Thursday, September 5, 2024

ಮಕ್ಕಳಲ್ಲಿನ ಪೌಷ್ಟಿಕತೆ ಕೊರತೆ ಕುರಿತು ಅರಿವು ಮೂಡಿಸುವುದು ಅವಶ್ಯ

ವಿಜಯಪುರ: ಮಕ್ಕಳಲ್ಲಿ ಕಂಡುಬರುತ್ತಿರುವ ಪೌಷ್ಟಿಕತೆಯ ಕೊರತೆ ಕುರಿತು ಪಾಲಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧಿಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಗರಗಿ ಹೇಳಿದರು.

ನಗರದ ಬಿಎಲ್‌ಡಿಇ ಸಂಸ್ಥೆಯ ಎವ್ಹಿಎಸ್ ಆಯುರ್ವೇದ ಮಹಾವಿದ್ಯಾಲಯ ಕೌಮಾರಭೃತ್ಯ ವಿಭಾಗದಲ್ಲಿ ಹಮ್ಮಿಕೊಂಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಶಿಶು ಅಭಿವೃದ್ಧಿ ಯೋಜನೆ ನಿಮಿತ್ತ ರಾಷ್ಟಿçಯ ಪೋಷಣ ಮಾಸಾಚರಣೆ ಮತ್ತು ವಿಶ್ವ ಪೌಷ್ಟಿಕ ಆಹಾರ ಸಪ್ತಾಹ ದಿನಾಚರಣೆ ಹಾಗೂ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಪೌಷ್ಟಿಕತೆಯ ಕೊರತೆ ಉಂಟಾಗುತ್ತಿದೆ. ಈ ಕುರಿತು ಜನಜಾಗೃತಿ ಮೂಡಿಸಬೇಕಾಗಿದೆ. ಇದಕ್ಕೆ ಸಂಬAಧಿಸಿದ ಇಲಾಖೆಗಳ ಮೂಲಕ ಹಾಗೂ ಆಯುರ್ವೇದ ಮಹಾವಿದ್ಯಾಲಯದ ಸಹಯೋಗದೊಂದಿಗೆ ಜನಸಾಮಾನ್ಯರಲ್ಲಿ ಆಯುರ್ವೆದಿಯ ಪೊಷಣಮುಕ್ತ ಆಹಾರ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನಿಯ ಎಂದರು.

ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಾಗಿರುವ ಕೆಲಸ ಕಾರ್ಯಗಳಿಗೆ ಮಹಾವಿದ್ಯಾಲಯದ ಕೌಮಾರಭೃತ್ಯ ವಿಭಾಗ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು.

ಈ ಕಾರ್ಯಕ್ರಮದ ನಂತರ ಆಗಮಿಸಿದ 50 ಮಕ್ಕಳಿಗೆ ಕೌಮಾರಭೃತ್ಯ ವಿಭಾಗ ವತಿಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಿ ಉಚಿತ ಔಷಧ ವಿತರಣೆ ಮಾಡಲಾಯಿತು. ಅಲ್ಲದೇ, ಈ ಕಾರ್ಯಕ್ರಮದ ನಿಮಿತ್ತ ಗರ್ಭಿಣಿಯರಿಗೆ ಸೀಮಂತ ಮತ್ತು ಮಕ್ಕಳಿಗೆ ಅನ್ನಪ್ರಾಶನ ಸಂಸ್ಕಾರ, ಪ್ರತಿ ತಾಯಿಗೊಂದು ಗಿಡ ಅನ್ನೊ ಎಂಬ ಧ್ಯೇಯ ವಾಕ್ಯದೊಂದಿಗೆ ಮಹಾವಿದ್ಯಾಲಯದ ಶ್ರೀವನದಲ್ಲಿ ಸಸಿ ನೆಡಲಾಯಿತು.

ಈ ಸಂದರ್ಭದಲ್ಲಿ ಬಸವರಾಜ ಜಿಗಳೂರ, ಡಾ. ಜಾವೇದ್ ಬಾಗಾಯತ, ಕೆ.ಕೆ. ಚವ್ಹಾಣ, ಅರವಿಂದ ಹಗರಗಿ, ಡಾ. ಕೆ.ಎ. ಪಾಟೀಲ, ಅನಿಲ ಹಳ್ಳಿ, ಡಾ. ವಿಜಯಲಕ್ಷಿö್ಮ ಬೆನಕಟ್ಟಿ, ಡಾ. ದೌಲಬಿ ಚೌಧರಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment