Friday, December 13, 2024

ದೇಸಿ ಸನ್ಮಾನ ಪ್ರಶಸ್ತಿ ಪ್ರದಾನ 15ರಂದು

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಪಟ್ಟಣದ ನೆಲೆ ಪ್ರಕಾಶನ ಸಂಸ್ಥೆಯಡಿ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ 2024ನೇ ಸಾಲಿನ ದೇಸಿ ಸನ್ಮಾನ ಪ್ರಶಸ್ತಿ ಪ್ರದಾನ ಸಮಾರಂಭ ಡಿ.15 ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿಯ ಸಾರಂಗಮಠದ ಆವರಣದ ಸಭಾಭವನದಲ್ಲಿ ನಡೆಯಲಿದೆ.

ಬಾಗಲಕೋಟೆ ಜಿಲ್ಲೆ ಜಮಖಂಡಿಯ ಜಾನಪದ ವಿದ್ವಾಂಸ ಸಂಗಮೇಶ ಬಿರಾದಾರ ಅವರಿಗೆ 'ದೇಸಿ ಸನ್ಮಾನ' ಪ್ರಶಸ್ತಿ ಸಂಗಮೇಶ ಹಾಗೂ ₹11 ಸಾವಿರ ನಗದು, ಪ್ರಶಸ್ತಿ ಪತ್ರ ಮತ್ತು ಪುಸ್ತಕವನ್ನು ಬಿರಾದಾರ ನ್ಯೂಜಿಲೆಂಡ್‌ನ ಆಕ್ಲಂಡ್ ಬಸವ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗಣ್ಣ ಕಲಬುರ್ಗಿ ಪ್ರಶಸ್ತಿ ಪ್ರದಾನ ಮಾಡುವರು.

ಸಾರಂಗಮಠದ ಪೀಠಾಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಜಯಪುರ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಎಂ.ಎಸ್.ಮದಭಾವಿ ಅಧ್ಯಕ್ಷತೆ ವಹಿಸುವರು.

ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ ಪುಸ್ತಕ ಬಿಡುಗಡೆ ಮಾಡುವರು. ವಿಜಯಪುರ ಚಾಣಕ್ಯ ಕರಿಯರ್ ಅಕಾಡೆಮಿ ಸಂಸ್ಥಾಪಕ ಎನ್.ಎಂ.ಬಿರಾದಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರತಿಷ್ಠಾನದ ಸಂಚಾಲಕ ಚನ್ನಪ್ಪ ಕಟ್ಟಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



No comments:

Post a Comment