Wednesday, October 2, 2024

ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತಾ ಸೇವಾ ಕಾರ್ಯಕ್ರಮ ಹಾಗೂ ನಾನ್ ಕ್ಲಿನಿಕಲ್ ಸಿಬ್ಬಂದಿಗಳಿಗೆ ಸನ್ಮಾನ

ವಿಜಯಪುರ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆಯು ಪ್ರಮುಖ ಪಾತ್ರ ವಹಿಸುತ್ತದೆ ಪ್ರತಿಯೊಂದು ಕ್ಷೇತ್ರದಲ್ಲಿ ಸ್ವಚ್ಛತೆ ಕಾಪಾಡಿದರೆ ರೋಗಗಳನ್ನು ನಿಯಂತ್ರಣ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ ಶಿವಾನಂದ ಮಾಸ್ತಿಹೊಳಿ ಹೇಳಿದರು.

ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಸಪ್ಟಂಬರ್ 9 ರಿಂದ ಅಕ್ಟೋಬರ್ 2 ನೇ ತಾರೀಖಿನವರೆಗೆ ಸ್ವಚ್ಛತಾ ಸೆವಾ ಆಂದೋಲನದ ನಿಮಿತ್ಯ ಸ್ವಚ್ಛತಾ ಕಾರ್ಯಕ್ರಮ ಹಾಗೂ ಜಿಲ್ಲಾ ಆಸ್ಪತ್ರೆಯ ನಾನ್ ಕ್ಲಿನಿಕಲ್ ಸಿಬ್ಬಂದಿಗೆ ಸನ್ಮಾನ ನೆರೆವೇರಿಸಿ ಮಾತನಾಡಿದರು

 ಪ್ರತಿಯೊಬ್ಬರು ವೈಯಕ್ತಿಕ ಸ್ವಚ್ಛತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿಯ ಸ್ವಚ್ಛತೆ ಕಾಪಾಡಿಕೊಂಡು ಮಹಾತ್ಮಾ ಗಾಂಧೀಜಿಯವರು ಕಂಡಂತಹ ಕನಸನ್ನು  ನನಸು ಮಾಡಲು ಕೈಜೋಡಿಸಬೇಕಾಗಿದೆ ಸಾರ್ವಜನಿಕ ಸ್ಥಳದಲ್ಲಿ ಎಲ್ಲೆಂದರಲ್ಲಿ ಗುಟಕಾ ತಂಬಾಕು ಮಾದಕ ವಸ್ತುಗಳನ್ನು ಉಪಯೋಗಿಸುತ್ತಿರುವುದು ನಾವು ಕಾಣುತ್ತಿದ್ದೇವೆ ಅಂತವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದು ಅನಿವಾರ್ಯವಾಗಿದೆ ಆಸ್ಪತ್ರೆಗಳಿಗೆ ಬರುವ ಜನರ ಜೇಬುಗಳನ್ನು ಚೆಕ್ಕು ಮಾಡಿ ಒಳಗೆ ಪ್ರವೇಶ ನೀಡುವುದು ಅನಿವಾರ್ಯವಾಗಿದೆ ಇಲ್ಲದಿದ್ದರೆ ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಪ್ರೇರೇಪಿಸಿದಂತಾಗುತ್ತದೆ.

ನಮ್ಮ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾನ್ ಕ್ಲಿನಿಕಲ್ ಸಿಬ್ಬಂದಿಗಳು ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಆದ್ದರಿಂದ ನಮ್ಮ ಆಸ್ಪತ್ರೆಯ ಸ್ವಚ್ಛತೆಯನ್ನು  ಕಾಪಾಡಲು ಅನುಕೂಲವಾಗಿದೆ. ಆದಕಾರಣ ನಾನ್ ಕ್ಲಿನಿಕಲ್ ಸಿಬ್ಬಂದಿಗಳ  ಸೇವೆ ಪ್ರಶಂಶಿನಯವಾದದ್ದು ಎಂದು ಹೇಳಿದರು.


ಸ್ವಚ್ಛತೆ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಡಾ ಶಶಿಕಲಾ ಹಿರೇಮನಿ ರವರು ಮಾತನಾಡಿದರು. ಈ ಸಂದರ್ಭದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸಂತೋಷ್ ಶಾಹಾಪುರ. ಜಿಲ್ಲಾ ಕ್ಷಯ / ಹೆಚ್ಐವಿ ಕಾರ್ಯಕ್ರಮ ಅಧಿಕಾರಿ ಡಾ ಎಂ ಬಿ ಬಿರಾದಾರ್. ಡಾ ಗುಂಡಪ್ಪ  ಡಾ ಸುರೇಶ್ ಚವಾಣ ಡಾ ಸಂದೀಪ್ ಸಜ್ಜನ್ ಡಾ ಮಹೇಶ್ ಮೊರೆ ಡಾ ಹಾವಿನಾಳ್  ಡಾ ಚಂದರಗಿ ಸಾಯಿನಾಥ್ ಏಜೆನ್ಸಿಯ ಶ್ರೀ ಮನೋಹರ್ ಗ್ರೇಡ್ ಒನ್ ಶ್ರೀಮತಿ ಮೋಮಿನ ಡಾ ಮೀನಾಕ್ಷಿ ಡಾ ತಿಮ್ಮಾಪುರ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ ಆಧೀಕ್ಷಕ ತಾಂಬೋಳಿ ಉಮೇಶ್ ವಸ್ತ್ರದ ಜಿಲ್ಲಾ ಆಸ್ಪತ್ರೆಯ ಇತರೆ ವೈದ್ಯರು.  ಅಧಿಕಾರಿಗಳು. ಮೇಲ್ವಿಚಾರಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment