Friday, June 21, 2024

22-06-2024 EE DIVASA KANNADA DAILY NEWS PAPER

10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಧೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಿ -ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ : ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ನಗರ ಶಾಸPರಾದÀ ಬಸನಗೌಡ ಪಾಟೀಲ ಯತ್ನಾಳ ಅವರು ಕರೆ ನೀಡಿದರು.ಅವರು ಆಯುಷ್ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜೂನ್ 21ರಂದು ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ದೈಹಿಕ, ಮಾನಸಿಕ ಸದೃಢÀತೆಗೆ ಯೋಗ ಸಹಕಾರಿ. ಜೀವನದಲ್ಲಿ ಪ್ರತಿನಿತ್ಯ ಯೋಗ ರೂಡಿಸಿಕೊಳ್ಳಬೇಕು. ನಿಯಮಿತ ಯೋಗ ಮಾಡುವುದರ ಮೂಲಕ ಆರೋಗ್ಯ ದೃಢತೆ ಹಾಗೂ ಚೈತನ್ಯಯುಕ್ತ ಬದುಕು ನಡೆಸಬಹುದಾಗಿದೆ. ಯೋU ರೂಢಿಸಿಕೊಳ್ಳುವ ಮೂಲಕ ಆರೋಗ್ಯಯುತ ಜೀವನ ನಡೆಸಬಹುದು. 

ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ. ಜೂನ್21 ರಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ದೇಶಗಳು ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಸಾಮೂಹಿಕ ಯೋಗಾಭ್ಯಾಸ: ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯೋಗಾಸಕ್ತರಿಗೆ 45 ನಿಮಿಷಗ¼ ಕಾಲ ಯೋಗಾಭ್ಯಾಸ ಮಾಡಿಸಲಾಯಿತು. ಶ್ರೀಮತಿ ಸುನೀತಾ ಬಿರಾದಾರ ಅವರು ಯೋಗಾಸನÀ ಹಾಗೂ ಚಂದ್ರಶೇಖರ ಮತ್ತು ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕಿ ಗೀತಾಂಜಲಿ ದಾಸರ್ ಅವರು ಪ್ರಾಣಾಯಾಮದ ಅಭ್ಯಾಸ ಮಾಡಿಸಿದರು. 

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗಳಾದ ಡಾ. ರಾಮನಗೌಡ ಎಸ್. ಪಾಟೀಲ್,ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ್ ಮಾನವರ ಸೇರಿದಂತೆ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ, ಕರ್ನಾಟಕ ರಿಸರ್ವ ಬಟಾಲಿಯನ್, ಸ್ಕೌಟ್ಸ್ ಹಾಗೂ ಗೈಡ್ಸ್, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾರತಿ ಕುಂದನಗಾರ ತಂಡದಿAದ ನಾಡಗೀತೆ ಪ್ರಸ್ತುತಪಡಿಸಲಾಯಿತು. ವೈದ್ಯಾಧಿಕಾರಿ ಡಾ. ವಿದ್ಯಾವತಿ. ಎಂ. ಅಥಣಿ ಪ್ರಾರ್ಥನೆ ಗೀತೆ ಹಾಡಿದರು. ಡಾ. ಬಿ.ಎನ್. ವಗದರ್ಣಿ ಸ್ವಾಗತಿಸಿದರು. ಡಾ. ವಿಜಯ ಮಹಾಂತೇಶ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಭಾರತ ಸರ್ಕಾರ ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಸಹಯೋಗದಲ್ಲಿ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಯೋಗ ದಿನ ಆಚರಣೆ

ವಿಜಯಪುರ:  ಭಾರತ ಸರ್ಕಾರ ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ವಿದ್ಯಾವರ್ಧಕ ಸಂಘದ ಬನ್ಸಿಲಾಲ್ ವಿಟ್ಟಲ್ ದಾಸ್ ಪದವಿ ಮಹಾವಿದ್ಯಾಲಯದಲ್ಲಿ ಇಂದು ನೆಹರು ಯುವ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಶುಕ್ರವಾರ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು. 

ಯೋಗ ದಿನಾಚರಣೆ ಕಾರ್ಯಕ್ರಮವನ್ನು ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಕೃಷ್ಣಮೂರ್ತಿ ದೇಶಪಾಂಡೆ ಅವರು ಉದ್ಘಾಟಿಸಿ ಮಾತನಾಡಿ,  ವಿಜಯಪುರ: ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ಶಾಂತಿ ಸಹ ಬಾಳ್ವೆ ಬದುಕು ರೂಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಪೋಷಕರು ಶಿಕ್ಷಣದ ಜೊತೆಗೆ ಯೋಗ ಶಿಕ್ಷಣ ನೀಡಲು ಮಕ್ಕಳಿಗೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು. 

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜೇಶ್ ದರ್ಬಾರ್ ಅವರು ಮಾತನಾಡಿ ಸುಮಾರು 5000 ವರ್ಷಗಳ ಇತಿಹಾಸವಿರುವ ಯೋಗ ಕಲೆಯನ್ನು ಜಗತ್ತಿಗೆ ಪರಿಚಯಿಸಿದ ಹಿರಿಮೆ ಭಾರತ ಹೊಂದಿದೆ.ಪ್ರತಿಯೊಬ್ಬ ಭಾರತೀಯ ಹೆಮ್ಮೆಯ ಪ್ರತೀಕವಾದ ಯೋಗ ದಿನಾಚರಣೆಯನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ ಎಂದು ಹೇಳಿದರು.

 ಕೇಂದ್ರ ಸಂವಹನ ಇಲಾಖೆ ಸಿ.ಕೆ ಸುರೇಶ್ ಪ್ರಸ್ತಾವಿಕವಾಗಿ ಮಾತನಾಡಿ, ಪ್ರತಿನಿತ್ಯ ಯೋಗ ಮಾಡುವುದರಿಂದ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಮನುಷ್ಯ ಸದೃಢನಾಗುತ್ತಾನೆ ಎಂದರು. 

ಯೋಗ ಗುರು ಮಾತೆಯಾದ ಕಲಾವತಿ ಅಪರಾಜ ವಿದ್ಯಾರ್ಥಿ ,ವಿದ್ಯಾರ್ಥಿನಿಯರಿಗೆ ಯೋಗಾಭ್ಯಾಸದ ಕುರಿತು ಮಾಹಿತಿಯನ್ನು ನೀಡಿದರು. 

ಚಿತ್ರಕಲೆ, ರಂಗೋಲಿ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ದಿಲೀಪ್ ದರ್ಬಾರ್, ದೈಹಿಕ ನಿರ್ದೇಶಕಿ ಕಲಾವತಿ ಅಪರಾಜ, ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ|| ಪ್ರಕಾಶ್ ರಾಥೋಡ್, ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ರಾಹುಲ್ ಡೋಂಗ್ರೆ, ದರ್ಬಾರ್ ಪದವಿ ಮಹಾವಿದ್ಯಾಲಯ ಪ್ರಾಚಾರ್ಯ ಗಿರಿಶ್. ಎಚ್. ಮಣ್ಣುರ, ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮ ಅಧಿಕಾರಿ ರಾಜು ಕಪಾಳಿ, ದರ್ಬಾರ್ ಪದವಿ ಮಹಾವಿದ್ಯಾಲಯದ ಉಪನ್ಯಾಸಕಿ ಸೀಮಾ ಪಾಟೀಲ್, ಉಪನ್ಯಾಸಕ ಜಗದೀಶ್ , ಸುನಿತಾ, ಕಾಶೀನಾಥ್, ಪ್ರಾಥಮಿಕ ಶಾಲೆಯ ಮುಖ್ಯಸ್ಥರು ರಮೇಶ್ ಕೋಟ್ಯಾಳ ಮತ್ತಿತರು ಉಪಸ್ಥಿತಿದ್ದರು. ಕಾರ್ಯಕ್ರಮವನ್ನು ರಾಜು ಕಪಾಳಿ, ಸ್ವಾಗತಿಸಿದರು, ಜಗದೀಶ್ ಸಾತ್ಯಾಳ ನಿರೂಪಿಸಿ, ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

"ಯೋಗ ಬಲ್ಲವನಿಗೆ ರೋಗವಿಲ್ಲ"



ಅಂತರಾಷ್ಟ್ರೀಯ ಯೋಗ ದಿನಚಾರಣೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ವಿಜಯಪುರದ ಗೋಲ್ ಗುಂಬಜ್ ಆವರಣದಲ್ಲಿ ದಿನಾಂಕ 21 ಜೂನ್ 2024 ರಂದು 10ನೇ ಅಂತಾರಾಷ್ಟ್ರೀಯ ಯೋಗವನ್ನು ಆಚಾರಿಸಲಾಯಿತು.

ಈ ವಿಶೇಷ ಯೋಗ ದಿನದ ನಿಮಿತ್ತ ವೃತ್ತಿಪರ ಯೋಗ ತರಬೇತುದಾರರಾದ ಶ್ರೀ. ಸುರೇಶ್ ಆನಂದಿ, ಅಂತರಾಷ್ಟ್ರೀಯ ಯೋಗದ ತೀರ್ಪುಗಾರರು, ಎವರಿಡೇ ಯೋಗ ಗುರುಗಳನ್ನು ಆವ್ಹಾನಿಸಲಾಗಿತ್ತು. ಇವರು ವಿವಿಧ ಯೋಗದ ವ್ಯಾಯಾಮಗಳನ್ನು ಶ್ಲೋಕದೊಂದಿಗೆ ಆರಂಭಿಸಿದ ಈ ಹಿಂದೆ ಖುಷಿ-ಮುನಿಗಳು ಮಾತ್ರ ಅಭ್ಯಾಸ ಮಾಡುತ್ತಿದ್ದ ಯೋಗವನ್ನು ಈಗ ಪ್ರತಿಯೊಬ್ಬರಲ್ಲೂ ಕಲಿಯುತ್ತಿದ್ದು, ವೈಜ್ಞಾನಿಕವಾಗಿ ಯೋಗದ ಮಹತ್ವ ಸಾಬೀತಾಗಿದೆ, ಯೋಗವು  ಒತ್ತಡವನ್ನು ನಿವಾರಿಸಲು ಮತ್ತು ಮಾನಸಿಕ ಶಾಂತಿಯನ್ನು ನೀಡಲು ಅತ್ಯುತ್ತಮ ಔಷಧವಾಗಿದೆ. ದಿನನಿತ್ಯದ ಯೋಗ ಪ್ರದರ್ಶನವು ಹಲವು ಪ್ರಯೋಜನಗಳಿಗೆ ಸಾಕ್ಷಿಯಾಗುತ್ತದೆ. ನಮ್ಮ ಜ್ಞಾನವೃಧ್ದಿ, ಮತ್ತು ಕೆಲಸದ ಕಾರ್ಯಕ್ಕೆ ಉತ್ತಮ ಸಾಧನೆವಾಗುತ್ತದೆ ಎಂದು ತಿಳಿಸುತ್ತಾ ವಿವಿಧ ಯೋಗಭ್ಯಾಸ ಜೊತೆಗೆ ಅದರ ಪ್ರಯೋಜನಗಳನ್ನು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ವಿಕಾಸ ಪ್ರಾಢಶಾಲೆ, ವಿಜಯಪುರ, ಎ.ಎಸ್.ಪಾಟೀಲ್ ವಾಣಿಜ್ಯ, ಕಾಲೇಜು, ವಿಜಯಪುರ ಹಾಗೂ ಸರ್ಕಾರಿ ಶಾಲೆ ನಂ. 03, ವಿಜಯಪುರದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರಾದ ಎಸ್.ಎಂ. ಬಿರಾದರ್,, ಸಹ ಶಿಕ್ಷಕರರಾದ ಸಂಜೀವ್‍ಕುಮಾರ್, ವಿಜಯಕುಮಾರ್ ತಳವಾರ, ಮುಖ್ಯೋಪಾಧ್ಯಯರಾದ ಬಿ.ಡಿ. ಬೆಳೆಣೆನವರು, ಭಾಗವಹಿಸಿದರು. 

ವಿಶೇಷ ನೊಡಲ್ ಅಧಿಕಾರಿಯಾಗಿ ಶ್ರೀ. ರಾಕೇಶ್ ಸಿಂಧೆ, ಎ.ಎಸ್.ಎ.ಇ. ಧಾರವಾಡ ವಲಯ ಇವರು ಉಪಸ್ಥಿತರಿದ್ದರು, ಅಂತರರಾಷ್ಟ್ರೀಯ ಯೋಗದ ಪ್ರಾಮುಖ್ಯತೆ ಹಾಗೂ ಈ ವರ್ಷದ ಧ್ಯೇಯವಾಕ್ಯವಾದ "ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ" ಎಂಬುದರ ಬಗ್ಗೆ ತಿಳಿಸಿದರು.  ಜೊತೆಗೆ ಇಲಾಖೆಯ ಶ್ರೀ. ಎನ್. ಪ್ರಸನ್ನಕುಮಾರ್, ಶ್ರೀ. ವಿಜಯಕುಮಾರ್, ಶ್ರೀ. ಆರ್.ಎಂ.ಕರ್ಜಗಿ, ಶ್ರೀ ಮನೀಶ್‍ಕುಮಾರ್, ಶ್ರೀ ವಿಶ್ರøತ್‍ಗೌಡ,  ಹಾಗೂ ಇಲಾಖೆಯ ವಸ್ತುಸಂಗ್ರಹಾಲಯ, ಉಪವಲಯ, ಗಾರ್ಡನ್‍ನ ಎಲ್ಲಾ ಸಿಬ್ಬಂಧಿವರ್ಗ ಭಾಗವಹಿಸಿದರು. ನಿರೂಪಣೆಯನ್ನು ಶ್ರೀ ಬಿರಾದರುರವರು ಮಾಡಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.