Thursday, August 22, 2024

ಸಿಟಿಐ, ಸಿವಿಲ್ ಪಿಎಸ್'ಐ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕು: ಯತ್ನಾಳ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: 245 ಸಿಟಿಐ ಮತ್ತು 545 ಸಿವಿಲ್ ಪಿಎಸ್'ಐ ಹುದ್ದೆಗಳ ನೇಮಕಾತಿ ಸೇರಿದಂತೆ ಈಗಾಗಲೇ ನಡೆದಿರುವ ಲಿಖಿತ ಪರೀಕ್ಷೆಗಳ ಫಲಿತಾಂಶವನ್ನು ಕರ್ನಾಟಕ ಲೋಕಸೇವಾ ಆಯೋಗ ಆದಷ್ಟು ಬೇಗ ಪ್ರಕಟಿಸಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು, ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಪಿಸಿ (ಸಿವಿಲ್, ಸಿಎಆರ್,ಡಿಎಆರ್) ಹುದ್ದೆಯಿಂದ ದೂರ ಉಳಿಯುತ್ತಾರೆ. ಇದರಿಂದ ಬೇರೆಯವರಿಗೂ ಅವಕಾಶ ಸಿಗುತ್ತದೆ ಹಾಗೂ ತೇರ್ಗಡೆಯಾದವರಿಗೆ ಮತ್ತೆ ಪರೀಕ್ಷೆ ಬರೆಯುವ ಅವಶ್ಯಕತೆ ಇರುವುದಿಲ್ಲ.

ಪಿಸಿ ಪರೀಕ್ಷೆಯ ಫಲಿತಾಂಶ ಮೊದಲು ಬಿಡುಗಡೆಯಾಗಿ, ನಂತರ ಪಿಎಸ್'ಐ ಆಗಿ ಎರಡರಲ್ಲೂ ತೇರ್ಗಡೆಯಾದವರು ಪಿಸಿ ಬಿಟ್ಟು ಪಿಎಸ್'ಐ ಆಯ್ಕೆ ಮಾಡಿಕೊಳ್ಳುತ್ತಾರೆ. ಇದರಿಂದ ಮತ್ತೆ ಬ್ಯಾಕ್ಲಾಗ್ ಆಗಿ ಸರ್ಕಾರಕ್ಕೂ ಅಭ್ಯರ್ಥಿಗಳಿಗೂ ತೊಂದರೆಯಾಗುವುದು ಖಚಿತ. 

ಒಂದು ಉದ್ಯೋಗ ಸಿಗುವುದರಿಂದ ಒಂದು ಮನೆಗೆ ಸಾಕಷ್ಟು ಆರ್ಥಿಕ ನೆರವಾಗುತ್ತದೆ. ಅಭ್ಯರ್ಥಿಯ ಭವಿಷ್ಯ ಸಧೃಡವಾಗುತ್ತದೆ. ಪರೀಕ್ಷೆ ಫಲಿತಾಂಶದ ವಿಳಂಬ, ಅನಿಶ್ಚಿತತೆ, ಅವೈಜ್ಞಾನಿಕ ವೇಳಾಪಟ್ಟಿ, ಅಭ್ಯರ್ಥಿ ಇರುವ ಊರಿಂದ ಬೇರೆ ಊರಿಗೆ ಪರೀಕ್ಷೆ ಸೆಂಟರ್ ನಿಗದಿ ಮಾಡುವುದನ್ನು ಬಿಟ್ಟು ಪರೀಕ್ಷಾರ್ಥಿಗಳ ಪರ ಆಯೋಗ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.