Monday, September 30, 2024

01-10-2024 EE DIVASA KANNADA DAILY NEWS PAPER

ಅದ್ಧೂರಿಯಿ0ದ ಜರುಗಿದ ಕರ್ನಾಟಕ ಸಂಭ್ರಮ-50 ಆಚರಣೆ ಗಡಿನಾಡ ಚೇತನರಿಗೆ ಪ್ರಶಸ್ತಿ ಪ್ರದಾನ

ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ, ಜತ್ತ ತಾಲ್ಲೂಕಿನ ಗುಡ್ಡಾಪುರ ಶ್ರೀ ದಾನಮ್ಮ ದೇವಿ ಸುಕ್ಷೇತ್ರದಲ್ಲಿ ಸೆಪ್ಟೆಂಬರ್ 30 ರಂದು ಕರ್ನಾಟಕ ಸಂಭ್ರಮ-50'ರ ಆಚರಣೆಯ ಜೊತೆಯಲ್ಲಿ ಶ್ರೀಮತಿ ಡಾ.ಜಯದೇವಿ ತಾಯಿ ಲಿಗಾಡೆ" "ನಾಡೋಜ ಡಾ.ಕಯ್ಯಾರ ಕಿಂಞ್ಞಣ್ಣ ರೈ ಮತ್ತು "ಡಾ. ಚನ್ನಬಸವ ಪಟ್ಟದ್ದೇವರು ಇವರ ಹೆಸರಿನಲ್ಲಿ ಗಡಿ ಪ್ರಾಧಿಕಾರದಿಂದ ನೀಡುತ್ತಿರುವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಹೊರನಾಡ ಗಡಿ ಕನ್ನಡಿಗರ ಸಮಾವೇಶ ನಡೆಯಿತು.

ಬರಗೂರು ರಾಮಚಂದ್ರಪ್ಪ ಅವರ ಸಮಿತಿಯ ಆಯ್ಕೆ ಮಾಡಿರುವ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಮಾಡಲಾಯಿತು.

2023-24ನೇ ಸಾಲಿಗೆ ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರು ಗಡಿನಾಡಿನ ಚೇತನ ಪ್ರಶಸ್ತಿಗೆ ಕಾಸರಗೋಡಿನ ರಾಧಾಕೃಷ್ಣ ಕೆ. ಉಳಿಯತ್ತಡ, ಡಾ. ಜಯದೇವಿ ತಾಯಿ ಲಿಗಾಡೆ ಗಡಿನಾಡ ಚೇತನ ಪ್ರಶಸ್ತಿಗೆ ಬೀದರದ ಪಂಚಾಕ್ಷರಿ ಪುಣ್ಯ ಶೆಟ್ಟಿ, ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ ಪ್ರಶಸ್ತಿಯನ್ನು ಬೆಳಗಾವಿಯ ಬಿ.ಎಸ್. ಗವಿಮಠ ಹಾಗೂ 2024-25ನೇ ಸಾಲಿನ ಡಾ. ಚನ್ನಬಸವ ಪಟ್ಟದ್ದೇವರು ಗಡಿನಾಡ ಚೇತನ ಪ್ರಶಸ್ತಿಯನ್ನು ಗುಜರಾತಿನ ಅಹ್ಮದಾಬಾದ್‌ನ ಕರ್ನಾಟಕ ಸಂಘ, ಜಯದೇವಿ ತಾಯಿ ಲಿಗಾಡೆ ಗಡಿನಾಡಿನ ಚೇತನ ಪ್ರಶಸ್ತಿಯನ್ನು ಮಹಾರಾಷ್ಟ್ರ ರಾಜ್ಯದ ಸಂಖದ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಉಮದಿಯ ಸರ್ವೋದಯ ಶಿಕ್ಷಣ ಸಂಸ್ಥೆಯನ್ನು, ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ ಪ್ರಶಸ್ತಿಯನ್ನಹ ಕೇರಳ ರಾಜ್ಯದ ಕಾಸರಗೋಡಿನ ಪೆರಡಾಲ ನೀರ್ಚಾಲು, ಕುಂಬಳೆ (ದಾರಿ) ಮಹಾಜನ ವಿದ್ಯಾಭಿವರ್ಧಕ ಸಂಘಕ್ಕೆ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಹಲ್ಮಿಡಿ ಶಾಸನದ ಮಾದರಿಯ ಸ್ಮರಣಿಕೆ, ಪ್ರಮಾಣ ಪತ್ರ ಹಾಗೂ ಒಂದು ಲಕ್ಷ ರೂ. ನಗದು ಒಳಗೊಂಡಿದೆ.

ಇದಕ್ಕೂ ಮೊದಲು ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನದಿಂದ ವೇದಿಕೆಯವರೆಗೆ ಡೊಳ್ಳು ಕುಣಿತ,ಕರಡಿ ಮಜಲು,ವೀರಗಾಸೆ,ತಾಸೆ ವಾದನ,ಜಗ್ಗಲಗಿ,ನಂದಿ ಕೋಲು,ಹಾಲಕ್ಕಿ ಸುಗ್ಗಿ ಕುಣಿತ,ಸತ್ತಿಗೆ ಕುಣಿತ,ಗೊಂಬೆ ಕುಣಿತದ ವಿವಿಧ ಜಾನಪದ ಕಲಾ ತಂಡಗಳಿAದ ಮೆರವಣಿಗೆ ನಡೆಯಿತು.

ಮಹಾರಾಷ್ಟ್ರ ರಾಜ್ಯದ ಕನ್ನಡ ಶಾಲೆಗಳಿಗೆ ಕನ್ನಡ ಭಾಷೆಯ 'ನಲಿ-ಕಲಿ' ಕಲಿಕಾ ಸಾಮಗ್ರಿಗಳು ವಿತರಣೆ ಮಾಡಲಾಯಿತು.

 ಸಮಾರಂಭದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ "ಲಾಂಛನ" ಸಾಕ್ಷ್ಯ ಚಿತ್ರ ಹಾಗೂ ಪ್ರಶಸ್ತಿ ಪುರಸ್ಕೃತರ ಪರಿಚಯಾತ್ಮಕ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗಡಿನಾಡಲ್ಲಿ ಕನ್ನಡ ಡಿಂಡಿಮ

ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದಲ್ಲಿ ಹಮ್ಮಿಕೊಂಡ ಕರ್ನಾಟಕ ಸಂಭ್ರಮ -50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಸಾಂಸ್ಕೃತಿಕ ಕಾರ್ಯಕ್ರಮ, ಗಡಿನಾಡ ಕನ್ನಡಿಗರ ಸಮಾವೇಶ ಹಾಗೂ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವು ಅತ್ಯಂತ ಸಂಭ್ರಮ ಸಡಗರದಿಂದ ನಡೆಯಿತು.

 ಕರ್ನಾಟಕ ಸಂಭ್ರಮ-50ರ ಕಾರ್ಯಕ್ರಮದಲ್ಲಿ ಹಬ್ಬದ ಸಡಗರ ಮನೆ ಮಾಡಿತ್ತು. ಅನೇಕ ಭಕ್ತರ ಆರಾಧ್ಯ ದೈವ ಸುಕ್ಷೇತ್ರ ಶ್ರೀ ದಾನಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಸಂಭ್ರಮದ ಅಂಗವಾಗಿ ನಡೆದ ಕಾರ್ಯಕ್ರಮ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿದ ವಿವಿಧ ಕಲಾಪ್ರಕಾರಗಳು ಇಲ್ಲಿ ಅನಾವರಣಗೊಂಡು ಪ್ರೇಕ್ಷಕರ ಮನಮುಟ್ಟಿದವು.


ಸಮಾವೇಶದಲ್ಲಿ ಹಲವಾರು ಕಲಾ ಪ್ರಕಾರದ ಸಾಂಸ್ಕೃತಿಕ, ಜಾನಪದ ಕಲೆಗಳ ಅನಾವರಣಗೊಂಡವು. ಸಂಪೂರ್ಣ ಕರ್ನಾಟಕದ ಕಲೆ, ಇತಿಹಾಸ, ಸಾಂಸ್ಕೃತಿಕ ಪರಿಚಯ ಮಾಡಿಸಿತು.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದ ಪ್ರೇಕ್ಷಕರ ಮನಗೆದ್ದವು.ವಿವಿಧ ಅಕಾಡೆಮಿಗಳ ಸಹಯೋಗದಲ್ಲಿ ಹೊನ್ನ ಬಿತ್ತೆವು ನೃತ್ಯ ರೂಪಕ, ಕರ್ನಾಟಕ ಲಲಿತ ಕಲಾ ಅಕಾಡೆಮಿ ಹಾಗೂ ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ ವತಿಯಿಂದ ದೃಶ್ಯಯಾನ ರೂಪಕ ಮತ್ತು ಶಿಲ್ಪಕಲಾ ಪ್ರಾತ್ಯಕ್ಷಿಕೆ ಹಾಗೂ ಪ್ರದರ್ಶನ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಕನ್ನಡ ನೃತ್ಯ ರೂಪಕ, ಕಾಸರಗೋಡಿನ ಕೆ.ವಿ. ರಮೇಶ ತಂಡದವರಿAದ ಯಕ್ಷಗಾನ ಗೊಂಬೆಯಾಟ, ಜತ್ತ ಮತ್ತು ಅಕ್ಕಲಕೋಟೆಯ ವಿವಿಧ ಸ್ಥಳೀಯ ಕಲಾವಿದರಿಂದ ಕನ್ನಡ ಗೀತೆ ಹಾಗೂ ಭಾವಗೀತೆಗಳು, ವಿಜಯಪುರದ ರಂಗನಾಥ ಬತಾಸೆ ತಂಡದವರಿAದ ನೃತ್ಯರೂಪಕ, ಶ್ರೀಮತಿ ಸಂಗೀತಾ ಕಟ್ಟಿ ಅವರಿಂದ ಕನ್ನಡ ಗೀತಗಾಯನ, ಪ್ರಕಾಶ ಮಲ್ಲಿಗವಾಡ ಮತ್ತು ಲಲಿತಾ ಚಾಕಲಬ್ಬಿ ತಂಡದವರಿAದ ಜಾನಪದ ನೃತ್ಯಗಳು, ಶ್ರೀಮತಿ ಹೇಮಾ ಪಾಟೀಲ ಅವರಿಂದ ದಾರದಿಂದ ಬರೆಯುವ ಚಿತ್ರ ಪ್ರದರ್ಶನ, ಗಂಗಾವತಿ ಪ್ರಾಣೇಶ್ ಅವರ ತಂಡದಿAದ ಕನ್ನಡ ನಗೆ ಹಬ್ಬ ಸೇರಿದಂತೆ ಅನೇಕ ಕನ್ನಡ ಕಲೆಯ ಅನಾವರಣಗೊಂಡವು. ನಾಡಿನ ವಿವಿಧ ಮೂಲೆ ಮೂಲೆಗಳಿಂದ ಆಗಮಿಸಿದ ಕಲಾವಿದರು ತಮ್ಮ ಕಲೆಯ ಪ್ರದರ್ಶನ ನೀಡಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಗಡಿ ಕನ್ನಡಿಗರ ಸಮಸ್ಯೆ ನಮ್ಮ ಸಮಸ್ಯೆ -ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ -ಸಚಿವ ಶಿವರಾಜ ಎಸ್.ತಂಗಡಗಿ ಭರವಸೆ


ವಿಜಯಪುರ : ರಾಜ್ಯದ 742 ಗ್ರಾಮಗಳಲ್ಲಿ ವಾಸಿಸುವ ಕನ್ನಡಿಗರ ಸಮಸ್ಯೆ ನಮ್ಮ ಸಮಸ್ಯೆ, ಗಡಿನಾಡ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಿ, ಕನ್ನಡಿಗರು ವಾಸಿಸುವ ಗ್ರಾಮಗಳಲ್ಲಿ ಅಗತ್ಯವಿರುವ ರಸ್ತೆ, ನೀರು, ಬಸ್ ಸೌಕರ್ಯ, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಅವರು ಭರವಸೆ ನೀಡಿದರು.

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ವಿಜಯಪುರ, ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನÀ್ಟ÷ಕರ್ನಾಟಕ ಹಾಗೂ ಮಹಾರಾಷ್ಟç ರಾಜ್ಯದ ಕನ್ನಡ ಸಂಘಟನೆಗಳ ಸಹಯೋಗದಲ್ಲಿ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಸೋಮವಾರ ಹಮ್ಮಿಕೊಂಡ ಕರ್ನಾಟಕ ಸಂಭ್ರಮ-50, ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕರ್ನಾಟಕ ಗಡಿ ಪ್ರಾಧಿಕಾರದ ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು. 

ರಾಜ್ಯದಲ್ಲಿಯೇ ಮೊಟ್ಟಮೊದಲ ಬಾರಿಗೆ ಇಂತಹ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇದಕ್ಕೂ ಮುನ್ನ ಸಾಹಿತಿಗಳು ತಮ್ಮ ವಿಚಾರಗಳನ್ನು ಅಭಿವ್ಯಕ್ತಪಡಿಸಲು ಮುಕ್ತ ಅವಕಾಶವನ್ನು ನೀಡಿ ಮೈಸೂರಿನಲ್ಲಿ ಸಾಹಿತಿಗಳ ಚಿಂತನಾ ಸಮಾವೇಶ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟç ಗಡಿ ಭಾಗದಲ್ಲಿ ಪರಸ್ಪರ ಅನ್ಯೂನ್ಯ, ಪ್ರೀತಿ, ವಿಶ್ವಾಸ ಬೆಳೆಸಿ, ಉಭಯ ರಾಜ್ಯದ ಜನರು ಸಾಮರಸ್ಯದಿಂದ ಬದುಕಲು ಗಡಿಭಾಗದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು. 

ರಾಜ್ಯದ ಗಡಿ ಭಾಗದಲ್ಲಿರುವ ಪ್ರತಿಯೊಬ್ಬ ಕನ್ನಡಿಗರ ಸಮಸ್ಯೆಗಳಿಗೆ ಸರ್ಕಾರ ನಿರಂತರವಾಗಿ ಸ್ಪಂದಿಸುತ್ತಲಿದ್ದು, ಗಡಿಭಾಗದ ಜನರ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಕರ್ನಾಟಕ ಸರ್ಕಾರ ಪ್ರಯತ್ನಿಸಿಲಿದೆ. ನಾನು ಸಹ ಗಡಿ ಭಾಗದ ಜನರ ಸಮಸ್ಯೆಗಳನ್ನು ಪರಿಶೀಲಿಸಿ, ಅವರಿಗೆ ದೊರಕಿಸಬಹುದಾದ ಮೂಲಭೂತ ಸೌಕರ್ಯಗಳಾದ ರಸ್ತೆ, ನೀರು, ಶಿಕ್ಷಣ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯ ದೊರಕಿಸಲು ಈ ಭಾಗದ ಜನರ ಸಮಸ್ಯೆಗಳ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಅವರು ಹೇಳಿದರು. 

ನಾನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವನಾದ ಮೇಲೆ ಗಡಿ ಭಾಗದ ಮಹಾರಾಷ್ಟç ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಇಂತಹ ಅದ್ಭುತ ಸಾಮರಸ್ಯದ ಪ್ರತೀಕವಾದ ಕನ್ನಡ ಸಮಾವೇಶ ಹಮ್ಮಿಕೊಂಡಿರುವುದು ಅತೀವ ಸಂತಸ ತಂದಿದೆ. ಗುಡ್ಡಾಪುರ ದಾನಮ್ಮ ದೇವಸ್ಥಾನಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕ ಜನರು ಬರುವುದರಿಂದ ಈ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅಗತ್ಯ ಅನುದಾನವನ್ನು ನಮ್ಮ ಸರ್ಕಾರದಿಂದ ಒದಗಿಸಲಾಗುವುದು. ಈ ಹಿಂದೆ ಹಲವಾರು ಪ್ರಶಸ್ತಿಗಳನ್ನು ನೀಡಿದ್ದರೂ ಸಹ ಈ ಐತಿಹಾಸಿಕ ಸಮಾವೇಶದಲ್ಲಿ, ಕನ್ನಡ ನಾಡು-ನುಡಿ, ಸಂಸ್ಕೃತಿ, ಸಾಹಿತ್ಯ, ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡಿದ, ಕನ್ನಡ ಭಾಷೆ ಅಳಿವು-ಉಳಿವಿಗಾಗಿ ಶ್ರಮಿಸಿದ ಮಹಾನ್ ಗಡಿನಾಡ ಚೇತನರನ್ನು ಗುರುತಿಸಿ ಪ್ರಶಸ್ತಿ ನೀಡುವ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು. 

ಕರ್ನಾಟಕ-50 ವರ್ಷ ಹಿನ್ನೆಲೆಯಲ್ಲಿ ಬರುವ ನವೆಂಬರ್ 1 ರಂದು 69 ಜನರಿಗೆ ರಾಜ್ಯ ಪ್ರಶಸ್ತಿ ನೀಡಿ, ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದರು. 

ಸಮಾವೇಶದಲ್ಲಿ ಮಹಾರಾಷ್ಟç ಕನ್ನಡಿಗರಿಂದ ಬೇಡಿಕೆಗಳನ್ನು ಸಲ್ಲಿಸಿ, ಉದ್ಯೋಗದಲ್ಲಿ ಭದ್ರತೆ, ಅಂಗನವಾಡಿಗಳಲ್ಲಿ ಕನ್ನಡ ಆದ್ಯತೆ, ಸರ್ಕಾರಿ ಪ್ರೌಢಶಾಲೆ ಆರಂಭ, ಗಡಿ ಭಾಗದ-ಮಹಾರಾಷ್ಟçದ ಕನ್ನಡ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ನೇಮಕ, ಕನ್ನಡದಲ್ಲಿ ಟಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡಲು ಮಹಾರಾಷ್ಟç ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು, ಕನ್ನಡ ಶಾಲೆಗಳಿಗೆ ಕನ್ನಡ ಸಾಹಿತ್ಯಿಕ ಪುಸ್ತಕಗಳು, ಪರಿಕರಗಳನ್ನು ಒದಗಿಸುವುದು, ಮಹಾರಾಷ್ಟç ರಾಜ್ಯದ ವಿವಿಧ ನಗರಗಳಲ್ಲಿ ಕನ್ನಡ ಭವನ ನಿರ್ಮಾಣ, ನವೋದಯ, ಮೊರಾರ್ಜಿ ಶಾಲೆಗಳಲ್ಲಿ ಗಡಿ ಕನ್ನಡಿಗರ ಪ್ರವೇಶಕ್ಕೆ ಆದ್ಯತೆ, ಉಚಿತ ಸಾರಿಗೆ ಸೌಕರ್ಯ ಸೇರಿದಂತೆ ಗಡಿನಾಡಿನಲ್ಲಿ ಕನ್ನಡ, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ಸಚಿವರಿಗೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಈ ಎಲ್ಲ ಬೇಡಿಕೆಗಳನ್ನು ಹಂತ-ಹAತವಾಗಿ ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು. 


ಜವಳಿ, ಕಬ್ಬು ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸಾಕ್ಷö್ಯಚಿತ್ರಕ್ಕೆ ಚಾಲನೆ ನೀಡಿ, ಸಮಾವೇಶವನ್ನು ಉದ್ಧೇಶಿಸಿ ಮಾತನಾಡಿದ ಅವರು, ಬಹಳ ದಿನಗಳ ನಂತರ ಗಡಿಭಾಗದಲ್ಲಿ ಇಂತಹ ಸಾಮರಸ್ಯ ಮೂಡಿಸುವ ಐತಿಹಾಸಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಭಾಷೆ ಬೇರೆ-ಬೇರೆಯಾಗಿದ್ದರೂ ಸಹ ಮನಸ್ಸು ಒಂದೇ ಆಗಿದೆ. ಪ್ರತಿಯೊಬ್ಬರು ನಾವು ಭಾರತೀಯರು ಎಂಬ ಸಂದೇಶ ಸಾರಬೇಕು ಎಂದು ಹೇಳಿದರು. 

ಕನ್ನಡಿಗರು ಸೋಲಾಪುರ, ಸಾಂಗ್ಲಿ ಸೇರಿದಂತೆ ದೇಶದ ಯಾವ ಮೂಲೆಯಲ್ಲಾದರೂ ವಾಸಿಸಿದರೂ ಕನ್ನಡಿಗರ ಸಮಸ್ಯೆಗಳಿಗೆ ನಮ್ಮ ಸರ್ಕಾರ ಸದಾ ಸ್ಪಂದಿಸಲಿದೆ. ಕರ್ನಾಟಕ-ಆಂಧ್ರ ಹಾಗೂ ಮಹಾರಾಷ್ಟç ರಾಜ್ಯಗಳು ಒಂದಾಗಿ ಪರಸ್ಪರ ಸಮನ್ವಯತೆಯಿಂದ ನಿರ್ಧಾರ ಕೈಗೊಂಡು ಕೃಷ್ಣಾ ನೀರನ್ನು ಬಳಕೆ ಮಾಡಿಕೊಂಡಲ್ಲಿ ಐತಿಹಾಸಿಕವಾಗಲಿದೆ. ಇಡಿ ದೇಶಕ್ಕೆ ಮಾದರಿಯಾಗಲಿದೆ. ಪ್ರತಿ ವರ್ಷÀ 300 ರಿಂದ 500 ಟಿಎಂಸಿ ಸಮುದ್ರ ಪಾಲಾಗುವ ನೀರು ಬಳಕೆಮಾಡಿಕೊಂಡಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾದಂತಾಗುತ್ತದೆ. ಈ ನಿಟ್ಟಿನಲ್ಲಿ ಮೂರು ಸರ್ಕಾರಗಳು ಚಿಂತನೆ ನಡೆಸುವ ಅವಶ್ಯಕತೆ ಇದೆ ಎಂದು ಅವರು ಹೇಳಿದರು. 

ಸಮಾವೇಶದಲ್ಲಿ ಸಾಂಗ್ಲಿ ಜಿಲ್ಲೆಯ ಜತ್ತ ಶಾಸಕ ವಿಕ್ರಮಸಿಂಹ ಬಾಳಾಸಾಹೇಬ ಸಾವಂತ ಮಾತನಾಡಿದರು. ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕರಾದ ಸೋಮಣ್ಣ ಬೇವಿನಮರದ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾವೇಶದಲ್ಲಿ ಕನ್ನಡ ಶಾಲೆ ವಿದ್ಯಾರ್ಥಿಗಳಿಗೆ ನಲಿ-ಕಲಿ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದಿಂದ ಹೊರ ತಂದಿರುವ ಗಡಿಯಲ್ಲಿ ಭಾಷಾ ಸಾಮರಸ್ಯ ಪುಸ್ತಕ ಬಿಡುಗಡೆ ಮಾಡಲಾಯಿತು. 2023-24ನೇ ಸಾಲಿನ ಹಾಗೂ 2024-25ನೇ ಸಾಲಿನ ಗಡಿ ಪ್ರಾಧಿಕಾರದಿಂದ ನೀಡುವ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಮಾಡಲಾಯಿತು. 

 ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಬಾಲ ವಿಕಾಸ ಅಕಾಡೆಮಿಕ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ದಾನಮ್ಮದೇವಿ ಟ್ರಸ್ಟ್ನ ಅಧ್ಯಕ್ಷ ವಿಜುಗೌಡ ಪಾಟೀಲ,, ಎಂ.ಎಸ್.ಮದಭಾವಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಶಿಂಪೀರ ವಾಲೀಕಾರ, ಸೇರಿದಂತೆ ವಿವಿಧ ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರು, ಇತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ ಸ್ವಾಗತಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.