ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ, ಪಿಜಿ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಸರ್ಟಿಫೀಕೇಟ್ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಇದೇ ಅಕ್ಟೋಬರ್ 28ರಂದು ಬೆಳಿಗ್ಗೆ 10.30ರಿಂದ ಕೌನ್ಸೆಲಿಂಗ್ ಆರಂಭವಾಗಲಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.
ಮಹಿಳಾ ವಿವಿಯ ವಿವಿಧ ಕೋರ್ಸ್ಗಳಿಗೆ ಈಗಾಗಲೇ ಯುಯುಸಿಎಂಎಸ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿನಿಯರು ದಿನಾಂಕ 28ರಂದು ಅಗತ್ಯ ಮೂಲ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಿದ್ದು ಪ್ರವೇಶ ಪಡೆದುಕೊಳ್ಳಬಹುದಾಗಿದೆ. ದಿನಾಂಕ 29 ರಂದು ಸೂಪರ್ ನ್ಯೂಮರಿ ಕೋಟಾದ ಅಡಿಯಲ್ಲಿ ಪ್ರವೇಶ ಪಡೆದುಕೊಳ್ಳಬಹುದಾಗಿದ್ದು ದಿನಾಂಕ 30ರಂದು ಸೆಲ್ಪ್ ಸಪೋರ್ಟಿಂಗ್ ಯೋಜನೆ ಅನ್ವಯ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಂಕರಗೌಡ ಸೋಮನಾಳ, ಕುಲಸಚಿವರು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರÀ- 586108. ದೂರವಾಣಿ ಸಂಖ್ಯೆ: 08352-297062, 7795122960, 7204889855 ಮತ್ತು 9901827696; website: www.kswu.ac.inಸಂಪರ್ಕಿಸಬಹುದಾಗಿದೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment