ವಿಜಯಪುರ : ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ವಿಜಯಪುರ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ಜಿಲ್ಲಾಧ್ಯಕ್ಷರಾದ ಕಾಳಮ್ಮ ಬಡಿಗೇರ ಮಾತನಾಡಿ, ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾ ಸ್ವಚ್ಚತೆ. ಕೈತೋಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ ನೌಕರರಿಗೆ ಶಾಲಾ ಸಿಬ್ಬಂದಿಗಳೆAದು ನೇಮಿಸಿ ನೇಮಕಾತಿ ಆದೇಶ ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಡ್ಡಾಯವಾಗಿ ನೀಡಬೇಕು. ಶಾಲಾ ಅವಧಿಯ ನಂತರ ನರೆಗಾ ಯೋಜನೆ ಅಡಿ ಶಾಲಾ ಕೈತೊಟದ ಕೆಲಸ ಇವರಿಗೆ ನೀಡಿ ಈ ಯೋಜನೆಯಿಂದ ವೇತನ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ನಿವೃತ್ತಿ ಹೊಂದಿದ ಅಡುಗೆ ಸಿಬ್ಬಂದಿಗಳ ಕುಟುಂಬದವರಿಗೆ ಕೆಲಸ ನೀಡಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಎರಡು ಜನ ಆಡುಗೆಯವರು ಇರಲೇಬೇಕು. ಬಿಸಿಯೂಟ ಯೋಜನೆಯನ್ನು ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು.
2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ 6000 ರೂ ಗಳ ಗೌರವಧನ ಹೆಚ್ಚಿಸಬೇಕು. ಈಗಾಗಲೇ ಹಣಕಾಸು ಇಲಾಖೆ ಒಪ್ಪಿಕೊಂಡಿರುವ ನಿವೃತ್ತಿಯಾದವರಿಗೆ ಇಡಿಗಂಟು ಕೂಡಲೇ ಜಾರಿ ಆಗಬೇಕು. ಸಾದಿಲ್ವಾರು ಜಂಟಿಖಾತೆ ಜವಾಬ್ದಾರಿಯನ್ನು ಮುಖ್ಯ ಅಡುಗೆ ನೌಕರರಿಂದ Sಆಒಅ ಗೆ ವರ್ಗಾವಣೆ ಮಾಡಿರುವ ಕ್ರಮ ವಾಪಾಸ್ಸಾಗಬೇಕು ಸಾದಿಲ್ವಾರು ಖಾತೆ ಮೊದಲಿನಂತೆಯೇ ಬದಲಾಯಿಸಬೇಕು. ಆಡುಗೆ ಕೇಂದ್ರಗಳು ಸುಸಜ್ಜಿತವಾಗಿ ಇಲ್ಲದ ಕಡೆ ಉತ್ತಮ ಅಡುಗೆ ಕೇಂದ್ರಗಳನ್ನು ನಿರ್ಮಿಸಬೇಕು. ಹಾಗೂ ಕ್ರಿಮಿ ಕೀಟಗಳು ಬರದ ರೀತಿಯಲ್ಲಿ ಅಡುಗೆ ಕೇಂದ್ರಗಳ ಸುತ್ತ ಮುತ್ತ ಸೂಕ್ತ ವಾತಾವರಣ ಸೃಷ್ಟಿಸಬೇಕು. ಉತ್ತರಪ್ರದೇಶ ಮತ್ತು ಪಂಜಾಬ ರಾಜ್ಯದ ಮಾನ್ಯ ಹೈಕೊರ್ಟ ತೀರ್ಮಾನಿಸಿದಂತೆ ವರ್ಷದ 12 ತಿಂಗಳು ಕೆಲಸ ಮತ್ತು ಕನಿಷ್ಠ ಕೂಲಿ ಜಾರಿ ಆಗಬೇಕು ಎಂದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷರಾದ ಅಣ್ಣಾರಾಯ ಈಳಗೇರ ಮಾತನಾಡಿ, 2014 ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲವಾದ್ದರಿಂದ ಕೇಂದ್ರಸರ್ಕಾರವು 26,000 ರೂ ಗಳಿಗೆ ಗೌರವಧನ ಹೆಚ್ಚಿಸಬೇಕು. ಒಆಒ ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು. ಕ್ಲಸ್ಟರ್ ಸಭೆಗಳನ್ನು ಕಡ್ಡಾಯವಾಗಿ ಪ್ರತಿ ಜಿಲ್ಲೆಯಲ್ಲಿ ಮಾಡಬೇಕು. ಕೆಲಸದ ಅವಧಿಯನ್ನು 4 ಗಂಟೆಯಿAದ 6 ಗಂಟೆಗೆ ಅಕ್ಷರ ದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು. ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆಯಡಿಯಲ್ಲಿಯೇ ನಡೆಯಬೇಕು. ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ 25 ಲಕ್ಷ ರೂಗಳ ಪರಿಹಾರ ಕೊಡಬೇಕು. ಮಾರ್ಚ್ 31. 2024 ಕೈ ಬಿಸಿಯೂಟ ನೌಕರರನ್ನು ಬಿಡುಗಡೆಗೊಳಿಸಲು ಹೊರಡಿಸಿರುವ ಸುತ್ತೋಲೆಯನ್ನು ಬದಲಾಯಿಸಿ ಎಪ್ರೀಲ್ 10, 2024ಕ್ಕೆ ಮರು ಆದೇಶ ನೀಡಬೇಕು. ಬಜೆಟ್ ನಲ್ಲಿ ಈ ನೌಕರರಿಗೆ ಹೆಚ್ಚಳ ಮಾಡಿದ ರೂ 1000/- ವೇತನವನ್ನು ಜನವರಿ 2023 ರಿಂದ ಅನ್ವಯಿಸಿ ಜಾರಿಮಾಡಬೇಕು. ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವ ಕ್ರಮ ನಿಲ್ಲಬೇಕು. ಬಿಸಿಯೂಟ ಯೋಜನೆಯನ್ನು ಖಾಯಂ ಮಾಡಬೇಕು ಖಾಯಂ ಮಾಡುವ ತನಕ 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಇವರನ್ನು ಕಾರ್ಮಿಕರೆಂದು ಗುರುತಿಸಬೇಕು. ಎಂದರು.
ಜನಪರವಾಗಿ ಈ ರಾಜ್ಯದ ಅಭಿವೃದ್ದಿಗಾಗಿ ಎಲ್ಲಾ ವರ್ಗದ ಜನರಿಗೆ ನ್ಯಾಯ ನೀಡುವ ಹೊಸ ಭರವಸೆ ನೀಡಲು ಬಂದಿರುವ ಮಾನ್ಯ ಸಿದ್ದರಾಮಯ್ಯನವರ ಸರ್ಕಾರವು ರಾಜ್ಯದಲ್ಲಿ ಈ ಯೋಜನೆಯ ಅಭಿವೃದ್ಧಿಗೆ ದುಡಿಯುತ್ತಿರುವ 1 ಲಕ್ಷ 18 ಸಾವಿರ ಬಡಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಕೂಡಲೇ ವೇತನ ಹೆಚ್ಚಳ ಮಾಡಲು ಮುಂದಾಗಬೇಕೆAದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಆನಂದಶೆಟ್ಟಿ, ಖಜಾಚಿ ಸುವರ್ಣಾ ರಾಠೋಡ, ಉಪಾಧ್ಯಕ್ಷರಾದ ಬಿಸ್ಮಿಲ್ಲಾ ಇನಾಮದಾರ, ಉಪಾಧ್ಯಕ್ಷರಾದ ಸುರೇಖಾ ವಾಘಮೋಡೆ, ಜಯಶ್ರೀ ಪಾರ್ಥಗೋಳ, ಸುಜಾತಾ ಚಿಂಚೋಳಿ, ಶೈಲಾ ಮಾಳಗೆ, ಸುಮಿತ್ರಾ, ರಾಜಶ್ರೀ ಹತ್ತಿ, ಭಾರತಿ ಮಧಭಾವಿ, ಸುಭದ್ರಾ ತಿಳಗೂಳ, ರೇಣುಕಾ ಸುಣಗಾರ, ಮೀನಾಕ್ಷಿ ಶಿಂಧೆ, ರೇಣುಕಾ ಮುತ್ತಗಿ, ವಿಜಯಾ ಬಾಬರ, ದೇವುಬಾಯಿ ನಾಯಕ, ಅನ್ನಪೂರ್ಣಾ ಲೋಗಾಂವಿ, ಶಾಂತಾ ಹಿರೇಮಠ,ಸೈನಾಜ ಸೌಧಾಗರ, ದಾನಮ್ಮ ಹೊನ್ನುಟಗಿ, ನೂರಜಾನ ಕೆಂಭಾವಿ, ಅಂಬಕ್ಕ ಜಾಧವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment