ಸಿಂದಗಿ: ಭಾಷಣ ಕಲೆ ಎಂಬುದು ಒಂದು ಕಲಿಕೆಯ ಕ್ರಮ ಹಾಗಾಗಿ ಅದನ್ನು ಈಗಿನ ರಾಷ್ಟಿçÃಯ ಹೊಸ ಶಿಕ್ಷಣ ನೀತಿಯಲ್ಲಿ ಅಳವಡಿಸಲಾಗಿದೆ ಎಂದು ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾದ ಡಾ.ವಿಷ್ಣು ಶಿಂದೆ ಹೇಳಿದರು.
ಪಟ್ಟಣದ ಶ್ರೀ ಪದ್ಮಾರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಂಡ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕುವ ವೇದಿಕೆಯೇ ಈ ಪಠ್ಯಪೂರ ಚಟುವಟಿಕೆಯಾಗಿದೆ. ಪದವಿ ಶಿಕ್ಷಣ ಸರಿಯಾದರೆ ಬದುಕು ನಿರ್ಮಾಣ ಒಂದು ವೇಳೆ ಸರಿಯಾಗದಿದ್ದರೆ ಬದುಕೇ ನಿರ್ಣಾಮ ಹಾಗಾಗಿ ನಿಮ್ಮ ಬದುಕನ್ನು ಬದಲಾವಣೆ ಮಾಡುವುದೇ ಪದವಿ ಶಿಕ್ಷಣ ಎಂದರು.
ಈ ವೇಳೆ ಅತಿಥಿ ಸ್ಥಾನವನ್ನು ಅಲಂಕರಿಸಿದ ಸಂಸ್ಥೆಯ ಆಡಳಿತಾಧಿಕಾರಿ ಡಾ.ಬಿ.ಜಿ. ಮಠ ಮಾತನಾಡಿ, ಈ ಸಂಸ್ಥೆಯ ನೀಡುವ ಎಲ್ಲ ರೀತಿಯ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಸ್ವ-ಉದ್ಯೋಗಗಳನ್ನು ಮುಂದುವರೆಸಿಕೊAಡು ಹೋಗಬೇಕು. ಕೀಳರಿಮೆಯನ್ನು ಹೋಗಲಾಡಿಸಿಕೊಂಡು ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ವೇಳೆ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಚೇರಮನ್ನರಾದ ಗುರುಕುಲ ಭಾಸ್ಕರ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಪ್ರಾಚಾರ್ಯ ಎಸ್.ಎಂ. ಪೂಜಾರಿ ಅಧ್ಯಕ್ಷೀಯ ಮಾತುಗಳನ್ನಾಡಿದರು.
ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಜಿ.ಎ.ನಂದಿಮಠ, ಜಿ.ಎಸ್.ಕುಲಕರ್ಣಿ, ಪಿ.ಎಮ್ ಮಾಲಿಪಾಟೀಲ್, ಅನೀಲಕುಮಾರ ರಜಪೂತ, ಎಸ್.ಎಮ್. ಹೂಗಾರ, ಎಮ್.ಕೆ. ಬಿರಾದಾರ, ಎಸ್.ಸಿ ದುದ್ದಗಿ, ಜಿ.ವಿ ಪಾಟೀಲ್, ಮಂಗಳಾ ಈಳಗೇರ, ಡಿ.ಎಂ. ಪಾಟೀಲ, ಶಂಕರ ಕುಂಬಾರ, ಮಮತಾ ಹರನಾಳ ಸೇರಿದಂತೆ ಮಾಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಈ ವೇಳೆ ವಿದ್ಯಾರ್ಥಿ ಸಂಘಡ ಕಾರ್ಯಾಧ್ಯಕ್ಷ ಯು.ಸಿ ಪೂಜೇರಿ ಸ್ವಾಗತಿಸಿ ಪರಿಚಯಿಸಿದರು.. ವಿದ್ಯಾರ್ಥಿ ಈರಮ್ಮ ಹಿರೇಮಠ ಪ್ರಾರ್ಥಿಸಿದರು. ನೀಲಗಂಗಾ ದೇವರಮನಿ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಕಾವೇರಿ ರೇವೂರ ವಂದಿಸಿದರು.
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.