Saturday, June 29, 2024

ಪರಿಸರ ಕಾಳಜಿ ಯುವಕರ ಆಶಯವಾಗಲಿ: ವಿಜಯಪುರ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಕಲ್ಲನಗೌಡ ಪಾಟೀಲ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಚಡಚಣ:  ಶ್ರೀ ಸಂಗಮೇಶ್ವರ ಕಲಾ‌ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಚಡಚಣದ  ರಾಷ್ಟೀಯ ಸೇವಾ ಯೋಜನಾ ಘಟಕವು ಚಡಚಣ ತಾಲೂಕಿನ ಜಿಗಜೇವಣಿ ಗ್ರಾಮದಲ್ಲಿ  ಏಳು ದಿನಗಳ ವಿಶೇಷ ವಾರ್ಷಿಕ ಶಿಬಿರದ ಉದ್ಘಟನಾ ಸಮಾರಂಭ  ಹಮ್ಮಿಕೊಳ್ಳಲಾಯಿತು. 

ಎನ್ ಎಸ್ ಎಸ್ ಶಿಬಿರದ ಉದ್ಘಾಟನಾ ಸಮಾರಂಭವನ್ನು ಶ್ರೀ ಸಿದ್ದರಾಮೇಶ್ವರ ಪಟ್ಟದ ದೇವರುವರು (ಬೋರಚಿಂಚೋಳ್ಳಿ)  ದಿವ್ಯ ಸಾನಿಧ್ಯ ವಹಿಸಿ ಆಶಿರ್ವಚನ ನೀಡಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವಿಠ್ಠಲ ಬಿರಾದಾರ (ಗ್ರಾಂ ಪ ಅಧ್ಯಕ್ಷರು) ವಹಿಸಿಕೊಂಡಿದ್ದರು. ಉದ್ಘಾಟನೆಯನ್ನು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಗೌರವಾನ್ವಿತ ಕಾರ್ಯದರ್ಶಿಗಳಾದ ಶ್ರೀ ವಿ ಎಸ್ ಗಿಡವಿರ  ನೆರವೆರಿಸಿದರು. 

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ  ವಿಜಯಪುರ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಕಲ್ಲನಗೌಡ ಪಾಟೀಲ ಸ್ವಯಂ ಸೇವಕರಲ್ಲಿ ಪ್ರಾಮಾಣಿಕತೆ ಇರಬೇಕು. ದೇಶದ ಭದ್ರತೆ ಮತ್ತು ಅಭಿವೃದ್ದಿ ದೃಷ್ಟಿಕೊನದಲ್ಲಿರಿಸಿಕೊಂಡು ಸೇವೆಯನ್ನು ಇವತ್ತಿನ ಯುವಕರು ಮಾಡಬೇಕು. ಯಾವುದೇ ಸ್ವಚ್ಛತೆಯೇ ಈ ಶಿಬಿರದ ಮೂಲ ತತ್ವವಾಗಲಿ.‌ ಪರಿಸರ ಕಾಳಜಿ ಯುವಕರ ಆಶಯವಾಗಲಿ ಎಂದು ತಿಳಿಸಿದರು. 

ಮಹಾವಿದ್ಯಾಲಯದ ಪ್ರಾಚಾರ್ಯರಾದ  ಡಾ. ಎಸ್ ಬಿ ರಾಠೋಡ ಪ್ರಾಸ್ತಾವಿಕ ಮಾತನಾಡುತ್ತಾ ನಾಡಿನ ಭವಿಷ್ಯ ಯುವಕರ ಕೈಯಲ್ಲಿ ಇದೆ.‌ ಸಂಸ್ಕಾರ ಮತ್ತು ಸಭ್ಯತೆಗಳನ್ನು ಕಲಿಯುವುದರ ಮೂಲಕ ಸ್ವಯಂ ಸೇವಕರು ಸಾಧನೆಯನ್ನು ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಪ್ರೊ.ಎಂ ಕೆ ಬಿರಾದಾರ್,  ಪ್ರೊ.ಎ ಎಸ್ ಪಾಟೀಲ್, ಎಸ ಎಸ್ ಪಾಟೀಲ್ ,ಪ್ರೊ. ಬಸವರಾಜ ಯಳ್ಳೂರು, ಪ್ರೊ.ಎಸ್ ಎಸ್ ಅವಟಿ,  ಪ್ರೊ.ಪೂಜಾ ಬುರುಡ, ಪ್ರೊ.ಬಿ ಎಮ್ ಧೈವಾಡಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮದ ಹಿರಿಯರು ಮಹಾವಿದ್ಯಾಲಯದ ಸ್ವಯಂ ಸೇವಕರು ಉಪಸ್ಥಿತರಿದ್ದರು.  ಕಾರ್ಯಕ್ರಮ ಅಧಿಕಾರಿಗಳಾದ‌ ಮಹಾಂತೇಶ ಜನವಾಡ ಸ್ವಾಗತಿಸಿದರು ಡಾ.ಎಸ್ ಎಸ್ ದೇಸಾಯಿ ವಂದಿಸಿದರು. ಕು. ಅಕ್ಷತಾ ಉಮರಾಣಿ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಕೇಂದ್ರ ಗೃಹ ಸಚಿವ ಅಮಿತ್‌ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ನವದೆಹಲಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.


ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.


ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200  ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು.


ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera  ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3  ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಕೋರಲಾಯಿತು.

ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಜಾಕ್ವೆಲ್‌ಗಳ ನಿರ್ವಹಣೆಗೆ ಸಕಾಲಕ್ಕೆ ಹಣ ಒದಗಿಸಲು ಆಗ್ರಹ

ವಿಜಯಪುರ : ಲಾಲಬಹಾದ್ದೂರ ಜಲಾಶಯದ ಬಳೂತಿ ಜಾಕ್ವೆಲ್ ಸೇರಿದಂತೆ ಉಳಿದ ಜಾಕ್ವೆಲ್‌ಗಳ ನಿರ್ವಹಣೆಗೆ ಸರಕಾರ ಸಕಾಲಕ್ಕೆ ಹಣ ಬಿಡುಗಡೆ ಗೊಳಿಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಶನಿವಾರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಇವರ ಮುಖಾಂತರ ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ ಅವರಿಗೆ  ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಯಂತ್ರೋಪಕರಣ ಕಾರ್ಯನಿರ್ವಹಣೆ ರಿಪೇರಿ ಸೇರಿದಂತೆ ಇನ್ನೂಳಿದ ನಿರ್ವಹಣೆಗಾಗಿ ಸರಕಾರ ಪ್ರತಿವರ್ಷ ಹಣ ಒದಗಿಸಬೇಕು. ಆದರೆ ಈ ವರ್ಷ ಹಣ ಒದಗಿಸುವಲ್ಲಿ ವಿಳಂಬನೀತಿ ಅನುಸರಿಸುತ್ತದೆ. ಇದರಿಂದ ಯಂತ್ರೋಪಕರಣಗಳ ರಿಪೇರಿ ಹಾಗೂ ಇನ್ನೂಳಿದ ಕೆಲಸಗಳು ಕುಂಠಿತಗೊಳುತ್ತಿದೆ. ಒಂದು ವೇಳೆ ಸಕಾಲಕ್ಕೆ ಹಣ ಒದಗಿಸದಿದ್ದಲ್ಲಿ. ಯಂತ್ರೋಪಕರಣಗಳ ದುರಸ್ತಿ ಕಾರ್ಯ ಹಾಗೂ ಅದಕ್ಕೆ ಆಯಿಲಿಂಗ್ ಹಾಗೂ ಗ್ರಿಸ್ ಸೇರಿದಂತೆ ಉಳಿದ ರಿಪೇರಿಗಳು ಸಕಾಲಕ್ಕೆ ಮಾಡದಿದ್ದರೆ ಮೋಟರುಗಳು ಹಾಳಾಗುತ್ತವೆ. ಒಂದು ವೇಳೆ ಯಂತ್ರೋಪಕರಗಳು ಕೆಟ್ಟು ನಿಂತಲ್ಲಿ ಕಾಲುವೆಗಳಿಗೆ ನೀರು ಹರಿಸಲು ಕಷ್ಟವಾಗುತ್ತದೆ. ರೈತರಿಗೆ ಯಾವ ಸಂದರ್ಭದಲ್ಲಿ ನೀರು ಅಗತ್ಯವಿರುತ್ತದೆ ಎಂಬುದು ಹೇಳಲಾಗುವುದಿಲ್ಲ ಅಂತಹ ಸಂದರ್ಭದಲ್ಲಿ ಯಂತ್ರೋಪಕರಣಗಳು ಕೆಟ್ಟರೆ ರೈತರಿಗೆ ತೊಂದರೆಯಾಗುತ್ತದೆ. ಮತ್ತು ಹೊಸ ಮೋಟಾರಗಳ ಬೆಲೆ ಅಂದಾಜು ಒಂದುಕೋಟಿ ಹಣಕ್ಕಿಂತಲೂ ಮೇಲ್ಪಟ್ಟಿವೆ. ಒಂದೇ ಮೋಟಾರು ಕೆಟ್ಟರೂ ಕೋಟಿಗಿಂತಲೂ ಹೆಚ್ಚು ಹಣ ಹಾಳಾಗುತ್ತದೆ. ಈ ಮೊದಲು ಜಾಕ್ವೆಲ್‌ಗಳ ನಿರ್ಮಾಣ ಮಾಡಿದ ಮೆಗಾ ಕಂಪನಿಯವರ ನಿರ್ವಹಣಾ ಅವಧಿ ಮುಕ್ತಾಯಗೊಂಡಿದ್ದು, ಈಗ ಸರಕಾರವೇ ನಿರ್ವಾಹಣ ವೆಚ್ಚ ಭರಿಸಬೇಕಾಗಿದೆ. ಆದರಿಂದ ಪ್ರತಿ ವರ್ಷವೂ ಸಕಾಲಕ್ಕೆ ಅದಕ್ಕೆ ತಗುಲುವ ನಿರ್ವಹಣೆ ವೆಚ್ಚವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಮನವಿ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಈ ಸಂದರ್ಭದಲ್ಲಿ ಬ.ಬಾಗೇವಾಡಿ ಪ್ರ.ಕಾರ್ಯದರ್ಶಿ ಪ್ರಹ್ಲಾದ ನಾಗರಾಳ, ತಾ.ಉಪಾಧ್ಯಕ್ಷ ಹೊನ್ನಕೇರಪ್ಪ ತೆಲಗಿ, ಚನ್ನಬಸಪ್ಪ ಸಿಂದೂರ, ಶಿವಪ್ಪ ಸುಂಟ್ಯಾನ, ದಾವಲಸಾಬ ನಧಾಪ್, ರಾಜೇಸಾಬ ವಾಲೀಕಾರ, ಪ್ರಭು ದಸ್ತವಾಡ, ಸಿದ್ದಪ್ಪ ಕಲಬೀಳಗಿ, ರೇವಣಸಿದ್ದ ಕೊಂಡಗೂಳಿ, ರಮೇಶ ಕೆಂಪವಾಡ, ಶ್ರೀನಿವಾಸ ಭತಗುಣಕಿ, ಎಸ್.ಜಿ. ಸಂಗೋAದಿಮಠ, ಎನ್.ಕೆ. ಮನಗೊಂಡ, ಬಸವರಾಜ ಬಾಡಗಿ ಮತ್ತಿತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



ಜಿಲ್ಲಾ ಮಟ್ಟದ ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಸಭೆ ಕೃಷಿ-ಶಿಕ್ಷಣ-ವ್ಯವಹಾರ ಸಾಲಗಳಿಗೆ ಒತ್ತು ನೀಡಿ ಪ್ರಗತಿ ಸಾಧಿಸಲು ಸಿಇಓ ಸೂಚನೆ

ವಿಜಯಪುರ :  ಜಿಲ್ಲೆಯಲ್ಲಿ  ಪ್ರಸಕ್ತ ಸಾಲಿನಲ್ಲಿ ವಿವಿಧ ಬ್ಯಾಂಕುಗಳಿAದ ಒಟ್ಟು ೧೭೦೯೩ ಕೋಟಿ ರೂ. ಸಾಲ ಒದಗಿಸಿದ್ದು, ಕಳೆದ ವರ್ಷಕ್ಕಿಂತ ಶೇ.೩.೮೮ ಪ್ರಗತಿ ಸಾಧಿಸಲಾಗಿದೆ. ಕೃಷಿ, ಶಿಕ್ಷಣ, ವ್ಯವಹಾರ ಮನೆ ಸಾಲಗಳ ಮೇಲೆ ಒತ್ತು ನೀಡಿ ಇನ್ನಷ್ಟು ಹೆಚ್ಚಿನ  ಪ್ರಗತಿ ಸಾಧಿಸುವಂತೆ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚನೆ ನೀಡಿದರು. 

ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಅಗ್ರಣೀಯ ಬ್ಯಾಂಕ್ ವತಿಯಿಂದ ತ್ರೈಮಾಸಿಕ ಜಿಲ್ಲಾ ಸಲಹಾ ಸಮಿತಿ (ಡಿಎಲ್‌ಸಿ) ಸಭೆ ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ (ಡಿಎಲ್‌ಆರ್‌ಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು ರೂ.೧೭೦೯೩ ಕೋಟಿ ರೂ. ಸಾಲ ಒದಗಿಸಿದ್ದು, ರೂ.೧೮೬೭೬ ಕೋಟಿ ಠೇವಣಿ ಇದೆ. ಕಳೆದ ವರ್ಷಕ್ಕಿಂತ ೩.೮೮% ಸಾಲದಲ್ಲಿ ಪ್ರಗತಿ ಸಾಧಿಸಿದ್ದು ಠೇವಣಿಯಲ್ಲಿ ೧೨.೦೨% ಪ್ರಗತಿ ಸಾಧಿಸಲಾಗಿದೆ. ಜೊತೆಗೆ ಪ್ರಸ್ತುತ ೨೦೨೪-೨೫ ಸಾಲಿನಲ್ಲಿ ೪.೮೧% ಹೆಚ್ಚುವರಿ ಗುರಿ ಹೊಂದಿದ್ದು, ಎಲ್ಲ ಬ್ಯಾಂಕ್‌ಗಳು  ತಮಗೆ ಕೊಟ್ಟ ಗುರಿಯನ್ನು ಸಾಧಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ, ಶಿಕ್ಷಣ, ವ್ಯವಹಾರ ಮನೆ ಸಾಲಗಳ ಮೇಲೆ ಒತ್ತು ನೀಡಿ ಪ್ರಗತಿ ಸಾಧಿಸಬೇಕು.  ತೋಟಗಾರಿಕೆ ಇಲಾಖೆಗೆ ಜಿಲ್ಲೆಯ ಬೆಳೆ ವಿಮೆ ಬಗ್ಗೆ ಜಾಹೀರಾತು ನೀಡಲು ಎಲ್ಲಾ ಬೆಳೆ ವಿಮೆ ಪರಿಹಾರ ಅರ್ಜಿಗಳು ಮುಂದಿನ ಹದಿನೈದು ದಿನಗಳೊಳಗೆ ಪರಿಹರಿಸಬೇಕು ಮತ್ತು ಬ್ಯಾಂಕಿನವರಿಗೆ ಎಲ್ಲಾ ಸರಕಾರಿ ಸಾಲದ ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡಬೇಕೆಂದು ಸೂಚನೆ ನೀಡಿದರು.

ಜಿಲ್ಲಾ ಉಪ ಪೊಲೀಸ್ ಅಧೀಕ್ಷಕರಾದ ಶಂಕರ ಮಾರಿಹಾಳ ಅವರು, ಮಾತನಾಡಿ, ಬ್ಯಾಂಕ್‌ಗಳಲ್ಲಿ ಹಾಗೂ ಎ.ಟಿ.ಎಮ್‌ಗಳಲ್ಲಿ ಸೈಬರ್ ಅಪರಾಧಗಳ ಕಡಿವಾಣಕ್ಕೆ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಿಬೇಕು ಹಾಗೂ ಸೈಬರ್ ವಂಚನೆಯಾಗದAತೆ ತಡೆಗಟ್ಟಲು ಸಾರ್ವಜನಿಕರಲ್ಲಿ ಸೂಕ್ತ ತಿಳುವಳಿಕೆ-ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು. 

ಸಭೆಯಲ್ಲಿ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ನೇತಾಜಿ ಗೌಡರ್ ಜಿಲ್ಲೆಯ ತ್ರೈಮಾಸಿಕ ವರದಿ ಮಾರ್ಚ್ ೨೦೨೪ ಪೂರ್ಣ ವಿವರಣೆಯನ್ನು ಪ್ರಸ್ತುತ ಪಡಿಸಿದರು. 

ಈ ಸಂದರ್ಭದಲ್ಲಿ ಭಾರತೀಯ ರಿಜರ್ವ್ ಬ್ಯಾಂಕ್ ನ ಲೀಡ್ ಡಿಸ್ಟ್ರಿಕ್ಟ್ ಆಫೀಸರ್ ಅಲೋಕ್ ಸಿನ್ಹಾ, ನಬಾರ್ಡ್ ಜಿಲ್ಲಾ ಅಭಿವೃದ್ದಿ ವ್ಯವಸ್ಥಾಪಕ ವಿಕಾಸ್ ರಾಠೋಡ, ಕೆನರಾ ಬ್ಯಾಂಕ್ ಕ್ಷೇತ್ರೀಯ ಕಾರ್ಯಾಲಯದ ರೇಣುಕಾ ಹಾಗೂ ಜಿಲ್ಲೆಯ ಎಲ್ಲ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ವಿಜಯಪುರದಲ್ಲಿ ಕೆಫೆ ಇನ್ ಉದ್ಘಾಟಿಸಿದ ಕನ್ನಡ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ

ವಿಜಯಪುರ : ನಾನು ಜಾಸ್ತಿ ದುಡ್ಡು ಮಾಡಬೇಕಾಗಿದ್ರೆ ತೆಲುಗು ತಮಿಳು ಚಿತ್ರರಂಗಕ್ಕೆ ಹೋಗಬೇಕಾಗಿತ್ತು. ಆದ್ರೆ ಕನ್ನಡದ ಪ್ರೇಕ್ಷಕರು, ಅಭಿಮಾನಿಗಳು ಕೊಟ್ಟಿರೋ ಪ್ರೀತಿನೆ ಸಾಕು ಎಂದು ಕನ್ನಡದ ಚಿತ್ರಗಳಲ್ಲಿ ಹಾಸ್ಯ ಕಲಾವಿದನಾಗಿ ಪಾತ್ರ ಮಾಡುತ್ತಾ ಬಂದಿದ್ದೇನೆ, ಉತ್ತರ ರ‍್ನಾಟಕ ಭಾಗದ ಹಳ್ಳಿಗಳು ನನಗೆ ಚಿರಪರಿಚಿತ ಎಂದು ಕನ್ನಡದ ಖ್ಯಾತ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ಹೇಳಿದರು.

ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿ ಕೆಫೆ ಇನ್ ಉದ್ಘಾಟಿಸಿ ಅವರು ಮಾತನಾಡಿದರು, ಡಾ,ರಾಜ್ ಕುಮಾರ್, ವಿಷ್ಣುರ‍್ಧನ್ ಸೇರಿದಂತೆ ಹಲವು ನಟರೊಂದಿಗೆ ಪಾತ್ರ ಮಾಡಿರೋದು ಪ್ರೇಕ್ಷಕರು ಅಭಿಮಾನಿಗಳ ಆಶರ‍್ವಾದದಿಂದ,ನಾನು ಹುಟ್ಟಿದ್ದು ಬೆಂಗಳೂರು,ಈಗ ಸಿಂಗಾಪುರ ಆಗಿದೆ‌. ನಮ್ಮ ತಂದೆ ಟೆನ್ನಿಸ್ ಕೋಚ್ ಆಗಿದ್ದರು .ನಾನು ಟೆನ್ನಿಸ್ ಕೋಚ್ ಆಗಿದ್ದೆ, ಚಿತ್ರರಂಗಕ್ಕೆ ಬಂದ್ಮೇಲೆ ಟೆನ್ನಿಸ್ ಕೃಷ್ಣ ಅಂತ ಹೆಸರು ಇಟ್ಟುಕೊಂಡೆ, ಚಿತ್ರರಂಗದಲ್ಲಿ ಹೊನ್ನಾಳಿ ಕೃಷ್ಣ, ಬೆಕ್ಕಿನ ಕಣ್ಣು ಕೃಷ್ಣ ಇದ್ದಾರೆ.ಹೀಗಾಗಿ ಟೆನ್ನಿಸ್ ಕೃಷ್ಣ ಎಂದು ಹೆಸರು ಬದಲಾಯಿಸಿಕೊಂಡೆ, ನಾನು ಒಂದೇ ಒಂದು ಡ್ರಾಪ್ ಸಹಿತ ಮದ್ಯ ಸೇವನೆ ಮಾಡೋಲ್ಲ, ಆದ್ರು ಕುಡಕನ ಪಾತ್ರ ಅಭಿನಯಿಸಿದ್ದೇನೆ ಎಂದು ಕಿಚ್ಚ ಸುದೀಪ್ ಅಭಿನಯದ ವೀರಮದಕರಿ ಸಿನೇಮಾದ ಕುಡುಕನ ಸನ್ನಿವೇಶದ ಡೈಲಾಗ್ ಹೇಳಿದ್ರು. ವಿಜಯಪುರದಲ್ಲಿ ಕೆಫೆ ಇನ್ ಉದ್ಘಾಟಿಸಿದ್ದು ನನಗೆ ಸಂತಸ ತಂದಿದೆ ಎಂದರು.ಇದೇ ವೇಳೆ ತಮ್ಮ ಕೆಲವು ಅಭಿನಯದ ಚಿತ್ರಗಳ ಡೈಲಾಗ್ ಹೇಳಿ  ಪ್ರೇಕ್ಷಕರನ್ನು ರಂಜಿಸಿದ್ರು. ಯುವ ಮುಖಂಡ ರಾಮನಗೌಡ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ವಿಜಯಪುರ ನಗರ ಬೆಳೆಯುತ್ತಿದೆ, ಜೊತೆಗೆ ಹೊಟೇಲ್ ಉದ್ಯಮವೂ ಸಹ ಪೂರಕವಾಗಿ ಬೆಳೆಯುತ್ತಿದ್ದು, ಕೆಫೆ ಇನ್ ಸುತ್ತಲೂ ಕಾಲೇಜಿಗಳಿದ್ದು, ವ್ಯಾಪಾರಕ್ಕೆ ಪೂರಕವಾಗಿದೆ ಎಂದರು. ವೇದಿಕೆ ಮೇಲೆ ಕಲ್ಪನಾ ಚಿತ್ರದ ನರ‍್ಮಾಪಕ ಚಿದಂಬರಂ,  ಟೌನ್ ಪ್ಯಾಲೇಸ್ ಮಾಲೀಕ ಹನುಮಂತರಾಯಗೌಡ ಬಿರಾದಾರ, ಕೆಫೆ ಇನ್ ಮಾಲೀಕ ಉಮೇಶ್  ತೊಂಡಿಕಟ್ಟಿ , ಸಂತೋಷ್ ಗಣಿ, ರಾಜು ಬಿಜ್ಜರಗಿ, ಯಶ್ವಂತ್ ಗುಗ್ಗರಿ, ಅಭಿಲಾಷ್ ಹಳಕಟ್ಟಿ , ಮುನಾಫ್ ಇನಾಂದಾರ್, ಶಿವಾನಂದ ತೊಂಡಿಕಟ್ಟಿ , ಈರಣ್ಣ ತೊಂಡಿಕಟ್ಟಿ ಸೇರಿದಂತೆ ಹಲವರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸರಕಾರೀ ಶಾಲೆಗೇ ಅಭಿನಂದನಾ ಗ್ರಂಥ ಸಲ್ಲಿಸಿದ ಹಳೆಯ ವಿದ್ಯಾರ್ಥಿಗಳು


ಆಲಮಟ್ಟಿ: ಇಲ್ಲಿನ

ಸರಕಾರಿ  ಶಾಲೆಯ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲೆಯ ೬೦ನೆಯ ವರ್ಷಾಚರಣೆಯ ಸಂದರ್ಭದಲ್ಲಿ ಕಲಿತ ಶಾಲೆ ಅಕ್ಷರ ತೋರಣ ಎಂಬ ಅಭಿನಂದನ ಗ್ರಂಥವನ್ನು ಅರ್ಪಿಸಿರುವುದು ಇಡೀ ರಾಜ್ಯಕ್ಕೆ ಮಾದರಿ ಕೆಲಸವಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಣ್ಣಿಸಿದರು.

ಇಲ್ಲಿನ ಸಮುದಾಯ ಭವನದಲ್ಲಿ ಕರ್ನಾಟಕ ಗಾಂ ಮಂಜಪ್ಪ ಹರ್ಡೇಕರ ಪ್ರೇರಿತ ಎಂಪಿಎಸ್ ಮತ್ತು ಎಂಎಚ್‌ಎ.  ಶಾಲೆಗಳ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಹಮ್ಮಿಕೊಂಡ 'ಕಲಿತ ಶಾಲೆಗೆ ಅಕ್ಷರ ತೋರಣ' ಹಾಗೂ ಗುರು ಶಿಷ್ಯರ ಮಹಾಸಂಗಮ ಕಾರ್ಯಕ್ರಮದಲ್ಲಿ ಶುಕ್ರವಾರ  ಗ್ರಂಥ ಬಿಡುಗಡೆಗೊಳಿಸಿ ಅವರು ಮಾತನಾಡಿದ ಅವರು, ಹುಟ್ಟಿದ ಊರು, ಹೆತ್ತ ತಂದೆ ತಾಯಿ, ಕಲಿತ ಶಾಲೆ, ಕಷ್ಟದಲ್ಲಿ ಸಹಾಯ ಮಾಡಿದವರನ್ನು ಎಂದೂ ಮರೆಯಬಾರದು. ಉತ್ತಮ ತಾಯಿ ನೂರು ಜನ ಶಿಕ್ಷಕರಿಗೆ ಸಮ. ಗುರು ಶಿಷ್ಯರ ಸಂಬಂಧ ಉತ್ತಮವಾಗಿರಬೇಕು ಎಂದು ಹೇಳಿದರು.
ಸರಕಾರೀ ಶಾಲೆಗಳ ಅಗತ್ಯವನ್ನು ಒತ್ತಿ ಹೇಳುತ್ತ, ತಾವು  ಶಿಕ್ಷಣ ಸಚಿವನಾಗಿದ್ದಾಗ ೧೦೩೯ ಪ್ರೌಢ ಶಾಲೆ ಮತ್ತು ೫೦೦ ಪಿಯು ಕಾಲೇಜ್‌ಗಳು ಮಂಜೂರು ಮಾಡಿ ೫ ಸಾವಿರ ಕೋಟಿ ರೂ.ಗಳನ್ನು ಕಟ್ಟಡಕ್ಕಾಗಿ ದೊರಕಿಸಿಕೊಟ್ಟಿದ್ದನ್ನು ನೆನಪಿಸಿಕೊಂಡರಲ್ಲದೆ, ಆಲಮಟ್ಟಿಯ ಎಂಎಚ್‌ಎಂ. ಶಿಕ್ಷಣ ಸಂಸ್ಥೆಯವರು ಡಿಪ್ಲೋಮಾ ಹಾಗೂ ಐಟಿಐ ಕಾಲೇಜ್ ಆರಂಭಿಸಲು ಪ್ರಸ್ತಾವನೆ  ಸಲ್ಲಿಸಿದರೆ ಮಂಜೂರು ಮಾಡಿಸುವ ಜವಾಬ್ದಾರಿ ನನ್ನದಾಗಿದೆ. ಎಂದರು.
ಮುಂದುವರಿದು ಮಾತನಾಡಿದ ಅವರು  ಗುರು ಶಿಷ್ಯರ ನಡುವಿನ ಸಂಬಂಧ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದದ್ದು, ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು, ಗುರು ಶಿಷ್ಯರ ನಡುವಿನ ಸಂಬಂಧದ ಶ್ರೇಷ್ಠತೆಯನ್ನು ಇಂದಿನ ಯುವ ಜನಾಂಗ ಅರಿಯಬೇಕು ಎಂದು ಕರೆ ನೀಡಿದರು.
ಓದಿ ಉನ್ನತ ಮಟ್ಟದ ಹುದ್ದೆ ಅಲಂಕರಿಸಿದವರು ಇಂದು ತಮ್ಮ ಗುರುಗಳನ್ನು ನೆನೆದು ಓದಿದ ಶಾಲೆಗೆ ಅಕ್ಷರ ತೋರಣ ಕಟ್ಟಿದ ಹಳೆಯ ವಿದ್ಯಾರ್ಥಿಗಳ ಕಾರ್ಯ ಅಭಿನಂದನೀಯ ಹಾಗೂ ಅನುಕರಣೀಯ ವಾಗಿದ್ದು ಎಂದು ಅಭಿಪ್ರಾಯಪಟ್ಟರು.
ಕೃಷಿ ಪ್ರಧಾನವಾದ ಕುಟುಂಬದಲ್ಲಿ ಬೆಳೆದಿದ್ದ ತಾವು  ೮ ನೇ ತರಗತಿಯಲ್ಲಿರುವಾಗಲೇ ಅನಕ್ಷರಸ್ಥೆಯಾಗಿದ್ದ ತಮ್ಮ ಅಕ್ಕನಿಗೆ ಬಾಲ್ಯವಿವಾಹವಾಗಿದ್ದನ್ನು ನೆನಪಿಸಿಕೊಂಡ ಅವರು, " ಇದು ನನ್ನ ಮನಸ್ಸಿನ ಮೇಲೆ ಗಾ ಢವಾದ ಪರಿಣಾಮ ಬೀರಿತು. ಮುಂದೆ ನಾನು ಶಿಕ್ಷಣ ಸಚಿವನಾದ ಬಳಿಕ ಹೆಣ್ಣು ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡಿದೆ. ಅಕ್ಕನ ಅನಕ್ಷರತೆಯೇ ಹೆಣ್ಣು ಮಕ್ಕಳ ಕಲಿಕೆಗೆ ಆದ್ಯತೆ ನೀಡಲು ಮೂಲ ಕಾರಣವಾಯ್ತು"  ಎಂದು ವಿವರಿಸಿದರು.
ಮುಂಡರಗಿ ತೋಂಟದಾರ್ಯಮಠದ ನಿಜಗುಣಪ್ರಭು ತೋಂಟದಾರ್ಯ ಶ್ರೀಗಳು ಮಾತನಾಡಿ, ಬಸವಣ್ಣನವರು ಸಾವಿರ ವರ್ಷಗಳ ಹಿಂದೆ ಅಕ್ಷರದ ಕ್ರಾಂತಿ ಮಾಡಿದರು. ಹೀಗಾಗಿ ಕೆಳವರ್ಗದ ಜನರೂ ಕೂಡ ವಚನ ಬರೆಯುಂತಾಯಿತು. ಕನ್ನಡ ಭಾಷೆ ಉಳಿವಿಗೆ ಬಸವಣ್ಣನವರು ಅನ್ಯ ರಾಜ್ಯಗಳಿಂದ ವಚನಕಾರರಿಂದ ಕನ್ನಡದಲ್ಲಿಯೇ ವಚನಗಳನ್ನು ಬರೆಯಿಸಿದರು. ಪ್ರಜಾಪ್ರಭುತ್ವ ಚಿಂತನೆ ಆರಂಭವಾಗಿದ್ದೆ ಬಸವನಬಾಗೇವಾಡಿಯಲ್ಲಿ ಅದನ್ನು ಕಟ್ಟಿದವರು ಬಸವಣ್ಣನವರು. ಪ್ರಜಾಪ್ರಭುತ್ವ ಜಾರಿಗಾಗಿಯೇ ವಚನಕ್ರಾಂತಿ ಮಾಡಿದರು ಎಂದರಲ್ಲದೆ ವಿಜಯಪುರ ಜಿಲ್ಲೆ ಶರಣರ ಕಾಲದಲ್ಲಿಯೇ ಶಿಕ್ಷಣ ಕ್ರಾಂತಿ ಮಾಡಿದ ಜಿಲ್ಲೆಯಾಗಿದೆ ಎಂದು ವಿಶ್ಲೇಷಿಸಿದರು.
ಆಲಮಟ್ಟಿಯಲ್ಲಿ  ಹರ್ಡೇಕರ ಮಂಜಪ್ಪನವರ ಜೀವನವನ್ನು ಸಾರುವ ಥೀಮ್ ಪಾರ್ಕ್ ಅವಶ್ಯಕತೆಯನ್ನು ಒತ್ತಿ ಹೇಳಿದ ಶ್ರೀಗಳು, ಹರ್ಡೇಕರ ಅವರ ಆಶಯದಂತೆ ನಿಸರ್ಗ ಚಿಕಿತ್ಸಾ ಕೇಂದ್ರದ ಸ್ಥಾಪನೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದರು.
ವಿಜಯಪುರ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ ಮಾತನಾಡಿ, ಬಹುತೇಕ ಶಾಸಕರು ತಮ್ಮ ಅನುದಾನವನ್ನು ಕೇವಲ ದೇವಸ್ಥಾನ ಮತ್ತು ಸಮುದಾಯ ಭವನಗಳಿಗೆ ನೀಡುವ ಬದಲು ಶಿಕ್ಷಣ ಕ್ಷೇತ್ರಕ್ಕೆ ನೀಡಬೇಕು. ದೇಶ ಮುಂದುವರೆಯಲು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಕೊಡಬೇಕಾಗಿದೆ. ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ಮೀಸಲಿಡಬೇಕು ಎಂದು ಪ್ರತಿಪಾಸಿದರು.
ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣ  ಮಾತನಾಡಿ, ಇದೊಂದು ಹೃದಯ ಸ್ಪರ್ಶಿ ಹಾಗೂ ಮಾದರಿಯಾದ ಕಾರ್ಯಕ್ರಮ. ಕಲಿತ ಶಾಲೆಯನ್ನು ನೆನಪಿಸಿಕೊಂಡು ಗುರುನಮನ ಜತೆಗೆ ಶಾಲೆ ಕುರಿತ ಅಭಿನಂದನ ಗ್ರಂಥ ಬಿಡುಗಡೆ ಮಾಡಿರುವುದು ಸಂತೋಷ ತಂದಿದೆ. ಆಲಮಟ್ಟಿ ಶಿಕ್ಷಣ ಕ್ಷೇತ್ರವಾಗಿ ಹಾಗೂ ಪ್ರಮುಖ ಪ್ರವಾಸಿ ತಾಣವಾಗಿ ಇನ್ನಷ್ಟು ಬೆಳೆಯಲು, ಆಲಮಟ್ಟಿಯಲ್ಲಿ ಯಾತ್ರಿ ನಿವಾಸ ಹಾಗೂ ಕಲ್ಯಾಣ ಮಂಟಪದ  ಅವಶ್ಯಕತೆ ಇದೆ ಅಂದು ಅಭಿಪ್ರಾಯ ಪಟ್ಟರು.
ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೋಹನರಾಜ್ ಕೆ.ಪಿ.  ಮಾತನಾಡಿ ಸಾಮಾನ್ಯವಾಗಿ ಒಂದೊಂದು ಬ್ಯಾಚಿನವರು ಗುರುವಂದನ ಮಾಡುವುದನ್ನು ಕಾಣುತ್ತೇವೆ, ಆದರೆ ೬೦ ವರ್ಷಗಳ ಎಲ್ಲ ಬ್ಯಾಚಿನವರು ಸೇರಿ ಗುರುಶಿಷ್ಯರ ಮಹಾಸಂಗಮ ಬಹುಷಃ ಕರ್ನಾಟಕದಲ್ಲಿ ಎಲ್ಲಿಯೂ ನಡೆದಿಲ್ಲ ಎಂದು ಹೇಳಿದರು.
ಮಾಜಿ ಸಚಿವರಾದ ಎಸ್.ಕೆ.ಬೆಳ್ಳುಬ್ಬಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಬೇಲೂರಿನ ಗುರುಬಸವ ಮಠದ ಮಹಾಂತ ಸ್ವಾಮೀಜಿ, ಗದಗದ ತೋಂಟದಾರ್ಯ ವಿದ್ಯಾಪೀಠದ ಆಡಳಿತಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಸದಾಶಿವ ದಳವಾಯಿ ಸೇರಿದಂತೆ ಇತರರಿದ್ದರು.
ಇದೇ ಸಂದರ್ಭದಲ್ಲಿ ಎಂಪಿಎಸ್ ಮತ್ತು ಎಂಎಚ್‌ಎಂ  ಪ್ರೌಢ ಶಾಲೆಯ ಸುಮಾರು ೭೦ ನಿವೃತ್ತ ಹಾಗೂ ಹಾಲಿ  ಗುರುಗಳು-ಗುರುಮಾತೆಯರನ್ನು ಸನ್ಮಾನಿಸಲಾಯಿತು.  ಚಂದ್ರಶೇಖರ ನುಗ್ಲಿ, ಸಂಗಮೇಶ ಮೆಣಸಿನಕಾಯಿ, ವಿಠ್ಠಲ್ ಪಾಟೀಲ್, ಸಾವಿತ್ರಿ ಹಿರೆಗೊಂಡ, ಶೈಲಶ್ರೀ ಜೋಶಿ, ತನುಜಾ ಪೂಜಾರಿ, ಸಂಗಮೇಶ್ ಚನ್ನಿಗಾವಿ ಮುಂತಾದವರು ಉಪಸ್ಥಿತರಿದ್ದರು.
ಮಧ್ಯಾಹ್ನ 'ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಹೇಗೆ?' ಎಂಬ ವಿಷಯಾಗಿ ಸದ್ಯದ ವಿದ್ಯಾರ್ಥಿಗಳೊಂದಿಗೆ ಹಳೆಯ ಸಾಧಕ ವಿದ್ಯಾರ್ಥಿಗಳಾದ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಾಧ್ಯಾಪಕ ಡಾ.ಅರುಣ ಉಳ್ಳಾಗಡ್ಡಿ, ಹಿರಿಯ ಕೆ. ಎ. ಎಸ್. ಅಧಿಕಾರಿ  ಮಮತಾ ಹೊಸಗೌಡರ, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ರಮೇಶ ರೊಟ್ಟಿ, ಸಚಿನ ಚಲವಾದಿ, ಸಂಗಮೇಶ ದಿಡಗಿನಾಳ, ಪುಣೆಯ ಚಾರ್ಟರ್ಡ್ ಅಕೌಂಟಂಟ್ ವಾಣಿಶ್ರೀ ಅಮರಗೊಂಡ, ಸರಕಾರೀ ಅಭಿಯೋಜಕಿ ಗೀತಾ ಹೊಸಗಣಿಗೇರ, ಆರ್ಕಿಟೆಕ್ಟ್ ಸತೀಶ್ ನಡುವಿನಮನಿ, ಸಂವಾದ ನಡೆಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.