Saturday, November 30, 2024
ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ವಿಶೇಷ ಪರಿಹಾರ ಬೋಧನೆಗೆ ಒತ್ತು ನೀಡಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ -ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಸೂಚನೆ
ವಿಜಯಪುರ, ಅಕ್ಟೋಬರ್ 30 (ಕರ್ನಾಟಕ ವಾರ್ತೆ) : ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಸುಧಾರಣೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ, ಇಂತಹ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ, ಪರಿಹಾರ ಬೋಧನೆ ಮಾಡುವ ಮೂಲಕ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಮುಂದಾಗುವAತೆ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್‌ಕುಮಾರ ಘೋಷ್ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಕ್ರಮ ವಹಿಸಬೇಕು. ಸರ್ಕಾರಿ ಶಾಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಬೇಕು ಎಂದು ಅವರು ಹೇಳಿದರು.
ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವವರು ಜವಾಬ್ದಾರಿ ಹಾಗೂ ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಭವಿಷ್ಯದಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಾಗದAತೆ ಎಚ್ಚರಿಕೆ ವಹಿಸಿ, ಮಕ್ಕಳ ದಾಖಲೆಗಳಲ್ಲಿ ಯಾವುದೇ ಲೋಪವಾಗದಂತೆ ಪ್ರಾಥಮಿಕ ಹಂತದಲ್ಲಿಯೇ ನೋಡಿಕೊಳ್ಳಬೇಕು. ಶಾಲಾ ದಾಖಲಾತಿ ಹಾಗೂ ಆಧಾರ ದಾಖಲಾತಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ದಾಖಲಾತಿಯೊಂದಿಗೆ ಆಧಾರ ಸೀಡಿಂಗ್ ಪ್ರಗತಿಯನ್ನು ಹೆಚ್ಚಿಸಬೇಕು. ಏನಾದರೂ ಸಮಸ್ಯೆಗಳಲಿದ್ದಲ್ಲಿ ತಕ್ಷಣವೇ ಪರಿಹರಿಸಿಕೊಂಡು ಯಾವುದೇ ಮಗುವಿನ ದಾಖಲೆಗಳಲ್ಲಿ ವ್ಯತ್ಯಾಸವಾಗದಂತೆ ಮುತುವರ್ಜಿ ವಹಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಕುರಿತು ಅಗತ್ಯ ಸೂಕ್ತ ಮಾರ್ಗದರ್ಶನ ಒದಗಿಸಬೇಕು. ಮಕ್ಕಳ ಭವಿಷ್ಯದ ಕಾರ್ಯವಾಗಿರುವುದರಿಂದ ಈ ಕಾರ್ಯದಲ್ಲಿ ಯಾವುದೇ ಅಧಿಕಾರಿಗಳು ನಿರ್ಲಕ್ಷö್ಯ ವಹಿಸಬಾರದು. ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ದಾಖಲಿಕರಣಗೊಳಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಈಗಿನಿಂದಲೇ ಮುಂಜಾಗ್ರತೆ ವಹಿಸಿಕೊಂಡು ಅಗತ್ಯ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಬಯೋಲಾಜಿಕಲ್ ಮತ್ತು ಕೆಮಿಕಲ್ ಪರೀಕ್ಷೆಯನ್ನು ನಿಯಮಿತವಾಗಿ ಕೈಗೊಂಡು ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ಶಾಲೆ, ಅಂಗನವಾಡಿ, ವಸತಿ ನಿಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಅವಶ್ಯಕತೆ ಇರುವ ಕಡೆ ಪರಿಶೀಲನೆ ನಡೆಸಿ ನೀರು ಪೂರೈಸಲು ಸೂಚಿಸಲಾಗಿದ್ದರ ಮೇರೆಗೆ ಮತ್ತೊಮ್ಮೆ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ಸಂಪರ್ಕ ಒದಗಿಸದೇ ಇರುವ ಸ್ಥಳಗಳನ್ನು ಖಚಿತಪಡಿಸಿಕೊಂಡು ಆದ್ಯತೆ ಮೇಲೆ ಕುಡಿಯುವ ನೀರು ಪೂರೈಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಂಡು ಖಚಿತಪಡಿಸಿಕೊಳ್ಳಲು ಈಗಾಗಲೇ ಜಂಟಿ ಸರ್ವೇ ನಡೆಸಲು ಸೂಚಿಸಲಾಗಿತ್ತು. ಆ ವರಧಿ ಆಧರಿಸಿ ಕ್ರಮ ವಹಿಸುವಂತೆ ಅವರು ಸೂಚನೆ ನಿಡಿದರು.,
ಜೆಜೆಎಂ ಯೋಜನೆಯ ನಿಗದಿತ ಅವಧಿಯಲ್ಲಿ ಪ್ರಗತಿ ಸಾಧಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳು ಯಾವುದೇ ಅರ್ಹ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ವಿಳಂಬ ಮಾಡದೇ ಅರ್ಜಿ ಇತ್ಯರ್ಥ ಪಡಿಸಿ ಶಿಷ್ಯವೇತನ ಒದಗಿಸಲು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ಗಂಗಾ ಕಲ್ಯಾಣ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಈ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ನಿರಂತರ ಫಾಲೋಅಪ್ ಮಾಡಬೇಕು. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಇ-ಆಫೀಸ್ ಅನುಷ್ಠಾನಕ್ಕೆ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ಪ್ರಧಾನಮಂತ್ರಿ ಸೂರ್ಯ ಘರ ಯೋಜನೆಯಡಿಯಲ್ಲಿ ಜಿಲ್ಲೆಯ ಸರ್ಕಾರಿ ಕಟ್ಟಡದ ಮೇಲ್ಛಾವಣಿಯಲ್ಲಿ ಸೋಲಾರ ಅಳವಡಿಕೆಗೆ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸುವAತೆ ಲೋಕೋಪಯೋಗಿ ಇಲಾಖೆ ಹಾಗೂ ಹೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಧಾನಮಂತ್ರಿ ಸೂರ್ಯ ಘರ ಯೋಜನೆ, ಮಾದರಿ ಸೌರ ಗ್ರಾಮ, ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ (ಕುಸುಮಬಿ) ಯೋಜನೆ ಕುರಿತು ಹೆಸ್ಕಾಂ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಪಿಪಿಟಿ ಮೂಲಕ ಸಭೆಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕ್ರೀಡಾ ಇಲಾಖೆ, ಆರೋಗ್ಯ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡದ ಮುಡಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮೂರು ದಿನಗಳ ಕಾಲ ನಡೆದ 19ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ದಲ್ಲಿ ಅತೀ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿ ಗರಿಷ್ಠ ಅಂಕಗಳನ್ನು ಗಳಿಸಿದ ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡವು ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದು, ಎರಡನೆಯ (ರನ್ನರ್ ಅಪ್) ಸ್ಥಾನವನ್ನು ಕಲಬುರ್ಗಿಯ ಗೋದುತಾಯಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಕಾಲೇಜು ತಂಡವು ಅಲಂಕರಿಸಿದೆ.
ಸAಗೀತ, ನೃತ್ಯ, ಸಾಹಿತ್ಯ, ರಂಗಭೂಮಿ ಮತ್ತು ಲಲಿತ ಕಲೆಗಳ ವಿಭಾಗದಲ್ಲಿ ನಾಟಕ, ಏಕಪಾತ್ರಾಭಿನಯ, ಮೂಕಾಭಿನಯ, ಸಂಗೀತ, ನೃತ್ಯ, ಚಿತ್ರಕಲೆ, ಜನಪದ ಕಲೆ, ಸಾಹಿತ್ಯ, ಚರ್ಚೆ, ಭಾಷಣ, ಛಾಯಾಗ್ರಹಣ, ಜನಪದ ನೃತ್ಯ ಮತ್ತು ಕ್ವಿಜ್ ಮುಂತಾದ ಸ್ಪರ್ಧೆಗಳು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತ ತಂಡಗಳಿಗೆ ವಿಭಾಗವಾರು ಪ್ರಶಸ್ತಿಯನ್ನು ನೀಡಲಾಗಿದ್ದು ವಿಜೇತ ತಂಡಗಳ ವಿವರ ಈ ಕೆಳಗಿನಂತಿದೆ:
ಸAಗೀತ ವಿಭಾಗ: ಹುಬ್ಬಳ್ಳಿಯ ಎಸ್.ಜೆ.ಎಂ.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡವು (ಪ್ರಥಮ ಸ್ಥಾನ) ಮತ್ತು ಕಲಬುರ್ಗಿಯ ಗೋದುತಾಯಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಕಾಲೇಜು (ದ್ವಿತೀಯ ಸ್ಥಾನ).
ನೃತ್ಯ ವಿಭಾಗದ: ಕಲಬುರ್ಗಿಯ ಶರಣೇಶ್ವರಿ ರೇಶ್ಮಿ ಮಹಿಳಾ ಬಿ.ಎಡ್ ಕಾಲೇಜು (ಪ್ರಥಮ ಸ್ಥಾನ) ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮಂಡ್ಯದ ಪಿ.ಜಿ ಕೇಂದ್ರ (ದ್ವಿತೀಯ ಸ್ಥಾನ).
ಸಾಹಿತ್ಯ ವಿಭಾಗ: ಸೇಡಂನ ಶ್ರೀಮತಿ ನರ್ಮದಾ ದೇವಿ ಗಿಳಿದಾ ಮಹಿಳಾ ಕಾಲೇಜು (ಪ್ರಥಮ ಸ್ಥಾನ) ಮತ್ತು ಇಳಕಲ್‌ನ ಎಸ್.ವಿ.ಎಮ್. ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡ (ದ್ವಿತೀಯ ಸ್ಥಾನ).
ನಾಟಕ ವಿಭಾಗ: ಕಲಬುರ್ಗಿಯ ಶರಣೇಶ್ವರಿ ರೇಶ್ಮಿ ಮಹಿಳಾ ಬಿ.ಎಡ್ ಕಾಲೇಜು ತಂಡ (ಪ್ರಥಮ ಸ್ಥಾನ) ಮತ್ತು ಕಲಬುರ್ಗಿಯ ಶ್ರೀಮತಿ ವಿ.ಜಿ.ಮಹಿಳಾ ಪದವಿ ಕಾಲೇಜು ತಂಡ (ದ್ವಿತೀಯ ಸ್ಥಾನ).
ಲಲಿತ ಕಲೆಗಳ ವಿಭಾಗ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ತಂಡ (ಪ್ರಥಮ ಸ್ಥಾನ) ಮತ್ತು ಕಲಬುರ್ಗಿಯ ಗೋದುತಾಯಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಕಾಲೇಜು ತಂಡ (ದ್ವಿತೀಯ ಸ್ಥಾನ).
ಯುವಜನೋತ್ಸವದ ಉದ್ಘಾಟನಾ ಸಮಾರಂಭಕ್ಕೂ ಮುನ್ನ ನಡೆದ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ತಂಡಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳ ಪೈಕಿ ಮೊದಲ ಬಹುಮಾನವನ್ನು ಹುಬ್ಬಳ್ಳಿಯ ಎಸ್.ಜೆ.ಮ್.ವಿ.ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು ತಂಡವು ಪಡೆದಿದ್ದು. ಎರಡನೇ ಬಹುಮಾನವನ್ನು ಕಲಬುರ್ಗಿಯ ಶ್ರೀಮತಿ ವಿ.ಜಿ.ಮಹಿಳಾ ಪದವಿ ಕಾಲೇಜು ತಂಡವು ಪಡೆದಿದೆ. ತೃತೀಯ ಬಹುಮಾನವನ್ನು ಕಲಬುರ್ಗಿಯ ಶರಣೇಶ್ವರಿ ರೇಶ್ಮಿ ಮಹಿಳಾ ಬಿ.ಎಡ್ ಕಾಲೇಜು ತಂಡವು ಪಡೆದುಕೊಂಡಿತು.
ವಿಜೇತ ತಂಡಗಳಿಗೆ ಮುಖ್ಯ ಅತಿಥಿಯಾಗಿದ್ದ ಡಾ.ಜಾವೀದ್ ಜಮಾದಾರ, ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ. ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚAದ್ರಶೇಖರ್, ಸಿಂಡಿಕೇಟ್ ಸದಸ್ಯರ ಡಾ.ಎಸ್.ಜೆ.ಮಾಡ್ಯಾಳ, ಯುವಜನೋತ್ಸವ ತಾಂತ್ರಿಕ ಸಮಿತಿ ಅಧ್ಯಕ್ಷ ಪ್ರೊ.ಪಿ.ಜಿತಡಸದ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಶಾಂತಾದೇವಿ ಟಿ ಮತ್ತಿತರ ಗಣ್ಯರು ಪ್ರಶಸ್ತಿಗಳನ್ನು ವಿತರಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲಿ: ಕುಲಪತಿ ಡಾ. ಪಿ .ಎಲ್ .ಪಾಟೀಲ.
ವಿಜಯಪುರ : ಇಂದು ವಿಜಯಪುರ ಕೃಷಿ ಮಹಾವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜರುಗಿತು ಧಾರವಾಡ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಪಿ. ಎಲ್. ಪಾಟೀಲ ಉದ್ಘಾಟನೆ ನೆರವೇರಿಸಿ ಮಾತನಾಡಿ,ವಿದ್ಯಾರ್ಥಿಸಂಘಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಶೈಕ್ಷಣಿಕ, ಸ್ಪರ್ಧಾತ್ಮಕ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಹಲವಾರು ಚಟುವಟಿಕೆಗಳನ್ನು ತಿಂಗಳುವಾರು ಯೋಜಿಸಿ ಅವುಗಳನ್ನು ಅನುಷ್ಠಾನ ಗೊಳಿಸ ಬೇಕೆಂದು ತಿಳಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Wednesday, November 27, 2024
Monday, November 25, 2024
ನೇರ ನಿಷ್ಠುರ ವರದಿ ಮೂಲಕ ಸಮಸ್ಯೆಗಳ ಮೇಲೆ ಬೆಳಕು ಚಲ್ಲಿದವರು ಆಸಂಗಿ : ಅಂಬಾದಾಸ ಜೋಶಿ
ವಿಜಯಪುರ : ವಿಜಯಪುರ ಜಿಲ್ಲೆಯ ಬಡವರು ದೀನ ದುರ್ಬಲರು, ರೈತರ ಸಮಸ್ಯೆಗಳು ಸೇರಿದಂತೆ ಜ್ವಲಂತ ಸಮಸ್ಯೆಗಳ ಕುರಿತು ನೇರ ನಿಷ್ಠುರ ವರದಿ ಮಾಡುವ ಮೂಲಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ ಸರ್ಕಾರದಿಂದ ಸಾರ್ವಜನಿಕರಿಗೆ ಆಗಬೇಕಾದ ಕೆಲಸ ಕಾರ್ಯಗಳು ತಲುಪುವಂತೆ ಮಾಡಲು ಶ್ರಮಿಸಿದ ಜಿಲ್ಲೆಯ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿಯವರಿಗೆ ಈ ಸಲ ಕರ್ನಾಟಕ ಸರ್ಕಾರ ಸುವರ್ಣ ಕರ್ನಾಟಕ 50 ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಿರುವುದು ಹೆಮ್ಮೆಯ ಸಂಗತಿ ಎಂದು ಪರಿಸರ ವೇದಿಕೆ ಅಧ್ಯಕ್ಷ ಅಂಬಾದಾಸ ಜೋಶಿ ಹೇಳಿದರು.
ಅವರು ನಗರದ ಅಷ್ಟಪೈಲ ಬಂಗ್ಲೆ ಹತ್ತಿರ ಪರಿಸರ ವೇದಿಕೆ ಹಾಗೂ ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಹಾಗೂ ವಿವಿದೋದ್ಧೇಶಗಳ ಸಂಸ್ಥೆಯಿAದ ಪ್ರಶಸ್ತಿ ಪುರಸ್ಕೃತ ರುದ್ರಪ್ಪ ಆಸಂಗಿಯವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕರ್ನಾಟಕ ಸರ್ಕಾರವು ಸಮಾಜಮುಖಿ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿಯವರಿಗೆ ಪ್ರಶಸ್ತಿ ನೀಡುವ ಮೂಲಕ ತನ್ನನ್ನೇ ತಾನು ಗೌರವಿಸಿಕೊಂಡಿದೆ ಎಂದು ಅವರು ಹೇಳಿದರು.
ಡಾ. ಸುಭಾಸ ಕನ್ನೂರ ಅವರು ಮಾತನಾಡಿ, ರುದ್ರಪ್ಪ ಆಸಂಗಿಯವರು ಜಿಲ್ಲೆಯಲ್ಲಿ ಪಾದರಸದಂತೆ ಸಂಚರಿಸಿ ಜನಪರ ವರದಿಗಳನ್ನು ಮಾಡುವ ಮೂಲಕ ಹೆಸರಾದವರು. ಇಂತಹವರಿಗೆ ಈ ಸಲದ ರಾಜ್ಯ ಪ್ರಶಸ್ತಿ ಸಂದಿರುವುದು, ಸಂತಸದ ವಿಷಯ ಎಂದರು.
ಈ ಸಂದರ್ಭದಲ್ಲಿ ಪತ್ರಕರ್ತ ಪರಶುರಾಮ ಶಿವಶರಣ, ಪರಿಸರ ವೇದಿಕೆಯ ಸದಸ್ಯರಾದ ಆನಂದ ಕುಲಕರ್ಣಿ, ಉದಯ ಬೆಳ್ಳೆಣ್ಣವರ, ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಹಾಗೂ ವಿವಿದೋದ್ಧೇಶಗಳ ಸಂಸ್ಥೆಯ ಅಧ್ಯಕ್ಷ ಕಲ್ಲಪ್ಪ ಶಿವಶರಣ, ಪತ್ರಕರ್ತ ಶಂಕರ ಜಲ್ಲಿ, ಸಂಶೋಧಕ ಲಾಯಪ್ಪ ಇಂಗಳೆ ಸೇರಿದಂತೆ ಇತರರು ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಕಳಪೆ ತೊಗರಿ ಬೀಜ ವಿತರಿಸಿದ ಅಧಿಕಾರಿ, ಕಂಪನಿ ವಿರುದ್ಧ ಕ್ರಮಕ್ಕೆ ಒತ್ತಾಯ
ವಿಜಯಪುರದಲ್ಲಿ ಕಳಪೆ ತೊಗರಿ ಬೀಜ ವಿತರಿಸಿದ ಅಧಿಕಾರಿ, ಕಂಪನಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಅಪರ ಡಿಸಿಗೆ ಮನವಿ ಸಲ್ಲಿಸಲಾಯಿತು.
ವಿಜಯಪುರ: ಕಳಪೆ ತೊಗರಿ ಬೀಜ ವಿತರಿಸಿ ಜಿಲ್ಲೆಯ ರೈತರ ಬೆಳೆ ಹಾನಿ ಮಾಡಿದ ಕೃಷಿ ಅಧಿಕಾರಿಗಳ ಹಾಗೂ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಹಾನಿಗೊಂಡ ಬೆಳೆ ಪ್ರದರ್ಶಿಸಿ, ನಗರದಲ್ಲಿ ಅಖಂಡ ಕರ್ನಾಟಕ ರೈತ ಸಂಘ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ಅಪರ ಡಿಸಿ ಸೋಮಲಿಂಗ ಗೆಣ್ಣೂರಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕೃಷಿ ಇಲಾಖೆಯ ಮೂಲಕ ವಿತರಿಸಿದ ಜಿಆರ್‌ಜಿ 152 ಹಾಗೂ ಜಿಆರ್‌ಜಿ 811 ಕಳಪೆ ತೊಗರಿ ಬೀಜ ವಿತರಣೆಯಿಂದ ಬಿತ್ತಿದ ತೊಗರಿ ಬೆಳೆ ನೋಡಲು ಬಲು ಸೊಗಸಾಗಿದ್ದು, ಆದರೆ ಗಿಡಗಳಲ್ಲಿ ಒಂದೂ ತೊಗರಿ ಕಾಯಿ ಇದರಿಂದ ರೈತರು ಆತಂಕಕ್ಕಿಡಾಗಿದ್ದಾರೆ. ಹಾನಿಗೊಳಗಾದ ತೊಗರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಕಳಪೆ ತೊಗರಿ ಬೀಜ ವಿತರಿಸಿದ ಕಂಪನಿಗಳ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಾದ್ಯಂತ ತೊಗರಿ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಇಡೀ ಜಿಲ್ಲೆಯಲ್ಲಿ ಜಿಆರ್‌ಜಿ 152 ಹಾಗೂ ಜಿಆರ್‌ಜಿ 811 ತೊಗರಿ ಬೀಜ ಬಿತ್ತನೆ ಮಾಡಲಾಗಿದೆ. ಕೃಷಿ ಇಲಾಖೆಯವರು ಬೀಜ ತೆಗೆದುಕೊಳ್ಳುವ ಸಂದರ್ಭದಲ್ಲಿ ತೊಗರಿ ಗುಣಮಟ್ಟ, ಬೀಜ ಬಿತ್ತನೆ ಮಾಡಬೇಕಾದರೆ ಇದಕ್ಕೆ ಅನುಸರಿಸಬೇಕಾದ ಕ್ರಮಗಳೆನು ? ಎಂಬುದರ ಬಗ್ಗೆ ಮೊದಲು ಇಲಾಖೆ ಅಧಿಕಾರಿಗಳು ಮಾಹಿತಿ ಪಡೆದುಕೊಂಡು ನಂತರ ರೈತರು ತೊಗರಿ ಬೀಜ ಖರೀದಿ ಮಾಡುವ ಸಂದರ್ಭದಲ್ಲಿ ರೈತರಿಗೆ ತಿಳಿ ಹೇಳಬೇಕಿತ್ತು ಅದೂ ಕೂಡ ಆಗಿಲ್ಲ. ಸದ್ಯ ಅಧಿಕಾರಿಗಳು ಏನೇನೋ ಸಬೂಬು ಹೇಳುತ್ತಿರುವುದು ಸರಿಯಲ್ಲ ಎಂದರು.
ರಾಜ್ಯ ಬೀಜ ನಿಗಮದವರು ತೊಗರಿ ಬೀಜದ ಗುಣಮಟ್ಟ ಮಾಡದೇ ಬೀಜ ವಿತರಿಸುವ ಕಂಪನಿಗೆ ಸರ್ಟಿಪೈ ಮಾಡಿದ್ದಾದರು ಹೇಗೆ ?, ಸರ್ಟಿಪೈ ಮಾಡಬೇಕಾದರೆ ಯಾವ ಆದಾರದ ಮೇಲೆ ಸರ್ಟಿಪೈ ಮಾಡಿದ್ದಾರೆಂಬುದು ಇದರ ಗುಣಮಟ್ಟವನ್ನು ಲ್ಯಾಬದಲ್ಲಿ ಪರೀಕ್ಷೀಸಬೇಕು. ಇದರಲ್ಲಿ ಬೀಜ ನಿಗಮದವರು ಹಾಗೂ ಕೃಷಿ ಇಲಾಖೆಯವರ ಕೈವಾಡ ಇದೆ ಎಂಬುದು ಸ್ಪಷ್ಟ ಪಡಿಸುತ್ತದೆ. ಮೊದಲೇ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಇಂತಹದರಲ್ಲಿ ಬೀಜ ವಿತರಿಸಿದ ಕಂಪನಿಯವರು ಒಂದು ರೀತಿ ರೈತರಿಗೆ ಮೋಸ ಎಸಗುತ್ತಿದ್ದಾರೆ. ಇದರಿಂದ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಹಾನಿಗೊಳಗಾದ ತೊಗರಿಗೆ ಸೂಕ್ತ ಪರಿಹಾರ ನೀಡಬೇಕು, ಕಳಪೆ ಬೀಜ ವಿತರಿಸಿದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ ಕಂಪನಿಯ ಪರವಾನಿಗೆ ರದ್ದು ಪಡಿಸಬೇಕು ಆಗ್ರಹಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Sunday, November 24, 2024
Saturday, November 23, 2024
Friday, November 22, 2024
Thursday, November 21, 2024
ಬಿಇಡಿ ಪ್ರವೇಶ : ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಲು ಸೂಚನೆ
ವಿಜಯಪುರ, ನವೆಂಬರ್ 21 (ಕರ್ನಾಟಕ ವಾರ್ತೆ): ಪ್ರಸಕ್ತ 2024-25ನೇ ಸಾಲಿನ ಬಿಇಡಿ ಕೋರ್ಸಿಗೆ ಸರಕಾರಿ ಕೋಟಾದಡಿ ದಾಖಲಾತಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೇಲೆ ಅರ್ಹತಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ನ.21 ರಿಂದ 30ರವರೆಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ನೀಲಕಂಠೇಶ್ವರ ಬಡಾವಣೆ ತೊರವಿ ರಸ್ತೆ, ವಿಜಯಪುರ ಈ ವಿಳಾಸಕ್ಕೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕ ಕೇಂದ್ರದ ನೋಡಲ್ ಅಧಿಕಾರಿಗಳಾದ ಹಿರಿಯ ಉಪನ್ಯಾಸಕ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಎಸ್.ಎ.ಮುಜಾವರ ಇವರ ಮೊ: 8792626109 ಹಾಗೂ 9480194611 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ನವೆಂಬರ್ 24ರಂದು ಕೆ-ಸೆಟ್ ಪರೀಕ್ಷೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
ವಿಜಯಪುರ, ನವೆಂಬರ್,21 (ಕರ್ನಾಟಕ ವಾರ್ತೆ): ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ನ.24ರಂದು ಕೆ-ಸೆಟ್ ಪರೀಕ್ಷೆಗಳು ನಡೆಯಲಿದ್ದು, ಈ ಪರೀಕ್ಷೆಗೆ ನಿಯೋಜಿಸಿರುವ ಅಧಿಕಾರಿ,ಸಿಬ್ಬಂದಿ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸುವ ಮೂಲಕ ವ್ಯವಸ್ಥಿತವಾಗಿ ಹಾಗೂ ಸುಸೂತ್ರವಾಗಿ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಗುರುವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಉಪನ್ಯಾಸಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧಕ್ಷತೆ ವಹಿಸಿ ಮಾತನಾಡಿದ ಅವರು, ಒಟ್ಟು 11 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, 6042 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊAಡಿದ್ದಾರೆ ಎಂದು ಮಾಹಿತಿ ನೀಡಿದರು.
ಪರೀಕ್ಷಾ ಕೊಠಡಿಗಳಿಗೆ ಸಿ.ಸಿ ಕ್ಯಾಮರಾಗಳನ್ನು ಅಳವಡಿಸುವುದು, ಪರೀಕ್ಷಾ ದಿನದಂದು ಪ್ರತಿ ಕೊಠಡಿಗಳಲ್ಲಿ ಛಾಯಾಗ್ರಾಹಕರನ್ನು ನೇಮಿಸಬೇಕು, ಅಭ್ಯರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟಫೋನ್, ಬ್ಯಾಗ್ ಹಾಗೂ ಇತರೇ ವಸ್ತುಗಳನ್ನು ಒಳಗಡೆ ತೆಗೆದುಕೊಂಡು ಹೋಗದಂತೆ, ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು, ಗಾಳಿ, ಬೆಳಕು ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ಕಾರ್ಯ ನಿರ್ವಹಿಸುವುದು. ನಿರ್ಲಕ್ಷ ತೋರಿದಲ್ಲಿ ಕೊಠಡಿ ಮೇಲ್ವಿಚಾರಕರನ್ನು ಹೊಣೆೆಗಾರರನ್ನಾಗಿಸಲಾಗುವುದು. ಕಡ್ಡಾಯವಾಗಿ ಗುರುತಿನ ಚೀಟಿಗಳನ್ನು ಧರಿಸಿಬೇಕು ಎಂದು ಸೂಚನೆ ನೀಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತವಾಗಿ ಜರುಗಿಸಲು ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ ಕಲ್ಪಿಸಲು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಖಜಾನೆ ಇಲಾಖೆಯ ಉಪ ನಿರ್ದೇಶಕ ಹನಮಂತ ಕಾಲತಿಪ್ಪಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ. ಹೊಸಮನಿ, ಪ್ರಾಚಾರ್ಯರಾದ ಕೆ. ಎ. ಉಪ್ಪಾರ ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿ,ಸಿಬ್ಬಂದಿ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Tuesday, November 19, 2024
Monday, November 18, 2024
Saturday, November 16, 2024
Thursday, November 14, 2024
Wednesday, November 13, 2024
Tuesday, November 12, 2024
Monday, November 11, 2024
Saturday, November 9, 2024
Friday, November 8, 2024
ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ರುದ್ರಪ್ಪ ಆಸಂಗಿ ಅವರಿಗೆ ಸನ್ಮಾನ
ವಿಜಯಪುರ : ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ರುದ್ರಪ್ಪ ಆಸಂಗಿ ಅವರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಿಜಯಪುರ ವತಿಯಿಂದ ಸನ್ಮಾನಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಿಜಯಪುರ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡ ಸನ್ಮಾನ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಅವರು ಶಾಲು ಹೊದಿಸಿ ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಸುರೇಶ ಅಂಬಿಗೇರ, ನಿವೃತ್ತ ವಾಹನ ಚಾಲಕ ಜಿ.ಬಿ.ತಾಟೆ, ಅಬ್ದುಲ್ ರಜಾಕ ಬಾಗೇವಾಡಿ, ಸಂಗಮೇಶ ಡಿಗ್ಗಿ, ಮಹಾಂತೇಶ ಪಾಟೀಲ, ಶಿವಾನಂದ ಹಿಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
Thursday, November 7, 2024
14 ನೇ ಅಖಿಲ ಭಾರತ ಶೈಕ್ಷಣಿಕ ಸಮ್ಮೇಳನ..!
ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ : ಅಖಿಲ ಭಾರತ ಶೈಕ್ಷಣಿಕ ಅಂದೋಲನ ಅಡಿಯಲ್ಲಿ 14 ನೇ ರಾಷ್ಟ್ರೀಯ ಸಮಾವೇಶವನ್ನ ನವೆಂಬರ್ 08, 09 ಮತ್ತು 10 ರಂದು ವಿಜಯಪುರ ನಗರದ ಹೆಸರಾಂತ ಸಿಕ್ಯಾಬ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
ಸಿಕ್ಯಾಬ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಆವರಣದಲ್ಲಿ ಎಐಇಎಮ್ ಹಾಗೂ ಸಿಕ್ಯಾಬ್ ಸಂಸ್ಥೆಯ ಸಹಯೋಗದೊಂದಿಗೆ ಅಖಿಲ ಭಾರತ ಶೈಕ್ಷಣಿಕ ಸಮ್ಮೇಳನವನ್ನು ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತ ಶೈಕ್ಷಣಿಕ ಸಮ್ಮೇಳನಕ್ಕೆ ಅತ್ಮೀಯ ಸಹೋದರ ಸಹೋದರಿಯರನ್ನು ಸ್ವಾಗತಿಸಲಾಗುತ್ತದೆ.
ಸಮಾವೇಶದ ಉದ್ದೇಶ ಸರ್ವರನ್ನೊಳಗೊಂಡ ಉತ್ತಮ ಗುಣಮಟ್ಟದ ಶಿಕ್ಷಣ, ತಾಂತ್ರಿಕ ಮತ್ತು ಅಂತರ್ಗತ ಶಿಕ್ಷಣ ಬಗ್ಗೆ ವಿಚಾರ ಗೋಷ್ಠಿಗಳು ನಡೆಯಲಿವೆ.
ಮೂರು ದಿನ ನಡೆಯುವ ಸಮ್ಮೇಳನದಲ್ಲಿ ಪಾಂಡಿತ್ಯಪೂರ್ಣ ಉಪನ್ಯಾಸಗಳು, ಭಾಷಣಗಳು, ತಾಂತ್ರಿಕ ವಿಷಯಗಳ ಗೋಷ್ಠಿಗಳು, ಮಾತ್ರವಲ್ಲದೆ ಯುವ ಮನಸ್ಸುಗಳನ್ನು ಉನ್ನತೀಕರಿಸುವ ಮತ್ತು ಪ್ರೇರೇಪಿಸುವಂತಹ ವಿಶೇಷ ತಜ್ಞರು, ಚಿಂತನಕಾರರು ದೇಶದ, ವಿದೇಶದ ವಿವಿಧ ವಿಶ್ವ ವಿದ್ಯಾಲಯದ ಕುಲಪತಿಗಳು, ನಿವೃತ್ತ ಪ್ರಾಧ್ಯಾಪಕರು, ಸಮುದಾಯದ ನಾಯಕರು, ಸಂಸದರು, ಸಮಾಜ ಸೇವಕರು, ಶಿಕ್ಷಣ ತಜ್ಞರು ಉಪನ್ಯಾಸಗಳನ್ನು ಒಳಗೊಂಡಿದೆ.
ಮೊದಲ ದಿನ 8 ರಂದು ಮಧ್ಯಾಹ್ನ 3 ಗಂಟೆಗೆ ವಿಜಯಪುರ ಸಂಸದರಾದ ರಮೇಶ್ ಜಿಗಜಿಣಗಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸವರು. ಉದ್ಘಾಟನಾ ಭಾಷಣವನ್ನು ಅಖಿಲ ಭಾರತ ಶೈಕ್ಷಣಿಕ ಸಂಘಟನೆ ಹಾಗೂ ರಾಜ್ಯ ಸಭೆಯ ಸದಸ್ಯರಾದ ಡಾ. ಫೌಜೀಯಾ ಖಾನ್ ಮಾಡುವರು. ಕಾರ್ಯಕ್ರಮದ ಪ್ರಾಸ್ತಾವಿಕ ಮಾತಗಳನ್ನು ಎಐಇಎಂ ಅಧ್ಯಕ್ಷರಾದ ಪ್ರೋ, ಸ್ವಾಜಾ ಶಾಹಿದ್ ಮಾಡಲಿದ್ದು ದಿಕ್ಕೂಚಿ ಭಾಷಣವನ್ನು ಜೋಧಪುರ ಮೌಲಾನಾ ಆಜಾದ್ ವಿಶ್ವವಿದ್ಯಾನಿಲಯದ ಹಿಂದಿನ ಕುಲಪತಿಗಳಾದ ಪದ್ಮಶ್ರೀ ಪ್ರೋ. ಅಕ್ತರ್ ಉಲ್ ವಾಸೆ ನೀಡುವರು. ಗೌರವ ಅತಿಥಿಗಳಾಗಿ ಬಾಗಲಕೋಟ ಶಿರೂರಿನ ಪ್ರಕೃತಿ ಚಿಕಿತ್ಸಾ ಆಶ್ರಯ ಪೂಜ್ಯ ಬಸವಲಿಂಗ ಸ್ವಾಮೀಜಿ, ಮಾಜಿ ಶಾಸಕ ಡಾ. ಮಕ್ಸುಲ್ ಬಾಗವಾನ್, ನಿವೃತ್ತ ಐಪಿಎಸ್ ಅಧಿಕಾರಿ ನಿಸ್ಸಾರ ಅಹಮದ್ ಹಿರಿಯ, ಪತ್ರಕರ್ತ ರಫಿ ಭಂಡಾರಿ ಆಗಮಿಸುವರು.
ಸಂಜೆ 7 ಗಂಟೆಗೆ ಉತ್ತರ ಪ್ರದೇಶದ ಖೈರಾನಾ ಅಲ್ ಖುರಾನ್ ಅಕಾಡೆಮಿಯ ಮುತ್ತಿ ಶಮಿ ಹಾಗೂ ಅವರ ತಂಡದವರಿಂದ '21ನೇ ಶತಮಾನಕ್ಕೆ ಖುರಾನ್ 'ಎಂಬ ರೂಪಕ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪಂ. ಮಧ್ವಾಚಾರ್ಯ ಮೊಖಾಶಿ ಭಾಗವಹಿಸಲಿದ್ದು ಸಲೀಮ್ ಜಾಗಿರದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ದಿನಾಂಕ 9 ರಂದು ಎರಡನೆಯ ದಿನ ಮುಂಜಾನೆ 9 ಗಂಟೆಗೆ ಸಿಕ್ಯಾಬ್ ತಾಂತ್ರಿಕ ಹಾಗೂ ಇಂಜಿನಿಯರಿಂಗ್ ಮಹಾವಿದ್ಯಾಲಯದ ತಾಂತ್ರಿಕ ಗೋಷ್ಠಿಗಳು ನಡೆಯಲಿದ್ದು ಇದರಲ್ಲಿ ಮಾಜಿ ಶಾಸಕ ಅರುಣ್ ಶಹಾಪೂರ ಮುಖ್ಯ ಅತಿಥಿಯಾಗಿ, ಅಧ್ಯಕ್ಷತೆಯನ್ನ ಡಾ. ಅವಾಬ್ ಫಕಿಹ್, ವಿಶೇಷ ಉಪನ್ಯಾಸಕರಾಗಿ ಅಮೇರಿಕಾದ ಝಾಯಿನ್ ಪೀರಜಾದೆ ಪ್ರಾಧ್ಯಾಪಕರಾದ ಹಾಗೂ ಪ್ರಾಚಾರ್ಯರಾದ ಅಬ್ಬಾಸ್ ಅಲಿ, ಬೆಂಗಳೂರು ಪಾಲ್ಕನ್ ಗ್ರುಪನ ಅಬ್ದುಸ್ ಸುಭಾನ್ ಉಪನ್ಯಾಸಗಳನ್ನು ನೀಡಲಿದ್ದಾರೆ.
ಮಧ್ಯಾಹ್ನ 2-30 ಕ್ಕೆ ನಡೆಯುವ 'ದಬ್ಬನಿನ ಮಧ್ಯ ಯುಗ ರಾಜಕೀಯ ಇತಿಹಾಸ ಹಾಗೂ ಶೈಕ್ಷಣಿಕ ವ್ಯವಸ್ಥೆ' ಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಸಮಾಜದ ಧುರೀಣ ಅಬ್ದುಲ್ ಹಮೀದ್ ಮುಶ್ರಫ್, ಅಧ್ಯಕ್ಷರಾಗಿ ಪ್ರೋ. ವಾಜೀದ್ ಪೀರಾ, ವಿಶೇಷ ಹಾಗೂ ಉಪನ್ಯಾಸಕರಾಗಿ ನಾಡೋಜ ಡಾ. ಎಚ್ ಜಿ ದಡ್ಡಿ, ಇತಿಹಾಸ, ಪ್ರಾಧ್ಯಾಪಕ ಡಾ. ಅಬ್ದುಲ್ ಗನಿ ಇಮಾರತವಾಲೆ ಭಾಗವಹಿಸಲಿದ್ದಾರೆ.
ಸಂಜೆ 4 ಗಂಟೆಗೆ ಭಾರತೀಯ ಶಿಕ್ಷಣಕ್ಕೆ ಮುಸ್ಲಿಮರ ಕೊಡುಗೆ ಎಂಬ ಗೋಷ್ಠಿಯಲ್ಲಿ ಕಲಬುರ್ಗಿಯ ಕೆಬಿಎನ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೇನಿ ಮುಖ್ಯ ಅತಿಥಿಯಾಗಿ ಸಯ್ಯದ್ ಹೈದರ್ ಪಾಷಾ ಗೌರವ ಅತಿಥಿಯಾಗಿ ಸಮಾಜ ಧುರೀಣ ನಜೀಬ್ ಬಕ್ಷಿ ಅಧ್ಯಕ್ಷರಾಗಿ, ಉಪನ್ಯಾಸಕರಾಗಿ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ , ಜಾಪ್ರಿ, ಅಲ್ ಅಮೀನ್ ವೈದ್ಯಕೀಯ ಕಾಲೇಜು ಪ್ರಾಚಾರ್ಯ ಡಾ. ಮಹಿಬೂಬ್ ಕಲಬುರ್ಗಿ, ನಿವೃತ್ತ ಪ್ರಾಚಾರ್ಯರಾದ ಡಾ. ರೋಷನ್ ಆರಾ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ನಂತರ 5 ಗಂಟೆಯ ಶಾಲಾ ಶಿಕ್ಷಣದ ಸಾರ್ವತ್ರೀಕರಣ ಗೋಷ್ಠಿಯಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ರಮೇಶ ಜಿಗಜಿಣಗಿ, ದೆಹಲಿಯ ಖ್ಯಾತ ಕ್ಯಾನ್ಸರ್ ತಜ್ಞ ಡಾ. ಮಜೀದ್ ಅಹ್ಮದ್ ತಾಳಿಕೋಟಿ, ಜಮಾತೆ ಇಸ್ಲಾಂ ಹಿಂದಿ ಕೇಂದ್ರೀಯ ಶಿಕ್ಷಣ ಮಂಡಳಿಯ ತನ್ನೀರ್ ಅಹ್ಮದ್ ಶಿಕ್ಷಣ ಕ್ಷೇತ್ರಕ್ಕೆ ಬಸವಣ್ಣನವರ ವಚನಗಳ ಕೊಡುಗೆ ಕುರಿತು ಬಿ ಎಲ್ ಡಿ ಇ ಸಂಸ್ಥೆಯ ಡಾ. ಮಹಾಂತೇಶ ಬಿರಾದಾರ ಮಾತನಾಡಲಿದ್ದಾರೆ.
ಸಂಜೆ 7-30ಕ್ಕೆ ಸಾರ್ವಜನಿಕ ಸಭೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ, ಮುಂಬೈಯ ರಾಷ್ಟ್ರೀಯ ಶೈಕ್ಷಣಿಕ ಸಂಘಟನೆಯ ಮುಬಾರಕ್ ಕಾಪಾಡಿ ಭಾಗವಹಿಸಲಿದ್ದಾರೆ.
ರವಿವಾರ ಮೂರನೆಯ ದಿನ ಮುಂಜಾನೆ 9:00 ಗಂಟೆಗೆ 'ವಿಶ್ವ ಪಾರಂಪರಿಕ ನಗರವಾಗಿ ವಿಜಯಪುರ ಹಾಗೂ ನಗರ ನಿರ್ವಹಣೆ ಹಾಗೂ ಅಭಿವೃದ್ಧಿಯಲ್ಲಿ ನಾಗರಿಕರ ಪಾತ್ರ' ವಿಷಯಗಳ ಕುರಿತ ವಿಶೇಷ ಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಹಿರಿಯ ಅಯುಕ್ತ ಹಾಗೂ ಐ ಎ ಎಸ್ ಅಧಿಕಾರಿ ಡಾ. ಎಸ್ ಎಂ ಜಾಮದರ ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ್ ಡಂಬಳ ವಹಿಸಲಿದ್ದು ಹೊಸ ದೆಹಲಿಯ ವಾಸ್ತು ತಜ್ಞ ಮಧುಸೂದನ್ ಚಂಡಕ್, ಡಾ. ಎಂ. ಬಿ. ಮುಲ್ಲಾ ಐತಿಹಾಸಿಕ ವಿಜಯಪುರ ನಗರದ ಕೇಂದ್ರ ಭಾಗದ ಪುನರುಜ್ಜಿವನ ಕುರಿತು ಉಪನ್ಯಾಸ ನೀಡಲಿದ್ದಾರೆ.
ರಾಜ್ಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ್ ಭಜಂತ್ರಿ, ಪ್ರೊ. ಇರ್ಷಾದ್ ಪುಣೇಕರ, ಪ್ರೊ. ರುಕ್ಸಾನಾ ಅಲಗೂರ್, ಪೀಟರ್ ಅಲೆಕ್ಸಾಂಡರ್, ಅಮೀನ್ ಹುಲ್ಲೂರ್ ಅತಿಥಿ ಉಪನ್ಯಾಸಗಳನ್ನು ನೀಡಲಿದ್ದಾರೆ.
ಅಂದು 11 ಗಂಟೆಗೆ ಮುಂಬೈನ ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರ ಝಡ್. ಎ. ಪುಣೇಕರ್ ಮುಖ್ಯ ಅತಿಥಿಯಾಗಿ ಶಿಕ್ಷಣದ ಪ್ರವರ್ಧನೆಯಲ್ಲಿ ನಾಗರಿಕ ಸಮಾಜದ ಪಾತ್ರ ಎಂಬ ಗೋಷ್ಠಿಯಲ್ಲಿ ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ಸಹಕಾರ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಸ್. ಎಸ್. ಬಿಳಗಿಪೀರ್ ವಹಿಸಲಿದ್ದಾರೆ.
ಬೀದರಿನ ಶಾಹಿನ್ ಶಿಕ್ಷಣ ಸಂಸ್ಥೆಗಳ ಚೇರ್ಮನ್ ಡಾ. ಅಬ್ದುಲ್ ಖದಿರ್, ಹೈದರಾಬಾದಿನ ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದ ಡಾ. ಮುಸ್ತಾಕ್ ಅಹಮದ್ ಪಟೇಲ್, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜಶೇಖರ್ ವಿ.ಎನ್. ಉಪನ್ಯಾಸಗಳನ್ನು ನೀಡಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ 'ಮದರಸ ಶಿಕ್ಷಣ ಒಂದು ಸಮಾಂತರ ಶಿಕ್ಷಣ ವ್ಯವಸ್ಥೆ' ಕುರಿತು ನಡೆಯುವ ಉಪನ್ಯಾಸದಲ್ಲಿ ಮುಖ್ಯ ಅತಿಥಿಯಾಗಿ ಇಂಡಿಯಾ ಇಸ್ಲಾಮಿಕ್ ಸಾಂಸ್ಕೃತಿಕ ಕೇಂದ್ರ ದೆಹಲಿಯ ಅಧ್ಯಕ್ಷರಾದ ಸಿರಾಜುದ್ದೀನ್ ಖುರೇಶಿ ಆಗಮಿಸಲಿದ್ದು ಅಧ್ಯಕ್ಷತೆಯನ್ನು ಸಿಂದಗಿ ಬೈತುಲ್ ಉಲೂಮ್ ಉಪಪ್ರಾಚಾರ್ಯ ಮೌಲಾನಾ ಮಹಮ್ಮದ್ ಅಯೂಬ್ ಮೋಹಿದ್ದಿನ್ ನಧವಿ ಅಧ್ಯಕ್ಷತೆ ವಹಿಸಲಿದ್ದಾರೆ. ಉಪನ್ಯಾಸಕರಾಗಿ ಪಶ್ಚಿಮ ಬಂಗಾಳದ ಮಹಮ್ಮದ್ ನಸ್ರುದ್ದಿನ್, ಹೊಸ ದೆಹಲಿಯ ಪ್ರೊ. ಯಾಹ್ಯಾ ಅಂಜುಮ್, ನಗರದ ಮೌಲಾನಾ ಶಕೀಲ್ ಮುಲ್ಲಾ ಮಾತನಾಡಲಿದ್ದಾರೆ.
ನಂತರ 3 ಗಂಟೆಗೆ ಮಹಿಳಾ ಶಿಕ್ಷಣ ಹಾಗೂ ಸಬಲೀಕರಣ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ. ಬಿ. ಕೆ. ತುಳಸಿಮಾಲಾ ಮುಖ್ಯ ಅತಿಥಿಯಾಗಿ, ಅಧ್ಯಕ್ಷರಾದ ಮುಂಬಯಿನ ಇಕ್ರಾ ಪ್ರತಿಷ್ಠಾನದ ಶ್ರೀ ಮತಿ ಉಜ್ಞಾ ನಾಹಿದ್ ಉಪನ್ಯಾಸಕರಾಗಿ ಶ್ರೀ ಮತಿ ಸಂಯುಕ್ತ ಪಾಟೀಲ, ಡಾ. ಹಲೀಮಾ ಸಾದಿಯಾ, ಡಾ. ಹಾಹಿರಾ ಪರವೀನ್ ಮಾತನಾಡಲಿದ್ದಾರೆ.
ಸಂಜೆ 5 ಗಂಟೆಗೆ ಜರಗುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಮ್. ಜಾಮದಾರ ಆಗಮಿಸಲಿದ್ದು ಸಮಾರೋಪ ಸಮಾರಂಭ ಭಾಷಣವನ್ನು ಅಖಿಲ ಭಾರತ ಶೈಕ್ಷಣಿಕ ಅಂದೋಲನದ ಡಾ. ಸ್ವಾಜಾ, ಎಮ್ ಶಾಹಿದ್ ಮಾಡಲಿದ್ದಾರೆ. ಗೌರವ ಅತಿಥಿಗಳಾಗಿ ನಗರದ ಆರ್ಕಾಟ್ ದರ್ಗಾದ ಪೀಠಾಧಿಪತಿ ಡಾ. ಸೈಯದ್ ತಖವಿ ಪೀರಾ ಹುಸೇನ್ ಬರಲಿದ್ದು, ಅಧ್ಯಕ್ಷತೆಯನ್ನು ಕೇರಳ ಎಂಇಎಸ್ ಅಧ್ಯಕ್ಷರಾದ ಫಜಲ್ ಗಪೂರ ವಹಿಸಲಿದ್ದಾರೆ.
ನಂಜೆ 7 ಗಂಟೆಗೆ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.ಮೂರು ದಿನಗಳ ಕಾರ್ಯಕ್ರಮದಲ್ಲಿ ಪುಸ್ತಕ ಮೇಳ, ಆಹಾರ ಮೇಳ, ವಿದ್ಯಾರ್ಥಿಗಳ ವಿವಿಧ ಸ್ಪರ್ಧೆಗಳು ನಡೆಯಲಿವೆ. ಎಂದು ಸಿಕ್ಯಾಬ್ ತಾಂತ್ರಿಕ ಹಾಗೂ ಇಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ ಡಾ.ಸೈಯದ್ ಅಬ್ಬಾಸ್ ಅಲಿ, ಸಿಕ್ಯಾಬ್ ಎ ಆರ್.ಎಸ್ ಇನಾಮಾದಾರ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಚ್.ಕೆ. ಯಡಹಳ್ಳಿ, ಡಾ.ಮಲ್ಲಿಕಾರ್ಜುನ ಮೇತ್ರಿ, ಡಾ.ಎ.ಎಸ್.ಖಾದ್ರಿ, ಡಾ. ಮಹಮ್ಮದ್ ನಮಿಯುದ್ದಿನ್, ಡಾ. ಎಸ್. ಎಚ್. ಕಾಖಂಡಕ್ಕಿ, ಡಾ. ನಿಯಾಮತುಲ್ಲಾ ಪಟೇಲ್, ಪ್ರೋ ನಚಿನ್ ಪಾಂಡೆ, ನಿವೃತ್ತ ಪ್ರಾಚಾರ್ಯ ಎನ್ ಎಸ್ ಭೂಸನೂರ, ಪ್ರಾಚಾರ್ಯ ಪ್ರೋ. ಸೈಯದ್ ಸಮಿರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಮಹಿಳಾ ವಿವಿ: ಗ್ರಾಫಿಕ್ ಡಿಸೈನಿಂಗ್ ಸರ್ಟಿಫಿಕೇಟ್ ಕೋರ್ಸ್ಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗ್ರಾಫಿಕ್ ಡಿಸೈನಿಂಗ್ ಕೋರ್ಸ್ಗೆ ಪ್ರವೇಶ ಪಡೆದುಕೊಳ್ಳಲು ನವೆಂಬರ್ 15ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು ಆಸಕ್ತ ವಿದ್ಯಾರ್ಥಿನಿಯರು ನೇರವಾಗಿ ವಿಭಾಗದ ಮುಖ್ಯಸ್ಥರನ್ನು ಭೇಟಿ ಮಾಡಿ ಪ್ರವೇಶ ಪಡೆದುಕೊಳ್ಳಬಹುದಾಗಿದೆ.
ಆರು ತಿಂಗಳ ಈ ಕೋರ್ಸ್ಗೆ ಪ್ರವೇಶ ಪಡೆದುಕೊಳ್ಳಲು ಪಿಯುಸಿ ಪಾಸಾಗಿರಬೇಕು. ಆರು ತಿಂಗಳ ಈ ಕೋರ್ಸ್ನಲ್ಲಿ ವಿದ್ಯಾರ್ಥಿನಿಯರಿಗೆ ಗ್ರಾಫಿಕ್ ವಿನ್ಯಾಸ ಮತ್ತು ವಿನ್ಯಾಸದ ಅಂಶಗಳ ಬಗ್ಗೆ ತರಬೇತಿ ನೀಡಲಾಗುವುದು. ಅಲ್ಲದೇ ವಿವಿಧ ಗ್ರಾಫಿಕ್ ವಿನ್ಯಾಸದ ಸಾಫ್ಟ್ವೇರ್‌ಗಳನ್ನು ಪರಿಚಯಿಸುವುದು ಮತ್ತು ವೈವಿಧ್ಯಮಯ ಮುದ್ರಣ ವಿನ್ಯಾಸಗಳನ್ನು ರಚಿಸುವಲ್ಲಿ ಪ್ರಾಯೋಗಿಕ ಅನುಭವವನ್ನು ಒದಗಿಸುವುದು ಹಾಗೂ ವಿಭಾಗದಲ್ಲಿ ಲಭ್ಯವಿರುವ ಮಾಧ್ಯಮ ತಂತ್ರಜ್ಞಾನಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವುದು ಈ ಕೋರ್ಸ್ನ ಉದ್ದೇಶವಾಗಿದೆ.
ಈ ಸರ್ಟಿಫಿಕೇಟ್ ಕೋರ್ಸ್ನಲ್ಲಿ ವಿದ್ಯಾರ್ಥಿನಿಯರಿಗೆ ಗ್ರಾಫಿಕ್ಸ್ ವಿನ್ಯಾಸದ ಮೂಲ ತತ್ವಗಳು, ಗ್ರಾಫಿಕ್ಸ್ ವಿನ್ಯಾಸ ಮಾಡಲು ಅಗತ್ಯವಿರುವ ಕಂಪ್ಯೂಟರ್ ಜ್ಞಾನ, ಗ್ರಾಫಿಕ್ಸ್ ವಿನ್ಯಾಸಕ್ಕೆ ಬಳಸುವ ಸಾಫ್ಟ್ವೇರ್‌ಗಳ ಪರಿಚಯ, ಗ್ರಾಫಿಕ್ಸ್ ವಿನ್ಯಾಸದ ಪ್ರಕ್ರಿಯೆ, ತಂತ್ರಗಳು, ಬಣ್ಣಗಳ ಬಳಕೆ, ಅಕ್ಷರ ವಿನ್ಯಾಸ, ಚಿತ್ರ ಸಂಯೋಜನೆ, ಮೊದಲಾದ ಅಗತ್ಯ ವಿಷಯಗಳನ್ನು ಕಲಿಸಲಾಗುವುದು. ಈ ಕೋರ್ಸ್ ಪ್ರಾಯೋಗಿಕ ತರಗತಿಗಳನ್ನು ಒಳಗೊಂಡಿರುತ್ತದೆ. ಹೀಗಾಗಿ ಈ ಸರ್ಟಿಫಿಕೇಟ್ ಕೋರ್ಸ್ ಮುಗಿಸಿದವರಿಗೆ ಮುದ್ರಣ ಕ್ಷೇತ್ರದಲ್ಲಿ ಹಲವಾರು ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9482248372 ಅಥವಾ 9844681398 ಸಂಪರ್ಕಿಸಬಹುದಾಗಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.