Tuesday, October 29, 2024
ಪಂಡಿತ ಪಂಚಾಕ್ಷರಿ ಗವಾಯಿ ರಾಷ್ಟಿçÃಯ ಪ್ರಶಸ್ತಿಗೆ ವಕೀಲ ಭೃಂಗಿಮಠ ಆಯ್ಕೆ
ವಿಜಯಪುರ: ಖ್ಯಾತ ಸಾಹಿತಿ ಡಾ.ವಿ.ಬಿ.ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ, ಅಶ್ವಿನಿ ಪ್ರಕಾಶನ ಗದಗ (ಕರ್ನಾಟಕ) ಅವರು ನೀಡುವ ಪಂಡಿತ ಪಂಚಾಕ್ಷರಿ ಕವಿಗವಾಯಿಯವರ ರಾಷ್ಟಿçÃಯ ಪ್ರಶಸ್ತಿಗೆ ಸಮಾಜ ಸೇವಕ, ನ್ಯಾಯವಾದಿ ಮಲ್ಲಿಕಾರ್ಜುನ ಭೃಂಗಿಮಠ ಅವರು ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಅಶ್ವಿನಿ ಪ್ರತಿಷ್ಠಾನ ಹಾಗೂ ವ್ಹಿ.ಬಿ.ಹಿರೇಮಠ ಪ್ರತಿಷ್ಠಾನದ ಅಧ್ಯಕ್ಷರು ಆಯ್ಕೆ ಪತ್ರವನ್ನು ಭೃಂಗಿಮಠ ಅವರಿಗೆ ಕಳುಹಿದ್ದು, ಬರುವ ನವೆಂಬರ್ 3 ರಂದು ಗದಗನ ಶ್ರೀರಾಮ ಬಂಜಾರ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭಕ್ಕೆ ನಾಡಿನ ಖ್ಯಾತ ಸಾಹಿತಿಗಳು, ಕಲಾವಿದರು, ಸಮಾಜ ಸೇವಕರು, ಚಿಂತಕರು ಪಾಲ್ಗೊಳ್ಳಲಿದ್ದಾರೆ. ವಿಶೇಷವಾಗಿ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜ ಭಾಗವಹಸಲಿದ್ದಾರೆ ಎಂದು ಭೃಂಗಿಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Sunday, October 27, 2024
ಡಾ. ಆನಂದ ಸಂಕೇಶ್ವರಗೆ ಲಾಜಿಸ್ಟಿಕ್ ಐಕಾನ್ ಪ್ರಶಸ್ತಿ
ಬೆಂಗಳೂರು: ಜೆಕೆ ಟೈರ್ ಕಂಪನಿ 20 ವರ್ಷಗಳ ಸಂಭ್ರಮಾಚರಣೆ ನಿಮಿತ್ತ ಇತ್ತೀಚೆಗೆ ಸಿಂಗಾಪುರದಲ್ಲಿ ಆಯೋಜಿಸಿದ್ದ ಉನ್ನತ ಮಟ್ಟದ ಸಮ್ಮೇಳನದಲ್ಲಿ ವಿಆರ್‌ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆನಂದ ಸಂಕೇಶ್ವರ ಅವರಿಗೆ ವರ್ಷದ ಲಾಜಿಸ್ಟಿಕ್ ಐಕಾನ್ ಪ್ರಶಸ್ತಿ ನೀಡಿ ಗೌರವಿಸಿದೆ.
ಆಧುನಿಕ ಲಾಜಿಸ್ಟಿಕ್ಸ್ ನಿರ್ವಹಣೆಯಲ್ಲಿ ಪರಿವರ್ತನೆಯ ಪಾತ್ರ ನಿರ್ವಹಿಸಿದ ಸರಕು ಸಾಗಣೆ ಉದ್ಯಮದ ಅಗ್ರ ವ್ಯಕ್ತಿಯೆಂದು ಗುರುತಿಸಿ ಡಾ. ಆನಂದ ಸಂಕೇಶ್ವರ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಸಮ್ಮೇಳನದಲ್ಲಿ ದೇಶ ಅಗ್ರ 100 ಫ್ಲೀಟ್ ಮಾಲೀಕರು, ಉದ್ಯಮದ ಪ್ರಮುಖರು, ಪಾಲುದಾರರು ಭಾಗವಹಿಸಿದ್ದರು.
ದೇಶದ ಅತಿ ದೊಡ್ಡ ಮತ್ತು ಅತ್ಯಂತ ಗೌರವಾನ್ವಿತ ಲಾಜಿಸ್ಟಿಕ್ಸ್ ಸೇವಾ ಪೂರೈಕೆದಾರರೆಂಬ ಹೆಗ್ಗಳಿಕೆಗೆ ವಿಆರ್‌ಎಲ್ ಲಾಜಿಸ್ಟಿಕ್ಸ್ ಪಾತ್ರವಾಗಲು ಡಾ. ಆನಂದ ಸಂಕೇಶ್ವರ ಅವರ ನಾಯಕತ್ವವೇ ಕಾರಣವೆಂದು ಗುರುತಿಸಲಾಗಿದೆ. ಅವರ ಹೊಸ ವಿಧಾನ ಮತ್ತು ಸುರಕ್ಷತೆಯ ಉನ್ನತ ಗುಣಮಟ್ಟ, ದಕ್ಷತೆ ಮತ್ತು ಸುಸ್ಥಿರತೆ ಮಾನದಂಡಗಳನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
ಪ್ರಶಸ್ತಿ ಸ್ವೀಕರಿಸಿದ ಡಾ. ಆನಂದ ಸಂಕೇಶ್ವರ ಮಾತನಾಡಿ, ಲಾಜಿಸ್ಟಿಕ್ಸ್ನ ಯಶಸ್ಸಿಗೆ ತಮ್ಮ ತಂಡ ಹಾಗೂ ತಂದೆ ಡಾ. ವಿಜಯ ಸಂಕೇಶ್ವರರ ಮಾರ್ಗದರ್ಶನ ಕಾರಣವಾಗಿದೆ. ಜೆಕೆ ಟೈರ್ ಕಂಪನಿಯ ಪಾತ್ರ ಸೇರಿ ಅಸಂಖ್ಯಾತ ಪಾಲುದಾರರು ಮತ್ತು ಗ್ರಾಹಕರ ನಂಬಿಕೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಜೆಕೆ ಟೈರ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ರಘುಪತಿ ಸಿಂಘಾನಿಯಾ ಮಾತನಾಡಿ, ಕಳೆದ ಎರಡು ದಶಕಗಳಲ್ಲಿ ಜೆಕೆ ಟೈರ್ ಭಾರತದ ಲಾಜಿಸ್ಟಿಕ್ಸೃ ವಲಯದ ಕಾರ್ಯಾಚರಣೆಯ ದಕ್ಷತೆ ಮತ್ತು ಸುರಕ್ಷತೆಯನ್ನು ಹೆಚ್ಚಿಸುವ ಬದ್ಧತೆಯೊಂದಿಗೆ ಟೈರ್ ತಂತ್ರಜ್ಞಾನ ಮತ್ತು ಫ್ಲೀಟ್ ನಿರ್ವಹಣೆಯಲ್ಲಿ ಪ್ರಗತಿಯನ್ನು ಸಾಧಿಸಿದೆ. ಇಂದು ಈ ಉದ್ಯಮವನ್ನು ಪರಿವರ್ತಿಸಲು ಸಹಾಯ ಮಾಡಿದ ವ್ಯಕ್ತಿಗಳ ಸಾಧನೆಗಳನ್ನು ಗುರುತಿಸಿ ಗೌರವಿಸುತ್ತಿದ್ದೇವೆ. ಅವರಲ್ಲಿ ಡಾ. ಆನಂದ ಸಂಕೇಶ್ವರ ಅಗ್ರಗಣ್ಯರು. ಲಾಜಿಸ್ಟಿಕ್ಸ್ ಕ್ಷೇತ್ರದಲ್ಲಿ ಅವರ ಕೊಡುಗೆ ಅನನ್ಯ ಎಂದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
28-30 ರಂದು ಮಹಿಳಾ ವಿವಿ ಪ್ರವೇಶ ಕೌನ್ಸೆಲಿಂಗ್
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ, ಪಿಜಿ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಸರ್ಟಿಫೀಕೇಟ್ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಇದೇ ಅಕ್ಟೋಬರ್ 28ರಂದು ಬೆಳಿಗ್ಗೆ 10.30ರಿಂದ ಕೌನ್ಸೆಲಿಂಗ್ ಆರಂಭವಾಗಲಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.
ಮಹಿಳಾ ವಿವಿಯ ವಿವಿಧ ಕೋರ್ಸ್ಗಳಿಗೆ ಈಗಾಗಲೇ ಯುಯುಸಿಎಂಎಸ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿನಿಯರು ದಿನಾಂಕ 28ರಂದು ಅಗತ್ಯ ಮೂಲ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಿದ್ದು ಪ್ರವೇಶ ಪಡೆದುಕೊಳ್ಳಬಹುದಾಗಿದೆ. ದಿನಾಂಕ 29 ರಂದು ಸೂಪರ್ ನ್ಯೂಮರಿ ಕೋಟಾದ ಅಡಿಯಲ್ಲಿ ಪ್ರವೇಶ ಪಡೆದುಕೊಳ್ಳಬಹುದಾಗಿದ್ದು ದಿನಾಂಕ 30ರಂದು ಸೆಲ್ಪ್ ಸಪೋರ್ಟಿಂಗ್ ಯೋಜನೆ ಅನ್ವಯ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಂಕರಗೌಡ ಸೋಮನಾಳ, ಕುಲಸಚಿವರು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರÀ- 586108. ದೂರವಾಣಿ ಸಂಖ್ಯೆ: 08352-297062, 7795122960, 7204889855 ಮತ್ತು 9901827696; website: www.kswu.ac.inಸಂಪರ್ಕಿಸಬಹುದಾಗಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Saturday, October 26, 2024
ಆಲಮಟ್ಟಿ, ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳಿಗೆ ಕೆಎಂಬಿ ಸಿಇಒ ಭೇಟಿ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಾಗರಮಾಲ ಯೋಜನೆಯಡಿ ಪ್ರವಾಸೋದ್ಯಮ ಪೂರಕವಾಗಿ ಮತ್ತು ಸ್ಥಳೀಯ ಜನರಿಗೆ ಅನುಕೂಲವಾಗುವ ಆಲಮಟ್ಟಿ, ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್ ರಾಯ್ ಪುರ ಅವರು ತಿಳಿಸಿದರು.
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಮತ್ತು ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳ ಕಾರ್ಯಸಾಧ್ಯತೆ, ಯೋಜನೆಯ ಭೂಸ್ವಾಧೀನ ಮತ್ತು ಜಲಸಾರಿಗೆ ಉಪಯುಕ್ತತೆ ಬಗ್ಗೆ ಪರಿಶೀಲನೆ ಹಾಗೂ ಆಲಮಟ್ಟಿ ಆಣೆಕಟ್ಟಿನ ಕೆಳಭಾಗದಲ್ಲಿರುವ 25 ಎಕರೆ ಜಮೀನಿನಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೀನು ಸಾಕಾಣಿಕೆ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿರುವ ಜಲಮಾರ್ಗದ ಮುಖಾಂತರ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಿದಲ್ಲಿ ಸ್ಥಳೀಯ ಜನರಿಗೆ ವಿವಿಧ ಆರ್ಥಿಕವಾಗಿ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ನದಿ ತೀರದಲ್ಲಿ ಜಲಮಾರ್ಗದ ಮುಖಾಂತರ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸಿದ್ದಲ್ಲಿ ಹೆಚ್ಚಿನ ಸಂಖ್ಯೆ ಪ್ರವಾಸಿಗರ ಗಮನ ಹೆಚ್ಚು ಸೆಳೆಯಬಹುದು. ಜೊತೆಗೆ ಈ ಯೋಜನೆಯಿಂದ ಸ್ಥಳೀಯ ಜನರು ವಿವಿಧ ಆರ್ಥಿಕ ಪ್ರಯೋಜನಗಳು ಪಡೆದುಕೊಳ್ಳಬಹುದು ಎಂದರು.
ಈ ಯೋಜನೆಯನ್ನು ಅಭಿವೃದ್ಧಿಪಡಿಸಿದಲ್ಲಿ ಪ್ರವಾಸಿಗರು ಮತ್ತು ಸುತ್ತಮುತ್ತ ಪ್ರದೇಶದ ನಿವಾಸಿಗಳಿಗೆ ನೀರು ಆಧಾರಿತ ಕ್ರೀಡೆಗಳನ್ನು ಅನುಭವಿಸುವ ಅವಕಾಶಗಳನ್ನು ಒದಗಿಸಿ ಪ್ರವಾಸೋದ್ಯಮ ಚಟುವಟಿಕೆಗಳು ಅಭಿವೃದ್ಧಿಯಾಗಲಿದೆ ಜಯರಾಮ್ ರಾಯ್ ಪುರ ಅವರು ತಿಳಿಸಿದರು.
ಈ ಪ್ರದೇಶದಲ್ಲಿ ದೋಣಿ/ನೌಕೆ ನಿರ್ಮಾಣ, ಬೋಟ್ ಯಾರ್ಡ್‌ಗಳು ಹಾಗೂ ಸಂಬಂಧಿತ ಉಪಕರಣಗಳ ತಯಾರಿಕೆ ಮುಂತಾದ ಇತರ ಬೆಂಬಲದೊಂದಿಗೆ ಉದ್ಯಮ ತೆರೆಯುವ ಸಾಮರ್ಥ್ಯವನ್ನು ಅಭಿವೃದ್ಧಿ ಪಡಿಸುವಿಕೆಯಲ್ಲಿ ನೆರವಾಗಲಿದೆ ಎಂದು ತಿಳಿಸಿದರು.
ಸುತ್ತ ಮುತ್ತಲಿನ ಜಿಲ್ಲೆಯಲ್ಲಿರುವ ಪ್ರವಾಸ ತಾಣಗಳು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿದ್ದು, ಜಲಮಾರ್ಗದ ಅಭಿವೃದ್ಧಿಗೆ ಮೂಲಸೌಕರ್ಯ ಒದಗಿಸಿದ್ದಲ್ಲಿ ಪ್ರತಿದಿನ ಹೆಚ್ಚಿನ ಸಂಖ್ಯೆ ಪ್ರವಾಸಿಗರನ್ನು ಆಕರ್ಷಿಸಿ ಸರ್ಕಾರಕ್ಕೆ ಆದಾಯವನ್ನು ಗಳಿಸಬಹುದಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತ ಅಧೀಕ್ಷಕ ಇಂಜಿನೀಯರ್ ಹಿರೇಗೌಡರ, ಕಾರ್ಯಪಾಲಕ ಇಂಜಿನಿಯರ್ ದೊಡ್ಡಮನಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಲವಾದಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪಾಂಡುರಂಗ, ಕುಲಕರ್ಣಿ ಸೇರಿದಂತೆ ಮತ್ತಿತ್ತರು ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Thursday, October 24, 2024
Wednesday, October 23, 2024
Tuesday, October 22, 2024
Monday, October 21, 2024
ಎಸ್ ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜೂಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ - ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ ಇಲಾಖೆ ) ಬೆಂಗಳೂರು ವತಿಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ 2024 25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಜೂಡೋ ಕ್ರೀಡಾಕೂಟ ನಡೆಯಿತು ಇದರಲ್ಲಿ ಎಸ್ ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಸೊನ್ನದ ಭಾಗವಹಿಸಿ 52 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಹಾಗೂ ಸಂದೀಪ್ ಲಂಬಾಣಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ
ವಿದ್ಯಾರ್ಥಿಗಳ ಸಾಧನೆಗೆ ಬಿ ಎಲ್ ಡಿ ಈ ಸಂಸ್ಥೆಯ ಅಧ್ಯಕ್ಷರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಮ್ ಬಿ ಪಾಟೀಲ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಜಿ ಕೆ ಪಾಟೀಲ ಆಡಳಿತ ಅಧಿಕಾರಿಗಳಾದ ಬಿ ಆರ್ ಪಾಟೀಲ ಆಯ್ ಎಸ್ ಕಾಳಪ್ಪನವರ, ಕ್ರೀಡಾ ನಿರ್ದೇಶಕರುಗಳಾದ ಎಸ್ ಎಸ್ ಕೋರಿ, ಕೆ ಜಿ ಹಿರೇಮಠ, ಪ್ರಾಚಾರ್ಯ ಡಾ. ಜಿ ಡಿ ಅಕಮಂಚಿ ದೈಹಿಕ ಉಪನ್ಯಾಸಾಕಿ ಅರುಣಾ ಮಾಲಿಂಗಪುರ ಹಾಗೂ ಸಮಸ್ತ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಪೊಲೀಸ್ ಹುತ್ಮಾತರ ದಿನಾಚರಣೆ ಪೊಲೀಸರ ಕರ್ತವ್ಯನಿಷ್ಠೆ ಶ್ಲಾಘನೀಯ : ನ್ಯಾ. ಶಿವಾಜಿ ನಲವಡೆ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ: ಒತ್ತಡ ನಡುವೆಯೂ ಜನರ ಸುರಕ್ಷತೆಗೆಗಾಗಿ ಹಗಲಿರುಳೆನ್ನದೆ ಸೇವೆ ಸಲ್ಲಿಸುತ್ತಿರುವ ಪೊಲೀಸರ ಕರ್ತವ್ಯ ನಿಷ್ಠೆ ಶ್ಲಾಘನೀಯವಾಗಿದೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ ಹೇಳಿದರು.
ಸೋಮವಾರ ನಗರದ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ, ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದ ಅವರು,ಭಧ್ರತೆಯಲ್ಲಿ ಪ್ರಮುಖ ಪಾತ್ರವಹಿಸಿ ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಬದ್ಧತೆಯಿಂದ ಬಲಿದಾನದಂತಹ ಘಟನೆಗಳು ಜರುಗುತ್ತಿವೆ. ಬಲಿದಾನಗೈದ ಪೊಲೀಸರ ಶ್ರಮ ನೆನೆಯಬೇಕಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಟಿ.ಭೂಲನ್ ಮಾತನಾಡಿ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಅವರನ್ನು ಸ್ಮರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಇಂದು ದೇಶದಾದ್ಯಂತ ಪೊಲೀಸ್ ಹುತಾತ್ಮರ ದಿನವನ್ನು ಅವರ ಗೌರವರ್ಥವಾಗಿ ಸ್ಮರಿಸಲಾಗುತ್ತಿದೆ. ದೇಶದ ಬದ್ರತೆ ಹಾಗೂ ನಮ್ಮ ರಕ್ಷಣೆ ಮಾಡುವ ಸಂದರ್ಭ ಹೋರಾಡಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸರಿಗೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಈ ದಿನ ಗೌರವ ನಮನ ಸಲ್ಲಿಸಲಾಗುತ್ತಿದೆ. 1959ರಲ್ಲಿ ಚೀನಿ ಪಡೆಗಳೊಂದಿಗೆ ನಡೆದ ಹೋರಾಟದಲ್ಲಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸ್‌ರನ್ನು ಸ್ಮರಿಸುವ ಈ ದಿನ ಹುತಾತ್ಮರ ದಿನವಾಗಿ ಆಚರಿಸಲಾಗುತ್ತಿದೆ. ಸೈನಿಕರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಾರೆ. ಸಾರ್ವಜನಿಕರು ಜನರ ಆಸ್ತಿ-ಪಾಸ್ತಿ ರಕ್ಷಣೆಗಾಗಿ ದುಷ್ಟ ಶಕ್ತಿಗಳ ದಮನಕ್ಕಾಗಿ ತಮ್ಮ ಜೀವನ ತ್ಯಾಗ ಮಾಡಿರುವ ಹಾಗೂ ನೆಮ್ಮದಿಯಾಗಿ ಶಾಂತಿಯಿAದ ಜೀವನ ನಡೆಸಲು ಅವರ ಕಾರ್ಯ ಅನನ್ಯವಾಗಿದೆ. ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.
ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಮಾತನಾಡಿ , ದೇಶಕ್ಕಾಗಿ ಹೋರಾಡುತ್ತಾ ವೀರ ಮರಣಹೊಂದಿದ್ದ ಪೊಲೀಸರ ಸ್ಮರಣೆಗಾಗಿ ಸ್ಮಾರಕವನ್ನು ಲಡಾಕ್‌ನ ಬಾಸಿ ಚೀನಾ ಭಾಗದಲ್ಲಿ ಸ್ಥಾಪಿಸಲಾಗಿದೆ. ಕರ್ತವ್ಯದಲ್ಲಿದ್ದಾಗ ಹುತಾತ್ಮರರಾದ ಪೊಲೀಸರುಗಳನ್ನು ದೇಶದದ್ಯಂತ ಎಲ್ಲ ಘಟಕಗಳಲ್ಲಿ ಸ್ಮರಿಸಲಾಗುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗಣ್ಯರುಗಳಿಂದ ಹುತಾತ್ಮರಿಗೆ ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ, ಗೌರವ ನಮನ ಸಲ್ಲಿಸಲಾಯಿತು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Sunday, October 20, 2024
Saturday, October 19, 2024
Friday, October 18, 2024
Thursday, October 17, 2024
Wednesday, October 16, 2024
Tuesday, October 15, 2024
Monday, October 14, 2024
Sunday, October 13, 2024
Saturday, October 12, 2024
Thursday, October 10, 2024
ಶ್ರೀ ಹನುಮಾನ ಆದಿಶಕ್ತಿ ತರುಣ ಸಂಘದ 25ನೇ ವರ್ಷದ ದೇವಿ ಪ್ರತಿಷ್ಠಾಪನೆ ನಿಮಿತ್ಯ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮ
ನವರಾತ್ರಿ ಉತ್ಸವದ ನಿಮಿತ್ಯ ಗಾಯಕರಾಗಿ ಕು. ಮಾಳವಿಕಾ ಜೋಶಿ ಸುಶ್ರಾವ್ಯವಾಗಿ ಹಾಡುವ ಮೂಲಕ ನೆರೆದ ಭಕ್ತರನ್ನು ಸಂಗೀತ ಲೋಕಕ್ಕೆ ಕರೆದೊಯ್ದರು.
ವಿಠ್ಠಲನ ಕುರಿತು ಹಾಡಿದ ಹಾಡು ಭಕ್ತರ ಮನಸೂರೆಗೊಳಿಸಿತು. ಇವರಿಗೆ ತಬಲಾ ವಾದನ ಸಾತ ಮಂಥನ ಜೋಶಿ ನೀಡಿದರು. ಹಾರ್ಮೋನಿಯಂ ನಂದಾ ಮಿರ್ಜಿ, ತಾಳವನ್ನು ರಶ್ಮಿ ದೇಶಪಾಂಡೆ ನೆರವು ನೀಡಿದರು.
ಈ ಕಾರ್ಯಕ್ರಮದಲ್ಲಿ ಶಂಕರ ಬಾಂಡವಲಕರ, ಪ್ರವೀಣ ಜಾಲವಾದಿ, ಪವನಕುಮಾರ್ ಜೋಶಿ, ಲಕ್ಮಣ ಗಾಯಕವಾಡ, ಗೋಪಾಲ ಪೀರಾಪುರ, ಕಾಶೀನಾಥ ಪವಾರ, ಶಿವು ಅಗಸರ, ಮೋಹನ ಬಾಂಡವಲಕರ, ದೀಪಕ ಶಿಂಧೆ, ಮಹಾದೇವಿ ಗೋಕಾಕ, ಗಾಯತ್ರಿ, ಅಂಬಿಕಾ ಜಾಧವ, ಶಾಂಕಿತ ಜಾಧವ ಹಾಗೂ ಬಡಾವಣೆಯ ಎಲ್ಲ ಸಧ್ಭಕ್ತರು ಭಾಗವಹಿಸಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಪಟ್ಟಣದಲ್ಲಿ ಚೈತನ್ಯ ಮಹಿಳಾ ಬ್ಯಾಂಕಿನ 8ನೇ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಹಿತಿ ಜತ್ತಿಗೆ ಸನ್ಮಾನ
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ: ತಿಕೋಟಾ ಪಟ್ಟಣದಲ್ಲಿ ಚೈತನ್ಯ ಮಹಿಳಾ ಬ್ಯಾಂಕಿನ 8ನೇ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಹಿತಿ ಸೋಮಶೇಖರ ಜತ್ತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು ಬ್ಯಾಂಕಿನ ಅಧ್ಯಕ್ಷೆ ಶ್ರೀಮತಿ ಮಲ್ಲಮ್ಮ ಯಾಳವಾರ ನಿವೃತ್ತ ಲೆಕ್ಕ ಪರಿಶೋಧಕ ಶಂಕರ ಕಡಿಬಾಗಿಲ ಮುಂತಾದವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಮಾನಸಿಕ ಆರೋಗ್ಯ ಸದೃಢತೆ ಕಾಪಾಡಿಕೊಳ್ಳಿ: ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್. ಹಾಗರಗಿ
ವಿಜಯಪುರ : ಕಾರ್ಯಕ್ಷೇತ್ರದ ಚಟುವಟಿಕೆಯಲ್ಲಿ ಮಾನಸಿಕ ಒತ್ತಡಗಳಿಂದ ಪಾರಾಗಲು ಓದು, ಸಂಗೀತ, ಧ್ಯಾನ, ಆಟೋಟಗಳಂತಹ ಉತ್ತಮ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಆರೋಗ್ಯ ಸದೃಢತೆ ಹೊಂದಲು ಸಹಾಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ಇವರ ಸಹಯೋಗದಲ್ಲಿ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ಕಾರ್ಯಕ್ಷೇತ್ರದಲ್ಲಿ ಮಾನಸಿಕ ಆರೋಗ್ಯಕ್ಕೆ ಆಧ್ಯತೆ ನೀಡುವ ಸಮಯ ಈಗ ಬಂದಿದೆ ಎಂಬ ಘೋಷವಾಕ್ಯದಡಿಯಲ್ಲಿ ನಡೆದ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವವರು ಮನಸ್ ಉಚಿತ ಸಹಾಯವಾಣಿ 14416 ಕರೆ ಮಾಡಿ ಆಪ್ತ ಸಮಾಲೋಚನೆ ಪಡೆದಕೊಳ್ಳಬಹುದು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮನೋವೈದ್ಯರು, ಆಪ್ತ ಸಮಾಲೋಚಕರು ಒತ್ತಡ ಮುಕ್ತ ಜೀವನ ನಡೆಸಲು ಉಚಿತ ಸಲಹೆಗಳನ್ನು ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸಂಪತ್ತ ಗುಣಾರಿ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬAತೆ ಸಂಪೂರ್ಣ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅವಶ್ಯಕವಾಗಿದೆ ಎಂದರು.
ಜಾಥಾವು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮಾರುಕಟ್ಟೆ ರಸ್ತೆಯ ಮೂಲಕ ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅವರಣದವರೆಗೆ ನಡೆಯಿತು.
ಈ ವೇಳೆ ತಾಲೂಕಾ ಆರೋಗಾಧಿಕಾರಿ ಡಾ. ಪರಶುರಾಮ ಹಿಟ್ಟನಳ್ಳಿ, ಐ.ಇ.ಸಿ ವಿಭಾಗದ ಜಿ.ಎಂ.ಕೊಲುರ, ಸುರೇಶ ಹೊಸಮನಿ ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಸಿಬ್ಬಂದಿಗಳು ಸೇರಿದಂತೆ ತುಳಜಾಭವಾನಿ ನರ್ಸಿಂಗ್ ಕಾಲೇಜ, ಅಶ್ವಿನಿ ನರ್ಸಿಂಗ ಕಾಲೇಜ, ಬಾಂಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಗ್ರಂಥಾಲಯ ಸ್ಥಳ ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್
ಈ ದಿವಸ ವಾರ್ತೆ
ವಿಜಯಪುರ : ಬಸವನ ಬಾಗೇವಾಡಿಯಲ್ಲಿ ಹೊಸದಾಗಿ ಗ್ರಂಥಾಲಯ ನಿರ್ಮಾಣವಾಗುವ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಗ್ರಂಥಾಲಯ ಕಟ್ಟಡದಲ್ಲಿ ಸಾಕಷ್ಟು ಗಾಳಿ ಬೆಳಕು ಬರುವಂತೆ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ಅಗತ್ಯ ಮೂಲಭೂತ ಸೌಕರ್ಯಕ್ಕೆ ಆಧ್ಯತೆ ನೀಡಿ ನಿರ್ಮಾಣ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು. ನಗರದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲು ಸೂಚನೆ ನೀಡಿದ ಅವರು, ಸಾರ್ವಜನಿಕರಿಗೆ ತೊಂದರೆಯಾಗದAತೆ ಒತ್ತುವರಿ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ನಂತರ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ, ಬಾಕಿ ಕಡತಗಳ ಪರಿಶೀಲನೆ, ಆಧಾರ ನೋಂದಣಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆ ಪ್ರಗತಿ ಮಾಹಿತಿ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಾಧಿಕಾರಿ ರಿಷಿ ಆನಂದ, ಬಸವನ ಬಾಗೇವಾಡಿ ತಹಶೀಲ್ದಾರ್ ವಾಯ್.ಎಸ್. ಸೋಮನಕಟ್ಟಿ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್. ಚಿತ್ತರಗಿ ಸೇರಿದಂತೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Wednesday, October 9, 2024
ಭಾರತೀಯ ಅಂಚೆ ಸೇವೆ ದೇಶದ ಅವಿಭಾಜ್ಯ ಅಂಗ: ಸಂತೋಷ ಬಂಡೆ
ಈ ದಿವಸ ವಾರ್ತೆ
ವಿಜಯಪುರ: ಭಾರತೀಯ ಅಂಚೆ ಸೇವೆ ದೇಶದ ಅವಿಭಾಜ್ಯ ಅಂಗವಾಗಿದ್ದು, ಇದು ವಿಶ್ವದಲ್ಲೇ ಅತಿ ದೊಡ್ಡದಾದ ಸಂಪರ್ಕ ಜಾಲವನ್ನು ಹೊಂದಿದೆ. ತಂತ್ರಜ್ಞಾನ ಬೆಳೆದಂತೆ ಇಂದಿನ ಜನರು ಅಂಚೆ ಸೇವೆಗಳ ಬಳಕೆಯನ್ನು ಕಡಿಮೆ ಮಾಡಿದ್ದು ಕಳವಳಕಾರಿಯಾಗಿದೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
ಅವರು ಗುರುವಾರದಂದು ನಾಗಠಾಣ ಗ್ರಾಮದ ಅಂಚೆ ಕಚೇರಿಯಲ್ಲಿ ಹಮ್ಮಿಕೊಂಡ 'ರಾಷ್ಟ್ರೀಯ ಅಂಚೆ ದಿನ' ವನ್ನು ಉದ್ಧೇಶಿಸಿ ಮಾತನಾಡಿದರು.
ಪ್ರಪಂಚದಾದ್ಯಂತ ಜನರ ದೈನಂದಿನ ಜೀವನದಲ್ಲಿನ ವ್ಯವಹಾರ, ಸಾಮಾಜಿಕ, ಆರ್ಥಿಕ ಅಭಿವೃದ್ಧಿಯಲ್ಲಿ ಅಂಚೆ ಇಲಾಖೆಯ ಪಾತ್ರದ ಬಗ್ಗೆ ಜನರಿಗೆ ಅರಿವು ಮೂಡಿಸಿ,
ಗ್ರಾಮೀಣ ಅಂಚೆ ಜೀವ ವಿಮೆಯಂತಹ ಮಾಹಿತಿ ಎಲ್ಲರಿಗೂ ವ್ಯಾಪಕವಾಗಿ ತಿಳಿಸುವ ಅಗತ್ಯವಿದೆ ಎಂದು ಹೇಳಿದರು.
ಸಾರ್ವಜನಿಕ ಯೋಜನೆಗಳನ್ನು ಸುಲಭಗೊಳಿಸುವಲ್ಲಿ ಅಂಚೆ ಸೇವೆಗಳ ಪಾತ್ರ ಅನನ್ಯ.ಪ್ರಪಂಚದ ನಾನಾ ಭಾಗಗಳ ಜನತೆ, ಸಂಸ್ಥೆಗಳ ನಡುವಿನ ಸಂಪರ್ಕಕ್ಕೆ ಅತ್ಯಂತ ಹಳೆಯ ಸಾಧನವಾಗಿ ಅಂಚೆ ಸೇವೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು.
ಶಾಖಾ ಅಂಚೆ ಅಧಿಕಾರಿ ಹಣಮಂತ ಅರಕೇರಿ ಮಾತನಾಡಿ, ಅಂಚೆ ಇಲಾಖೆ ಉತ್ತಮ ಗ್ರಾಹಕ ಸ್ನೇಹಿಯಾಗಿದ್ದು, ಇದು ಸುಕನ್ಯಾ ಸಮೃದ್ಧಿ ಯೋಜನೆ ಮತ್ತು ಪಿಂಚಣಿ ಸೌಲಭ್ಯಗಳ ಅಡಿಯಲ್ಲಿ ವೇತನ ವಿತರಣೆಯಂತಹ ಸೇವೆಯ ಜತೆಗೆ ಸಂಧ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ, ವಿಶೇಷಚೇತನ ಗ್ರಾಹಕರಿಗೆ ಮತ್ತಷ್ಟು ಸವಲತ್ತುಗಳನ್ನು ಒದಗಿಸುವ ಮೂಲಕ ದೇಶದ ವ್ಯವಸ್ಥೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ ಎಂದು ಹೇಳಿದರು.
ಸಹಾಯಕ ಅಂಚೆ ಅಧಿಕಾರಿ ಪ್ರಸಾದ ನಾಯ್ಕೋಡಿ, ಯುವ ಮುಖಂಡ ರಾಜು ಕತ್ನಳ್ಳಿ, ಪಿಕೆಪಿಎಸ್ ನಿರ್ದೇಶಕ ಪ್ರಭಾಕರ ಅರಕೇರಿ, ಗ್ರಾಮಸ್ಥರಾದ ಚನ್ನಯ್ಯ ನಂದಿಕೋಲ,
ಶ್ರೀಕಾಂತ ಗುಜ್ಜಲಕರ, ಕಾಶೀನಾಥ ಬಡಿಗೇರ, ಶರಣಪ್ಪ ಬಂಥನಾಳ, ಸಂತೋಷ ಸಂಗೋಗಿ, ಮಲ್ಲಿಕಾರ್ಜುನ ಸಮಗೊಂಡ, ಶರಣಪ್ಪ ಕತ್ನಳ್ಳಿ, ಕಲ್ಲಪ್ಪ ವಾಲೀಕಾರ, ಶಂಕ್ರೆಪ್ಪ ಅರಕೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಖಾ ಅಂಚೆ ಅಧಿಕಾರಿ ಹಣಮಂತ ಅರಕೇರಿ ಅವರನ್ನು ಸನ್ಮಾನಿಸಲಾಯಿತು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಪಿಡಿಒ ಹುದ್ದೆಗಳನ್ನು ಮೇಲ್ದರ್ಜೆಗೇರಿಸುವಂತೆ ಅಧಿಕಾರಿಗಳ ಧರಣಿ
ವಿಜಯಪುರ: ಪಿಡಿಒ ಹುದ್ದೆಗಳನ್ನು ಗೆಜೆಟೆಡ್ ಬಿ ವೃಂದದ ಹುದ್ದೆಯಾಗಿ ಮೇಲ್ದರ್ಜೆಗೇರಿಸುವುದು, ಗ್ರಾಪಂ ನೌಕರರ ಸಕಲ ಬೇಡಿಕೆಗಳನ್ನು ಈಡೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ - ನೌಕರರ ಎಲ್ಲ ವೃಂದದ ಸಂಘಗಳು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಹಿನ್ನೆಲೆಯಲ್ಲಿ ಎಲ್ಲ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ತಮ್ಮ ಅಸಮಾಧಾನ ಹೊರಹಾಕಿದರು.
ನಗರದÀ ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ಕಳೆದ ಹಲವು ದಿನಗಳಿಂದ ಧರಣಿ ನಡೆಸುತ್ತಿರುವ ಈ ಎಲ್ಲ ನೌಕರರು, ಸದಸ್ಯರು ತಮ್ಮ ಬೇಡಿಕೆಗೆ ಹಕ್ಕೊತ್ತಾಯ ಮಂಡಿಸಿದರು.
ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಜಿ. ಪಾರೆ ಮಾತನಾಡಿ, ಗ್ರಾಮೀಣ ಅಭಿವೃದ್ಧಿಯಲ್ಲಿ ಪಂಚಾಯತ್ ರಾಜ್ ಅಧಿಕಾರಿ ಹಾಗೂ ಗ್ರಾಪಂ ನೌಕರರು ನೀಡುತ್ತಿರುವ ಕೊಡುಗೆ ಅನನ್ಯ, ಈ ನೌಕರರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಅನೇಕ ಸೌಲಭ್ಯಗಳು ದೊರಕುತ್ತಿವೆ, ಸಮರ್ಪಕವಾಗಿ ಕುಡಿಯುವ ನೀರು, ರಸ್ತೆ, ವಿದ್ಯುತ್ ಮೊದಲಾದ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಲ್ಲಿ ಈ ಎಲ್ಲ ವೃಂದದ ಹಾಗೂ ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿದೆ, ಹೀಗಾಗಿ ಇನ್ನಾದರೂ ಸರ್ಕಾರ ಈ ಎಲ್ಲರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿದರು.
ಪ್ರಮುಖ ಬೇಡಿಕೆಗಳನ್ನು ಮಂಡಿಸಿದ ಪ್ರತಿಭಟನಾಕಾರರು, 7 ರ್ಷ ಪೂರೈಸಿದ ಪಿಡಿಒಗಳನ್ನು ವರ್ಗಾವಣೆ ಮಾಡುವ ಪದ್ಧತಿ ಕೈ ಬಿಡುವುದು, ಕರವಸೂಲಿಗಾರ, ಡಿಟಿಒ, ನೀರು ಬಿಡುವ ಕಾರ್ಮಿಕರು ಮೊದಲಾದವರಿಗೆ ಕಾರ್ಯದರ್ಶಿ ಹುದ್ದೆಗಳಿಗೆ ಬಡ್ತಿ ನೀಡುವುದು, ಗ್ರಾಪಂಗಳು ಸ್ಥಳೀಯ ಸರ್ಕಾರವಾಗಿ ಸ್ವತಂತ್ರö್ಯವಾಗಿ ಕಾರ್ಯನಿರ್ವಹಿಸುವ ಪೂರಕ ವಾತಾವರಣ ನಿರ್ಮಾಣ ಮಾಡುವುದು, ಪಿಡಿಒಗಳನ್ನು ಗ್ರುಪ್-ಬಿ ಹುದ್ದೆಗೆ ಪದೋನ್ನತಿ ನೀಡುವುದು ಸೇರಿದಂತೆ ಸುದೀರ್ಘವಾದ ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿಜಯಪುರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಿಲ್ಲೆಯ ಇಂಡಿ, ಚಡಚಣ, ಸಿಂದಗಿ, ವಿಜಯಪುರ(ಗ್ರಾ), ವಿಜಯಪುರ(ನ), ಬಸವನ ಬಾಗೇವಾಡಿ ಹಾಗೂ ಮುದ್ದೇಬಿಹಾಳ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿನ ಖಾಲಿ ಇರುವ ಅಂಗನವಾಡಿ ಕಾಯಕರ್ತೆ ಹಾಗೂ ಸಹಾಯಕಿಯರ ಗೌರವಧನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿಯಿರುವ 313 ಅಂಗನವಾಡಿ ಕಾರ್ಯಕರ್ತೆ ಹಾಗೂ 857 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 09-11-2024 ಕೊನೆಯ ದಿನವಾಗಿದ್ದು, ಅಂಗನವಾಡಿ ಕಾರ್ಯಕತೆಯರ ಹುದ್ದೆಗೆ ಕನಿಷ್ಠ ಪಿಯುಸಿ ಹಾಗೂ ಸಹಾಯಕಿಯರ ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಅಕ್ಟೋಬರ್ 23ರಂದು ಭಾಷಣ ಸ್ಪರ್ಧೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗಾಗಿ ಇದೇ ತಿಂಗಳ ಅಕ್ಟೋಬರ್ 23ರಂದು ಬೆಳಿಗ್ಗೆ 11 ಗಂಟೆಗೆ “ವಿಕಸಿತ ಭಾರತ- ಯುವಜನರ ಪಾತ್ರ” ಕುರಿತ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.
ಪದವಿ ಕಾಲೇಜುಗಳಲ್ಲಿ ಬಿ.ಎ., ಬಿ.ಕಾಂ., ಬಿಎಸ್‌ಸಿ, ಬಿಸಿಎ, ಬಿಬಿಎಂ ಮುಂತಾದ ಕೋರ್ಸ್ಗಳಲ್ಲಿ ಒಂದರಿAದ ಆರನೆಯ ಸೆಮಿಸ್ಟರ್ ವರೆಗೆ ಓದುತ್ತಿರುವ ಅಥವಾ ಈ ವರ್ಷ 6ನೆಯ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿನಿಯರು ಈ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ಈ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ- ರೂ.1500, ದ್ವಿತೀಯ ಬಹುಮಾನ- ರೂ.1000 ಮತ್ತು ತೃತೀಯ ಬಹುಮಾನ- ರೂ.500 ರೂಪಾಯಿಗಳ ನಗದು ನೀಡಲಾಗುವುದು. ಅಲ್ಲದೇ ಐದು ಸಮಾಧಾನಕರ ಬಹುಮಾನಗಳನ್ನು ಕೂಡಾ ನೀಡಲಾಗುತ್ತದೆ.
ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿನಿಯರು ಈ ಲಿಂಕ್ https://forms.gle/NsUC12WZ7Mp bNQvy7 ಬಳಸಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಂದೀಪ್ ಮೊಬೈಲ್ ಸಂಖ್ಯೆ 9844681398 ಸಂಪರ್ಕಿಸಬಹುದು. ಇಲ್ಲವೇ ನೇರವಾಗಿ ಅಕ್ಟೋಬರ್ 23ರಂದು 10.45ರೊಳಗಾಗಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ನೇರವಾಗಿ ಬಂದು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ವಿಜಯಪುರ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ
ವಿಜಯಪುರ : ಭಾರತವು ಹಲವು ವೈವಿಧ್ಯಗಳನ್ನು ಒಳಗೊಂಡ ದೇಶವಾಗಿದ್ದು, ಕರ್ನಾಟಕ ತನ್ನದೇಯಾದ ವಿಶಿಷ್ಟತೆ ಹೊಂದಿದ್ದು, ರಾಜ್ಯದ ಜನರ ದೈನಂದಿನ ಜೀವನದ ಕನ್ನಡ ಭಾಷೆಯ ಬಗ್ಗೆ ನಿರಂತರವಾಗಿ ಅಭಿಮಾನವಿರಲಿ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಬುಧವಾರ ಅವರು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥವನ್ನು ಸ್ವಾಗತಿಸಿ, ಭುವನೇಶ್ವರಿ ದೇವಿಗೆ ಮಾಲಾಪರ್ಣೆ ಮಾಡಿ ಮಾತನಾಡಿದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳದ ಅಂಗವಾಗಿ ಕನ್ನಡ ಜ್ಯೋತಿ ರಥ ರಾಜ್ಯಾದ್ಯಂತ ಸಂಚರಿಸುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸಂಚರಿಸಲಿದೆ. ಕನ್ನಡ ಜ್ಯೋತಿ ರಥಕ್ಕೆ ಸಾರ್ವಜನಿಕರು ಅಭೂತಪೂರ್ವ ಸ್ವಾಗತ ಕೋರಿ ಕನ್ನಡ ಸಾಹಿತ್ಯ ಸಮೇಳನದ ಯಶಸ್ಸಿಗೆ ಸಹಕರಿಸಬೇಕು. ಪ್ರತಿಯೊಬ್ಬರೂ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿ ದಿನವೂ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳಸಿಕೊಳ್ಳಬೇಕು. ನಾಡುನುಡಿಯ ಬಗ್ಗೆ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ ಮಾತನಾಡಿ, ಸಾಹಿತ್ಯ, ಕಲೆ, ಸಾಂಸ್ಕೃತಿಕ ಪರಂಪರೆಗಳನ್ನು ನಾವು ಅನುಸರಣೆ ಮಾಡಬೇಕು. ಇಂದಿನ ಯುವ ಜನಾಂಗಕ್ಕೆ ಕನ್ನಡ ನಾಡು ನುಡಿಯ ಬಗ್ಗೆ ಹಿರಿಯರ ತ್ಯಾಗ ಹಾಗೂ ಸಾಧನೆಗಳನ್ನು ಪರಿಚಯಿಸುವ ಕಾರ್ಯ ಮಾಡಬೇಕಾಗಿದೆ ಎಂದರು.
ಕನ್ನಡ ಜ್ಯೋತಿ ರಥಯಾತ್ರೆಯೂ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಮಾರುಕಟ್ಟೆ ರಸ್ತೆ ಮಾರ್ಗವಾಗಿ ಗಾಂಧಿವೃತ್ತದ ಮೂಲಕ ವಿವಿಧ ಕಲಾಮೇಳಗಳೊಂದಿಗೆ ನಗರದಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ರಥವನ್ನು ಇಂಡಿ ತಾಲೂಕಿಗೆ ಬಿಳ್ಕೋಡಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪವಿಭಾಗಾಧಿಕಾರಿ, ಗುರುನಾಥ ದಡ್ಡಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎನ್.ಎಚ್.ನಾಗೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ತಹಶೀಲ್ದಾರ ಪ್ರಕಾಶ ಚನಗೊಂಡ, ವಿಜಯಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಶಿಂಪೀರ್ ವಾಲೀಕಾರ, ಫಯಾಜ್ ಕಲಾದಗಿ, ಅಡಿವೆಪ್ಪ ಸಾಲಗಲ್, ಅಭಿಷೇಕ್ ಚಕ್ರವರ್ತಿ, ಆನಂದ ಕುಲಕಣಿ, ಸುರೇಶ ಜತ್ತಿ, ದೇವೆಂದ್ರ ಮೆರೆಕರ್, ವಿದ್ಯಾವತಿ ಅಂಕಲಗಿ, ರವಿ ಕಿತ್ತೂರ, ಶ್ರೀಶೈಲ ಆಳೂರ ಸೇರಿದಂತೆ ವಿವಿಧ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Monday, October 7, 2024
Sunday, October 6, 2024
Friday, October 4, 2024
Thursday, October 3, 2024
ಹಿಂದಿ ಭಾಷೆಯು ದೇಶದಲ್ಲಿ ಪ್ರಮುಖ ಸ್ಥಾನವನ್ನು ಸಾಧಿಸಿದ್ದು, ಹಲವಾರು ಉದ್ಯೋಗಾವಕಾಶಗಳ ದಾರಿ ತೆರೆದಿದೆ
ವಿಜಯಪುರ: ಹಿಂದಿ ಭಾಷೆಯು ದೇಶದಲ್ಲಿ ಪ್ರಮುಖ ಸ್ಥಾನವನ್ನು ಸಾಧಿಸಿದ್ದು, ಹಲವಾರು ಉದ್ಯೋಗಾವಕಾಶಗಳ ದಾರಿ ತೆರೆದಿದೆ. ಅನುವಾದ, ಮಾಧ್ಯಮ, ಶಿಕ್ಷಣ, ತಂತ್ರಜ್ಞಾನ, ಮತ್ತು ಬಾಹ್ಯ ಸಂಬAಧಗಳ ಕ್ಷೇತ್ರದಲ್ಲಿ ಹಿಂದಿಯ ಜಾಗತಿಕ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಹಿಂದಿ ದಿನಾಚರಣೆಯ ಅಂಗವಾಗಿ ಸೋಮವಾರ ಆಯೋಜಿಸಿದ್ದ ‘ಹಿಂದಿ ಭಾಷೆ ಮತ್ತು ಉದ್ಯೋಗದ ನಿರೀಕ್ಷೆಗಳು’ ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟçಮಟ್ಟದ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟç ಭಾಷೆಯಾದ ಹಿಂದಿ ಮತ್ತು ಇತರ ಭಾಷೆಗಳನ್ನೂ ಗೌರವಿಸುವುದು ಅತಿ ಮುಖ್ಯ. ಭಾಷೆಯೇ ನಮ್ಮ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಐಕ್ಯತೆಯನ್ನು ಪ್ರತಿನಿಧಿಸುವುದು, ಹೀಗಾಗಿ ಇವುಗಳ ಮಹತ್ವವನ್ನು ಅರಿತುಕೊಳ್ಳಕೊಳ್ಳಬೇಕು ಎಂದರು.
ವಿಚಾರ ಸಂಕಿರಣ ಉದ್ಘಾಟಿಸಿದ ಮಹಾರಾಷ್ಟçದ ಔರಂಗಬಾದನ ನಲದುರ್ಗಾ ವಿಶ್ವವಿದ್ಯಾಲಯದ ಪ್ರೊ. ಹಾಸಮ್ ಬೇಗ ಮಿರ್ಜಾ ಅವರು, ಹಿಂದಿ ಭಾಷೆ ಕೇವಲ ಸಾಹಿತ್ಯದ ಭಾಷೆಯಷ್ಟೇ ಅಲ್ಲ, ಇದು ಇಂದು ವಿಜ್ಞಾನ, ತಂತ್ರಜ್ಞಾನ, ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿಯೂ ಮಹತ್ವದ ಸ್ಥಾನ ಪಡೆದಿದೆ ಎಂದರು.
ವಿಶ್ವದ ಮೂರನೇ ಅತ್ಯಂತ ಹೆಚ್ಚು ಮಾತನಾಡುವ ಭಾಷೆಯಾಗಿರುವ ಹಿಂದಿ, ತನ್ನ ವ್ಯಾಪಕ ಬಳಕೆಯಿಂದ ಜಾಗತಿಕ ಮಟ್ಟದಲ್ಲಿಯೇ ಪ್ರಾಮುಖ್ಯತೆಯನ್ನು ಗಳಿಸಿದೆ. ವಿದ್ಯಾರ್ಥಿಗಳು ಸ್ಥಳೀಯ ಭಾಷೆಯಲ್ಲಿಯೇ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅರಿಯಲು ಹಿಂದಿಯು ಸುಲಭವಾದ ಮಾಧ್ಯಮವಾಗಿದೆ ಎಂದು ಅವರು ಹೇಳಿದರು.
ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಿಂದ ವಿಷಯ ತಜ್ಞರು, ಸುಮಾರು 40ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ವಿಚಾರ ಸಂಕಿರಣದಲ್ಲಿ ಪ್ರಸ್ತುತಪಡಿಸಿದರು. ಪ್ರೊ.ಬಸಿರುದ್ದಿನ್ ಎಮ್ ಮದರಿ, ಪ್ರೊ.ಆನಂದರಾವ ಸಿರೆಕರ್, ಕಲಾ ನಿಕಾಯದ ಡೀನ್ ಪ್ರೊ.ನಾಮದೇವ ಗೌಡ, ಡಾ.ಗುಲಾಬ ರಾಠೋಡ ಹಾಗೂ ಡಾ.ಅಮರನಾಥ ಪ್ರಜಾಪತಿ ಹಾಗೂ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಲಕ್ಷೀ ನಾಯಕ ಪ್ರಾರ್ಥನಾ ಗೀತೆಯನ್ನು ಹಾಡಿದರು. ಕಾರ್ಯಕ್ರಮದ ಸಂಯೋಜಕಿ ಪ್ರೊ.ರಾಜು ಎಸ್ ಬಾಗಲಕೋಟ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಸಂಶೋಧನಾ ವಿದ್ಯಾರ್ಥಿಗಳಾದ ಸ್ವಾಲಿಯಾ ಕೊಪ್ಪಳ, ಪಲ್ಲವಿ ಫತಾಟೆ, ಮಂಜುಳಾ ಬಿಸನಾಳ, ಡಾ.ಮೆಹರಾಜ ಬೇಗಂ ಸೈಯದ್ ಅವರು ಅತಿಥಿಗಳ ಪರಿಚಯಿಸಿದರು. ಸಂಶೋಧನಾ ವಿದ್ಯಾರ್ಥಿನಿ ಪದ್ಮಾಶ್ರೀ ಚೌಗಲೆ ನಿರೂಪಿಸಿದರು. ಡಾ.ಅಮರನಾಥ ಪ್ರಜಾಪತಿ ವಂದಿಸಿದರು.
"ಜನಕಲಾ ಸಾಂಸ್ಕೃತಿಕ ಮೇಳ"ಕ್ಕೆ : ಪರಿಶಿಷ್ಡ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಸಮನ್ವಯ ಸಮಿತಿಯು ಬೆಂಬಲ
ವಿಜಯಪುರ : ಮೇ ಸಾಹಿತ್ಯ ಬಳಗ, ಲಡಾಯಿ ಪ್ರಕಾಶನ, ಕವಿ ಪ್ರಕಾಶನ ಮತ್ತು ಚಿತ್ತಾರ ಕಲಾ ಬಳಗ ಆಶ್ರಯದಲ್ಲಿ ಇದೇ ಭಾನುವಾರ, ಅಕ್ಟೋಬರ್ 6 ರಂದು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿರುವ "ಜನಕಲಾ ಸಾಂಸ್ಕೃತಿಕ ಮೇಳ"ಕ್ಕೆ ಪರಿಶಿಷ್ಡ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಸಮನ್ವಯ ಸಮಿತಿಯು ಬೆಂಬಲ ವ್ಯಕ್ತಪಡಿಸಿದೆ ಎಂದು ಸಮಿತಿಯ ಅಧ್ಯಕ್ಷರಾದ ಬಿ.ಎಚ್. ನಾಡಗಿರಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಜಯಪುರ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಹೋರಾಟದ ಹಾಡುಗಳು ರಿಂಗಣಿಸಲಿದ್ದು, ಜೊತೆಗೆ ಕೋಮುವಾದಿ ಹಂತಕರ ಗುಂಡಿಗೆ ಬಲಿಯಾದ ಡಾ. ಎಂ.ಎಂ. ಕಲಬುರ್ಗಿಯವರ ಜೀವನಾಧಾರಿತ ನಾಟಕ ಪ್ರದರ್ಶನಗೊಳ್ಳಲಿದೆ.
ದಲಿತ ಚಳುವಳಿಗೆ 50 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ಈ ಜನಕಲಾ ಮೇಳವನ್ನು ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಸಮನ್ವಯ ಸಮಿತಿಯ ಜಿಲ್ಲಾ ಮತ್ತು ತಾಲೂಕಾ ಪದಾಧಿಕಾರಿಗಳು, ಎಲ್ಲ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾವಹಿಸಿ ಯಶಸ್ವಿಗೊಳಿಸಬೇಕು ಎಂದು ಬಿ.ಎಚ್. ನಾಡಗಿರಿ ಅವರು ಕೋರಿದ್ದಾರೆ.ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Wednesday, October 2, 2024
ವಿಜಯಪುರ: ಮಹಾತ್ಮಾಗಾಂಧೀಜಿ ಅವರು ಪ್ರತಿಪಾದಿಸಿದ ಅಭಿವೃದ್ಧಿ ಮಾದರಿಗಳನ್ನು ದೇಶದಲ್ಲಿ ಅನುಷ್ಟಾನಗೊಳಿಸಿದಲ್ಲಿ ಸುಸ್ಥಿರ ಅಭಿವೃದ್ಧಿ ಮತ್ತು ವಿಕಸಿತ ಭಾರತದ ಗುರಿಗಳನ್ನು ಸುಲಭವಾಗಿ ಸಾಧಿಸಲು ಸಾಧ್ಯವಿದೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ಪ್ರತಿಪಾದಿಸಿದರು.
ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ರಿö್ತÃ ಅವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಾಂಧೀಜಿಯವರು ಪ್ರತಿಪಾದಿಸಿದ ಗ್ರಾಮಸ್ವರಾಜ್ಯ, ಗುಡಿ ಕೈಗಾರಿಕೆಗಳ ಅಭಿವೃದ್ಧಿ ಹೀಗೆ ಹಲವು ಬಗೆಯ ಅಭಿವೃದ್ಧಿ ಮಾದರಿಗಳ ಮೂಲಕ ನಾವು ದೇಶದ ಪ್ರಗತಿಗೆ ಮುಂದಾಗಬೇಕಿದೆ ಎಂದೂ ಅವರು ಸಲಹೆ ನೀಡಿದರು.
ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ರಿö್ತÃ ಅವರ ಪರಂಪರೆಯನ್ನು ನಾವು ಸಂಪೂರ್ಣವಾಗಿ ಅರ್ಥೈಸಿಕೊಂಡು ಮುಂದಿನ ಪೀಳಿಗೆಗೆ ಅದನ್ನು ದಾಟಿಸಬೇಕಾದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಅದನ್ನು ನಾವೆಲ್ಲರೂ ಮನಃಪೂರ್ವಕವಾಗಿ ಮಾಡಿದಾಗ ಮಾತ್ರ ಇಂಥ ಜಯಂತಿ ಆಚರಣೆಗಳಿಗೆ ಮಹತ್ವ ಬರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ನಿವೃತ್ತ ಪ್ರಾಧ್ಯಾಪಕ ಬಿ.ಜಿ.ಪತ್ತಾರ ಅವರು, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ರಿö್ತÃ ಅವರ ಜೀವನ ಮೌಲ್ಯಗಳು ಇವತ್ತಿಗೂ ಪ್ರಸ್ತುತವಾಗಿದ್ದು ಇವುಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಅನುಷ್ಟಾನಕ್ಕೆ ತರಬೇಕು ಎಂದು ಸಲಹೆ ನೀಡಿದರು.
ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಸತತ ಪರಿಶ್ರಮ ಮತ್ತು ನಿರ್ದಿಷ್ಟ ಗುರಿ ಹೊಂದಿರಬೇಕು. ಎನ್‌ಎಸ್‌ಎಸ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ರಿö್ತÃ ಅವರ ಬದುಕು ನಮಗೆಲ್ಲರಿಗೂ ಪ್ರೇರಣಾದಾಯಕವಾಗಿದ್ದು ಅವರು ಪ್ರತಿಪಾದಿಸಿದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.
ಇದೇ ಸಂದರ್ಭದಲ್ಲಿ ಅವರು ಗಾಂಧೀಜಿ ಮತ್ತು ಸ್ವಾತಂತ್ರö್ಯ ಹೋರಾಟ ಕುರಿತ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಅಲ್ಲದೇ ಗಾಂಧೀಜಿ ಕುರಿತ ಕವನ ವಾಚಿಸಿದರು.
ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚAದ್ರಶೇಖರ್, ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಅಮರನಾಥ ಪ್ರಜಾಪತಿ, ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಗೀತ ವಿಭಾಗದ ವಿದ್ಯಾರ್ಥಿನಿಯರಿಂದ ಭಜನ ನಡೆಯಿತು. ಎನ್.ಎಸ್.ಎಸ್. ಕೋಶದ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಅಶೋಕ ಸುರಪುರ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಲಾವತಿ ಕಾಂಬಳೆ ಅತಿಥಿಗಳನ್ನು ಪರಿಚಯಿಸಿ, ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಡಾ.ಅಶ್ವಿನಿ ಕೆ.ಎನ್ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಮಹಾತ್ಮ ಗಾಂಧೀಜಿ ಜಯಂತಿ ಪ್ರಯುಕ್ತ ಕಾರ್ಯಕ್ರಮ
ವಿಜಯಪುರ : ಗಾಂಧಿಜೀಯವರ ಮೌಲ್ಯಗಳನ್ನು ಸ್ಮರಿಸುತ್ತಾ ಅವುಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆ ಮಾಡೋಣ, ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛ ಹಸಿರು ಸ್ಥಳವನ್ನಾಗಿ ಮಾಡೋಣ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಬುಧವಾರ ನಗರದ ಆನಂದ ಮಹಲ್ ಆವರಣದಲ್ಲಿ ಜಿಲ್ಲಾಡಳಿತ, ನೆಹರು ಯುವ ಕೇಂದ್ರ, ವಿಜಯಪುರ ಲಾಡ್ಲೀ ಪೌಂಡೇಶನ್ ನವದೆಹಲಿ, ಜಿಲ್ಲಾ ಎನ್.ಎಸ್.ಎಸ್. ಘಟಕ, ಕ್ಷೇತ್ರ ಸಂವಹನ ಇಲಾಖೆ, ಸ್ಪಂದನಾ ಸೇವಾ ಸಂಸ್ಥೆ, ಸಮಪ್ರಭ ಸಂಸ್ಥೆಯವರ ಸಂಯುಕ್ತಾಶ್ರಯದಲ್ಲಿ “ಸ್ವಚ್ಛತಾ ಹಿ ಸೇವಾ“ ಕಾರ್ಯಕ್ರಮ ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಗಾಂಧಿ ಜಯಂತಿಯನ್ನು ಆಚರಿಸುತ್ತಿರುವಾಗ ಸ್ವಚ್ಛ ಭಾರತ ಅಭಿಯಾನಕ್ಕೆ ನಮ್ಮ ಬದ್ಧತೆ ಕೊಡುಗೆ ನೀಡಬೇಕಾಗಿದೆ. ಗಾಂಧಿಜೀಯವರು ಹಾಕಿಕೊಟ್ಟ ಅಹಿಂಸಾ ಮಾರ್ಗದಲ್ಲಿ ನಡೆದುಕೊಂಡು ಸ್ವಚ್ಛತೆ ಮತ್ತು ಸಮಾಜ ಸೇವೆಗೆ ಅಣಿಯಾಗಬೇಕಾಗಿದೆ. ಸ್ವಚ್ಛತೆಯ ಬಗ್ಗೆ ಸಾರ್ವಜನಿಕರು ತಮ್ಮ ಜವಾಬ್ದಾರಿ ಅರಿತು ಭಾಗಿಯಾಗಬೇಕೆಂದು ಎಂದು ಹೇಳಿದರು.
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಾಹುಲ ಡೋಂಗ್ರೆ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಸೆÀಪ್ಟಂಬರ್ 17ರಿಂದ ಅಕ್ಟೋಬರ್ 02ರವರೆಗೆ ನಿರಂತರವಾಗಿ "ಸ್ವಚ್ಛತೆಯೇ ಹಿ ಸೇವಾ" ಕಾರ್ಯಕ್ರಮದ ಜಿಲ್ಲೆಯ ಯುವಕ ಸಂಘಗಳು ಮತ್ತು ಎನ ಎಸ್ ಎಸ್ ಘಟಕಗಳ ಮೂಲಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಗಾಂಧೀಜಿ ಅವರ ಸ್ವಚ್ಛತೆಯ ಪರಿಕಲ್ಪನೆಯನ್ನು ಯುವಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನೆಹರು ಯುವ ಕೇಂದ್ರದಿAದ ಮಾಡಲಾಗಿದೆ ಎಂದು ಹೇಳಿದರು.
ಜಾವೀದ ಜಮಾದಾರ ಮಾತನಾಡಿ, ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಯುವಕರು ಗಾಂಧೀಜಿಯವರು ಹಾಕಿಕೊಟ್ಟಂತಹ ಮಾರ್ಗದಲ್ಲಿ ನಡೆಯಬೇಕು ಎಂದರು.
ಎನ್.ಎಸ್.ಎಸ್. ಸ್ವಯಂ ಸೇವಕರ ತಲಾ 100 ಜನರ 8 ತಂಡಗಳನ್ನು ರಚಿಸಿ ನಗರದ ಕೇಂದ್ರ ಬಸ್ ನಿಲ್ದಾಣ, ಗಗನ ಮಹಲ್, ಜಿಲ್ಲಾಧಿಕಾರಿಗಳ ಕಛೇರಿ ಆವರಣ, ಬಾರಾಕಮಾನ, ಗಾಂಧಿಚೌಕ ನರಸಿಂಹ ದೇವಸ್ಥಾನ, ಹಳೇ ತಹಶೀಲ್ದಾರ, ಆಫೀಸ್, ಎಲ್.ಬಿ.ಎಸ್. ಮಾರ್ಕೆಟ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು. ಆನಂದ ಮಹಲ್ ಆವರಣದಿಂದ ಸ್ವಚ್ಚತಾ ಜಾಗೃತಿ ಗಾಂಧಿ ವೃತ್ತದವರೆಗೆ ಹಮ್ಮಿಕೊಂಡು, ವೃತ್ತದಲ್ಲಿ ಮಾನವ ಸರಪಳಿ ನಿಮಿಸಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾಪಣೆ ಮಾಡಲಾಯಿತು.
ಎಸ್.ಯು.ಜಮಾದಾರ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಕ್ಷೇತ್ರ ಸಂವಹನಾ ಅಧಿಕಾರಿ ಸುರೇಶ ಸಿ.ಕೆ. ಎನ್.ಎಸ್.ಎಸ್. ನೋಡಲ್ ಅಧಿಕಾರಿ ಪ್ರಕಾಶ ರಾಠೋಡ, ಸುರಭಿಸಿಂಗ್, ಸುರೇಶ ಬಿಜಾಪೂರ, ಮಹದೇವ ದೇವರ, ಆರ್.ಬಿ.ಉಪಾಸೇ, ಡಾ. ಶಿವಕುಮಾರ ನಾಯಕ, ಶೇಖರ ಕುಮಾರ ಝಾ, ಎಸ್.ಯು. ಜಮಾದಾರ ಪ್ರೆಸಿಡೆನ್ಸಿ ಕಾಲೇಜಿನ ಪ್ರಾಚಾರ್ಯ ಡಾ|| ಸುಮಾ ಬೊಳರೆಡ್ಡಿ, ಚೇತನಾ ಕಾಲೇಜಿನ ಪುರುಷೋತ್ತಮ, ವೇದಾಂತ ಕಾಲೇಜಿನ ಎ.ಎಸ್. ಹೂಗಾರ, ಎ.ಎಸ್.ಪಾಟೀಲ ಕಾಮರ್ಸ್ ಕಾಲೇಜಿನ ವಿಜಯಕುಮಾರ ತಳವಾರ, ಮತ್ತು ಪ್ರದೀಪ ಕುಂಬಾರ ಜೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯದ ಡಾ|| ಬಿ.ಎಸ್. ಹಿರೇಮಠ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಮೊದಲಿಗೆ ಪ್ರಶಾಂತ ದೇಶಪಾಂಡೆ ಸ್ವಾಗತಿಸಿದರು. ನೆಹರು ಯುವ ಕೇಂದ್ರದ ಕಾರ್ಯಕ್ರಮ ಸಹಾಯಕಿ ಬೇಬಿ ದೊಡಮನಿ ವಂದಿಸಿದರು. ಸಂಗಮೇಶ ರಾಮಗೊಂಡ ನಿರೂಪಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ವಿಜಯಪುರ: ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರು ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಮೂಲ್ಯವಾದದ್ದು, ಈ ಮಹಾನ್ ವ್ಯಕ್ತಿಗಳ ತ್ಯಾಗ, ನಿಷ್ಠೆ, ಪ್ರಾಮಾಣಿಕತೆ, ಸತ್ಯ, ಅಹಿಂಸಾ, ಸರಳತೆಯ ತತ್ವಾದರ್ಶಗಳನ್ನು ಹಾಗೂ ಅವರ ಜೀವನದ ಸಂದೇಶ ಮೌಲ್ಯಗಳನ್ನು ಯುವ ಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿçà ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಮಹನೀಯರ ಕುರಿತು ಇಂದಿನ ಜನರು ಅಧ್ಯಯನ ಮಾಡುವ ಮೂಲಕ ಅವರ ಚಿಂತನೆಗಳನ್ನು ಹಾಗೂ ಆದರ್ಶ ವಿಚಾರಗಳನ್ನು ಅರಿತುಕೊಳ್ಳಬೇಕು. ದೇಶಕ್ಕೆ ಸ್ವಾತಂತ್ರö್ಯ ದೊರಕಿಸುವಲ್ಲಿ ಮಹತ್ವರ ಪಾತ್ರ ವಹಿಸಿ ಸತ್ಯ, ಅಹಿಂಸೆಯ ಹೋರಾಟದ ಹಾದಿ ಅನುಸರಿಸಿ ವಿಶ್ವಕ್ಕೆ ದೊಡ್ಡ ಸಂದೇಶ ಸಾರಿದವರು ಮಹಾತ್ಮ ಗಾಂಧೀಜಿಯವರು.
ವಿಶ್ವಸಂಸ್ಥೆಯು ವiಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆಯನ್ನು ಅಹಿಂಸಾ ದಿನಾಚರಣೆಯನ್ನಾಗಿ ಅಂತರಾಷ್ಟಿçÃಯ ಮಟ್ಟದಲ್ಲಿ ಆಚರಿಸುತ್ತಿರುವುದು ವಿಶ್ವ ಅವರನ್ನು ಗೌರವಿಸುವ ಪರಿಯಾಗಿದೆ ಎಂದು ಹೇಳಿದರು.
ತ್ಯಾಗ, ಸತ್ಯ, ಅಹಿಂಸೆಯAತಹ ಇವರ ವಿಚಾರಗಳು ಇಂದಿಗೂ ಎಂದೆAದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು. ಸತ್ಯ ಶಾಂತಿ, ತ್ಯಾಗಮೂರ್ತಿಯಾದ ಇವರ ಜೀವನಾರ್ದಶ ಅರಿಯಬೇಕು. ಲಾಲ್ ಬಹದೂರ್ ಶಾಸ್ತಿçà ಅವರು ನೀಡಿದ ಜೈ ಜೈವಾನ್ ಜೈ ಕಿಸಾನ್ ಘೋಷವಾಕ್ಯ ರೈತ ಹಾಗೂ ಸೈನಿಕರ ಬಗೆಗಿನ ಅಪಾರ ಕಾಳಜಿಗೆ ಧ್ಯೋತಕವಾಗಿದ ಎಂದು ಹೇಳಿದರು. ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿçà ಅವರ ಜೀವನಾದರ್ಶಗಳು ನಮ್ಮೆಲ್ಲರ ಬದುಕಿಗೆ ಸ್ಪೂರ್ತಿದಾಯಕವಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಗಾಂಧಿಭವನವು ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆ, ಸ್ವಾತಂತ್ರö್ಯ ಚಳುವಳಿಯ ಕುರಿತಾಗಿ ಸಮಗ್ರ ನೋಟ ಇಲ್ಲಿ ್ಲ ಕಾಣಬಹುದಾಗಿದೆ. ಗಾಂಧಿ ಭವನವು ಮಾಹಿತಿ ಆಗರವೇ ಆಗಿದೆ. ಸಾರ್ವಜನಿಕರು, ವಿದ್ಯಾಥಿಗಳು ಗಾಂಧಿ ಭವನವನ್ನು ವೀಕ್ಷಿಸಿ ಗಾಂಧೀಜಿವರ ಕುರಿತಾಗಿ ಹೆಚ್ಚು ಮಾಹಿತಿ ತಿಳಿದುಕೊಳ್ಳಬಹುದಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಮಹನೀಯರ ಜೀವನದ ತತ್ವಗಳನ್ನು ಸ್ಮರಿಸಲು ಹಾಗೂ ಅವರಿಗೆ ಗೌರವ ಅರ್ಪಿಸಲು ಜಯಂತಿ ಆಚರಣೆ ಮಾಡುತ್ತೇವೆ. ಸ್ವಾತತ್ರö್ಯ ಹೋರಾಟದ ಮುಂಚೂಣಿಯಲಿದ್ದ ಮಹಾತ್ಮ ಗಾಂಧಿ ಅವರು ಸಾಮಾಜಿಕ, ರಾಜಕೀಯ ಬದಲಾವಣೆಗೆ ದೇಶಾದ್ಯಂತ ಸಂಚರಿಸಿ ಜನರ ಸಮಸ್ಯೆ ಅರಿತು ಅವಿರತವಾಗಿ ಶ್ರಮಿಸಿದರು. ಗ್ರಾಮಗಳ ಅಭಿವೃಧಿ ದೇಶದ ಅಭಿವೃದ್ಧಿ ಎಂಬ ಗ್ರಾಮ ಸ್ವರಾಜ್ಯ ಪರಿಕಲ್ಪನೆ ತಂದರು ಎಂದು ಹೇಳಿದರು.
ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಕುರಿತಾಗಿ ಶ್ರೀಮತಿ ಮೀನಾಕ್ಷಿ ಪಾಟೀಲ ಅವರು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯ್ಕ, ಮೇಯರ್ ಮಹೇಜಬಿನ್ ಹೊರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಎಡಿಸಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡ್ಡೆ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಅಜೂರ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎನ್.ಎಚ್. ನಾಗೂರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಯುವ ಜನಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಪೀಟರ್ ಅಲೆಕ್ಸಾಂಡರ್, ಅಶೋಕ್ ಘೋಣಸಗಿ, ಬಾಬುಗೌಡ ಪಾಟೀಲ, ನಿಲೇಶ್ ಬೇನಾಳ, ಭೀಮರಾಯ ಜಿಗಜಿಣಗಿ, ಗಿರೀಶ್ ಕುಲಕರ್ಣಿ, ನಿವೃತ್ತ ಶಿಕ್ಷಕರಾದ ಎ.ಎಚ್. ಮಮದಾಪೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ, ವಿವಿಧ ಶಾಲಾ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಬ್ಯಾಂಕ್ ಆಫ್ ಬರೋಡ ಶಾಖೆ ನಿವರಗಿಯಿಂದ ಅಜೀತ ಮುತ್ತಿನ ದಂಪತಿಗೆ ಸನ್ಮಾನ 2400 ಜನರಿಗೆ ಉಚಿತ ಕಾಶಿ ಯಾತ್ರೆ ಮಾಡಿಸಿದ ಮುತ್ತಿನ ಸಹೋದರರು
ಚಡಚಣ: ಪಟ್ಟಣದ ಪ್ರಸಿದ್ಧ ಜವಳಿ ವರ್ತಕರಾದ ಅಜಿತ ಮುತ್ತಿನ ಅವರು ಕಳೆದ ವಾರ 2400 ಜನರನ್ನು 1 ವಾರದ ಕಾಲ ತಮ್ಮ ಸ್ವಂತ ಖರ್ಚಿನಲ್ಲಿ ಕಾಶಿ ಯಾತ್ರೆಗೆ ಕರೆದುಕೊಂಡು ಯಶಸ್ವಿಯಾಗಿ ಹೋಗಿ ಬಂದ ಹಿನ್ನಲೆಯಲ್ಲಿ ಮುತ್ತಿನ ಸಹೋದರರ ಈ ಮಹತರ ನಿಸ್ವಾರ್ಥ ಸೇವೆಯನ್ನು ಕೊಂಡಾಡಿದ ಬ್ಯಾಂಕ್ ಆಫ್ ಬರೋಡ ಶಾಖೆ ನಿವರಗಿ ಸಿಬ್ಬಂದಿಗಳು ಅಜಿತ್ ಮುತ್ತಿನ ದಂಪತಿಗೆ ಸನ್ಮಾನಿಸಿ, ಗೌರವಿಸಿದರು.
ಕಳೆದ ಏಳೆಂಟು ವರ್ಷಗಳಿಂದ ಪ್ರಸಿದ್ಧ ಜವಳಿ ವ್ಯಾಪಾರಸ್ಥರಾದ ಮುತ್ತಿನ ಸಹೋದರರು ಉಚಿತ ಯಾತ್ರೆ ಕೈಗೊಳ್ಳುತ್ತಿದ್ದು, ಈ ಬಾರಿಯೂ ತಮ್ಮ ಸ್ವಂತ ಆದಾಯದಲ್ಲಿನ ಸುಮಾರು 2 ಕೋಟಿ ರೂ. ವೆಚ್ಚವನ್ನು ಭರಿಸಿ, ಉಚಿತವಾಗಿ ಒಂದು ವಾರದ ಕಾಶಿ ಯಾತ್ರೆ ಆಯೋಜಿಸಿದ್ದರು.
ಈ ಸಂದರ್ಭದಲ್ಲಿ ನಿವರಗಿಯ ಬ್ಯಾಂಕ್ ಆಫ್ ಬರೋಡ ಶಾಖಾ ವ್ಯವಸ್ಥಾಪಕರಾದ ಸಂತೋಷ ಹಿಟ್ನಳ್ಳಿ ಮಾತನಾಡಿ, ಇವರ ಸಮಾಜಮುಖಿ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಅವರ ಸೇವಾ ಮನೋಭಾವ ಹೀಗೆ ಮುಂದುವರಿಯಲಿ ಎಂದರು.
ಈ ವೇಳೆ ಬ್ಯಾಂಕಿನ ಸಿಬ್ಬಂದಿ ವಿಜಯಕುಮಾರ್, ಜಗನ್ನಾಥ್, ಸಿದ್ದು ಆಲಮೇಲಕರ ಸೇರಿದಂತೆ
ಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ಯಾತ್ರಿಕರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತಾ ಸೇವಾ ಕಾರ್ಯಕ್ರಮ ಹಾಗೂ ನಾನ್ ಕ್ಲಿನಿಕಲ್ ಸಿಬ್ಬಂದಿಗಳಿಗೆ ಸನ್ಮಾನ
ವಿಜಯಪುರ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆಯು ಪ್ರಮುಖ ಪಾತ್ರ ವಹಿಸುತ್ತದೆ ಪ್ರತಿಯೊಂದು ಕ್ಷೇತ್ರದಲ್ಲಿ ಸ್ವಚ್ಛತೆ ಕಾಪಾಡಿದರೆ ರೋಗಗಳನ್ನು ನಿಯಂತ್ರಣ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ ಶಿವಾನಂದ ಮಾಸ್ತಿಹೊಳಿ ಹೇಳಿದರು.
ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಸಪ್ಟಂಬರ್ 9 ರಿಂದ ಅಕ್ಟೋಬರ್ 2 ನೇ ತಾರೀಖಿನವರೆಗೆ ಸ್ವಚ್ಛತಾ ಸೆವಾ ಆಂದೋಲನದ ನಿಮಿತ್ಯ ಸ್ವಚ್ಛತಾ ಕಾರ್ಯಕ್ರಮ ಹಾಗೂ ಜಿಲ್ಲಾ ಆಸ್ಪತ್ರೆಯ ನಾನ್ ಕ್ಲಿನಿಕಲ್ ಸಿಬ್ಬಂದಿಗೆ ಸನ್ಮಾನ ನೆರೆವೇರಿಸಿ ಮಾತನಾಡಿದರು
ಪ್ರತಿಯೊಬ್ಬರು ವೈಯಕ್ತಿಕ ಸ್ವಚ್ಛತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿಯ ಸ್ವಚ್ಛತೆ ಕಾಪಾಡಿಕೊಂಡು ಮಹಾತ್ಮಾ ಗಾಂಧೀಜಿಯವರು ಕಂಡಂತಹ ಕನಸನ್ನು ನನಸು ಮಾಡಲು ಕೈಜೋಡಿಸಬೇಕಾಗಿದೆ ಸಾರ್ವಜನಿಕ ಸ್ಥಳದಲ್ಲಿ ಎಲ್ಲೆಂದರಲ್ಲಿ ಗುಟಕಾ ತಂಬಾಕು ಮಾದಕ ವಸ್ತುಗಳನ್ನು ಉಪಯೋಗಿಸುತ್ತಿರುವುದು ನಾವು ಕಾಣುತ್ತಿದ್ದೇವೆ ಅಂತವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದು ಅನಿವಾರ್ಯವಾಗಿದೆ ಆಸ್ಪತ್ರೆಗಳಿಗೆ ಬರುವ ಜನರ ಜೇಬುಗಳನ್ನು ಚೆಕ್ಕು ಮಾಡಿ ಒಳಗೆ ಪ್ರವೇಶ ನೀಡುವುದು ಅನಿವಾರ್ಯವಾಗಿದೆ ಇಲ್ಲದಿದ್ದರೆ ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಪ್ರೇರೇಪಿಸಿದಂತಾಗುತ್ತದೆ.
ನಮ್ಮ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾನ್ ಕ್ಲಿನಿಕಲ್ ಸಿಬ್ಬಂದಿಗಳು ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಆದ್ದರಿಂದ ನಮ್ಮ ಆಸ್ಪತ್ರೆಯ ಸ್ವಚ್ಛತೆಯನ್ನು ಕಾಪಾಡಲು ಅನುಕೂಲವಾಗಿದೆ. ಆದಕಾರಣ ನಾನ್ ಕ್ಲಿನಿಕಲ್ ಸಿಬ್ಬಂದಿಗಳ ಸೇವೆ ಪ್ರಶಂಶಿನಯವಾದದ್ದು ಎಂದು ಹೇಳಿದರು.
ಸ್ವಚ್ಛತೆ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಡಾ ಶಶಿಕಲಾ ಹಿರೇಮನಿ ರವರು ಮಾತನಾಡಿದರು. ಈ ಸಂದರ್ಭದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸಂತೋಷ್ ಶಾಹಾಪುರ. ಜಿಲ್ಲಾ ಕ್ಷಯ / ಹೆಚ್ಐವಿ ಕಾರ್ಯಕ್ರಮ ಅಧಿಕಾರಿ ಡಾ ಎಂ ಬಿ ಬಿರಾದಾರ್. ಡಾ ಗುಂಡಪ್ಪ ಡಾ ಸುರೇಶ್ ಚವಾಣ ಡಾ ಸಂದೀಪ್ ಸಜ್ಜನ್ ಡಾ ಮಹೇಶ್ ಮೊರೆ ಡಾ ಹಾವಿನಾಳ್ ಡಾ ಚಂದರಗಿ ಸಾಯಿನಾಥ್ ಏಜೆನ್ಸಿಯ ಶ್ರೀ ಮನೋಹರ್ ಗ್ರೇಡ್ ಒನ್ ಶ್ರೀಮತಿ ಮೋಮಿನ ಡಾ ಮೀನಾಕ್ಷಿ ಡಾ ತಿಮ್ಮಾಪುರ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ ಆಧೀಕ್ಷಕ ತಾಂಬೋಳಿ ಉಮೇಶ್ ವಸ್ತ್ರದ ಜಿಲ್ಲಾ ಆಸ್ಪತ್ರೆಯ ಇತರೆ ವೈದ್ಯರು. ಅಧಿಕಾರಿಗಳು. ಮೇಲ್ವಿಚಾರಕರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Tuesday, October 1, 2024
ಪಿ.ಎಸ್.ಐ ಹುದ್ದೆಯ ಸ್ಪರ್ಧಾತ್ಮ ಪರೀಕ್ಷೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ
ವಿಜಯಪುರ : ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ ಒಟ್ಟು 11 ಕೇಂದ್ರಗಳಲ್ಲಿ ಅಕ್ಟೋಬರ್ 03ರಂದು ಜರುಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಟ್ಟು 4,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 10-30ರಿಂದ 12-00ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 12-30ರಿಂದ ಮಧ್ಯಾಹ್ನ 2-00 ರವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ.
ಅಭ್ಯರ್ಥಿಗಳು ಯಾವುದೇ ಎಲೆಕ್ಟಾçನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್‌ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿಕೊಳ್ಳಬೇಕು. ಎಲ್ಲಾ ಸಿಸಿಟಿವಿ ಕ್ಯಾಮಾರಾಗಳ ವಿಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆಗಳಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಲೋಪ ಕಂಡು ಬಂದಲ್ಲಿ ತಪ್ಪಿಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಯಾವುದೇ ಕಾರಣಕ್ಕೂ ತಮಗೆ ವಹಿಸಿದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಅಭ್ಯರ್ಥಿಗಳ ಗುರುತಿನ ಚೀಟಿ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಬೇಕು. ಮೊಬೈಲ್, ಕ್ಯಾಲಕುಲೇಟರ್, ಸೇರಿದಂತೆ ಯಾವುದೇ ಇಲೆಕ್ಟಾçನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಪರೀಕ್ಷಾ ಕೇಂದ್ರಗಳಲ್ಲಿ ಅಧಿಕೃತವಾಗಿ ನೇಮಕವಾದ ಸಿಬ್ಬಂದಿಗಳಿಗೆ ಮಾತ್ರ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಅವರು ಗುರುತಿನ ಚೀಟಿ ಹೊಂದಿರಬೇಕು. ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಖಾರಿ ಋಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಖಾರಿ ಸೋಮಲಿಂಗ ಗೆಣ್ಣುರ ಖಜಾನೆ ಇಲಾಖೆಯ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ವೀಕ್ಷಕರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ ವಾರ್ತಾ ಇಲಾಖೆ ವಾಹನ ಚಾಲಕರಾದ ಜಿ.ಬಿ.ತಾಟೆ ಅವರಿಗೆ ಆತ್ಮೀಯ ಬೀಳ್ಕೊಡುಗೆ
ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಜಯಪುರ ಕಚೇರಿಯಲ್ಲಿ ಕಳೆದ 27 ವರ್ಷಗಳಿಂದ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ಸೆ.30ರಂದು ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ ವಾಹನ ಚಾಲಕರಾದ ಜಿ.ಬಿ.ತಾಟೆ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.
ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಂಡ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಅವರು ಮಾತನಾಡಿ, ಈ ಕಚೇರಿಯಲ್ಲಿ ಕಳೆದ 27 ವರ್ಷಗಳಿಂದ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಪತ್ರಕರ್ತರು ಸೇರಿದಂತೆ ಕಚೇರಿ ಸಿಬ್ಬಂದಿಯೊAದಿಗೆ ಅತ್ಯಂತ ಪ್ರೀತಿ, ವಿಶ್ವಾಸದಿಂದ ಯಾರ ಮನಸ್ಸಿಗೆ ನೋವು ಬಾರದ ಹಾಗೆ ನಡೆದುಕೊಳ್ಳುವ ಮೂಲಕ ಸರ್ಕಾರಿ ಸೇವೆಗೆ ವಿಶೇಷ ಗೌರವವನ್ನು ನೀಡಿ, ಇತರರಿಗೂ ಮಾದರಿಯಾಗಿದ್ದಾರೆ. ಇವರ ಮುಂದಿನ ನಿವೃತ್ತಿ ಜೀವನವು ಅತ್ಯಂತ ಸುಖಕರವಾಗಿರಲಿ ಎಂದು ಅವರು ಹಾರೈಸಿದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾದ ಮಂಜುಳಾ ದುರಗನ್ನವರ, ಸಿನಿ ಚಾಲಕರಾದ ಸುರೇಶ ಅಂಬಿಗೇರ, ಪ್ರಶಿಕ್ಷಣಾರ್ಥಿ ಶಿಲ್ಪಾ ಚವ್ಹಾಣ, ರಾಜು ಢವಳಗಿ, ಪ್ರಕಾಶ ಸೇರಿದಂತೆ ಮತ್ತಿತರರು ಇದ್ದರು.