Friday, May 17, 2024

18-05-2024 EE DIVASA KANNADA DAILY NEWS PAPER

ಆಹಾರದ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ: ಪ್ರೊ. ಮೇಟಿ


ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ಅಧ್ಯಯನ ವಿಭಾಗದಲ್ಲಿ ಶುಕ್ರವಾರ ಆಹಾರ ಮತ್ತು ಪೌಷ್ಟಿಕತೆ ಕುರಿತು ಉಪನ್ಯಾಸ ಹಮ್ಮಿಕೊಳ್ಳಲಾಯಿತು.


ವಿಜಯಪುರ: ಆಹಾರ ಮತ್ತು ಪೌಷ್ಟಿಕತೆಯ ಕುರಿತು ಸಮುದಾಯದ ಜನರಲ್ಲಿ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಅತಿ ಮಹತ್ವದ್ದು ಎಂದು ಮಹಿಳಾ ವಿವಿಯ ಆಹಾರ ಮತ್ತು ಪೌಷ್ಟಿಕತೆ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ರೇಣುಕಾ ಮೇಟಿ ಹೇಳಿದರು.

ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ಅಧ್ಯಯನ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡ ಆಹಾರ ಮತ್ತು ಪೌಷ್ಟಿಕತೆ ಕುರಿತು ಉಪನ್ಯಾಸದಲ್ಲಿ ಅವರು ಮಾತನಾಡಿದರು.

ಶಿಕ್ಷಕರು ಕೇವಲ ಬೋಧನೆಗೆ ಮಾತ್ರ ಸೀಮಿತರಾಗಿಲ್ಲ ಅವರು ತಮ್ಮ ವೃತ್ತಿಯ ಜೊತೆಗೆ ಸಮುದಾಯಕ್ಕೆ ಆರೋಗ್ಯ, ಆಹಾರ ಹಾಗೂ ಸ್ವಾಸ್ಥ್ಯದ ಕುರಿತು ಅರಿವು ಮೂಡಿಸಬೇಕು ಎಂದರು. 

ಗ್ರಾಮೀಣ ಜನರಲ್ಲಿ ಆಹಾರ ಮತ್ತು ಪೌಷ್ಟಿಕತೆಯ ಅರಿವಿನ ಕೊರತೆಯಿದೆ ಅದನ್ನು ಸರಿ ಪಡಿಸುವವರೆಗೂ ಸಮುದಾಯದ ಸುಸ್ಥಿರ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಶಾಲಾ ಮಟ್ಟದ ಶಿಕ್ಷಣದಿಂದಲೇ ಇದರ ಕುರಿತು ಚಟುವಟಿಕೆಗಳನ್ನು ರೂಪಿಸಬೇಕಾಗಿದೆ. ಇದರಿಂದ ಉತ್ತಮ ಆರೋಗ್ಯ ಹೊಂದುವ ಮೂಲಕ ಮಕ್ಕಳ ಸಮಾಜಕ್ಕೆ ಉಪಯೋಗಿಯಾಗಬಲ್ಲರು ಎಂದರು.

ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ವಿಷ್ಣು ಶಿಂದೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತೀಯರಲ್ಲಿ ಆರೋಗ್ಯದ ಅರಿವಿನ ಕೊರತೆಯಿಂದ ಗ್ರಾಮೀಣ ವಲಯದಲ್ಲಿ ಸಮಸ್ಯೆಗಳು ಹೆಚ್ಚಾಗಿವೆ. ಮನೆ ಮನೆಗೆ ತೆರಳಿ ಸಮತೋಲನ ಆಹಾರದ ಮಾಹಿತಿ ನೀಡುವಲ್ಲಿ ಪ್ರತಿಯೊಬ್ಬರು ಸಹಭಾಗಿಯಾಗಬೇಕು ಅಂದಾಗ ಮಾಥ್ರ ಆರೋಗ್ಯಯುತ ಸಮುದಾಯ ಕಟ್ಟಲು ಸಾಧ್ಯ ಎಂದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಲಾಯಿತು. ವಿದ್ಯಾರ್ಥಿನಿಯರಾದ ವೀಣಾ ಮುಧೋಳ ನಿರೂಪಿಸಿದರು. ದುಂಡವ್ವ ಪರಿಚಯಿಸಿದರು, ಲಕ್ಷ್ಮೀ ವಂದಿಸಿದರು.

ವಿವಿಧ ವಿಭಾಗಗಳ ಪ್ರಾಧ್ಯಾಪಕ ಪ್ರೊ. ಯು.ಕೆ.ಕುಲಕರ್ಣಿ, ಪ್ರೊ.ಅಶೋಕ ಕುಮಾರ ಸುರಪುರ, ಡಾ. ಪ್ರಕಾಶ ಸಣ್ಣಕ್ಕನವರ, ಡಾ. ಭಾರತಿ ಗಾಣಿಗೇರ, ಡಾ. ರೂಪಾ ನಾಯ್ಕೋಡಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



ವಿದ್ಯಾರ್ಥಿಗಳ ವಿವಿಧ ಸಮಸ್ಯೆ ನಿವಾರಿಸುವಂತೆ ಮನವಿ


ವಿಜಯಪುರದಲ್ಲಿ ಕರವೇ (ಸ್ವಾಭಿಮಾನ ಬಣ) ವತಿಯಿಂದ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ವಿಜಯಪುರ: ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪದವಿ ಪ್ರವೇಶಾತಿ ಸಂದರ್ಭದಲ್ಲಿ ಪ್ರೀಶಿಫ್ ಕಾರ್ಡ್ ಅನ್ವಯ ಪ್ರವೇಶ ನೀಡುವುದು ಸೇರಿದಂತೆ ವಿವಿಧ ವಿದ್ಯಾರ್ಥಿಗಳ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಕರವೇ (ಸ್ವಾಭಿಮಾನ ಬಣ) ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಜಗದೇವ ಸೂರ್ಯವಂಶಿ ಮಾತನಾಡಿ, ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಪ್ರವೇಶ ಪಡೆದ ನಂತರ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡುತ್ತದೆ. ಈ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಆರ್ಥಿಕವಾಗಿ ದುರ್ಬಲವಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ, ಭರಿಸಲು ಆಗದಿರುವ ಕಾರಣ ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರವೇಶ ನಡೆಯುವ ಸಂದರ್ಭದಲ್ಲಿ ಪ್ರವೇಶ ಶುಲ್ಕ ಪಡೆಯದೆ ಫ್ರೀಶಿಫ್ ಕಾರ್ಡ್ ಮೂಲಕ ಪ್ರವೇಶ ಪಡೆಯುವ ಸೌಲಭ್ಯವನ್ನೂ ಉಲ್ಲೇಖಿತ ಸರ್ಕಾರಿ ಆದೇಶದಲ್ಲಿ ತಿಳಿಸಿರುತ್ತದೆ. ಆದರೆ ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಉಲ್ಲೇಖಿತ ಸರ್ಕಾರಿ ಆದೇಶವನ್ನು ಪಾಲಿಸುತ್ತಿಲ್ಲ ಎಂದು ದೂರಿದರು.

ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಈ ಆದೇಶವನ್ನು ಕಾರ್ಯಗತಗೊಳಿಸಲು ವಿಫಲವಾಗಿರುತ್ತವೆ. ಈಗಾಗಲೇ ವಿದ್ಯಾರ್ಥಿಗಳು ಈ ಯೋಜನೆಯಡಿಯಲ್ಲಿ ಪ್ರವೇಶ ಪಡೆಯಲು ಅರ್ಜಿಯನ್ನು ಸಲ್ಲಿಸಿದಲ್ಲಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿಯನ್ನೂ ಕೊಟ್ಟು ಅವರಿಂದ ಪ್ರವೇಶ ಶುಲ್ಕ, ಮತ್ತು ಪರೀಕ್ಷಾ ಶುಲ್ಕವನ್ನೂ ಪಡೆಯುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮತ್ತು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂಬ ಗಂಭೀರವಾದ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಮುಂದಿರಿಸಿದರು, ಜಿಲ್ಲೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರ ಮತ್ತು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪದವಿ ಪೂರ್ವ ಇಲಾಖೆ, ವಿಜಯಪುರ ಇವರ ಸಮ್ಮುಖದಲ್ಲಿ ಸಭೆಯನ್ನು ಕರೆದು ಪೂರ್ಣ ಪ್ರಮಾಣದಲ್ಲಿ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಸೂಚನೆಯನ್ನು ನೀಡಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

ಲಕ್ಷ್ಮಣ ಕಂಬಾಗಿ, ಗಿರೀಶ ಕಲಘಟಗಿ, ಡಾ.ಎಂ.ಆರ್. ಗುರಿಕಾರ, ಲಿಂಗರಾಜ ಬಿದರಕುಂದಿ, ಸಂಕೇತ ಪಟ್ಟಣದ, ತಿಮ್ಮನಗೌಡ ಪಾಟೀಲ, ಪ್ರಭು ಮಂಕಣಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.