ಸಿಂದಗಿ: ಕೇವಲ ಪೊಲೀಸರಿಂದ ಅಪರಾಧಗಳ ತಡೆ ಸಾಧ್ಯವಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯ ಎಂದು ಪಿಎಸ್‌ಐ ಆರೀಫ ಮುಷಾಪುರಿ ಹೇಳಿದರು.
ಪುಟ್ಟಣದ ಆರ್.ಡಿ. ಪಾಟೀಲ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪಪೂರ ಮಹಾವಿದ್ಯಾಲಯ ಹಾಗೂ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ ಘಟಕದ ಅಡಿಯಲ್ಲಿ ಸಿಂದಗಿ ಪೊಲೀಸ್ ಠಾಣೆಯ ಸಹಯೋಗದಲ್ಲಿ ಹಮ್ಮಿಕೊಂಡ 2024ರ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ದಿನನಿತ್ಯದ ಬದುಕಿನಲ್ಲಿ ಕಾನೂನು ನಿಯಮಗಳನ್ನು ಅಳವಡಿಸಿಕೊಂಡು ಸಾಗಬೇಕಾದ ಅನಿವಾರ್ಯತೆ ಇದೆ. ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವಂತಹ ಅಪರಾಧಗಳು ಕಣ್ಣಿಗೆ ಬಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಾಗಿರುವುದು ನಾಗರಿಕರ ಕರ್ತವ್ಯ. ಅಪರಾಧಗಳಾಗದಂತೆ ವಹಿಸಬಹುದಾದ ಮುನ್ನೆಚ್ಚರಿಕೆ ಕ್ರಮಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ವೇಳೆ ಪಿ.ವಿ.ಮಹಲಿನಮಠ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಘಟಕದ ಸಂಯೋಜಕ ಬಸವರಾಜ ಮಹಾಜನಶೆಟ್ಟಿ, ಉಪನ್ಯಾಸಕ ಡಾ.ಶರಣಬಸವ ಜೋಗುರ ಸೇರಿದಂತೆ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment