Thursday, December 5, 2024

ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಸಮರ್ಪಕವಾಗಿ ಜಾರಿಗೊಳಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ



ವಿಜಯಪುರ, ಡಿಸೆಂಬರ್ 05 (ಕರ್ನಾಟಕ ವಾರ್ತೆ) : ಅನಧಿಕೃತವಾಗಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಅಪರಾಧವಾಗಿದ್ದು, ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ, ಸಂಬAಧಿಸಿದ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. 

 ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಿಸಿಪಿಎನ್‌ಡಿಟಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಕಾಯ್ದೆಯನ್ವಯ ಅಪರಾಧವಾಗಿದ್ದು, ಒಂದು ವೇಳೆ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸಂಬAಧಿಸಿದ ಅಧಿಕಾರಿಗಳು ಅಂತಹವರ ಮೇಲೆ ಕಾಯ್ದೆಯನ್ವಯ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. 

 ಅಧಿಕಾರಿಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕಾö್ಯನಿಂಗ್ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅನಿರೀಕ್ಷಿತವಾಗಿ ಭೇಟಿ ನೀಡುವ ಮೂಲಕ ಕೇಂದ್ರಗಳಲ್ಲಿ ಕಾಯ್ದೆಯನ್ವಯ ನಿಯಮಗಳನ್ನು ಪಾಲಿಸಲಾಗುತ್ತಿವೆಯೇ, ಇಲ್ಲ ಎಂಬುದನ್ನು ಹಾಗೂ ಸ್ಕಾö್ಯನಿಂಗ್ ಕೇಂದ್ರಗಳು ಕಡ್ಡಾಯವಾಗಿ ನೊಂದಣಿಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಗೋಚರಿಸುವ ಹಾಗೆ ಮಾಹಿತಿ ಫಲಕಗಳು, ನಿಗದಿತ ನಮೂನೆಗಳ ನಿರ್ವಹಣೆ ಸೇರಿದಂತೆ ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡುವಂತೆ ಸೂಚನೆ ನೀಡಿದ ಅವರು, ಅನಧಿಕೃತವಾಗಿ ಸ್ಕಾö್ಯನಿಂಗ್ ಮಾಡುವವರ ಮೇಲೆ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. 

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕಾö್ಯನಿಂಗ್ ಕೇಂದ್ರಗಳ ನವೀಕರಣಕ್ಕಾಗಿ ಹಾಗೂ ಹೊಸದಾಗಿ ಕೇಂದ್ರಗಳ ಸ್ಥಾಪನೆಗೆ ಬಂದಿರುವ ಅರ್ಜಿಗಳನ್ನು, ದಾಖಲೆಗಳನ್ನು ಪರಿಶೀಲನೆ ನಡೆಸಬೇಕು. ಈ ಕುರಿತು ರಚಿಸಲಾದ ಸಮಿತಿ ಸದಸ್ಯರ ಪರಿಶೀಲನಾ ಮಾಹಿತಿ ದೃಢೀಕರಣ ಸಹಿತ ವರದಿ ಸಲ್ಲಿಸಬೇಕು. ವರದಿ ಆಧರಿಸಿ ಕ್ರಮ ವಹಿಸಿ, ತಪಾಸಣಾ ವರದಿ ಪುರ್ಣ ಪ್ರಮಾಣದಲ್ಲಿ ದೊರಕಬೇಕು. ನಿರಾಪೇಕ್ಷಣಾ ಪತ್ರ ನೀಡುವಾಗ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸಿ, ಜಿಲ್ಲಾ ಮಟ್ಟದ ಸಮಿತಿಗೆ ಸಲ್ಲಿಸಬೇಕು. ಈ ಅರ್ಜಿಗಳ ಕುರಿತು ಸಭೆಯಲ್ಲಿ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

 ಪಿಸಿಪಿಎನ್‌ಡಿಸಿ ಕಾಯ್ದೆಯ ಕುರಿತು ಜಿಲ್ಲೆಯಾದ್ಯಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಕಾಯ್ದೆಯ ಕುರಿತು ತಿಳುವಳಿಕೆ ಮೂಡಿಸಬೇಕು. ಕಾಯ್ದೆಯ ನಿಯಮಗಳ ಕುರಿತು ಕರಪತ್ರಗಳನ್ನು ಮುದ್ರಿಸಿ ಜನನಿಬಿಡ ಪ್ರದೇಶಗಳಾದ ಬಸ್‌ನಿಲ್ದಾಣ, ರೈಲು ನಿಲ್ದಾಣ ಒಳಗೊಂಡAತೆ ವಿವಿಧ ಸ್ಥಳಗಳಲ್ಲಿ ಪ್ರಚುರಪಡಿಸುವ ಮೂಲಕ ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು. ಲಿಂಗಾನುಪಾತದ ಸಮಾನತೆ ಕಾಪಾಡಲು ಜಾಗೃತಿ ಅಭಿಯಾನ ಕೈಗೊಳ್ಳಬೇಕು. ರೇಡಿಯೋ ಜಿಂಗಲ್ಸ್ ಮೂಲಕ ಪ್ರಚುರಪಡಿಸಬೇಕು. ಜನನಿಬಿಡ ಪ್ರದೇಶಗಳಲ್ಲಿ ವಿಡಿಯೋ ಪ್ರದರ್ಶನ ಮೂಲಕ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದರು. 

 ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಶಸ್ತçಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ವರಿ ಗೊಲಗೇರಿ, ಪಿಸಿಪಿಎನ್‌ಡಿಟಿಯ ತಪಾಸಣಾ ಹಾಗೂ ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಟಿ.ಪಿ.ನಾಯ್ಡು, ಡಾ.ಶೈಲಜಾ ಬಿದರಿ, ಡಾ.ರವಿಕುಮಾರ ನಾಗನೂರ, ಪೀಟರ್ ಅಲೆಕ್ಸಾಂಡರ್, ಎಸ್.ಜಿ.ರೂಡಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment