Thursday, September 5, 2024

ಗಣೇಶೋತ್ಸವ: ಎಫ್‌ಎಸ್‌ಎಸ್‌ಎಐ ಪರವಾನಗಿ ಅವೈಜ್ಞಾನಿಕ

ವಿಜಯಪುರ: ಗಣೇಶೋತ್ಸವ ಪ್ರಸಾದಕ್ಕೆ ಎಫ್‌ಎಸ್‌ಎಸ್‌ಎಐ ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿAದ ಮಾತ್ರ ಪ್ರಸಾದ ಪಡೆಯಬೇಕೆಂಬ ನಿಯಮಾವಳಿ ಅವೈಜ್ಞಾನಿಕ ಹಾಗೂ ಹಿಂದೂ ಹಬ್ಬಗಳನ್ನು, ಆಚರಣೆಗಳನ್ನು ಹತ್ತಿಕ್ಕುವ ಪ್ರಯತ್ನ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.

ಈ ಕುರಿತಂತೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು, ರಾಜ್ಯದ ಜನರ ಮೇಲೆ ಅಷ್ಟೊಂದು ಕಾಳಜಿ ಇದ್ದಲ್ಲಿ, ಇದೇ ನಿಯಮವನ್ನು ಹೋಟೆಲ್, ಡಾಬಾ ಹಾಗೂ ಹಲಾಲ್ ಮಾಂಸವನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳಿಗೂ ಅನ್ವಯ ಆಗಬೇಕಾಗಿತ್ತು. ಇನ್ನೇನು, ಹಬ್ಬಕ್ಕೆ ಎರಡು ದಿನಗಳು ಇರಬೇಕಾದರೆ ಪಾಲಿಸಲಾಗದ ನಿಯಮವನ್ನು ಹೇರುವುದು ಸರ್ಕಾರದ ಹಿಂದೂ ವಿರೋಧಿ ನೀತಿ ತೋರಿಸುತ್ತದೆ. ಅನ್ಯಕೋಮಿನ ಹಬ್ಬಗಳಲ್ಲಿ ಬೀದಿ ಬೀದಿಯಲ್ಲಿ ಪ್ರಾಣಿಬಲಿ ನೀಡಿ, ಅದರಿಂದ ಮಾಂಸ ಮಾರಾಟ ಮಾಡುವವರಿಗೂ ಈ ನಿಯಮ ಅನ್ವಯ ಆಗುತ್ತಾ ?. ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಆಹಾರ ತಯಾರು ಮಾಡಬೇಕಾದರೆ ಎಫ್‌ಎಸ್‌ಎಸ್‌ಎಎಲ್ ಪರವಾನಗಿ ಪಡೆದವರಿಂದ ಸರ್ಕಾರ ಮಾಡಿಸುತ್ತಿದೆಯಾ ? ಬೀದಿ, ಬೀದಿಗಳಲ್ಲಿ ಕಳಪೆ ಗುಣಮಟ್ಟದ ಉತ್ಪನ್ನಗಳನ್ನು ಉಪಯೋಗಿಸಿ ತಿಂಡಿ, ಊಟ ಮಾಡುವವರಿಗೂ ಈ ನಿಯಮ ಅನ್ವಯ ಆಗುತ್ತಾ ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment