ವಿಜಯಪುರ: ಅಖಂಡ ಕರ್ನಾಟಕ ರೈತ ಸಂಘ (ರಿ) ಜಿಲ್ಲಾ ಘಟಕ ವಿಜಯಪುರ ಪದಾಧಿಕಾರಿಗಳು ಮುಖ್ಯ ಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು ಇದಕ್ಕೆ ಕಾರಣ ಜಿ ಆರ್ ಜಿ 152 ಹಾಗೂ ಜಿ ಆರ್ ಜಿ 811 ತೊಗರಿ ಬೀಜವೇ ಕಾರಣ ಈ ಬೀಜ ಸಂಪೂರ್ಣ ಕಳಪೆ ಮಟ್ಟದ್ದಾಗಿದೆ. ಈ ಕುರಿತು ಹೋರಾಟ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಕೃಷಿ ಇಲಾಖೆ ಹಾಗೂ ಧಾರವಾಡದ ಕೃಷಿ ವಿದ್ಯಾಲಯದ ವಿಜ್ಞಾನಿ ಗಳು ಆಗಮಿಸಿ ತೊಗರಿ ಬೆಳೆ ಪರಿಶೀಲನೆ ಮಾಡಿದ್ದಾರೆ. ಪರಿಶೀಲನೆ ಸಂದರ್ಭದಲ್ಲಿ ರೈತ ಮುಖಂಡರು ಹಾಗೂ ರೈತರೆದುರು ಜಿ ಆರ್ ಜಿ 152 ಹಾಗೂ 811 ಬೀಜ ಕಳಪೆ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಕಳಪೆ ಇದ್ದ ಕಾರಣ ಗಿಡದಲ್ಲಿ ತೊಗರಿ ಕಾಯಿ ಆಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಸರ್ಕಾರಕ್ಕೆ ವರದಿ ಕಳುಹಿಸುವಾಗ ತೊಗರಿ ಬೀಜದ ಯಾವುದೇ ತೊಂದರೆ ಇಲ್ಲ. ಬೀಜ ಉತ್ತಮವಾಗಿದೆ. ಹವಾಮಾನದ ವೈಪರಿತ್ಯ ಕಾರಣ ಎಂದು ಹಾಗೂ ರೈತರು ದಟ್ಟಣೆಯಾಗಿ ಬಿತ್ತನೆ ಮಾಡಿದ್ದಾರೆ ಆದ್ದಿರಿಂ ಕಾಯಿ ಹಿಡಿದಿಲ್ಲ ಎಂದು ತಪ್ಪು ವರದಿ ಸಲ್ಲಿಸಿದ್ದಾರೆ. ಇದರಿಂದ ರೈತರಿಗೆ ಆಘಾತವಾಗಿದೆ. ಆದ್ದರಿಂದ ಬೆಂಗಳೂರಿನಿಂದ ಬೇರೆ ತಂಡ ಕಳುಹಿಸಿ ಮತ್ತೊಮ್ಮೆ ತೊಗರಿ ಬೆಳೆ ಪರಿಶೀಲನೆ ಮಾಡಿ ಸೂಕ್ತ ವರದಿ ಪಡೆದುಕೊಳ್ಳಬೇಕೆಂದು ಮಾನ್ಯ ಮುಖ್ಯಮಂತ್ರಿ ಗಳಿಗೆ ಒತ್ತಾಯಿಸಿದರು.
ಅದೇನೆ ಇದ್ದರೂ ಒಟ್ಟಾರೆ ರೈತರಿಗೆ ಪ್ರತಿ ಎಕರೆಗೆ ಕನಿಷ್ಟ 25000 ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.
ಅದರಂತೆ ವಿಮೆ ಪರಿಹಾರ ತುಂಬದೆ ಇರುವ ರೈತರಿಗೂ ಪರಿಹಾರ ಒದಗಿಸಿ ರೈತರನ್ನು ಬದುಕಿಸಬೇಕೆಂದು ಒತ್ತಾಯಿಸಿದರು.
ದಾರಿ ಸಮಸ್ಯೆಯ ಕುರಿತು ಅಧಿವೇಶನದಲ್ಲಿ ಚರ್ಚಿಸಿ ಕಾನೂನು ತಿದ್ದುಪಡಿ ಮಾಡುವ ಮೂಲಕ ನ್ಯಾಯಾಲಯಕ್ಕೆ ಹೋಗಿ ತಡೆ ಯಾಜ್ಣೆ ತರದಂತೆ ಸುಗ್ರೀವಾಜ್ಣೆ ಹೊರಡಿಸಿ ತಹಶಿಲ್ದಾರರಿಗೆ ಸಂಪೂರ್ಣ ಅಧಿಕಾರ ವಹಿಸಿಕೊಡಬೇಕು. ಈ ಹಿಂದೆ ಹೊರಡಿಸಿದ ಸುತ್ತೋಲೆಯನ್ನು ಮಾರ್ಪಾಡು ಮಾಡಿ ರೈತರಿಗೆ ಅನುಕೂಲವಾಗುವಂತೆ ಸ್ಪಷ್ಟ ಆದೇಶ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಬಸವರಾಜ ಚೌಧರಿ, ಮಹಾಂತೇಶ ಪಡಗಾನೂರು, ಶಿವಾನಂದ ಹಡಪದ, ಸಂತೋಷ ಪಡಗಾನೂರ, ಶಿವಾನಂದ ಪಡಗಾನೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment