Tuesday, October 1, 2024
ಪಿ.ಎಸ್.ಐ ಹುದ್ದೆಯ ಸ್ಪರ್ಧಾತ್ಮ ಪರೀಕ್ಷೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ
ವಿಜಯಪುರ : ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ ಒಟ್ಟು 11 ಕೇಂದ್ರಗಳಲ್ಲಿ ಅಕ್ಟೋಬರ್ 03ರಂದು ಜರುಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಟ್ಟು 4,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 10-30ರಿಂದ 12-00ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 12-30ರಿಂದ ಮಧ್ಯಾಹ್ನ 2-00 ರವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ.
ಅಭ್ಯರ್ಥಿಗಳು ಯಾವುದೇ ಎಲೆಕ್ಟಾçನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್‌ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿಕೊಳ್ಳಬೇಕು. ಎಲ್ಲಾ ಸಿಸಿಟಿವಿ ಕ್ಯಾಮಾರಾಗಳ ವಿಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆಗಳಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಲೋಪ ಕಂಡು ಬಂದಲ್ಲಿ ತಪ್ಪಿಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಯಾವುದೇ ಕಾರಣಕ್ಕೂ ತಮಗೆ ವಹಿಸಿದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಅಭ್ಯರ್ಥಿಗಳ ಗುರುತಿನ ಚೀಟಿ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಬೇಕು. ಮೊಬೈಲ್, ಕ್ಯಾಲಕುಲೇಟರ್, ಸೇರಿದಂತೆ ಯಾವುದೇ ಇಲೆಕ್ಟಾçನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಪರೀಕ್ಷಾ ಕೇಂದ್ರಗಳಲ್ಲಿ ಅಧಿಕೃತವಾಗಿ ನೇಮಕವಾದ ಸಿಬ್ಬಂದಿಗಳಿಗೆ ಮಾತ್ರ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಅವರು ಗುರುತಿನ ಚೀಟಿ ಹೊಂದಿರಬೇಕು. ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಖಾರಿ ಋಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಖಾರಿ ಸೋಮಲಿಂಗ ಗೆಣ್ಣುರ ಖಜಾನೆ ಇಲಾಖೆಯ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ವೀಕ್ಷಕರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ ವಾರ್ತಾ ಇಲಾಖೆ ವಾಹನ ಚಾಲಕರಾದ ಜಿ.ಬಿ.ತಾಟೆ ಅವರಿಗೆ ಆತ್ಮೀಯ ಬೀಳ್ಕೊಡುಗೆ
ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿಜಯಪುರ ಕಚೇರಿಯಲ್ಲಿ ಕಳೆದ 27 ವರ್ಷಗಳಿಂದ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ಸೆ.30ರಂದು ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ ವಾಹನ ಚಾಲಕರಾದ ಜಿ.ಬಿ.ತಾಟೆ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.
ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಂಡ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಅವರು ಮಾತನಾಡಿ, ಈ ಕಚೇರಿಯಲ್ಲಿ ಕಳೆದ 27 ವರ್ಷಗಳಿಂದ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಪತ್ರಕರ್ತರು ಸೇರಿದಂತೆ ಕಚೇರಿ ಸಿಬ್ಬಂದಿಯೊAದಿಗೆ ಅತ್ಯಂತ ಪ್ರೀತಿ, ವಿಶ್ವಾಸದಿಂದ ಯಾರ ಮನಸ್ಸಿಗೆ ನೋವು ಬಾರದ ಹಾಗೆ ನಡೆದುಕೊಳ್ಳುವ ಮೂಲಕ ಸರ್ಕಾರಿ ಸೇವೆಗೆ ವಿಶೇಷ ಗೌರವವನ್ನು ನೀಡಿ, ಇತರರಿಗೂ ಮಾದರಿಯಾಗಿದ್ದಾರೆ. ಇವರ ಮುಂದಿನ ನಿವೃತ್ತಿ ಜೀವನವು ಅತ್ಯಂತ ಸುಖಕರವಾಗಿರಲಿ ಎಂದು ಅವರು ಹಾರೈಸಿದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾದ ಮಂಜುಳಾ ದುರಗನ್ನವರ, ಸಿನಿ ಚಾಲಕರಾದ ಸುರೇಶ ಅಂಬಿಗೇರ, ಪ್ರಶಿಕ್ಷಣಾರ್ಥಿ ಶಿಲ್ಪಾ ಚವ್ಹಾಣ, ರಾಜು ಢವಳಗಿ, ಪ್ರಕಾಶ ಸೇರಿದಂತೆ ಮತ್ತಿತರರು ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.