Thursday, July 25, 2024

26-07-2024 EE DIVASA KANNADA DAILY NEWS PAPER

ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ


ವಿಜಯಪುರ  : ಮಹಾರಾಷ್ಟçದ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯ ಪೂರ್ಣಗೊಳ್ಳುವ ಹಂತದಲ್ಲಿದ್ದು, ನದಿಪಾತ್ರಕ್ಕೆ ನೀರು ಹರಿಸುವುದರಿಂದ ಮುನ್ನೆಚ್ಚರಿಕೆಯಾಗಿ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಕೆಸ್ವಾನ ಸಭೆಯಲ್ಲಿ ಮಾತನಾಡಿ, ಜಲಾಶಯದಿಂದ ಹೆಚ್ಚುವರಿ ನೀರು ಹರಿಸುವುದರಿಂದ ಮುನ್ನೆಚ್ಚರಿಕೆಯಾಗಿ ಸಂಬAಧಿಸಿದ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿ ಅಪಾಯಕ್ಕೊಳಗಾಗುವ ಪ್ರದೇಶವನ್ನು ಗುರುತಿಸಿಕೊಂಡು ಯಾವುದೇ ಹಾನಿ ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು. ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ಜನ-ಜಾನುವಾರುಗಳಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ಸೇರಿದಂತೆ ಸೂಕ್ತ ಸ್ಥಳಗಳಲ್ಲಿ ಕಾಳಜಿ ಕೇಂದ್ರದ ವ್ಯವಸ್ಥೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

ಮುದ್ದೇಬಿಹಾಳ, ನಿಡಗುಂದಿ, ಕೋಲಾರ ತಾಲೂಕಿನ ಆಯಾ ತಹಶೀಲ್ದಾರ್‌ಗಳು ಕೆಬಿಜೆಎನ್‌ಎಲ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಂಟ್ರೋಲ್ ರೂಂ ಸ್ಥಾಪಿಸಿ, ದಿನದ 24 ಗಂಟೆ ನಿಗಾವಹಿಸಬೇಕು. ಕೃಷ್ಣಾ ನದಿತೀರದ ಜನ, ಜಾನುವಾರಗಳ ಸುರಕ್ಷತೆಗೆ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಟಾಸ್ಕ್ ಪೋರ್ಸ್ ಸಮಿತಿ ದಿನದ 24 ಗಂಟೆಯೂ ನಿರ್ವಹನೆಗೆ ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ಅವರು ಸೂಚನೆ ನೀಡಿದರು.

ಡೋಣಿ ನದಿ ಪಾತ್ರದ 23, ಭೀಮಾ ನದಿ ಪಾತ್ರದ 16, ಕೃಷ್ಣಾ ನದಿ ಪಾತ್ರದ 9 ಗ್ರಾಮ ಪಂಚಾಯತ್‌ಗಳು ನಿರಂತರ ನೀರಿನ ಮಟ್ಟದ ಮಾಹಿತಿಯನ್ನು ಸಂಗ್ರಹಿಸಬೇಕು. ಗ್ರಾಮ ಪಂಚಾಯತ್, ತಾಲೂಕು ಆಡಳಿತ, ಟಾಸ್ಕ್ ಪೋರ್ಸ ಸಭೆ ನಡೆಸಬೇಕು. ಮುನ್ನೆಚರಿಕೆ ಕ್ರಮವಾಗಿ ನದಿ ಪಾತ್ರಕ್ಕೆ ಜನ, ಜಾನುವಾರು ತೆರಳದಂತೆ ಡಂಗೂರ ಸಾರಿ ಜಾಗೃತಿ ಮೂಡಿಸಬೇಕು. ಜನ-ಜಾನುವಾರುಗಳ ಹಾನಿ ಸಂದರ್ಭದಲ್ಲಿ ನಿಯಮಾನುಸಾರ ಪರಿಹಾರಕ್ಕೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಡೆಂಗ್ಯೂ ನಿಯಂತ್ರಣ: ಡೆಂಗ್ಯೂ ನಿಯಂತ್ರಣಕ್ಕಾಗಿ ಮುಂಜಾಗೃತವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀರು ನಿಲ್ಲದಂತೆ, ಹಾಗೂ ಚರಂಡಿ, ರಾಜಕಾಲುವೆಗಳ ಸ್ವಚ್ಚತೆ, ಫಾಗಿಂಗ್, ಬ್ಲೀಚಿಂಗ್ ಪೌಡರ್ , ಸಿಂಪರಣೆ ಮಾಡಬೇಕು. ಕೆರೆ, ನೀರು ನಿಲ್ಲುವ ಪ್ರದೇಶದಲ್ಲಿ ಮೀನುಮರಿಗಳನ್ನು ಬಿಡುವ ಮೂಲಕ ಸೊಳ್ಳೆಯ ಮೊಟ್ಟೆಗಳ ನಾಶಕ್ಕೆ ಕ್ರಮ ವಹಿಸಬೇಕು. ವಾರಕ್ಕೆ ಒಂದು ಸಲ ಕಡ್ಡಾಯವಾಗಿ ನೀರಿನ ತೊಟ್ಟಿ, ಟ್ಯಾಂಕರ್, ಶುಚಿಗೊಳಿಸಬೇಕು. ಹಳ್ಳಿಯಲ್ಲಿ ಗ್ರಾಮ ಪಂಚಾಯತಿಯ ಅಧಿಕಾರಿಗಳು, ತಾಲೂಕಿನಲ್ಲಿ ಪುರಸಭೆ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು. 

ಜಿಲ್ಲೆಯ ಎಲ್ಲಾ ಸರಕಾರಿ ಕಟ್ಟಡಗಳು, ಆಸ್ಪತ್ರೆಗಳ ಸ್ವಚ್ಚತೆಗೆ ಆಧÀ್ಯತೆ ನೀಡಬೇಕು. ಕಸ ವಿಂಗಡನೆ ಮಾಡಿ ಸಮರ್ಪಕವಾಗಿ ವಿಲೇವಾರಿ ಮಾಡಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆಗಳು ಹರಡದಂತೆ ಕಡಿವಾಣ ಹಾಕಬೇಕು ಈ ಕುರಿತು ಸಾರ್ವಜನಿಕರಲ್ಲಿ ಅಗತ್ಯ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದ ಅವರು, ಸಾರ್ವಜನಿಕರೂ ಸಹ ತಮ್ಮ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಸಹಕರಿಸಬೇಕು ಎಂದು ಈ ಸಂದರ್ಭದಲ್ಲಿ ಅವರು ಕೋರಿದ್ದಾರೆ.

ಆಯಾ ತಹಶೀಲ್ದಾರ್ ತಮ್ಮ ವ್ಯಾಪ್ತಿಯಲ್ಲಿನ ಪುರಸಭೆ ಮುಖ್ಯಾಧಿಕಾರಿ, ತಾಲೂಕಾ ಆರೋಗ್ಯ ಅಧಿಕಾರಿ, ತಾಲೂಕಾ ಪಂಚಾಯತ್ ಇಒ ಕಡ್ಡಾಯವಾಗಿ ತಾಲೂಕಿನಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಬೇಕು. ಡೆಂಗ್ಯೂ ವಾರ್ ರೂಂ ನಿರ್ವಹಣೆ ವ್ಯವಸ್ಥಿತವಾಗಿ ನಡೆಸಬೇಕು. ದೂರು ಅಥವಾ ಕರೆ ಬಂದರೆ ತಕ್ಷಣ ಸ್ಪಂದಿಸಿ ಕ್ರಮ ವಹಿಸಬೇಕು. ಡೆಂಗ್ಯೂ ಜಾಗೃತಿ ಬಗ್ಗೆ ಕರಪತ್ರ, ಪೋಸ್ಟರ್, ತಿಳುವಳಿಕೆ, ಮೂಡಿಸಬೇಕು ಎಂದು ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಡೆಂಗ್ಯೂ ನಿಯಂತ್ರಣ ಸಲುವಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಿಡಿಒ ಹಾಗೂ ಸಿಬ್ಬಂದಿಗಳಿಗೆ ಗ್ರಾಮಗಳಲ್ಲಿ ಸ್ವಚ್ಚತೆ ಹಾಗೂ ಜಾಗೃತಿ ಮೂಡಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.

 ಬೆಳೆ ಪರಿಹಾರ-ಸರ್ವೇ: ಬೆಳೆಗಳ ಬಗ್ಗೆ ಸರಿಯಾಗಿ ಮಾಹಿತಿ ಸಂಗ್ರಹಿಸಿ, ರೈತರು ಬೆಳೆದ ಬೆಳೆೆ ಮಾಹಿತಿ ದಾಖಲಿಸಿ ಅವರಿಗೆ ಬೆಳೆ ವಿಮೆ ಹಾಗೂ ಸರ್ಕಾರದ ಸೌಲಭ್ಯಗಳು ತಪ್ಪದಂತೆ ಕ್ರಮವಹಿಸಬೇಕು. ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಖುದ್ದಾಗಿ ರೈತರ ಹೊಲಗಳಿಗೆ ತೆರಳಿ ನಿಖರವಾದ ಮಾಹಿತಿ ಒದಗಿಸಬೇಕು. ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಅಸಡ್ಡೆ ತೋರಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ರಾಜಶೇಖರ ವಿಲಿಯಮ್ಸ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ರಾಹುಲಕುಮಾರ ಬಾಗಲದೊಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲೀಕ್ ಮಾನವರ, ತಾಲೂಕಿನ ತಹಶೀಲ್ದಾರ್, ಕೃಷಿ ಇಲಾಖೆ ಅಧಿಕಾರಿಗಳು, ಜಿಪಂ, ತಾಪಂ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.