Saturday, August 17, 2024

18-08-2024 EE DIVASA KANNADA DAILY NEWS PAPER

ಕ್ರೀಡೆಯಿಂದ ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕವಾಗಿ ವಿಶಾಲಗೊಳಿಸುತ್ತದೆ : ಎಲ್.ಆರ್.ಹಳ್ಳದಮನಿ

ವಿಜಯಪುರ : ವಿಜಯಪುರ ನಗರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಜಯಪುರ ಹಾಗೂ ಅಲ್ ಹಸ್ನಾತ ಪದವಿ ಪೂರ್ವ ಕಾಲೇಜು ವಿಜಯಪುರ ಸಂಯುಕ್ತ ಆಶ್ರಯದಲ್ಲಿ ನಡೆದ 2024-25 ನೇ ಸಾಲಿನ ವಿಜಯಪುರ ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಎಲ್.ಆರ್. ಹಳ್ಳದಮನಿ ಪ್ರಾಚಾರ್ಯರು ಸರ್ಕಾರಿ ಪದವಿ ಪೂರ್ವ ಕಾಲೇಜು ಕನ್ನೂರವರು ಕ್ರೀಡೆ ಮಕ್ಕಳ ಮನಸ್ಸು ಮುದ ನೀಡುತ್ತದೆ. ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕವಾಗಿ ವಿಶಾಲಗೊಳಿಸುತ್ತದೆ ಎಂದು ಹೇಳಿದರು.

ಮಕ್ಕಳ ಮನಸ್ಸು ಕಲಿಕೆಯತ್ತ ಸಾಗಿಸಲು ದೈಹಿಕ ಶಿಕ್ಷಣದ ಅವರ್ಶಯಕತೆ ಇದೆ. ಮಕ್ಕಳು ದೈನಂದಿನ ಕೆಲಸ ಕಾರ್ಯಗಳ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಅಲ್ ಹಸ್ನಾತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎ.ಎ. ಬಿಜಾಪುರ ಮಾತನಾಡಿದರು.

ಅಲ್ ಹಸ್ನಾತ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಂ.ಡಿ. ರೂಗಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಎ.ಎ.ಶಟಗಾರ, ಉಪನ್ಯಾಸಕರಾದ ಬಿ.ಎಸ್.ಗೌರಿ, ಕ್ರೀಡಾ ಸಂಯೋಜಕರಾದ ಎಸ್.ಆರ್.ಮುತ್ತಗಿ, ಗಣೇಶ ಗುನ್ನಾಪೂರ, ಪ್ರೌಢಶಾಲೆಯ ಮುಖ್ಯಗುರುಗಳಾದ ಎಸ್.ಎಸ್.ಹರಿಯಾಲ, ಹಾಗೂ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಎಂ.ಬಿ.ಅವಟಿ, ಕ್ರೀಡಾ ಸಂಘಟನಾ ಕಾರ್ಯದರ್ಶಿಗಳಾದ ಆಬೀದ ಬಾಗವಾನ, ದೈಹಿಕ ಶಿಕ್ಷಕರಾದ ಡಾ. ಮೊಹ್ಮದ ಸಲೀಂ ಮಕಾಂದಾರ, ನಿವೃತ್ತ ಮುಖ್ಯಗುರುಗಳಾದ ಎ.ಜೆ.ಜಮಾದಾರ, ನಿವೃತ್ತ ಶಿಕ್ಷಕರಾದ ಎ.ಎಚ್.ಬಾಗವಾನ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಡಾ. ಎಸ್.ಸಿ.ಮುಲ್ಲಾ ನಿರೂಪಿಸಿದರು. ಫೀರದೋಸ ಮಣಿಯಾರ ಸ್ವಾಗತಿಸಿದರು. ರಿಜ್ವಾನಾ ಚೌಧರಿ ವಂದಿಸಿದರು.

ಇದೇ ಸಂದರ್ಭದಲ್ಲಿ ವಿಜಯಪುರ ತಾಲೂಕಾ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಎಸ್.ಎಸ್.ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮಸ್ಥಾನ ಹಾಗೂ ಕೋನಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

ಇದೇ ಸಂದರ್ಭದಲ್ಲಿ ವಿಜಯಪುರ ತಾಲೂಕಾ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಬಾಲಕಿಯರ ವಿಭಾಗದದಲ್ಲಿ ಎಸ್.ಎಸ್.ಪದವಿಪೂರ್ವ ಮಹಾವಿದ್ಯಾಲಯ ವಿದ್ಯಾರ್ಥಿಗಳು ಪ್ರಥಮಸ್ಥಾನ ಹಾಗೂ ಲೋಯೋಲಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಇದೇ ಸಂದರ್ಭದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಅಲ್ ಹಸ್ನಾತ ಪದವಿ ಪೂರ್ವ ಕಾಲೇಜನ ವಿದ್ಯಾರ್ಥಿನಿಯರಾದ ಮದಿಯಾ ಅರಬ, ಅನಿಸಾ ಅನಾಸೂರ ಪ್ರಾರ್ಥಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಅದ್ಧೂರಿಯಾಗಿ ಜರುಗಿದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ


ವಿಜಯಪುರ : ವಿಜಯಪುರ ಜಿಲ್ಲಾ ಹೂಗಾರ ಸಮಾಜ ಹಾಗೂ ಶ್ರೀ ಕಲ್ಮೇಶ್ವರ ಶೈವ ಗುರವ ಸಂಸ್ಥಾನ ಮಠ ಹಾವಿನಾಳ ಇವರ ಸಹಯೋಗದಲ್ಲಿ ಇತ್ತೀಚೆಗೆ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವು ಅದ್ಧೂರಿಯಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜ್ಞಾನ ಯೋಗಾಶ್ರಮದ ನಿಂಗಯ್ಯ ಶ್ರೀಗಳು ಆಗಮಿಸಿದ್ದರು. ಅಧ್ಯಕ್ಷತೆಯನ್ನು ಸಿದ್ದರಾಮಯ್ಯ ಮಠ ದಿವ್ಯ ಸಾನಿಧ್ಯವನ್ನು ಶರಣಬಸವ ಶರಣರು ಚಿಂಚೋಳಿ ಉದ್ಘಾಟಕರಾಗಿ ಬಿ ಎಸ್ ಬಿರಾದಾರ ಸಮಾಜದ ಜಿಲ್ಲಾಧ್ಯಕ್ಷರಾದ ಸಂಗಮೇಶ ಗುರವ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹೂಗಾರ ಸಮಾಜದ 2023-24ನೇ ಸಾಲಿನ ಪ್ರತಿಭಾನ್ವಿತ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸೇರಿದಂತೆ ಸಮಾಜದ ಪರವಾಗಿ ಶಿಕ್ಷಣ,ಕ್ರೀಡೆ, ಸಾಮಾಜಿಕ ಸೇವೆ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಅಧ್ಯಕ್ಷರುಗಳು ಸೇರಿದಂತೆ ಸಮಾಜದ ಎಲ್ಲ ಬಂದವರು ಭಾಗವಹಿಸಿದ್ದರು. ಕಾರ್ಯಕ್ರಮದ ಆಯೋಜನೆಯನ್ನು ಜಿಲ್ಲಾಧ್ಯಕ್ಷರಾದ ಸಂಗಮೇಶ ಗುರವ ಹಾಗೂ ಉಪಾಧ್ಯಕ್ಷರಾದ ಮಹೇಶ ಗುರವ ಆಯೋಜಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರಸಾದ( ಸುರೇಶ)ಪೂಜಾರಿ ಯಶಸ್ವಿಯಾಗಿ ನಡೆಸಿಕೊಟ್ಟರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.