ವಿಜಯಪುರ: ಪಿಡಿಒ ಹುದ್ದೆಗಳನ್ನು ಗೆಜೆಟೆಡ್ ಬಿ ವೃಂದದ ಹುದ್ದೆಯಾಗಿ ಮೇಲ್ದರ್ಜೆಗೇರಿಸುವುದು, ಗ್ರಾಪಂ ನೌಕರರ ಸಕಲ ಬೇಡಿಕೆಗಳನ್ನು ಈಡೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ - ನೌಕರರ ಎಲ್ಲ ವೃಂದದ ಸಂಘಗಳು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಹಿನ್ನೆಲೆಯಲ್ಲಿ ಎಲ್ಲ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ತಮ್ಮ ಅಸಮಾಧಾನ ಹೊರಹಾಕಿದರು.
ನಗರದÀ ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿ ಕಳೆದ ಹಲವು ದಿನಗಳಿಂದ ಧರಣಿ ನಡೆಸುತ್ತಿರುವ ಈ ಎಲ್ಲ ನೌಕರರು, ಸದಸ್ಯರು ತಮ್ಮ ಬೇಡಿಕೆಗೆ ಹಕ್ಕೊತ್ತಾಯ ಮಂಡಿಸಿದರು.
ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಜಿ. ಪಾರೆ ಮಾತನಾಡಿ, ಗ್ರಾಮೀಣ ಅಭಿವೃದ್ಧಿಯಲ್ಲಿ ಪಂಚಾಯತ್ ರಾಜ್ ಅಧಿಕಾರಿ ಹಾಗೂ ಗ್ರಾಪಂ ನೌಕರರು ನೀಡುತ್ತಿರುವ ಕೊಡುಗೆ ಅನನ್ಯ, ಈ ನೌಕರರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಅನೇಕ ಸೌಲಭ್ಯಗಳು ದೊರಕುತ್ತಿವೆ, ಸಮರ್ಪಕವಾಗಿ ಕುಡಿಯುವ ನೀರು, ರಸ್ತೆ, ವಿದ್ಯುತ್ ಮೊದಲಾದ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಲ್ಲಿ ಈ ಎಲ್ಲ ವೃಂದದ ಹಾಗೂ ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿದೆ, ಹೀಗಾಗಿ ಇನ್ನಾದರೂ ಸರ್ಕಾರ ಈ ಎಲ್ಲರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿದರು.
ಪ್ರಮುಖ ಬೇಡಿಕೆಗಳನ್ನು ಮಂಡಿಸಿದ ಪ್ರತಿಭಟನಾಕಾರರು, 7 ರ್ಷ ಪೂರೈಸಿದ ಪಿಡಿಒಗಳನ್ನು ವರ್ಗಾವಣೆ ಮಾಡುವ ಪದ್ಧತಿ ಕೈ ಬಿಡುವುದು, ಕರವಸೂಲಿಗಾರ, ಡಿಟಿಒ, ನೀರು ಬಿಡುವ ಕಾರ್ಮಿಕರು ಮೊದಲಾದವರಿಗೆ ಕಾರ್ಯದರ್ಶಿ ಹುದ್ದೆಗಳಿಗೆ ಬಡ್ತಿ ನೀಡುವುದು, ಗ್ರಾಪಂಗಳು ಸ್ಥಳೀಯ ಸರ್ಕಾರವಾಗಿ ಸ್ವತಂತ್ರö್ಯವಾಗಿ ಕಾರ್ಯನಿರ್ವಹಿಸುವ ಪೂರಕ ವಾತಾವರಣ ನಿರ್ಮಾಣ ಮಾಡುವುದು, ಪಿಡಿಒಗಳನ್ನು ಗ್ರುಪ್-ಬಿ ಹುದ್ದೆಗೆ ಪದೋನ್ನತಿ ನೀಡುವುದು ಸೇರಿದಂತೆ ಸುದೀರ್ಘವಾದ ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment