Monday, July 15, 2024
ಸಂಶೋಧಕರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಕೆಲಸ ಮಾಡಬೇಕು: ತುಳಸಿಮಾಲ
ವಿಜಯಪುರ: ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಿಗೆ ಸರ್ಕಾರವು ಲಕ್ಷಾಂತರ ಹಣವನ್ನು ವ್ಯಯ ಮಾಡುತ್ತಿದೆ. ಆದಕಾರಣ ಸಂಶೋಧಕರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಕೆಲಸ ಮಾಡಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಮಹಿಳಾ ಅಧ್ಯಯನ ಕೇಂದ್ರ ಹಾಗೂ ಪ. ಜಾ/ ಪ. ಪಂ ನಿರ್ದೇಶನಾಲಯದ ಸಹಯೋಗದೊಂದಿಗೆ ಆಯೋಜಿಸಿದ್ದ 11 ದಿನಗಳ ಸಂಶೋಧನಾ ‘ಸಂಶೋಧನಾ ವೈಧಾನಿಕತೆ’ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಪ್ರಸ್ತುತ ಸೈದ್ಧಾಂತಿಕ ಸಂಶೋಧನೆಗಳಿಗಿAತ ಪ್ರಯೋಗಾತ್ಮಕ ಸಂಶೋಧನೆಗಳು ಹೆಚ್ಚಾಗುತ್ತಿವೆ. ಸಮಾಜ ವಿಜ್ಞಾನ, ವಿಜ್ಞಾನದ ಸಂಶೋಧನೆಗಳು ಇಂದು ಪ್ರತ್ಯೇಕವಾಗಿಲ್ಲ. ಸಾಮಾಜಿಕ ಹೊಣೆಗಾರಿಕೆಯನ್ನು ಬಿಟ್ಟು ಸಂಶೋಧನೆಗಳು ಇಲ್ಲ ಎಂದರು.
ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಪ್ರತಿಯೊಬ್ಬ ಸಂಶೋಧಕರು ನೈತಿಕತೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕು. ಮಹಿಳಾ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ಮಹಿಳಾ ಸಮುದಾಯ ಸಬಲೀಕರಣಕ್ಕೆ ಕೊಡುಗೆ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಸಮಾಜಕಾರ್ಯ ಅಧ್ಯಯನ ವಿಭಾಗದ ಪ್ರೊ. ಸಂಗೀತಾ ಮಾನೆ ಮಾತನಾಡಿ, ಸಂಶೋಧನೆಗಳು ಸಮಾಜದ ಬದುಕನ್ನು, ಸ್ಥಿತಿಗತಿಯನ್ನು ಸುಧಾರಿಸುವ ಕೆಲಸ ಮಾಡಬೇಕು ಎಂದರು.
ಮಹಿಳಾ ವಿವಿಯ ಪತ್ರಿಕೋದ್ಯಮದ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ಮಹಿಳಾ ವಿಶ್ವವಿದ್ಯಾನಿಲಯದ ಸಂಶೋಧನೆಗಳು ಮಹಿಳಾ ಸಮುದಾಯದ ಸಬಲೀಕರಣಕ್ಕೆ ಕೊಡುಗೆ ನೀಡಿವೆ ಎಂದರು.
ಸಮಾರAಭದಲ್ಲಿ ವಿವಿಯ ಸಮಾಜವಿಜ್ಞಾನ ನಿಕಾಯದ ಡೀನ ಪ್ರೊ. ಶಾಂತಾದೇವಿ ಟಿ ಮಾತನಾಡಿ, ಸಂಶೋಧನೆಗಳಿಗೆ ಸಾಮಾಜಿಕ ಜವಾಬ್ದಾರಿ ಇದ್ದಾಗ ಮಾತ್ರ ಸಂಶೋಧನೆಗಳಿಗೆ ಮೌಲ್ಯ ಬರುತ್ತದೆ ಎಂದರು. ಮಹಿಳಾ ವಿವಿಯ ಪ್ರೊ.ರಾಜು ಬಾಗಲಕೋಟ ಮಾತನಾಡಿ, ಸಂಶೋಧನೆಗಳಿಗೆ ಆಕರಗಳಿಗಿಂತ ವ್ಯಕ್ತಿಗಳ ಜೊತೆಗೆ ಚರ್ಚೆ, ಸಂದರ್ಶನ ಮಾಡಿದಾಗ ಸಂಶೋಧನೆಯ ದೃಷ್ಟಿಕೋನ ಮತ್ತು ಸಾಮಾಜಿಕ ಜವಾಬ್ದಾರಿಯ ಅರಿವು ಮೂಡುತ್ತದೆ ಎಂದರು.
ಸಮಾರಂಭದಲ್ಲಿ ಪ್ರೊ. ವಿನಯ ಕುಲಕರ್ಣಿ, ಪ್ರೊ. ಜಿ. ಬಿ.ಸೋನಾರ, ಡಾ. ಕಲಾವತಿ ಕಾಂಬಳೆ ಮತ್ತು ವಿವಿಧ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಲಕ್ಷ್ಮಿದೇವಿ ವಾಯ್ ವಂದಿಸಿದರು, ಡಾ. ಭಾಗ್ಯಶ್ರೀ ದೊಡಮನಿ ನಿರೂಪಿಸಿದರು, ಡಾ. ಸರೋಜಾ ಸಂತಿ ಪರಿಚಯಿಸಿದರು. ಸಂಶೋಧನಾ ವಿದ್ಯಾರ್ಥಿಗಳಾದ ನಿಶಾ ಜೋಷಿ, ಸಿದ್ಧಕಿ ಖಾನಮ್, ಅನುಷಾ, ಅನಿತಾ ತಮ್ಮ ಅನಿಸಿಕೆಗಳನ್ನು ಹೇಳಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.