Saturday, November 30, 2024

ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲಿ: ಕುಲಪತಿ ಡಾ. ಪಿ .ಎಲ್ .ಪಾಟೀಲ.

ವಿಜಯಪುರ  : ಇಂದು ವಿಜಯಪುರ ಕೃಷಿ ಮಹಾವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜರುಗಿತು ಧಾರವಾಡ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಪಿ. ಎಲ್.  ಪಾಟೀಲ  ಉದ್ಘಾಟನೆ ನೆರವೇರಿಸಿ ಮಾತನಾಡಿ,ವಿದ್ಯಾರ್ಥಿಸಂಘಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಶೈಕ್ಷಣಿಕ, ಸ್ಪರ್ಧಾತ್ಮಕ ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಹಲವಾರು ಚಟುವಟಿಕೆಗಳನ್ನು ತಿಂಗಳುವಾರು ಯೋಜಿಸಿ ಅವುಗಳನ್ನು ಅನುಷ್ಠಾನ ಗೊಳಿಸ ಬೇಕೆಂದು ತಿಳಿಸಿದರು.

ವಿದ್ಯಾರ್ಥಿಗಳು ಅಂತರ ತರಗತಿವಾರು ಸ್ಪರ್ಧೆಗಳನ್ನು ಆಯೋಜಿಸಿ ಮಹಾವಿದ್ಯಾಲಯ ಮಟ್ಟದಲ್ಲಿ ಉತ್ತಮ ತಂಡಗಳನ್ನು ಕಟ್ಟುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಾನಿಧ್ಯ ಸಾನಿಧ್ಯ ವಹಿಸಿ ಮಾತನಾಡಿದ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಡಾ ಬಿ. ಎಮ್.ಪಾಟೀಲ್ ಗುರೂಜಿ ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಇದಕ್ಕಾಗಿ ಬಹು ಮುಖ್ಯವಾದ ಮನಸ್ಸಿನ ಏಕಾಗ್ರತೆ ಬಗ್ಗೆ ವಿವರಿಸುತ್ತ ವಿದ್ಯಾರ್ಥಿಗಳು  ತಾವು ಸಂಘ ಕಟ್ಟಿಕೊಂಡ ನಂತರ ವಿದ್ಯಾರ್ಥಿಗಳ ಏಳಿಗೆಗಾಗಿ ನಂತರ ಸಮಾಜದ ಏಳಿಗೆಗಾಗಿ ಮತ್ತು ಸುಭದ್ರ ದೇಶ ಕಟ್ಟುವಲ್ಲಿ ಮಹತ್ತರ ಪಾತ್ರ ವಹಿಸಬೇಕೆಂದರು. ಇಂದಿನ ಯುವಕರು ಹಲವಾರು  ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಅದಕ್ಕಾಗಿ ಯೋಗ ಧ್ಯಾನದ ಮೂಲಕ ವ್ಯಸನ ಮುಕ್ತರಾಗುವ ಕುರಿತು ಮಾರ್ಗದರ್ಶನ ನೀಡಿದರು.ಮನಸ್ಸಿನ ಏಕಾಗ್ರತೆ ಮಾಡುವ ಕುರಿತು  ಪ್ರಾತ್ಯಕ್ಷಿಕೆ ಮಾಡಿಸಿದರು. ಇದೇ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು ಇತ್ತೀಚೆಗೆ ವಿಶ್ವವಿದ್ಯಾಲಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಲಾಯಿತು. ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ವೀರೇಶ್ ಹವಾಲ್ದಾರ್ ಶಿವರಾಜ್ ಮೇಟಿ ಅಮೂಲ್ಯ ಸೇರಿದಂತೆ ಕೃಷಿ ಮಹಾವಿದ್ಯಾಲಯ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ ವರ್ಗ, ಸೇರಿದಂತೆ ಕೃಷಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment