Tuesday, May 7, 2024

"ನಿವರಗಿಯಲ್ಲಿ ಶಾಂತಿಯುತವಾಗಿ ನಡೆದ ಮತದಾನ"


 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಚಡಚಣ: ತಾಲೂಕಿನ ನಿವರಗಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೇ ಲೋಕಸಭೆ ಚುನಾವಣೆ ಮಂಗಳವಾರ ಶಾಂತಿಯುತವಾಗಿ ಮತದಾನ ನಡೆಯಿತು.

ಮಂಗಳವಾರ ಬೆಳಗ್ಗೆ 7ಕ್ಕೆ ಶುರುವಾದ ಮತದಾನ ಆರಂಭದಲ್ಲಿ ಏರಿಕೆ ಕಂಡಿತ್ತು. ಬಳಿಕ ಮಧ್ನಾಹ್ನದ ಹೊತ್ತಿಗೆ   ಮಂದಗತಿಯಲ್ಲಿತ್ತು. ಇನ್ನೂ ಬಹುತೇಕ ಎಲ್ಲ ಮತಗಟ್ಟೆಗಳಲ್ಲೂ ಇದೇ ವಾತಾವರಣ ಇತ್ತು. ಸುಡು ಬಿಸಿಲನ್ನು ಲೆಕ್ಕಿಸದೆ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಸಾಯಂಕಾಲ ಹೊತ್ತಿಗೆ ಮತದಾನ ಏರಿಕೆ ಕಂಡಿತ್ತು.

ಮೊದಲ ಬಾರಿ ಮತ ಚಲಾಯಿಸಲು ಬಂದಿದ್ದ ಯುವ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ತೆರಳಿ ತಮ್ಮ ಮತದಾನದ ಹಕ್ಕನ್ನು  ಚಲಾಯಿಸಿದರು‌. ಸಾಮಾಜಿಕ ಜಾಲತಾಣಗಳಲ್ಲಿ ಗುರುತಿನ ಭಾವಚಿತ್ರದ ಬೆರಳಿನ ಶಾಯಿಯನ್ನು ತೋರಿಸುವ ಸೆಲ್ಫಿ ಚಿತ್ರಗಳನ್ನು ಹಂಚಿಕೊಂಡರು.

ಮತಗಟ್ಟೆಯಲ್ಲಿ ಮತದಾನಕ್ಕಾಗಿ ಬಂದ ಮತದಾರರಿಗೆ, ತಣ್ಣನೆ ಕುಡಿವ ನೀರು, ಶೌಚಾಲಯ, ಆರೋಗ್ಯ ಚಿಕಿತ್ಸೆ ಸೇರಿದಂತೆ ಹಲವು ರೀತಿಯ ವ್ಯವಸ್ಥೆಗಳು ಉಚಿತವಾಗಿ ಕಲ್ಪಿಸಿದ್ದು ಮತದಾರರನ್ನು ಆಕರ್ಷಿಸಿದವು.

ಮತಗಟ್ಟೆಯಲ್ಲಿದ್ದ ಸಿಬ್ಬಂದಿಗೆ ನೀರು, ಊಟ, ಶೌಚಾಲಯ, ಪೊಲೀಸ್‌ ಭದ್ರತೆ, ವಿದ್ಯುತ್‌ ಸೇರಿದಂತೆ ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.