Sunday, July 28, 2024

ಬ್ಲಾಕ್ ಮೇಲ್ ಮಾಡೋರು ಕಾರ್ಯನಿರತ ಪತ್ರಕರ್ತರಲ್ಲ, ಅವ್ರು ಕಿಸೆ ಕತ್ತರಿಸುವ ಪತ್ರಕರ್ತರು : ಯತ್ನಾಳ



ವಿಜಯಪುರ: ಪತ್ರಿಕೆ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡುವವರು ಕಾರ್ಯನಿರತ ಪತ್ರಕರ್ತರಲ್ಲ, ಅವರು ಕಿಸೆ ಕತ್ತರಿಸುವ ಪತ್ರಕರ್ತರು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ವಿಜಯಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ಮುಂಭಾಗದಲ್ಲಿರುವ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ನಾನು ಸತ್ಯವನ್ನೇ ಮಾತನಾಡುತ್ತೇನೆ, ಯಾರೊಂದಿಗೂ ನಾನು ಅಡ್ಜೆಸ್ಟಮೆಂಟ್ ರಾಜಕಾರಣ ಮಾಡುವುದಿಲ್ಲ, ಒಳ್ಳೆಯದು ಮಾಡಿದರೆ ಅದನ್ನು ಹೊಗಳುತ್ತೇನೆ, ಕೆಟ್ಟದ್ದು ಮಾಡಿದರೆ ಅದನ್ನು ಟೀಕಿಸುತ್ತೇನೆ, ನಮ್ಮವರೇ ಇರಲಿ ಯಾರೇ ಇರಲಿ, ನಾನು ಎಂದಿಗೂ ಮುಖ್ಯಮಂತ್ರಿಗಳ ಕಚೇರಿಗೆ ಹೋಗಿ ನಿಲ್ಲುವುದಿಲ್ಲ ಎಂದರು. 

ಈ ಸಂದರ್ಭ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಮಾತನಾಡಿ, ಸರ್ಕಾರಗಳು ತಪ್ಪಿದಾಗ ಎಚ್ಚರಿಸುವ ಕೆಲಸ ಮಾಡುವ ಪತ್ರಕರ್ತರ ಜೀವನ ಮಾತ್ರ ಕಷ್ಟಕರವಾಗಿದೆ, ಹಗಲು ರಾತ್ರಿ ಎನ್ನದೇ ದುಡಿಯುವ ಪತ್ರಕರ್ತರು ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸುವಂತಾಗಿದೆ ಎಂದರು.

ಶಾಸಕಾAಗ, ಕಾರ್ಯಾಂಗ, ನ್ಯಾಯಾಂಗದAತೆ ಮಾಧ್ಯಮ ರಂಗ ನಾಲ್ಕನೇಯ ಅಂಗವಾಗಿ ತನ್ನ ಜವಾಬ್ದಾರಿ ನಿಭಾಯಿಸುತ್ತಿದೆ, ಪತ್ರಕರ್ತರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಪತ್ರಕರ್ತರಿಗಾಗಿ ಬಿಎಲ್‌ಡಿಇ ಸಂಸ್ಥೆಯ ವತಿಯಿಂದ ಆರೋಗ್ಯ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

ಬಸವಾದಿ ಶರಣರ ವಿಚಾರಗಳನ್ನು ಬೆಳಕಿಗೆ ತಂದ ಶ್ರೇಯಸ್ಸು ಡಾ.ಹಳಕಟ್ಟಿ ಅವರಿಗೆ ಸಲ್ಲುತ್ತದೆ, ಇಂತಹ ಶ್ರೇಷ್ಠ ವ್ಯಕ್ತಿ ಡಾ.ಹಳಕಟ್ಟಿ ಪತ್ರಕರ್ತರ ಬಳಗಕ್ಕೆ ಸೇರಿದವರು ಎಂಬುದು ಸಹ ಪತ್ರಕರ್ತರಿಗೆ ಹಮ್ಮೆಯ ಸಂಗತಿ ಎಂದರು. 

ಈ ಸಂದರ್ಭ ಮುಖ್ಯಮಂತ್ರಿಗಳ ಪ್ರಧಾನ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಮಾತನಾಡಿ, ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಹಾಗೂ ಪತ್ರಕರ್ತರಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಗೃಹ ಮಂಡಳಿಯಲ್ಲಿ ಶೇ.5 ರಷ್ಟು ನಿವೇಶನಗಳನ್ನು ಪತ್ರಕರ್ತರಿಗೆ ಮೀಸಲಿರಸಲಾಗುತ್ತದೆ, ಈ ಸೌಲಭ್ಯವನ್ನು ಈ ಭಾಗದ ಪತ್ರಕರ್ತರು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ವ್ಯಕ್ತಿ ಕೇಂದ್ರಿತ ಸುದ್ದಿಗಳೇ ಇಂದು ಮಾಧ್ಯಮಗಳಲ್ಲಿ ರಾರಾಜಿಸುತ್ತಿವೆ, ಶ್ರೀಮಂತ ಕುಟುಂಬಗಳ ಮದುವೆಗಳು ಗಂಟೆಗಟ್ಟಲೇ ಬಿತ್ತರವಾಗುತ್ತಿವೆ, ಈ ಎಲ್ಲದರ ಮಧ್ಯೆ ಮಾಧ್ಯಮಗಳ ಮೇಲೆ ವಿಶ್ವಾಸಾರ್ಹತೆಯೂ ಕಡಿಮೆಯಾಗುತ್ತಾ ಸಾಗಿದೆ ಎಂದರು. 

ರೈತರ, ಜನಸಾಮಾನ್ಯರ ಸಮಸ್ಯೆಗಳು ಮಾಧ್ಯಮಗಳಲ್ಲಿ ಬೆಳಕು ಚೆಲ್ಲುವ ಕೆಲಸ ನಡೆಯುತ್ತಿಲ್ಲ, ಒಂದು ರೀತಿ ಮಾಧ್ಯಮಕ್ಕೂ ಕಾರ್ಪೋರೇಟ್ ಸಂಸ್ಕೃತಿ ಕಾಲಿಟ್ಟಿದೆ, ವ್ಯಕ್ತಿ ಕೇಂದ್ರಿತ ಸುದ್ದಿಗಳು, ಬ್ರೇಕಿಂಗ್ ನ್ಯೂಸ್ ಅಬ್ಬರದಲ್ಲಿ ವಿಶ್ವಾಸಾರ್ಹತೆಯ ಕೊರತೆಯಾಗುತ್ತಿದೆ, ಹೀಗಾಗಿ ವಿಶ್ವಾಸಾರ್ಹತೆಯನ್ನು ಪುನರ್ ಸ್ಥಾಪಿಸಿಕೊಳ್ಳುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇರಿಸಬೇಕಿದೆ ಎಂದರು. 

ಅಭಿವ್ಯಕ್ತಿಯ ಸ್ವಾತಂತ್ರö್ಯವೇ ಪತ್ರಕರ್ತರ ಶಕ್ತಿ, ಆದರೆ ಈ ಸ್ವಾತಂತ್ರö್ಯ ದುರಪಯೋಗವಾದರೆ ದೊಡ್ಡ ದುರಂತವೇ ನಡೆದು ಹೋಗುತ್ತದೆ, ಪತ್ರಕರ್ತರು ಒಂದು ರೀತಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ರೀತಿ ಇರಬೇಕು, ಯತ್ನಾಳರು ತಾವು ಪ್ರತಿನಿಧಿಸುವ ಪಕ್ಷದವರು ತಪ್ಪು ಮಾಡಿದರೂ ಎತ್ತಿ ತೋರಿಸುತ್ತಾರೆ, ಸರ್ಕಾರ ತಪ್ಪು ಮಾಡಿದರೂ ಅದನ್ನು ಎಚ್ಚರಿಸುತ್ತಾರೆ, ಆ ರೀತಿ ಪತ್ರಕರ್ತರು ತಪ್ಪುಗಳನ್ನು ಎತ್ತಿ ತೋರಿಸಬೇಕು ಎಂದರು. 

ಈ ಸಂದರ್ಭ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮಾತನಾಡಿ, ಬ್ರೇಕಿಂಗ್ ಅಬ್ಬರದಲ್ಲಿ ಪತ್ರಕರ್ತರ ವಿಶ್ವಾಸಾರ್ಹತೆಯ ಪ್ರಶ್ನೆ ಮಾಡುವ ಪರಿಸ್ಥಿತಿ ಒಂದೆಡೆ ಸೃಜನೆಯಾದರೆ, ನಾನು ಪತ್ರಕರ್ತ, ನಾನು ಪತ್ರಕರ್ತ ಎಂಬ ಹೆಸರು ಹೇಳುವವರ ಸಂಖ್ಯೆ ಅಧಿಕವಾಗುತ್ತಿದೆ, ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕುವುದು ಅತ್ಯಂತ ಅವಶ್ಯವಾಗಿದೆ.

ಪತ್ರಕರ್ತರು ಎಂದು ಹೇಳಿ ಬ್ಲಾಕ್‌ಮೇಲ್ ಮಾಡುವವರ ಸಂಖ್ಯೆಯೂ ಇದೆ, ಈ ರೀತಿ ವೃತ್ತಿಗೆ ದ್ರೋಹ ಎಸಗುವ ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕುವ ಕೆಲಸ ನಡೆಯಬೇಕಿದೆ, ಎಂದೋ ಒಂದು ದಿನ ಪತ್ರಿಕೆ ಹೊರತಂದು ಪತ್ರಕರ್ತರ ಎಂದು ಹೇಳಿಕೊಳ್ಳುವವರು ಇದ್ದಾರೆ ಎಂದರು.

ಶ್ರೇಷ್ಠ ಸಾಹಿತಿ ಡಾ.ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿದ ಕಾನಿಪ ಇಂದು ಹೆಮ್ಮರವಾಗಿ ಬೆಳೆದು ಕೇರಳ, ಮಹಾರಾಷ್ಟç ಮೊದಲಾದ ರಾಜ್ಯಗಳಲ್ಲಿ ವ್ಯಾಪಿಸಿಕೊಂಡು ವಿಸ್ತಾರವಾಗಿ ಬೆಳೆಯುತ್ತಾ ಸಾಗಿದೆ ಎಂದರು.

ಖಾದ್ರಿ ಶಾಮಣ್ಣ, ಎಸ್.ವಿ. ಜಯಶೀಲ್‌ರಾವ್ ಸೇರಿದಂತೆ ಅನೇಕ ಮಹಾನುಭಾವರು ಈ ಸಂಘದ ಸಾರಥ್ಯ ವಹಿಸಿ ಸಂಘವನ್ನು ಮುನ್ನಡೆಸಿದ ಪರಿಣಾಮ ಸಂಘ ಎತ್ತರಕ್ಕೆ ಬೆಳೆದಿದೆ, ಸುದೀರ್ಘ ಇತಿಹಾಸವುಳ್ಳ ಬೃಹತ್ ಸಂಘಟನೆಯಾಗಿ ತನ್ನ ಜವಾಬ್ದಾರಿಯನ್ನು ಕಾನಿಪ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದರು. 

ಸದನದಲ್ಲಿಯೂ ಪತ್ರಕರ್ತರ ಹಿತರಕ್ಷಣೆಯ ಬಗ್ಗೆ ಚರ್ಚೆಯಾಗುತ್ತಿದೆ. ಪತ್ರಕರ್ತರ ಹಿತರಕ್ಷಣೆಗೆ ಪೂರಕವಾದ ಸೌಲಭ್ಯ ಕಲ್ಪಿಸುವಂತೆ ಸರ್ಕಾರ, ಸಂಬAಧಿಸಿದ ಇಲಾಖೆಗಳಿಗೆ ನಿರಂತರವಾಗಿ ಮನವಿ, ಮನವರಿಕೆ ಮಾಡಿಕೊಡುವ ಕೆಲಸವನ್ನು ಸಂಘ ಮುಂಚೂಣಿಯಲ್ಲಿ ನಿಂತು ಮಾಡುತ್ತಿದೆ ಎಂದರು.

ಮಾಧ್ಯಮಗಳಿಗೆ ಅದಮ್ಯ ಶಕ್ತಿ ಇದೆ, ಮಾಧ್ಯಮಕ್ಕೆ ಒಂದು ದೊಡ್ಡ ಜವಾಬ್ದಾರಿ ಇದೆ, ಒಂದು ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಸಹ ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿಚಾರಗಳನ್ನು ಮಾಧ್ಯಮಗಳ ಮುಂದೆ ವ್ಯಕ್ತಪಡಿಸಿದ್ದರು ಎಂಬುದನ್ನು ಮರೆಯುವಂತಿಲ್ಲ ಎಂದರು.

ಈ ಸಂದರ್ಭ ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಜಿಲ್ಲಾಧಿಕಾರಿ ಟಿ. ಭೂಬಾಲನ್, ವಿಡಿಎ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಕಾನಿಪ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಕಾನಿಪ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವನೆ, ಚಾಣಕ್ಯ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಎನ್.ಎಂ. ಬಿರಾದಾರ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಕಾನಿಪ ರಾಜ್ಯ ಪದಾಧಿಕಾರಿ ದೇವರಾಜ್, ಡಾ.ಎಂ.ಎಸ್. ಮದಭಾವಿ ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.





29-07-2024 EE DIVASA KANNADA DAILY NEWS PAPER

ಈ ಬೇರುಗಳನ್ನು ಗಟ್ಟಿಗೊಳಿಸುವ ಜವಾಬ್ದಾರಿ ಜಿಲ್ಲೆಯ ಪತ್ರಕರ್ತರ ಮೇಲಿದೆ: ಕೆವಿಪಿ



ಬಾಗಲಕೋಟೆ: ಗಾಂಧಿವಾದ ಮತ್ತು ಸಮಾಜವಾದಿ ಆಶಯಗಳು ಆಳವಾಗಿ ಬೇರೂರಿರುವ ನೆಲ ಬಾಗಲಕೋಟೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. 

ಈ ಬೇರುಗಳನ್ನು ಗಟ್ಟಿಗೊಳಿಸುವ ಜವಾಬ್ದಾರಿ ಜಿಲ್ಲೆಯ ಪತ್ರಕರ್ತರ ಮೇಲಿದೆ.‌ ಪ್ರಜಾಪ್ರಭುತ್ವ ವಚನ ಚಳವಳಿಯ ಅಂತರಾಳ. ಬಾಗಲಕೋಟೆ ಸೂಫಿ-ಶರಣರ-ವಚನ ಚಳವಳಿಯ ನಾಡು. ಪ್ರಜಾಪ್ರಭುತ್ವದ ಸ್ಥಾಪನೆ ಮತ್ತು ರಕ್ಷಣೆ ವಚನ ಚಳವಳಿಯ ಆಶಯವೂ ಆಗಿದೆ. ಇದು ಪತ್ರಿಕಾ ವೃತ್ತಿಯ ಹೊಣೆಗಾರಿಕೆಯೂ ಆಗಿದೆ ಎಂದರು. 

ನಾನು ಮುಖ್ಯಮಂತ್ರಿಗಳ ಜೊತೆಗಿದ್ದ ಈ ಹತ್ತು ವರ್ಷಗಳಲ್ಲಿ ನಾನು ಗಮನಿಸಿರುವುದು ಏನೆಂದರೆ, ಮುಖ್ಯಮಂತ್ರಿಗಳಿಗೆ ಭಾಗಲಕೋಟೆ ಜಿಲ್ಲೆಗೆ ಹೋಗೋದು ಅಂದರೆ ತಮ್ಮ ತವರು ಜಿಲ್ಲೆ ಮೈಸೂರಿಗೆ ಹೋದಷ್ಟೇ ಸಂಭ್ರಮ ಪಡುತ್ತಾರೆ.  ವಿಧಾನಸೌಧದಲ್ಲಿ ಬಾದಾಮಿಯವರು ಕಂಡರೆ ಕಾರು ನಿಲ್ಲಿಸಿ ಹತ್ತಿರಕ್ಕೆ ಕರೆದು ಆತ್ಮೀಯವಾಗಿ ಮಾತನಾಡುತ್ತಾರೆ ಎಂದು ತಮ್ಮ ಅನುಭವ ಹಂಚಿಕೊಂಡರು. 

ಪತ್ರಕರ್ತರು ತಮ್ಮ ಹಾಗೂ ಕುಟುಂಬದ ಆರೋಗ್ಯದ ಕಡೆಗೂ ಗಮನ ಹರಿಸಿ ಎಂದು ಕಿವಿ ಮಾತು ಹೇಳಿದ ಪ್ರಭಾಕರ್ ಅವರು, ಬಡ ಮತ್ತು ನಿಜವಾದ ವೃತ್ತಿಪರ ಪತ್ರಕರ್ತ ಕುಟುಂಬಗಳ ಯೋಗಕ್ಷೇಮಕ್ಕಾಗಿ ಒಂದು ಉತ್ತಮವಾದ ಯೋಜನೆ ರೂಪಿಸುವ ಅಗತ್ಯವಿದೆ. ಆ ದಿಕ್ಕಿನಲ್ಲಿ ಪ್ರಯತ್ನಗಳು ಸಾಗಿವೆ ಎಂದರು. 

ಮುಂದಿನ 15-20 ದಿನಗಳಲ್ಲಿ ಕಾರ್ಯನಿರತ ಗ್ರಾಮೀಣ ಪತ್ರಕರ್ತರ ಕೈಗೆ ಉಚಿತ ಬಸ್ ಪಾಸ್ ಸಿಗುವ ಸಿದ್ಧತೆಗಳು ಮುಗಿದಿವೆ. ಕಾರ್ಯ ಮರೆತ ಪತ್ರಕರ್ತರು ಮತ್ತು ವೃತ್ತಿ ತೊರೆದ ಪತ್ರಕರ್ತರು ಸರ್ಕಾರದ ಈ ಯೋಜನೆ ದುರುಪಯೋಗ ಆಗದಂತೆ ಸಹಕರಿಸಿ ಎಂದು ಮನವಿ ಮಾಡಿದರು. 

ಸರ್ಕಾರಿ ನಿವೇಶನ ಬಗ್ಗೆ ಸಚಿವರ ಜೊತೆ ಚರ್ಚಿಸಿದ ಕೆವಿಪಿ 

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಅವರ ಜೊತೆ ಚರ್ಚಿಸಿದ ಪ್ರಭಾಕರ್ ಅವರು ಜಿಲ್ಲೆಯ ಪತ್ರಕರ್ತರಿಗೆ ನಿವೇಶನ ಕೊಡಿಸುವ ಬಗ್ಗೆ ವಿನಂತಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ತಿಮ್ಮಾಪುರ್ , ಜಿಲ್ಲಾಧಿಕಾರಿ ಜಾನಕಿ, ಸಿಇಓ ಕುರೇನ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.‌

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕಾರ್ಪೋರೇಟ್ ಗಳ ಶ್ರೀಮಂತಿಕೆಯ ವಿಜ್ರಂಭಣೆಯೇ ಪತ್ರಿಕೋದ್ಯಮಕ್ಕೆ ಆಧ್ಯತೆ ಆಗುತ್ತಿರುವುದು ನಾಚಿಕೆಗೇಡು: ಕೆವಿಪಿ



ವಿಜಯಪುರ : ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ ಆಗಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. 

ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ವಿಜಯಪುರ ಬಹು ಸಂಸ್ಕೃತಿ ಮತ್ತು ಬಹು ಭಾಷೆಗಳ, ಹಲವು ಸಂಸ್ಕಾರಗಳನ್ನು ಏಕ ಕಾಲಕ್ಕೆ ಆಚರಿಸುವ ಜಿಲ್ಲೆ. ಈ ಬಹುತ್ವವೇ ನಮ್ಮ ನಾಡಿನ ಹೆಮ್ಮೆ. ಈ ಬಹುತ್ವವನ್ನು ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು. 

ಈ ವೇದಿಕೆಯ ಮೇಲೆ, ಈ ವೇದಿಕೆಯ ಮುಂಭಾಗದಲ್ಲಿ ಹಲವು ಸಂಸ್ಕೃತಿ ಮತ್ತು ಹಲವು ಭಾಷಿಕರು ನೆರೆದಿದ್ದೇವೆ. ಇದು ಈ ಜಿಲ್ಲೆಯ ಬಹುತ್ವದ ಸಂಕೇತ ಕೂಡ ಹೌದು. ಇಲ್ಲಿ, ನನ್ನ ಬಲಗಡೆ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಭಾವ ಚಿತ್ರಗಳನ್ನು ಅಳವಡಿದ್ದಾರೆ.  ಬುದ್ದನಿಂದ ಹಿಡಿದು ಅಂಬೇಡ್ಕರ್ ಅವರ ವರೆಗೂ ಏನೇನು ಹೇಳಿದ್ದಾರೋ, ಯಾವುದಕ್ಕಾಗಿ ಶ್ರಮಿಸಿದ್ದಾರೋ ಅದನ್ನು ಕಾಪಾಡಿಕೊಳ್ಳುವುದೇ ಪತ್ರಕರ್ತರ ಜವಾಬ್ದಾರಿ ಮತ್ತು ಪತ್ರಿಕೋದ್ಯಮದ ಹೊಣೆಗಾರಿಕೆ ಆಗಿದೆ. 

ನಮ್ಮ ಸಂವಿಧಾನದಲ್ಲಿ ಪತ್ರಕರ್ತರಿಗೆ ಪ್ರತ್ಯೇಕ ಹಕ್ಕು, ಅಧಿಕಾರಗಳನ್ನೇನೂ ನೀಡಿಲ್ಲ. ಸಂವಿಧಾನ ನೀಡಿರುವ ಅಭಿವ್ಯಕ್ತಿ‌ ಸ್ವಾತಂತ್ರ್ಯವೇ  ಪತ್ರಿಕಾ ಸ್ವಾತಂತ್ರ್ಯವೂ ಆಗಿದೆ. ಈ ಅಭಿವ್ಯಕ್ತ ಸ್ವಾತಂತ್ರ್ಯದ ದುರುಪಯೋಗ ಆದಾಗ ಎಂತೆಂಥಾ ಅನಾಹುತಗಳು ಆಗುತ್ತವೆ ಎನ್ನುವುದನ್ನು ಈಗಾಗಲೇ ಈ ಸಮಾಜ ಕಂಡಿದೆ ಎಂದು ಉದಾಹರಣೆಗಳ ಸಮೇತ ವಿವರಿಸಿದರು. 

ಸಂವಿಧಾನದ ರಕ್ಷಣೆಯಿಂದ ಮಾತ್ರ ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ. ಜನರ ನಿರೀಕ್ಷೆ ಮತ್ತು ಸಮಸ್ಯೆಗಳನ್ನು ಅರಿಯಲು ಸರ್ಕಾರಕ್ಕಾಗಲಿ, ವಿರೋಧ ಪಕ್ಷಕ್ಕಾಗಲಿ ಇರುವ ಬಹುಮುಖ್ಯ ಸಾಧನ ಮಾಧ್ಯಮ. ಮೊದಲೆಲ್ಲಾ ಜನರ ನಿರೀಕ್ಷೆಗಳನ್ಮು ಮಾಧ್ಯಮಗಳು ಸರ್ಕಾರದ ಗಮನಕ್ಕೆ ತರುತ್ತಿದ್ದವು. ಈಗ ಪರಿಸ್ಥಿತಿ ಬದಲಾಗಿದೆ. ಕಾರ್ಪೋರೇಟ್ ಶ್ರೀಮಂತರ ವೈಯುಕ್ತಿಕ ಹಿತಾಸಕ್ತಿಗಳೇ ಜನರ ಸಮಸ್ಯೆಗಳು ಎನ್ನುವಂತೆ ಬಿಂಬಿಸಲಾಗುತ್ತಿದೆ. 

ಕಾರ್ಪೋರೇಟ್ ಸಂಸ್ಥೆಗಳು ಮಾಧ್ಯಮ ಲೋಕವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡ ಬಳಿಕ ಮನರಂಜನೆ ಮತ್ತು ಸುದ್ದಿಗಳ ಆಧ್ಯತೆ ಎರಡೂ ಬದಲಾಗಿವೆ ಎಂದರು. 


ಕಾರ್ಪೋರೇಟ್ ಗಳ ಶ್ರೀಮಂತಿಕೆಯ ವಿಜ್ರಂಭಣೆ ಮತ್ತು ಸೆಲೆಬ್ರಿಟಿಗಳ ಜೀವನ ವಿಕೃತಿಗಳ ವಿಜ್ರಂಭಣೆಯೇ ಪತ್ರಿಕೋದ್ಯಮಕ್ಕೆ ಆಧ್ಯತೆ ಆಗುತ್ತಿರುವುದು  ನಾಚಿಕೆಗೇಡು ಅಲ್ಲವೇ ಎಂದು ಪ್ರಶ್ನಿಸಿದರು. 

ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ಫ.ಗು.ಹಳಕಟ್ಟಿಯವರ ಕುರಿತು ವಿಶೇಷ ಉಪನ್ಯಾಸ ನೀಡಲಾಯಿತು. 

ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾ ಮತ್ತು ತಾಲ್ಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.