ವಿಜಯಪುರ: ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು ಯುವ ಪ್ರತಿಭೆಗಳನ್ನು ಕರುನಾಡಿಗೆ ಪರಿಚಯಿಸಿರುವ ಕನ್ನಡದ ನಂ. 1 ವಾಹಿನಿ ಜೀ ಕನ್ನಡ, ಈಗ ಮತ್ತೊಮ್ಮೆ ಸರಿಗಮಪ ರಿಯಾಲಿಟಿ ಶೋ ಮೂಲಕ ಕರುನಾಡಿನ ಹಾಡುಗರನ್ನು ಹುಡುಕುವ ಕೆಲಸ ಶುರುಮಾಡಿದ್ದು, ಸೆ.22 ರಂದು ಗುಮ್ಮಟ ನಗರದಲ್ಲಿ ಸರಿಗಮಪ ಆಡಿಷನ್ ಮಾಡಲಿದೆ.
ಅಂದು ಬೆಳಗ್ಗೆ 9 ಗಂಟೆಗೆ, ಬಿಎಲ್‌ಡಿಇ ಸಮನ್ವಯ ಆಂಗ್ಲ ಮಾಧ್ಯಮ ಶಾಲೆ, ಪಾಟೀಲ್ ಹೋಂಡಾ ಶೋರೂಂ ಎದುರು, ವಿ2 ಹಾಗೂ ಎಸ್‌ಎಸ್ ಪಿಯು ಕಾಲೇಜ್ ಹತ್ತಿರ ಬಿಎಲ್‌ಡಿಇ ರೋಡ ವಿಜಯಪುರದಲ್ಲಿ ಆಡಿಷನ್ ಹಮ್ಮಿಕೊಳ್ಳಲಾಗಿದೆ. ಜೀ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಾದ ಡ್ರಾಮಾ ಜೂನಿಯರ್ಸ್, ಕಾಮಿಡಿ ಕಿಲಾಡಿಗಳು, ಡಿಕೆಡಿ ಮತ್ತು ಮಹಾನಟಿ ಮೂಲಕ ಈಗಾಗಲೆ ಸಾಕಷ್ಟು ನಟ- ನಟಿಯರು, ಗಾಯಕ- ಗಾಯಕಿಯರು ಹಾಗೂ ಕೊರಿಯೋಗ್ರಾಫರ್‌ಗಳನ್ನ ಕರುನಾಡಿಗೆ ಕೊಟ್ಟಿರುವ ಜೀ ಕನ್ನಡ ವಾಹಿನಿ ಇದೀಗ ಸರಿಗಮಪ ಶೋ ಮೂಲಕ ನಿಮ್ಮೂರಿನಲ್ಲಿರುವ ಗಾಯಕ- ಗಾಯಕಿಯಾಗುವ ಕನಸು ಹೊತ್ತಿರುವ, ಪ್ರತಿಭೆಗಳಿಗೆ ವೇದಿಕೆಯಾಗಲು ಬಂದಿದೆ. ಕಳೆದ ಬಾರಿ ವಿದೇಶಿ ಕನ್ನಡಿಗ ಪ್ರತಿಭೆಗಳೊಂದಿಗೆ ಕನ್ನಡದ ಕಂಪನ್ನ ಜಗತ್ತಿಗೆ ಬಿತ್ತರಿಸಿ ಸರಿಗಮಪ ಈ ಬಾರಿ 6 ರಿಂದ 60 ವಯಸ್ಸಿನ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಸಜ್ಜಾಗಿದೆ.
ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಚಿಸುವವರು 2 ಪಾಸ್ಪೋರ್ಟ್ ಸೈಜ್ ಭಾವಚಿತ್ರ ಜೊತೆ ಅಡ್ರಸ್ ಪ್ರೂಫ್ ಜೆರಾಕ್ಸ್ ತೆಗೆದುಕೊಂಡು ಬಂದು ಭಾಗವಹಿಸಬಹುದಾಗಿದೆ. ಜೀ ಕನ್ನಡ ನಡೆಸುವ ಈ ಆಡಿಷನ್ ಪ್ರಕ್ರಿಯೆಯಲ್ಲಿ ಯಾವುದೇ ಹಣವನ್ನ ಪಡೆಯಲಾಗುವುದಿಲ್ಲವೆಂದು ವಾಹಿನಿ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment