Tuesday, June 11, 2024

12-06-2024 EE DIVASA KANNADA DAILY NEWS PAPER

ಅಕ್ರಮ ಜಾನುವಾರು ಸಾಗಾಟ , ವಧೆ ತಡೆಗಟ್ಟಿ : ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ : ಜಿಲ್ಲೆಯಲ್ಲಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಜಾನುವಾರು ಸಾಗಾಟ ಹಾಗೂ ವಧೆಯನ್ನು ತಡೆಗಟ್ಟಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರಗಳ ಸಾಗಾಟ ಹಾಗೂ ವಧೆ ತಡೆಗಟ್ಟುವ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2020-21 ನೇ ಕರ್ನಾಟಕ ಅಧ್ಯಾದೇಶ ಸಂಖ್ಯೆ ಕರ್ನಾಟಕ ಜಾನುವಾರು ಹತ್ಯೆ ಪ್ರಭಂದಕ ಮತ್ತು ಸಂರಕ್ಷಣಾ ಅಧ್ಯಾದೇಶ ರನ್ವಯ ಎಲ್ಲಾ ವಯಸ್ಸಿನ ಆಕಳು, ಆಕಳು ಕರ, ಹೋರಿ, 13 ವರ್ಷದೊಳಗಿನ ಎಮ್ಮೆ ಕೋಣಗಳ ವಧೆ ಮಾಡುವಂತಿಲ್ಲ. ಈ ಕಾಯ್ದೆ ಉಲ್ಲಘನೆಯಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಅನಧಿಕೃತ ಜಾನುವಾರುಗಳ ಅಕ್ರಮ ಸಾಗಟು ತಡೆಗೆ ಜಿಲ್ಲೆಯ ಕನಮಡಿ, ಅರಕೇರಿ ಸಿದ್ಧಾಪುರ, ಯತ್ನಾಳ, ಧೂಲಕೇಡ - ಶಿರದೋಣ, ಅಗರಖೇಡ ನಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಹಬ್ಬದ ಹಿಂದಿನ ಮೂರು ದಿನಗಳು ಅಧಿಕಾರಿಗಳು ಕಟ್ಟುನಿಟ್ಟಾಗಿ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಬೇಕು ಎಂದರು. ಹಬ್ಬದ ಮುಂಚಿನ ಮೂರು ದಿನಗಳಲ್ಲಿ ನಗರಪಾಲಿಕೆ, ಪಶುಪಾಲನಾ ಇಲಾಖೆ, ಪೊಲೀಸ್ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ತಾಲೂಕು ವ್ಯಾಪ್ತಿಯಲ್ಲಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಿಕೊಂಡು ಅಕ್ರಮ ಸಾಗಣೆ ಹಾಗೂ ವಧೆಯನ್ನು ತಡೆಗಟ್ಟಲು ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು 13 ವರ್ಷ ದಾಟಿದ ಎಮ್ಮೆ ಹಾಗೂ ಕೊಣಗಳುನ್ನು ವಧೆ ಮಾಡಬಹುದು. ಇದಕ್ಕೆ ಸಂಬಂಧಿಸಿದ ಪಶು ಇಲಾಖೆಯಿಂದ ನಿರಾಪೇಕ್ಷಣೆ ಪತ್ರ ಹಾಗೂ ವೈದ್ಯಕೀಯ ತಪಾಸಣೆ ಪತ್ರ ಹೊಂದಿರಬೇಕು ಎಂದು ತಿಳಿಸಿದರು. ಜಾನುವಾರುಗಳ ಸಾಗಾಟ ಮಾಡುವಾಗ , ಖರೀದಿಸುವಾಗ, ಮಾರಾಟ ಮಾಡುವ ಸಂದರ್ಭದಲ್ಲಿ ಜಾನುವಾರುಗಳಿಗೆ ಕಿವಿಯೋಲೆ ಇರುವುದು ಕಡ್ಡಾಯವಾಗಿರುತ್ತದೆ. ಹಾಗೂ ಸಾಗಾಣಿಕೆ ಸಂಬಂಧಪಟ್ಟಂತೆ ಸಂಭಂದಪಟ್ಟ ಅಧಿಕಾರಿ ಗಳಿಂದ ದೃಢೀಕರಣ ಪತ್ರ ತೆಗೆದುಕೊಂಡು ಸಾಗಾಣಿಕೆ ಮಾಡುವುದು ಕಡ್ಡಾಯವಾಗಿರುತ್ತದೆ ಎಂದರು. ಜಿಲ್ಲೆಯ ಎಲ್ಲಾ ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳಿಗೆ ಗುರುತಿನ ಸಂಖ್ಯೆ ಹೊಂದಿರುವ ಕಿವಿಯೋಲೆ ಹಾಕುವಂತೆ ನಿರ್ದೇಶನ ನೀಡಬೇಕು. ಹಬ್ಬದ ಸಂದರ್ಭದಲ್ಲಿ ಮಾಂಸದ ತಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡುವಂತಿಲ್ಲ. ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಮಹಾನಗರಪಾಲಿಕೆ, ನಗರಪಾಲಿಕೆ, ಗ್ರಾಮ್ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಮಾಂಸ ಮಾರಾಟಗಾರರಿಗೆ ತಿಳಿವಳಿಕೆ ಮೂಡಿಸಬೇಕು, ಅನಧಿಕೃತವಾಗಿ ಜಾನುವಾರಗಳ ಸಾಗಾಟ ಮಾಡುವ ವಾಹನಗಳ ನೋಂದಣಿ ರದ್ದುಪಡಿಸುವ ಕುರಿತು ಕ್ರಮಕೈಗೊಳ್ಳಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪಶುಪಾಲನಾ ಮತ್ತು ಪಶವೈದ್ಯ ಸೇವಾ ಇಲಾಖೆಯ ಅಶೋಕ್ ಗುಣಸಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.