ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ, ಜತ್ತ ತಾಲ್ಲೂಕಿನ ಗುಡ್ಡಾಪುರ ಶ್ರೀ ದಾನಮ್ಮ ದೇವಿ ಸುಕ್ಷೇತ್ರದಲ್ಲಿ ಸೆಪ್ಟೆಂಬರ್ 30 ರಂದು ಕರ್ನಾಟಕ ಸಂಭ್ರಮ-50'ರ ಆಚರಣೆಯ ಜೊತೆಯಲ್ಲಿ ಶ್ರೀಮತಿ ಡಾ.ಜಯದೇವಿ ತಾಯಿ ಲಿಗಾಡೆ" "ನಾಡೋಜ ಡಾ.ಕಯ್ಯಾರ ಕಿಂಞ್ಞಣ್ಣ ರೈ ಮತ್ತು "ಡಾ. ಚನ್ನಬಸವ ಪಟ್ಟದ್ದೇವರು ಇವರ ಹೆಸರಿನಲ್ಲಿ ಗಡಿ ಪ್ರಾಧಿಕಾರದಿಂದ ನೀಡುತ್ತಿರುವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಹೊರನಾಡ ಗಡಿ ಕನ್ನಡಿಗರ ಸಮಾವೇಶ ನಡೆಯಿತು.
ಬರಗೂರು ರಾಮಚಂದ್ರಪ್ಪ ಅವರ ಸಮಿತಿಯ ಆಯ್ಕೆ ಮಾಡಿರುವ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಮಾಡಲಾಯಿತು.
2023-24ನೇ ಸಾಲಿಗೆ ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರು ಗಡಿನಾಡಿನ ಚೇತನ ಪ್ರಶಸ್ತಿಗೆ ಕಾಸರಗೋಡಿನ ರಾಧಾಕೃಷ್ಣ ಕೆ. ಉಳಿಯತ್ತಡ, ಡಾ. ಜಯದೇವಿ ತಾಯಿ ಲಿಗಾಡೆ ಗಡಿನಾಡ ಚೇತನ ಪ್ರಶಸ್ತಿಗೆ ಬೀದರದ ಪಂಚಾಕ್ಷರಿ ಪುಣ್ಯ ಶೆಟ್ಟಿ, ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ ಪ್ರಶಸ್ತಿಯನ್ನು ಬೆಳಗಾವಿಯ ಬಿ.ಎಸ್. ಗವಿಮಠ ಹಾಗೂ 2024-25ನೇ ಸಾಲಿನ ಡಾ. ಚನ್ನಬಸವ ಪಟ್ಟದ್ದೇವರು ಗಡಿನಾಡ ಚೇತನ ಪ್ರಶಸ್ತಿಯನ್ನು ಗುಜರಾತಿನ ಅಹ್ಮದಾಬಾದ್‌ನ ಕರ್ನಾಟಕ ಸಂಘ, ಜಯದೇವಿ ತಾಯಿ ಲಿಗಾಡೆ ಗಡಿನಾಡಿನ ಚೇತನ ಪ್ರಶಸ್ತಿಯನ್ನು ಮಹಾರಾಷ್ಟ್ರ ರಾಜ್ಯದ ಸಂಖದ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಉಮದಿಯ ಸರ್ವೋದಯ ಶಿಕ್ಷಣ ಸಂಸ್ಥೆಯನ್ನು, ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ ಪ್ರಶಸ್ತಿಯನ್ನಹ ಕೇರಳ ರಾಜ್ಯದ ಕಾಸರಗೋಡಿನ ಪೆರಡಾಲ ನೀರ್ಚಾಲು, ಕುಂಬಳೆ (ದಾರಿ) ಮಹಾಜನ ವಿದ್ಯಾಭಿವರ್ಧಕ ಸಂಘಕ್ಕೆ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಹಲ್ಮಿಡಿ ಶಾಸನದ ಮಾದರಿಯ ಸ್ಮರಣಿಕೆ, ಪ್ರಮಾಣ ಪತ್ರ ಹಾಗೂ ಒಂದು ಲಕ್ಷ ರೂ. ನಗದು ಒಳಗೊಂಡಿದೆ.
ಇದಕ್ಕೂ ಮೊದಲು ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನದಿಂದ ವೇದಿಕೆಯವರೆಗೆ ಡೊಳ್ಳು ಕುಣಿತ,ಕರಡಿ ಮಜಲು,ವೀರಗಾಸೆ,ತಾಸೆ ವಾದನ,ಜಗ್ಗಲಗಿ,ನಂದಿ ಕೋಲು,ಹಾಲಕ್ಕಿ ಸುಗ್ಗಿ ಕುಣಿತ,ಸತ್ತಿಗೆ ಕುಣಿತ,ಗೊಂಬೆ ಕುಣಿತದ ವಿವಿಧ ಜಾನಪದ ಕಲಾ ತಂಡಗಳಿAದ ಮೆರವಣಿಗೆ ನಡೆಯಿತು.
ಮಹಾರಾಷ್ಟ್ರ ರಾಜ್ಯದ ಕನ್ನಡ ಶಾಲೆಗಳಿಗೆ ಕನ್ನಡ ಭಾಷೆಯ 'ನಲಿ-ಕಲಿ' ಕಲಿಕಾ ಸಾಮಗ್ರಿಗಳು ವಿತರಣೆ ಮಾಡಲಾಯಿತು.
ಸಮಾರಂಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ "ಲಾಂಛನ" ಸಾಕ್ಷ್ಯ ಚಿತ್ರ ಹಾಗೂ ಪ್ರಶಸ್ತಿ ಪುರಸ್ಕೃತರ ಪರಿಚಯಾತ್ಮಕ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment