ತು ಶಾಂತಿ ಸಂದೇಶದಡಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-2024 ಅಂಗವಾಗಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಿಲ್ಲೆಯ ಪ್ರವಾಸಿ ತಾಣಗಳ ಕಿರುಚಿತ್ರ-ಛಾಯಾಚಿತ್ರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. 

 ಸ್ಪರ್ಧೆಗಳಲ್ಲಿ ಸೋಷಿಯಲ್ ಮೀಡಿಯಾ ಇನಪ್ಲೂಯೆನ್ಸರ್ ಹವ್ಯಾಸಿ ಛಾಯಾಚಿತ್ರಕಾರರು, ಪ್ರವಾಸೋದ್ಯಮ ವಲಯದ ಪಾಲುದಾರರು ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದಾಗಿದೆ. 

 ಕಿರುಚಿತ್ರ ಹಾಗೂ ಛಾಯಾಚಿತ್ರ ಸ್ಪರ್ಧೆಗಳಲ್ಲಿ ಭಾಗವಹಿಸುವವರು, ದಿನಾಂಕ : 20-09-2024ರೊಳಗಾಗಿ ಉಪನಿರ್ದೇಶಕರ ಕಾರ್ಯಾಲಯ, ಪ್ರವಾಸೋದ್ಯಮ ಇಲಾಖೆ, ಪ್ರವಾಸಿ ಪ್ಲಾಜಾ, ಬ್ಲಾಕ್-1, ಇಂಡಿ ರಸ್ತೆ, ವಿಜಯಪುರ-586101 ಇಮೇಲ್ : 

adrtobijapur2014@gmail.com ದೂರವಾಣಿ : 08352-250359 ವಿಳಾಸಕ್ಕೆ ಕಿರುಚಿತ್ರ-ಛಾಯಾಚಿತ್ರಗಳನ್ನು ಸಲ್ಲಿಸಬೇಕು. 

 ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ವಿಶೇಷ ಬಹುಮಾನಗಳನ್ನು ಸೆ.27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅನೀಲಕುಮಾರ ಬಣಜಿಗೇರ ಮೊ: 9886373006, ಮಹ್ಮದಗೌಸ್ ಮೊ: 9008500690 ಸಂಖ್ಯೆಗೆ ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, September 13, 2024

14-09-2024 EE DIVASA KANNADA DAILY NEWS PAPER

ನಾಳೆ ನಡೆಯಬೇಕಾಗಿದ್ದ ಕೆಪಿಎಸ್ ಸಿ ಪರೀಕ್ಷೆ ಮುಂದೂಡಿಕೆ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು.

ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬAಧಿಸಿದAತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ " ಎಂದು ತಿಳಿಸಲಾಗಿರುತ್ತದೆ.

ಮೇಲ್ಕಂಡ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ದಿ:13-03-2024ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕಾಗಿರುತ್ತದೆ.

ಆದ್ದರಿಂದ ದಿನಾಂಕ:14-09-2024 ರ ಕನ್ನಡ ಭಾಷಾ ಪರೀಕ್ಷೆ ಮತ್ತು ದಿನಾಂಕ: 15-09-2024ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಸದರಿ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ನೀಡಿ, ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಾಕಾಶ ಮುಕ್ತಾಯವಾದ ನಂತರ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗಕ ಕಾರ್ಯದರ್ಶಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ʻಅನುವಾದ ಸಂಪದʼ - ವಿಚಾರ ಸಂಕಿರಣ ಮತ್ತು ಕಾರ್ಯಾಗಾರ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ವಿಜಯಪುರದ ಎ. ಎಸ್. ಪಾಟೀಲ್ ವಾಣಿಜ್ಯ ಕಾಲೇಜಿನಲ್ಲಿ ‘ಉನ್ನತ ಶಿಕ್ಷಣ ಹಂತದಲ್ಲಿ ಭಾರತೀಯ ಭಾಷೆಗಳಲ್ಲಿ ಸಂವಾದದ ಸಂಸ್ಕೃತಿ – ಸಮಕಾಲೀನ ಜಿಜ್ಞಾಸೆ ಮತ್ತು ಪ್ರಯತ್ನಗಳುʼ ಎಂಬ ವಿಷಯದ ಕುರಿತ ಒಂದು ದಿನದ ವಿಚಾರ ಸಂಕಿರಣ ಮತ್ತು ಕಾರ್ಯಾಗಾರವು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ಸಂತೋಷ್‌ ಕಾಮಗೌಡ, ಕೆ.ಎ.ಎಸ್‌ (ಹಿರಿಯ ಶ್ರೇಣಿ), “ಅನುವಾದ ಸಂಪದದ ವೇದಿಕೆ ಕನ್ನಡ ಭಾಷೆಯಲ್ಲಿ ಸಂಪನ್ಮೂಲ ಬಳಸಿಕೊಳ್ಳಲು, ಸೃಷ್ಟಿ ಮಾಡಲು, ಬಹುಸಾಮಾಜಿಕ ನೆಲೆಗಟ್ಟಿನಲ್ಲಿ ಪರಸ್ಪರ ಅಭಿಪ್ರಾಯ ಹಂಚಿಕೊಳ್ಳುವ ವೇದಿಕೆ.” ಎಂದು ಹೇಳಿದರು. 

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಸಹ ನಿರ್ದೇಶಕ ಎಸ್.ವಿ,ಮಂಜುನಾಥ್‌, ಅನುವಾದ ಸಂಪದದ ಉದ್ದೇಶ ವಿವರಿಸುತ್ತಾ, “ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿವಿಧ ವಿಷಯಗಳಲ್ಲಿ ಆಳವಾದ ಜ್ಞಾನ ಹೊಂದಿ, ವಿವಿಧ ಸನ್ನಿವೇಶಗಳಲ್ಲಿ ಅನ್ವಯಿಸಿ ನೋಡಿ ಅರಿವನ್ನು ಮರುರೂಪಿಸಿಕೊಳ್ಳಲು ಇರುವ ಮುಕ್ತ ಸಂಪನ್ಮೂಲ ಕಣಜವಾಗಿದೆ” ಎಂದರು. 

ಎ ಎಸ್ ಪಾಟೀಲ್ ವಾಣಿಜ್ಯ ಕಾಲೇಜು ಪ್ರಾಂಶುಪಾಲ ಪ್ರೊ. ಬಿ ಎಸ್ ಬೆಳಗಲಿ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಿಕ್ಷಣ ಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಕನಕಪ್ಪ ಪೂಜಾರ ಉಪಸ್ಥಿತರಿದ್ದರು.

ಬೆಂಗಳೂರಿನ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ಮತ್ತು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲ್ಪಟ್ಟ ಈ ವಿಚಾರ ಗೋಷ್ಠಿ ಮತ್ತು ಕಾರ್ಯಾಗಾರವನ್ನು, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ʻಅನುವಾದ ಸಂಪದʼದ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಹಮ್ಮಿಕೊಳ್ಳಲಾಗಿತ್ತು. ʻಅನುವಾದ ಸಂಪದʼವು ಇಂಗ್ಲಿಷ್‌ನಿಂದ ಭಾರತೀಯ ಭಾಷೆಗಳಿಗೆ ಅನುವಾದಿಸಲಾದ ಶೈಕ್ಷಣಿಕ ಸಂಪನ್ಮೂಲಗಳ ಉಚಿತ ಹಾಗೂ ಮುಕ್ತ ಡಿಜಿಟಲ್‌ ಕಣಜವಾಗಿದೆ.

ಪರಿಕಲ್ಪನಾತ್ಮಕ ಗ್ರಹಿಕೆಯ ಸಂವರ್ಧನೆʼ 

ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ʼ ಪ್ರಾದೇಶಿಕ ಭಾಷೆಗಳಲ್ಲಿನ ಶೈಕ್ಷಣಿಕ ಸಂಪನ್ಮೂಲಗಳ ಮೂಲಕ ಪರಿಕಲ್ಪನಾತ್ಮಕ ಗ್ರಹಿಕೆಯ ಸಂವರ್ಧನೆʼ ಕುರಿತ ವಿಚಾರಗೋಷ್ಠಿಯಲ್ಲಿ ಭಾಗವಹಿಸಿದ ಪ್ರೊ. ಆರ್‌ ಅಮೃತವಲ್ಲಿ, ನಿವೃತ್ತ ಪ್ರಾಧ್ಯಾಪಕರು, ಭಾಷಾಶಾಸ್ತ್ರ ಅಧ್ಯಯನ ವಿಭಾಗ, ಇಂಗ್ಲಿಷ್‌ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯ, ಹೈದರಾಬಾದ್‌, ಇವರು “ಮಕ್ಕಳಿಗೆ ಓದನ್ನು ಕಲಿಸುವ ಮೊದಲು ನಾವು ಹೇಗೆ ಓದುತ್ತಿದ್ದೇವೆ  ಎಂಬುದನ್ನು ಗುರುತಿಸಬೇಕು. ಧ್ವನಿ, ಲಿಪಿಗಳ ಸಮನ್ವಯ, ಧ್ವನ್ಯಂಗಗಳ ಕಾರ್ಯ ಪ್ರಕ್ರಿಯೆಗಳನ್ನು ಮೊದಲು ಅರಿಯಬೇಕು. ಸರಿಗಮ ಜೋಡಿಸಿ ಸಂಗೀತ ಕಲಿತಂತೆ ಅಕ್ಷರ ಅಕ್ಷರ ಜೋಡಿಸಿ ಶಬ್ದ ಓದಬೇಕು. ವಿದೇಶಿ ಭಾಷೆಯಾದ ಇಂಗ್ಲಿಷ್ ಕಲಿಕೆ ಮಕ್ಕಳಿಗೆ ಇಂದು ಕಷ್ಟವಾಗುತ್ತಿದೆ. ಸೀಮಿತ ಚೌಕಟ್ಟಿನಾಚೆ ಬಂದು ಪರಿಚಿತ ಪರಿಸರದಲ್ಲಿ ಏನಿದೆಯೋ ಅದನ್ನು ನೋಡಿ  ನಾವು ಕಲಿಯಬೇಕು. ಇಂಗ್ಲಿಷ್ ಮಾಧ್ಯಮ ಕೇವಲ ಹೆಸರಿಗೆ ಮಾತ್ರ ಇರಬಾರದು. ಕಲಿಕಾ ಪರಿಸರ, ಕಲಿಕೆಯ ಆಯ್ಕೆಯ ಅವಕಾಶಗಳು, ಅನುಭವಾತ್ಮಕ ಅಂಶಗಳ ಮೂಲಕ ಭಾಷಾ ಕಲಿಕೆಯನ್ನು ನಾವು ನೋಡಬೇಕು.” ಎಂದು ಹೇಳಿದರು. ಪ್ರೊ. ಗಣೇಶ್‌ ಯು. ಎಚ್‌., ನಿವೃತ್ತ ಇಂಗ್ಲಿಷ್‌ ಪ್ರಾಧ್ಯಾಪಕರು, ತುಂಗಾ ಕಾಲೇಜು, ತೀರ್ಥಹಳ್ಳಿ, ಇವರು ಮಾತನಾಡಿ, “ಭಾಷಾ ಬೋಧನೆಯಲ್ಲಿ ಸಾಹಿತ್ಯದ ಪಾತ್ರ ಅನನ್ಯವಾದುದು. ಕವಿತೆಯ ಪ್ರಾಸ, ಲಯಗಳು ಮಕ್ಕಳನ್ನು ಸೆಳೆಯುತ್ತವೆ. ಕೇವಲ ಉಪಕರಣಾತ್ಮಕ ರೂಪವಾಗಿ ಮಾತ್ರ ಭಾಷೆಯನ್ನು ನೋಡದೆ ಸೌಂದರ್ಯಾತ್ಮಕವಾಗಿ ನೋಡಲು, ಮೌಲ್ಯ ಪ್ರಜ್ಞೆ ಬೆಳೆಸಲು ಸಾಹಿತ್ಯವು ಭಾಷೆಗೆ ಸಹಾಯ ಮಾಡುತ್ತದೆ” ಎಂದರು. ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಸ್ಕೂಲ್‌ ಆಫ್‌ ಆರ್ಟ್ಸ್‌ ಅಂಡ್‌ ಸೈನ್ಸನ್‌ನಲ್ಲಿ ಬೋಧಕರಾಗಿರುವ ಶ್ರೀಕಂಠ ದಾನಿ ಮಾತನಾಡಿ, “ವಿಜ್ಞಾನ ಎಂಬುದು ಬಂಡವಾಳವಲ್ಲ. ಅದೊಂದು ವಿಸ್ಮಯ, ಕೌತುಕ ಎಂಬ ಭಾವನೆಯನ್ನು ಮೊದಲು ಮಕ್ಕಳಲ್ಲಿ ಬೆಳೆಸಬೇಕು. ದೊಡ್ಡ ದೊಡ್ಡ ಆವಿಷ್ಕಾರಗಳ ಜೊತೆಗೆ ಸಣ್ಣ ಸಣ್ಣ ಆವಿಷ್ಕಾರಗಳನ್ನೂ ಮಕ್ಕಳ ಅನುಭವಕ್ಕೆ ತರಬೇಕು. ನೆಲದ ಸೊಗಡಿರುವ ಉದಾಹರಣೆಗಳು ಪಠ್ಯಪುಸ್ತಕದಲ್ಲಿ ಬರಬೇಕು‌. ಯಾವುದನ್ನು ಯಾರಿಗೆ, ಯಾರಿಗೋಸ್ಕರ ಅನುವಾದ ಮಾಡಬೇಕು ಎಂಬ ಔಚಿತ್ಯಪ್ರಜ್ಞೆಯೊಂದಿಗೆ ವಿಜ್ಞಾನದ ಭಾಷೆಯ ಅನುವಾದ ಸರಳವಾಗಿರಬೇಕು” ಎಂದು ಹೇಳಿದರು. ಎಸ್‌. ವಿ. ಮಂಜುನಾಥ್‌, ಸಹ ನಿರ್ದೇಶಕರು, ಕನ್ನಡ ಉಪಕ್ರಮ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ, ಇವರು ವಿಚಾರ ಗೋಷ್ಠಿಯನ್ನು ನಡೆಸಿಕೊಟ್ಟರು.

ಒಂದು ದಿನದ ಈ ಕಾರ್ಯಕ್ರಮವು, ʻಅನುವಾದ ಸಂಪದʼ (https://anuvadasampada.azimpremjiuniversity.edu.in/) ಕಣಜದಲ್ಲಿ ದೊರೆಯುವ ವೈವಿಧ್ಯಮಯ ಸಂಪನ್ಮೂಲಗಳನ್ನು ಶಿಕ್ಷಣ ಕ್ಷೇತ್ರದಲ್ಲಿರುವ ಭಾಗೀದಾರರಿಗೆ ಪರಿಚಯಿಸಿತು. ವಿಚಾರ ಗೋಷಿಠಿಯ ನಂತರ ನಡೆದ ಕಾರ್ಯಾಗಾರದಲ್ಲಿ, ಸುಮಾರು 200 ಶಿಕ್ಷಕರು, ಶಿಕ್ಷಕ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ವಿಷಯಗಳಲ್ಲಿ ತಮ್ಮ ವೃತ್ತಿಪರ ಬೆಳವಣಿಗೆ ಮತ್ತು ತರಗತಿ ಕೋಣೆಯ ಅನ್ವಯಕ್ಕಾಗಿ ಪ್ರಸ್ತುತವೆನ್ನಿಸುವ ಸಾಮಗ್ರಿಗಳನ್ನು ಗುರುತಿಸಿಕೊಂಡರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, September 11, 2024

ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರತಿ ತಿಂಗಳು 2 ಪುಟ ವಿಶೇಷ ಜಾಹೀರಾತು ನೀಡಲು ಭೀಮರಾಯ ಹದ್ದಿನಾಳ ಒತ್ತಾಯ

ರಾಯಚೂರು :  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ  ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವಂತಹ ಏಳು ಜಿಲ್ಲೆಗಳ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರಡು ಪುಟಗಳ ವಿಶೇಷ   ಜಾಹೀರಾತು ನೀಡಬೇಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಭೀಮರಾಯ ಹದ್ದಿನಾಳ ಒತ್ತಾಯಿಸಿದರು.

ಅವರು ಬುಧವಾರ ನಗರದ ಪತ್ರಿಕಾಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 371 ಜೆ ಅಡಿಯಲ್ಲಿ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಈವರೆಗೂ ಯಾವುದೇ ಸೌಲಭ್ಯ ನೀಡಿಲ್ಲ. ಸರ್ಕಾರವು ಈ ನಿಟ್ಟಿನಲ್ಲಿ ಗಮನ ಹರಿಸಬೇಕಾಗಿದೆ.

ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರಕಟವಾಗುತ್ತಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರಡು ಪುಟ ಜಾಹೀರಾತು ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು. ಈ  ಮೂಲಕ ಪತ್ರಿಕೆಗಳಿಗೆ ಉತ್ತೇಜನ ನೀಡಬೇಕು ಎಂದರು.

ಸಂವಿಧಾನದ ಕಲಂ ೩೭೧(ಜೆ) ಅನ್ವಯ ವಿಶೇಷ ಸ್ಥಾನಮಾನ ಕಲ್ಪಿಸಲಾಗಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಏಳು ಜಿಲ್ಲೆಗಳಲ್ಲಿ ಪ್ರಕಟವಾಗುವ ಪತ್ರಿಕೆಗಳಿಗೆ ಕರ್ನಾಟಕ ಸರ್ಕಾರದ ಜಾಹೀರಾತು ನೀತಿ-೨೦೧೩ ಮತ್ತು ಅನುಷ್ಠಾನ ನಿಯಮಗಳು-೨೦೧೪ ಅಧ್ಯಾಯ ೪ ಅಂಗೀಕೃತ ಮಾಧ್ಯಮ ಪಟ್ಟಿ-೧೧೭/೧)ರ ಅನ್ವಯ ಪ್ರಸಾರ ಸಂಖ್ಯೆ ಮತ್ತು ಮಾಧ್ಯಮ ಪಟ್ಟಿಗೆ ಸೇರ್ಪಡೆಗೆ ವಿಶೇಷ ರಿಯಾಯಿತಿ ಕಲ್ಪಿಸಲಾಗಿದೆ. ೩೭೧ (ಜೆ) ಅನುಷ್ಠಾನ ಮಾರ್ಗಸೂಚಿಯಲ್ಲಿ ಸ್ಥಳೀಯ ಪತ್ರಿಕೆಗಳ ಸಬಲೀಕರಣಕ್ಕೆ ಉತ್ತೇಜನ ನೀಡಲು ಸೂಚಿಸಲಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಸ್ಥಳೀಯ ಪತ್ರಿಕೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಜಾಹೀರಾತು ನೀಡಲು ಅವಕಾಶವಿರುತ್ತದೆ ಎಂದರು.

ಸೆ.17 ರಂದು ಕಲಬುರಗಿ ನಗರದಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ. ಅಂದು ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಸಂಪಾದಕರ ಸಂಘವು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಈಗಾಗಲೇ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರಿಗೂ ಆಯಾ ಜಿಲ್ಲಾ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಲಿದ್ದಾರೆ ಎಂದ ಅವರು, ಕಲ್ಯಾಣ ಕರ್ನಾಟಕ ಭಾಗದ ಪತ್ರಿಕೆಗಳಿಗೆ ವಿಶೇಷ ಸೌಲಭ್ಯ ನೀಡುವ ಸಂಬಂಧ ಹೊಸದಾಗಿ ರಚಿಸುವ ಜಾಹೀರಾತು ನೀತಿಯಲ್ಲಿ ಸೇರಿಸಲು ಸಂಘವು ಮುಂದಿನ ದಿನಗಳಲ್ಲಿ ಮನವಿ ಮಾಡಲಿದೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚನ್ನಬಸವ ಬಾಗಲವಾಡ, ರಾಜ್ಯ ಖಜಾಂಚಿ ಖಾನ್ ಸಾಬ್ ಮೋಮಿನ್ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, September 10, 2024

ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಅರ್ಜುನ ಗೊಳಸಂಗಿ ಅವರಿಗೆ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಸ್ಥೆವತಿಯಿಂದ ಆತ್ಮೀಯ ಸನ್ಮಾನ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಹಿರಿಯ ಸಾಹಿತಿ ಡಾ. ಅರ್ಜುನ ಗೊಳಸಂಗಿ ಅವರಿಗೆ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಸ್ಥೆ (ರಿ) ವತಿಯಿಂದ ಸಂಸ್ಥೆಯ ನೂತನ ಕಚೇರಿಯಲ್ಲಿ ಸಾಹಿತಿ , ಪತ್ರಕರ್ತ ಕಲ್ಲಪ್ಪ ಶಿವಶರಣ ವಿರಚಿತ ಕಲ್ಲು ಮನಸ್ಸು ಕೃತಿ ನೀಡಿ ಹಾಗೂ ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಿವಶರಣ ಶೈಕ್ಷಣಿಕ, ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಸ್ಥೆ ಅಧ್ಯಕ್ಷ ಕಲ್ಲಪ್ಪ ಶಿವಶರಣ, ತೆರಿಗೆ ಇಲಾಖೆಯ ಅಧಿಕಾರಿಗಳಾದ ಸುರೇಶ ಗೊಳಸಂಗಿ, ಹಿರಿಯ ಪತ್ರಕರ್ತ, ಸಾಹಿತಿ ಪರಶುರಾಮ ಶಿವಶರಣ, ಲಕ್ಷ್ಮಣ ಲೋಗಾಂವಿ, ಸಂಶೋಧಕ ಲಾಯಪ್ಪ ಇಂಗಳೆ, ಪತ್ರಕರ್ತ ಉಮೇಶ ಶಿವಶರಣ, ಸಾಗರ ಲಾಯದಗುಂದಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

11-09-2024 EE DIVASA KANNADA DAILY NEWS PAPER

Thursday, September 5, 2024

06-09-2024 EE DIVASA KANNADA DAILY NEWS PAPER

ಗಣೇಶೋತ್ಸವ: ಎಫ್‌ಎಸ್‌ಎಸ್‌ಎಐ ಪರವಾನಗಿ ಅವೈಜ್ಞಾನಿಕ

ವಿಜಯಪುರ: ಗಣೇಶೋತ್ಸವ ಪ್ರಸಾದಕ್ಕೆ ಎಫ್‌ಎಸ್‌ಎಸ್‌ಎಐ ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿAದ ಮಾತ್ರ ಪ್ರಸಾದ ಪಡೆಯಬೇಕೆಂಬ ನಿಯಮಾವಳಿ ಅವೈಜ್ಞಾನಿಕ ಹಾಗೂ ಹಿಂದೂ ಹಬ್ಬಗಳನ್ನು, ಆಚರಣೆಗಳನ್ನು ಹತ್ತಿಕ್ಕುವ ಪ್ರಯತ್ನ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.

ಈ ಕುರಿತಂತೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು, ರಾಜ್ಯದ ಜನರ ಮೇಲೆ ಅಷ್ಟೊಂದು ಕಾಳಜಿ ಇದ್ದಲ್ಲಿ, ಇದೇ ನಿಯಮವನ್ನು ಹೋಟೆಲ್, ಡಾಬಾ ಹಾಗೂ ಹಲಾಲ್ ಮಾಂಸವನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳಿಗೂ ಅನ್ವಯ ಆಗಬೇಕಾಗಿತ್ತು. ಇನ್ನೇನು, ಹಬ್ಬಕ್ಕೆ ಎರಡು ದಿನಗಳು ಇರಬೇಕಾದರೆ ಪಾಲಿಸಲಾಗದ ನಿಯಮವನ್ನು ಹೇರುವುದು ಸರ್ಕಾರದ ಹಿಂದೂ ವಿರೋಧಿ ನೀತಿ ತೋರಿಸುತ್ತದೆ. ಅನ್ಯಕೋಮಿನ ಹಬ್ಬಗಳಲ್ಲಿ ಬೀದಿ ಬೀದಿಯಲ್ಲಿ ಪ್ರಾಣಿಬಲಿ ನೀಡಿ, ಅದರಿಂದ ಮಾಂಸ ಮಾರಾಟ ಮಾಡುವವರಿಗೂ ಈ ನಿಯಮ ಅನ್ವಯ ಆಗುತ್ತಾ ?. ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಆಹಾರ ತಯಾರು ಮಾಡಬೇಕಾದರೆ ಎಫ್‌ಎಸ್‌ಎಸ್‌ಎಎಲ್ ಪರವಾನಗಿ ಪಡೆದವರಿಂದ ಸರ್ಕಾರ ಮಾಡಿಸುತ್ತಿದೆಯಾ ? ಬೀದಿ, ಬೀದಿಗಳಲ್ಲಿ ಕಳಪೆ ಗುಣಮಟ್ಟದ ಉತ್ಪನ್ನಗಳನ್ನು ಉಪಯೋಗಿಸಿ ತಿಂಡಿ, ಊಟ ಮಾಡುವವರಿಗೂ ಈ ನಿಯಮ ಅನ್ವಯ ಆಗುತ್ತಾ ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಕ್ಕಳಲ್ಲಿನ ಪೌಷ್ಟಿಕತೆ ಕೊರತೆ ಕುರಿತು ಅರಿವು ಮೂಡಿಸುವುದು ಅವಶ್ಯ

ವಿಜಯಪುರ: ಮಕ್ಕಳಲ್ಲಿ ಕಂಡುಬರುತ್ತಿರುವ ಪೌಷ್ಟಿಕತೆಯ ಕೊರತೆ ಕುರಿತು ಪಾಲಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧಿಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಗರಗಿ ಹೇಳಿದರು.

ನಗರದ ಬಿಎಲ್‌ಡಿಇ ಸಂಸ್ಥೆಯ ಎವ್ಹಿಎಸ್ ಆಯುರ್ವೇದ ಮಹಾವಿದ್ಯಾಲಯ ಕೌಮಾರಭೃತ್ಯ ವಿಭಾಗದಲ್ಲಿ ಹಮ್ಮಿಕೊಂಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಶಿಶು ಅಭಿವೃದ್ಧಿ ಯೋಜನೆ ನಿಮಿತ್ತ ರಾಷ್ಟಿçಯ ಪೋಷಣ ಮಾಸಾಚರಣೆ ಮತ್ತು ವಿಶ್ವ ಪೌಷ್ಟಿಕ ಆಹಾರ ಸಪ್ತಾಹ ದಿನಾಚರಣೆ ಹಾಗೂ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪೌಷ್ಟಿಕತೆಯ ಕೊರತೆ ಉಂಟಾಗುತ್ತಿದೆ. ಈ ಕುರಿತು ಜನಜಾಗೃತಿ ಮೂಡಿಸಬೇಕಾಗಿದೆ. ಇದಕ್ಕೆ ಸಂಬAಧಿಸಿದ ಇಲಾಖೆಗಳ ಮೂಲಕ ಹಾಗೂ ಆಯುರ್ವೇದ ಮಹಾವಿದ್ಯಾಲಯದ ಸಹಯೋಗದೊಂದಿಗೆ ಜನಸಾಮಾನ್ಯರಲ್ಲಿ ಆಯುರ್ವೆದಿಯ ಪೊಷಣಮುಕ್ತ ಆಹಾರ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನಿಯ ಎಂದರು.

ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಾಗಿರುವ ಕೆಲಸ ಕಾರ್ಯಗಳಿಗೆ ಮಹಾವಿದ್ಯಾಲಯದ ಕೌಮಾರಭೃತ್ಯ ವಿಭಾಗ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು.

ಈ ಕಾರ್ಯಕ್ರಮದ ನಂತರ ಆಗಮಿಸಿದ 50 ಮಕ್ಕಳಿಗೆ ಕೌಮಾರಭೃತ್ಯ ವಿಭಾಗ ವತಿಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಿ ಉಚಿತ ಔಷಧ ವಿತರಣೆ ಮಾಡಲಾಯಿತು. ಅಲ್ಲದೇ, ಈ ಕಾರ್ಯಕ್ರಮದ ನಿಮಿತ್ತ ಗರ್ಭಿಣಿಯರಿಗೆ ಸೀಮಂತ ಮತ್ತು ಮಕ್ಕಳಿಗೆ ಅನ್ನಪ್ರಾಶನ ಸಂಸ್ಕಾರ, ಪ್ರತಿ ತಾಯಿಗೊಂದು ಗಿಡ ಅನ್ನೊ ಎಂಬ ಧ್ಯೇಯ ವಾಕ್ಯದೊಂದಿಗೆ ಮಹಾವಿದ್ಯಾಲಯದ ಶ್ರೀವನದಲ್ಲಿ ಸಸಿ ನೆಡಲಾಯಿತು.

ಈ ಸಂದರ್ಭದಲ್ಲಿ ಬಸವರಾಜ ಜಿಗಳೂರ, ಡಾ. ಜಾವೇದ್ ಬಾಗಾಯತ, ಕೆ.ಕೆ. ಚವ್ಹಾಣ, ಅರವಿಂದ ಹಗರಗಿ, ಡಾ. ಕೆ.ಎ. ಪಾಟೀಲ, ಅನಿಲ ಹಳ್ಳಿ, ಡಾ. ವಿಜಯಲಕ್ಷಿö್ಮ ಬೆನಕಟ್ಟಿ, ಡಾ. ದೌಲಬಿ ಚೌಧರಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

05-09-2024 EE DIVASA KANNADA DAILY NEWS PAPER

Tuesday, September 3, 2024

ಫಾಸ್ಟ್‌ಫುಡ್‌ ತಯಾರಿಕಾ ಉಚಿತ ತರಬೇತಿಗೆ ಅರ್ಜಿ ಆಹ್ವಾನ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫಾಸ್ಟ್‌ಫುಡ್‌ ತಯಾರಿಕಾ ಕುರಿತ 10 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

   ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

  ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 13 ಕೊನೆಯ ದಿನವಾಗಿದೆ.

  ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

04-09-2024 EE DIVASA KANNADA DAILY NEWS PAPER

03-09-2024 EE DIVASA KANNADA DAILY NEWS PAPER

02-09-2024 EE DIVASA KANNADA DAILY NEWS PAPER

01-09-2024 EE DIVASA KANNADA DAILY NEWS PAPER